ಸರಕಾರಿ ಆಸ್ಪತ್ರೆ ಆಂಬುಲೆನ್ಸ್ ಚಾಲಕರ ಕೊಠಡಿ ಮೇಲೆ ಬಿದ್ದ ಮರ

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯ ಗೇಟ್ ಬಳಿ ಇರುವ ಬೃಹತ್ ಮರವೊಂದು ಧರೆಗುರುಳಿದ ಘಟನೆ ಆ.1ರಂದು ನಡೆದಿದೆ. ಮರ ಬಿದ್ದ ಪರಿಣಾಮ ಸರಕಾರಿ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರ ಕೊಠಡಿಗೆ ಹಾನಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಮರದ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಸರಕಾರಿ ಆಸ್ಪತ್ರೆ ಆಂಬುಲೆನ್ಸ್ ಚಾಲಕರ ಕೊಠಡಿ ಮೇಲೆ ಬಿದ್ದ ಮರ Read More »

ರಬ್ಬರ್ ನಿಗಮದಿಂದ ಬೋನಸ್ ಬಾಕಿ ವಿಚಾರ : ಶಾಸಕ ಅಶೋಕ್ ರೈಗೆ ಮನವಿ

ಪುತ್ತೂರು: ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ಸಿಗಬೇಕಾದ ಬೋನಸ್ ಬಾಕಿ ಇದ್ದು ಕಳೆದ ಒಂದು ವರ್ಷದಿಂದ ನಿಗಮಕ್ಕೆ ಮನವಿ ಮಾಡುತ್ತಿದ್ದರೂ ಬೋನಸ್ ಇನ್ನೂ ಸಿಗದೇ ಇದ್ದು ಈ ವಿಚಾರವನ್ನು ಸರಕಾರದ ಗಮನಸೆಳೆಯಬೇಕೆಂದು ಆಗ್ರಹಿಸಿ ಮತ್ತು ಬೋನಸ್ ಕೊಡಿಸುವಲ್ಲಿ ನೆರವು ನೀಡಬೇಕೆಂದು ಪೆರ್ಲಂಪಾಡಿ ಸಿಆರ್‌ಸಿ ಕಾಲನಿ ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಸಾಸಕ ಅಶೋಕ್ ರೈಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.  ರಬ್ಬರ್ ನಿಗಮದಲ್ಲಿ ದುಡಿಯುತ್ತಿರುವ ಕಾರ್ಮಿಕರುಗಳಿಗೆ ಪ್ರತಿ ವರ್ಷ ದೀಪಾವಳಿಯ ಸಂದರ್ಭದಲ್ಲಿ ಕನಿಷ್ಟ ಬೋನಸ್ (8.33) ನೀಡಲಾಗುತ್ತಿದೆ.  ಈ ವರ್ಷ ೨೦%

ರಬ್ಬರ್ ನಿಗಮದಿಂದ ಬೋನಸ್ ಬಾಕಿ ವಿಚಾರ : ಶಾಸಕ ಅಶೋಕ್ ರೈಗೆ ಮನವಿ Read More »

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಪರಿಹಾರ ಪ್ರಾಯಶ್ಚಿತ್ತ ಅಂಗವಾಗಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಶರವೂರು: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ಜು.24 ರಿಂದ ಆರಂಭಗೊಂಡಿದ್ದು, ಆ.1 ಮಂಗಳವಾರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಹರಿಪ್ರಸಾದ್ ಹಾಗೂ ರಾಘವೇಂದ್ರ ಪ್ರಸಾದ್ ಅವರ ಉಪಸ್ಥಿತಿಯಲ್ಲಿ ಜು.24 ಸೋಮವಾರ ಬೆಳಿಗ್ಗೆ 8 ರಿಂದ ಗಣಪತಿ ಹವನ, ಸುಕೃತ ಹವನ, ಪವಮಾನ ಹೋಮ, ದ್ವಾದಶಮೂರ್ತಿ ಆರಾಧನೆ, ಸಂಜೆ ಮಹಾಸುದರ್ಶನ ಹೋಮ, ಸಪ್ತಪತೀ ಪಾರಾಯಣ, ದುರ್ಗಾಪೂಜೆ ಜರಗಿತು.

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಪರಿಹಾರ ಪ್ರಾಯಶ್ಚಿತ್ತ ಅಂಗವಾಗಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು Read More »

ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ

ಪುತ್ತೂರು: ಸ್ವರ್ಣೋದ್ಯಮಿಯೊಬ್ಬರ ಮನೆಗೆ ಕಳ್ಳರು ನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಜು.31 ಸೋಮವಾರ ರಂದು ಬೆಳಕಿಗೆ ಬಂದಿದೆ. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನ ಜಿ.ಎಲ್ ಬಲರಾಮ ಆಚಾರ್ಯ ಅವರ ಪುತ್ರ ಲಕ್ಷ್ಮೀಕಾಂತ್ ಆಚಾರ್ಯ ಅವರ ಕೊಂಬೆಟ್ಟಿನಲ್ಲಿರುವ ಮನೆಗೆ ಕಳ್ಳರು ನುಗ್ಗಿ ಕಳವಿಗೆ ವಿಫಲ ಯತ್ನ ಮಾಡಿದ್ದಾರೆ. ಕಳವಿಗೆ ಸಂಬಂಧಿಸಿ ಬೆರಳಚ್ಚು ತಜ್ಞರು ಮನೆಗೆ ಆಗಮಿಸಿ ಕೆಲವೊಂದು ಸಾಕ್ಷಾದಾರ ಸಂಗ್ರಹ ಮಾಡುತ್ತಿದ್ದಾರೆ.

ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ Read More »

ಉಡುಪಿ ಘಟನೆ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ. 

ಸುಳ್ಯ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ರಹಸ್ಯವಾಗಿ ಹಿಂದೂ ವಿಧ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸಿ  ಮಾನಹಾನಿ ಮಾಡಿರುವ ಮತ್ತು ಈ ಘಟನೆಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಮಂಗಳೂರು ಪುರಭವನದಲ್ಲಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿದರು. ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಬೆಳ್ತಂಗಡಿ

ಉಡುಪಿ ಘಟನೆ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ.  Read More »

ಪುತ್ತೂರು ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲದ ಸೇವಾ ಯೋಜನೆಯ ಸಹಾಯ ಧನ ಹಸ್ತಾಂತರ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಮಂಗಳೂರಿನ ಕುಂಪಲದ ದಿನೇಶ್  ಅವರಿಗೆ ಚಿಕಿತ್ಸಾ ವೆಚ್ಚಕ್ಕೆ ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲದ ವತಿಯಿಂದ ಸಹಾಯಧನವನ್ನು ಸೋಮವಾರ ಹಸ್ತಾಂತರಿಸಲಾಯಿತು. ಜುಲೈ  ತಿಂಗಳ ತಂಡದ  ಜೊತೆ ನಿರಂತರವಾಗಿ ಸೇವೆಯಲ್ಲಿ ತೊಡಗಿಕೊಂಡು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ನಿಸ್ವಾರ್ಥ ಸೇವಾರ್ಥಿಗಳ ಸಹಾಯದಿಂದ  8200 ರೂ.ಪಾಯಿಗಳನ್ನು ಅವರ ಮನೆಗೆ ತೆರಳಿ  ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪುತ್ತೂರು ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲದ ಸೇವಾ ಯೋಜನೆಯ ಸಹಾಯ ಧನ ಹಸ್ತಾಂತರ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ

ಪುತ್ತೂರು: ಔಷಧೀಯ ಗಿಡಮೂಲಿಕೆಗಳು ನಶಿಸಿ ಹೋಗುತ್ತಿರುವ ಕಾಲ ಘಟ್ಟದಲ್ಲಿ ಅವುಗಳ ಸಂರಕ್ಷಣೆಯ ಮಹತ್ವದ ಕುರಿತು ಇಂದಿನ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪೇರಲ್ತಡ್ಕ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ಶಿಕ್ಷಕಿ ಯಶೋಧ ಹೇಳಿದರು. ಅವರು ನರೇಂದ್ರ ಪ.ಪೂ. ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿವಿಧ ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗಾಗಿ ಔಷಧೀಯ ಸಸ್ಯಗಳ ಬಳಕೆ ಹಳೆಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ Read More »

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ

ಪುತ್ತೂರು: ಶಿಕ್ಷಣ ಎನ್ನುವುದು ಜ್ಞಾನಾರ್ಜನೆಗೆ ಇರುವುದೇ ಹೊರತು ಧನಾರ್ಜನೆಗಾಗಿ ಅಲ್ಲ. ಧನಾರ್ಜನೆಗಾಗಿ ಮಕ್ಕಳನ್ನು ತಯಾರು ಮಾಡಿದರೆ ಅವರು ನಾಳೆ ನಮ್ಮ ಅಂಕೆಯಲ್ಲಿ ಇರುವುದಿಲ್ಲ. ಡಾಕ್ಟರ್ ಇಂಜಿನಿಯರ್‌ಗಳನ್ನು ತಯಾರು ಮಾಡುವುದಕ್ಕಿಂತ ದೇಶಪ್ರೇಮ ಹೊಂದಿರುವ ನಾಯಕರನ್ನು ತಯಾರು ಮಾಡುವುದೇ ಆದ್ಯತೆಯಾಗಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದಿನೇಶ್ ಕುಮಾರ್

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ Read More »

ಅಪಾರ್ಟ್ ಮೆಂಟ್ ನ ಮಹಡಿಯಿಂದ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೃತ್ಯು

ಮಂಗಳೂರು: ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿಯೊಬ್ಬ ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್ ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜು.31 ರಂದು  ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ನಲ್ಲಿ ವಾಸವಾಗಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್‌ (21) ಮೃತಪಟ್ಟವರು. ಸಮಯ್‌ ಅವರು ಫ್ಲ್ಯಾಟ್‌ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯದಲ್ಲಿ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್‌ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್‌ ತೆಗೆದುಕೊಂಡು ಬರಲು

ಅಪಾರ್ಟ್ ಮೆಂಟ್ ನ ಮಹಡಿಯಿಂದ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೃತ್ಯು Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ

ಸವಣೂರು : ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಭಾಗಗಳ ಕರಾಟೆ ಸ್ವರ್ಧಾಕೂಟದ ಉದ್ಘಾಟನೆ ಜು.31 ಸೋಮವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ಜರಗಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ಸುಂದರ ಗೌಡ, ಸವಣೂರು ಸ.ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್, ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ Read More »

error: Content is protected !!
Scroll to Top