ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜೋಸ್ ಪಾಲಿನೊ ಗೋಮ್ಸ್ ನಿಧನ

ಬ್ರೆಜಿಲ್ : ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎನ್ನಲಾದ ಬ್ರೆಜಿಲ್ ಮೂಲದ ಜೋಸ್ ಪಾಲಿನೊ ಗೋಮ್ಸ್ (127) ತಮ್ಮ ನಿವಾಸ ಪೆಡ್ರಾಬೊನಿಟಾದಲ್ಲಿ ನಿಧನರಾಗಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಗೋಮ್ಸ್ ಬದುಕಿದ್ದರೆ ಆ.4 ರಂದು ತನ್ನ ಹುಟ್ಟುಹಬ್ಬ ಆಚರಿಸುವುದರಲ್ಲಿದ್ದರು ಎಂದು ಅವರ ಕುಟುಂಬ ತಿಳಿಸಿದೆ. ಗೋಮ್ಸ್ ಮದುವೆಯ ಪ್ರಮಾಣ ಪತ್ರದ ಪ್ರಕಾರ ಆ.4, 1895 ರಲ್ಲಿ ಜನಿಸಿದ್ದರು. ತನ್ನ ಜೀವಿತಾವಧಿಯಲ್ಲಿ ಮಹಾಯುದ್ಧ ಮತ್ತು ಕೋವಿಡ್ ಎರಡನ್ನೂ ಕಣ್ಣಾರೆ ಕಂಡ ವ್ಯಕ್ತಿ […]

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜೋಸ್ ಪಾಲಿನೊ ಗೋಮ್ಸ್ ನಿಧನ Read More »

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಇಬ್ಬರು ಮಕ್ಕಳಾದ ಎರಡೂವರೆ ವರ್ಷದ ಮೋಕ್ಷಾ, ಎಂಟು ತಿಂಗಳ  ಸೃಷ್ಟಿ (8 ತಿಂಗಳು) ಎಂದು ಗುರುತಿಸಲಾಗಿದೆ. ಶೀಗೆಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದೆ. ದಂಪತಿ ಆಂಧ್ರ ಮೂಲದವರಾಗಿದ್ದಾರೆ. ಮೃತ ವೀರಾರ್ಜುನ್ ಐಟಿಪಿಎಲ್‍ನಲ್ಲಿರೋ ಯೂರೋ ಪಿಲ್ಸ್ ಅನ್ನೋ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ Read More »

ಆ.7 : ಸೌಜನ್ಯ ಕೊಲೆಯ ನೈಜ ಆರೋಪಿಗಳ ಪತ್ತೆಗಾಗಿ ದೈವ-ದೇವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ

ಪುತ್ತೂರು: ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ದೇವಸ್ಥಾನ, ದೈವಸ್ಥಾನ ಹಾಗೂ ಮಠ-ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಆ.7 ರಂದು ಹಮ್ಮಿಕೊಳ್ಳಲಾಗಿದೆ. ದ.ಕ.ಜಿಲ್ಲಾ ವಿಶ್ವ ಹಿಂದೂ ಪರಿಷತ್, ಬಜರಂಗದಳ  ಈ ಕುರಿತು ಕರೆ ನೀಡಿದೆ. ಆದ್ದರಿಂದ ಎಲ್ಲಾ ಕಾರ್ಯಕರ್ತರು, ಹಿಂದೂ ಸಮಾಜ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೌಜನ್ಯಳಿಗೆ ನ್ಯಾಯ ಸಿಗುವಂತೆ ಪ್ರಾರ್ಥನೆ ಮಾಡಬೇಕೆಂದು ಸಂಘಟನೆ ವಿನಂತಿಸಿದೆ.

ಆ.7 : ಸೌಜನ್ಯ ಕೊಲೆಯ ನೈಜ ಆರೋಪಿಗಳ ಪತ್ತೆಗಾಗಿ ದೈವ-ದೇವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ Read More »

ಕೊಳ್ತಿಗೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ರೈ ನಿಧನ

ಪುತ್ತೂರು: ಕೊಳ್ತಿಗೆ ಸರಕಾರಿ ಹಿ.ಪ್ರಾ. ಶಾಲೆಯ ವಿಶ್ರಾಂತ ಮುಖ್ಯ ಶಿಕ್ಷಕ, ಕೊಳ್ತಿಗೆ ಕೆಳಗಿನ ಮನೆಯ ತರವಾಡ್ ಯಜಮಾನ ನಾರಾಯಣ ರೈ (90) ಗುರುವಾರ ಮಧ್ಯಾಹ್ನ ನಿಧನರಾದರು. ಮುರುಳ್ಯ, ಕೊಳ್ತಿಗೆ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಅವರ ಅವಧಿಯಲ್ಲಿ ಶಾಲೆ ಶೈಕ್ಷಣಿಕವಾಗಿ ಪ್ರಗತಿ ಹೊಂದಿತ್ತು. ಮೃತರು ಮಕ್ಕಳು, ಸೊಸೆಯಂದಿರು, ಸಹೋದರ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕೊಳ್ತಿಗೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ರೈ ನಿಧನ Read More »

ಪ್ರಧಾನಿ ಭೇಟಿ ಮಾಡಿದ ಸಿ.ಎಂ.ಸಿದ್ಧರಾಮಯ್ಯ : ಅಂಬಾರಿ ನೀಡಿ ಸನ್ಮಾನ

ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ದೆಹಲಿ ಸಂಸತ್ ಭವನಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ಅವರು ಪ್ರಧಾನಿಯವರನ್ನು ಭೇಟಿ ಮಾಡಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾನಿಸಿದರು. ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಸಿದ್ಧರಾಮಯ್ಯ ಪ್ರಥಮ ಬಾರಿಗೆ ಪ್ರಧಾನಿಯವರನ್ನು ಭೇಟಿ ಮಾಡಿದರು. ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಕುರಿತು ಮೋದಿಯವರ ಬಳಿ ಚರ್ಚೆ

ಪ್ರಧಾನಿ ಭೇಟಿ ಮಾಡಿದ ಸಿ.ಎಂ.ಸಿದ್ಧರಾಮಯ್ಯ : ಅಂಬಾರಿ ನೀಡಿ ಸನ್ಮಾನ Read More »

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ

ಪುತ್ತೂರು: ಮಾನವನ ಆರ್ಥಿಕಾಭಿವೃದ್ಧಿ ಹಾಗೂ ಕೊಳ್ಳುಬಾಕತನವು ಪರಿಸರದ ಮೇಲೆ ಅಗಾಧ ದುಷ್ಪರಿಣಾಮ ಬೀರುತ್ತಿದ್ದು, ಮಾಲಿನ್ಯ ಮುಕ್ತ ಪ್ರಕೃತಿಯನ್ನು ಬೆಳೆಸಿ, ಉಳಿಸಿ ಅದರ ಜತೆ ನಾವೂ ಬೆಳೆಯುವ ಸಂಕಲ್ಪವನ್ನು ಮಾಡಬೇಕು ಎಂದು ಪುತ್ತೂರಿನ ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಮತ್ತು ಯೂತ್ ರೆಡ್‌ಕ್ರಾಸ್ ವಿಭಾಗಗಳ ಆಶ್ರಯದಲ್ಲಿ ನಡೆದ ವಿಶ್ವ ಪ್ರಕೃತಿ ಸಂರಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ Read More »

ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ

ಬಾಗಲಕೋಟೆ: ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಮಮತಾ ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬಾಗಲಕೋಟೆಯ ಇಳಕಲ್ ತಾಲ್ಲೂಕಿನ ಗುಡೂರ ಗ್ರಾಮದಲ್ಲಿ ಇಹಲೋಕ ತ್ಯಜಿಸಿದರು. ಮಮತಾ ಅವರು 5 ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ನಟಿಸಿದ್ದರು. 25 ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದರು. ಕನ್ನಡ ಚಿತ್ರರಂಗದ ಮೇರು ನಟರುಗಳಾದ ಅಂಬರೀಷ್, ವಜ್ರಮುನಿ ಸೇರಿ ಅನೇಕರ ಜೊತೆ ತೆರೆಹಂಚಿಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಚಿತ್ರರಂಗದಿಂದ ದೂರವೇ

ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ Read More »

ವಿದ್ಯಾರ್ಥಿನಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕೆ ತಂಡದಿಂದ ಹಲ್ಲೆ

ಬೆಳ್ತಂಗಡಿ : ವಿದ್ಯಾರ್ಥಿನಿಯೋರ್ವಳನ್ನು ಅನ್ಯ ಕೋಮಿನ ಯುವಕನೊಬ್ಬ ಆಟೋ ರಿಕ್ಷಾದಲ್ಲಿ ಡ್ರಾಪ್ ಮಾಡದ್ದಕ್ಕೆ ತಂಡವೊಂದು ಆತನಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದು. ಬುಧವಾರ ರಾತ್ರಿ ಬೆಂಗಳೂರಿಗೆ ತೆರಳಲು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕ ಆಟೋ ಮೊಹಮ್ಮದ್ ಆಶೀಕ್ ಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ

ವಿದ್ಯಾರ್ಥಿನಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕೆ ತಂಡದಿಂದ ಹಲ್ಲೆ Read More »

ಜು.6 : ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ | ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರಿಂದ ಶಿಲಾನ್ಯಾಸ

ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಆ.6 ಭಾನುವಾರ ನಡೆಯಲಿದೆ. ವಿಡಿಯೋ ಕಾನ್ಸೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಶೀಲಾನ್ಯಾಸ ನೆರವೇರಿಸಲಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣವು ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಪ್ರಧಾನಿ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ಅವರನ್ನು ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್

ಜು.6 : ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ | ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರಿಂದ ಶಿಲಾನ್ಯಾಸ Read More »

ಊರಿಗೆ ಹೋಗಲು ಹಣವಿಲ್ಲ ಎಂದು ಶಾಸಕರ ಬಳಿ ಬಂದ ಬೀದರ್ ನ ಯುವಕ | ಕೇಳಿದಷ್ಟು ಹಣ ನೀಡಿದ ಶಾಸಕರು

ಪುತ್ತೂರು: ಊರಿಗೆ ತೆರಳಲು ಹಣವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಲ್ಲಿ ಬಂದ ಯುವಕನೊಬ್ಬನಿಗೆ ಶಾಸಕರು ಆತ ಕೇಳಿದಷ್ಟು ಹಣ ನೀಡಿದ ಘಟನೆ ನಡೆದಿದೆ. ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ. ನನಗೆ ಊರಿಗೆ ಹೋಗಲು ನನ್ನಲ್ಲಿ ನಯಾ ಪೈಸೆ ಇಲ್ಲ ನನಗೆ ಸಹಾಯ ಮಾಡಿ, ನೀವು ಬಡವರಿಗೆ ಸಹಾಯ ಮಾಡುತ್ತೀರಿ ಎಂದು ಯಾರೋ ನನ್ನನ್ನು ಇಲ್ಲಿಗೆ

ಊರಿಗೆ ಹೋಗಲು ಹಣವಿಲ್ಲ ಎಂದು ಶಾಸಕರ ಬಳಿ ಬಂದ ಬೀದರ್ ನ ಯುವಕ | ಕೇಳಿದಷ್ಟು ಹಣ ನೀಡಿದ ಶಾಸಕರು Read More »

error: Content is protected !!
Scroll to Top