ಪುತ್ತೂರಿನಲ್ಲಿ ಕನ್ನಡಭವನ ನಿರ್ಮಾಣ- ಶಾಸಕ ಅಶೋಕ್ ರೈ ಭರವಸೆ | ಕನ್ನಡ ಮಾಧ್ಯಮದಲ್ಲಿ 100 ಅಂಕ ಪಡೆದ ಕನ್ನಡ ಪ್ರತಿಭೆಗಳನ್ನು ಗೌರವಿಸುವ ವಿನೂತನ ಕಾರ್ಯಕ್ರಮ
ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ವತಿಯಿಂದ 2022-23 ನೇ ಸಾಲಿನ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 100 ಅಂಕ ಪಡೆದ ಕನ್ನಡ ಪ್ರತಿಭೆಗಳನ್ನು ಗೌರವಿಸುವ ವಿನೂತನ ಕಾರ್ಯಕ್ರಮ ಶನಿವಾರ ಪುತ್ತೂರು ಕೋ-ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಕನ್ನಡನಾಡಿನಲ್ಲಿ ಕನ್ನಡಕ್ಕಾಗಿ ಕೆಲಸ ಮಾಡಿ ಕನ್ನಡಕ್ಕೆ ತಮ್ಮದೇ ರೀತಿಯ ಕೊಡುಗೆಯನ್ನು ನೀಡಿದವರನ್ನು ಗೌರವಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮದಲ್ಲಿ ಹೆಚ್ಚು […]










