ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ವಿಚಾರವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ದೇಶಾದ್ಯಂತ ಸದ್ದು ಮಾಡಿ, ಮತ್ತೆ ನ್ಯಾಯಕ್ಕಾಗಿ ಎಲ್ಲೆಡೆ ಸಂಚಲನ ಮೂಡಿಸುತ್ತಿರುವ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಬೆಳ್ತಂಗಡಿ ಕ್ಷೇತ್ರದ ಶಾಸರು ಹಾಗೂ ಕುಟುಂಬದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯನವರು ಮರುತನಿಖೆ […]

ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ Read More »

ಲಘು ಉದ್ಯೋಗ ಭಾರತೀ ಕರ್ನಾಟಕದ ಪುತ್ತೂರು ಹಾಗೂ ಸುಳ್ಯ ಉದ್ದಿಮೆದಾರರ  17ನೇ ಮಾಸಿಕ ಸಭೆ | ಡಿಜಿಟಲ್ ಮಾರ್ಕೆಟ್ ತರಬೇತಿ

ಪುತ್ತೂರು: ಲಘು ಉದ್ಯೋಗ ಭಾರತಿ ಕರ್ನಾಟಕ ಪುತ್ತೂರು ಘಟಕ ಹಾಗೂ ಸುಳ್ಯ ತಾಲೂಕಿನ ಉದ್ದಿಮೆದಾರ ಸದಸ್ಯರ 17ನೇ ಮಾಸಿಕ ಸಭೆ ಏಳ್ಮುಡಿ ಪ್ರಭು ಬಿಲ್ಡಿಂಗ್‍ನಲ್ಲಿರವ ಪ್ರೇರಣಾ ಸಂಸ್ಥೆಯ ಹಾಲ್‍ ನಲ್ಲಿ ನಡೆಯಿತು. ಕೋಕೋಗುರು ಕೋಕನಟ್ ಇಂಡಸ್ಟ್ರೀಸ್ ಮತ್ತು ಕೋಕೋಗುರು ಅಡಿಗೆ ಮನೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸ್ವತಃ ಕಂಪ್ಯೂಟರ್ ಇಂಜಿನಿಯರ್ ಆಗಿರುವ ಕೇಶವರಾಮ್ ಬೋನಂತಾಯ ಸಂಪನ್ಮೂಲ ವ್ಯಕ್ತಿಯಾಗಿ, ಸ್ವಂತ ಉದ್ಯಮದಲ್ಲಿ ತಾವು ತಮ್ಮ ತಂಡದೊಂದಿಗೆ ಯಾವ ರೀತಿ ಆನ್‌ಲೈನ್ ಮಾರ್ಕೆಟಿಂಗ್ ಉಪಯೋಗವನ್ನು ಪಡೆದುಕೊಳ್ಳುತ್ತಿದ್ದೇನೆ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ

ಲಘು ಉದ್ಯೋಗ ಭಾರತೀ ಕರ್ನಾಟಕದ ಪುತ್ತೂರು ಹಾಗೂ ಸುಳ್ಯ ಉದ್ದಿಮೆದಾರರ  17ನೇ ಮಾಸಿಕ ಸಭೆ | ಡಿಜಿಟಲ್ ಮಾರ್ಕೆಟ್ ತರಬೇತಿ Read More »

ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದಾಗ ಬ್ಯಾಗ್‍ನಿಂದ ಸಾವಿರಾರು ಮೌಲ್ಯದ ವಸ್ತುಗಳ ಕಳವು | ಪುತ್ತೂರು ಠಾಣೆಗೆ ದೂರು

ಪುತ್ತೂರು: ಬೆಂಗಳೂರಿನಿಂದ ಪುತ್ತೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಬರುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಸಾವಿರಾರು ರೂ.ಮೌಲ್ಯದ ಸೊತ್ತುಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಪುಣಚ ಗ್ರಾಮದ ಅಜೇರು ನಿವಾಸಿ ದಿವಾಕರ ನಾಯಕ್ ಎಂಬವರ ಪುತ್ರಿ ದೀಪಿಕಾ ಅವರ ಬ್ಯಾಗ್‌ನಿಂದ ಲ್ಯಾಪ್‌ಟಾಪ್, ಸ್ಯಾಮ್‌ಸಂಗ್ ಕಂಪೆನಿಯ ಮೊಬೈಲ್, ಡೇನಿಯಲ್ ಕ್ಲೀನ್ ಕಂಪೆನಿಯ ವಾಚ್ ಸಹಿತ ಒಟ್ಟು ರೂ.53 ಸಾವಿರ ಮೌಲ್ಯದ ಸೊತ್ತು ಕಳವಾಗಿದೆ. ಅವರು ಬೆಂಗಳೂರಿನ ಟಿಸಿಎಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು ಜು.26ರಂದು ರಾತ್ರಿ ಬೆಂಗಳೂರಿನಿಂದ ಪುತ್ತೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದರು. ಪುತ್ತೂರಿಗೆ

ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದಾಗ ಬ್ಯಾಗ್‍ನಿಂದ ಸಾವಿರಾರು ಮೌಲ್ಯದ ವಸ್ತುಗಳ ಕಳವು | ಪುತ್ತೂರು ಠಾಣೆಗೆ ದೂರು Read More »

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೋಕ್

ಬೆಂಗಳೂರು: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೋಕ್ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೋಕ್ Read More »

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು:  ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆದು ಆಗಸ್ಟ್ 17 ಹಾಗೂ 18 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡವನ್ನು  ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ಆರ್, ಲಿಖಿತ್ ಗೌಡ ಕೆ, ಶ್ರೀನಿಧಿ ಎ, ವಾಣಿಜ್ಯ ವಿಭಾಗದ ನಿರ್ಮಿತ್ ,ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಪ್ರತಿನಿಧಿಸಿದ್ದರು. ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಪ್ಪೊಪ್ಪಿಕೊಳ್ಳಲು ಆರೋಪಿಗಳಿಗೆ ಕಿರುಕುಳ ನೀಡಿದ ಇಲಾಖೆ | ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ಕೇಂದ್ರ ಯೋಜನಾ ಸಂಚಾಲಕರು, ತಾಂತ್ರಿಕ ತಂಡಕ್ಕೆ ಹೈಕೋರ್ಟ್ ನಿರ್ದೇಶನ

ಪುತ್ತೂರು: ಬೆಳ್ಳಾರೆ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳಿಗೆ ಕಿರುಕುಳ ನೀಡಿ ತಪ್ಪೋಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ ಎಂಬ ಆರೋಪದಿಂದ ಅದಕ್ಕೆ ಸಂಬಂಧಪಟ್ಟ ಮತ್ತು ಕಚೇರಿಯಲ್ಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ತನ್ನ ಕೇಂದ್ರ ಯೋಜನಾ ಸಂಚಾಲಕರು ಮತ್ತು ತಾಂತ್ರಿಕ ತಂಡಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಜಾಬಿರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ವಿಭಾಗೀಯ ಪೀಠ, ಎಫ್‌ಎಸ್ಎಲ್ ಮತ್ತು ಎನ್ಎಐ ಕಚೇರಿಗಳಲ್ಲಿ 2022ರ ನವೆಂಬರ್ ತಿಂಗಳ ಸಿಸಿಟಿವಿ ದೃಶ್ಯಾವಳಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಪ್ಪೊಪ್ಪಿಕೊಳ್ಳಲು ಆರೋಪಿಗಳಿಗೆ ಕಿರುಕುಳ ನೀಡಿದ ಇಲಾಖೆ | ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ಕೇಂದ್ರ ಯೋಜನಾ ಸಂಚಾಲಕರು, ತಾಂತ್ರಿಕ ತಂಡಕ್ಕೆ ಹೈಕೋರ್ಟ್ ನಿರ್ದೇಶನ Read More »

ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ವಿವೇಕಾನಂದಕ್ಕೆ ಎರಡು ರ್‍ಯಾಂಕ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 2 ರ್‍ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಜಾಗೃತಿ.ಜೆ.ನಾಯಕ್ 9.59 ಸಿಜಿಪಿಎ ಅಂಕಗಳೊಂದಿಗೆ 4ನೇ ರ್‍ಯಾಂಕ್ ಹಾಗೂ ದಿವ್ಯಶ್ರೀ.ಎಸ್ 9.58 ಸಿಜಿಪಿಎ ಅಂಕಗಳೊಂದಿಗೆ ಏಳನೇ ರ್‍ಯಾಂಕ್ ಗಳಿಸಿಕೊಂಡಿದ್ದಾರೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು

ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ವಿವೇಕಾನಂದಕ್ಕೆ ಎರಡು ರ್‍ಯಾಂಕ್ Read More »

ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ಧ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಪುತ್ತೂರು: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ. ಅವರು ಶುಕ್ರವಾರ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಳೆಗಾಲದಲ್ಲಿ ಜನರ ಜೀವ ರಕ್ಷಿಸಲು ಜಿಲ್ಲೆಯಲ್ಲಿ ನಿರ್ಬಂಧ ಹೇರಲಾದ ಪ್ರದೇಶಗಳಿಗೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ತೆರಳಬಾರದು, ಈಗಾಗಲೇ ಜಿಲ್ಲೆಯ ಸಮುದ್ರ ಕಿನಾರೆಗಳು, ದೇವಸ್ಥಾನದ ಹತ್ತಿರದ ನದಿಗಳು, ಸ್ನಾನ ಘಟ್ಟಗಳು, ಚಾರಣ ತಾಣಗಳಿಗೆ

ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ಧ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ಕಡಬ ನೆಟ್ಟಣ ಉಪವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

ಕಡಬ: ಕಡಬ ತಾಲೂಕಿನ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಕಾಸರಗೋಡು ಹೊಸದುರ್ಗ ನಿವಾಸಿ ಸುಭಾಷ್ ಬಿ. (55) ಜು.28 ಅನಾರೋಗ್ಯದಿಂದ ಶುಕ್ರವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಸುಭಾಷ್ ಅವರು 1990ರಲ್ಲಿ ಬೆಳ್ತಂಗಡಿಯಲ್ಲಿ ಅರಣ್ಯ ವೀಕ್ಷಕರಾಗಿ ಇಲಾಖಾ ಸೇವೆಗೆ ಸೇರಿದ್ದರು. ಬೆಳ್ತಂಗಡಿಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ಬಳಿಕ 2021ರಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ನೆಟ್ಟದ ಕೇಂದ್ರೀಯ ಮರ ಸಂಗ್ರಹಾಲಯಕ್ಕೆ ನೇಮಕಗೊಂಡು ಕಳೆದ

ಕಡಬ ನೆಟ್ಟಣ ಉಪವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ Read More »

ಉಡುಪಿ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರಿಗೆ ಶರತ್ತುಬದ್ಧ ಜಾಮೀನು ಮಂಜೂರು

ಉಡುಪಿ : ದೇಶದಾದ್ಯಂತ ಸುದ್ದಿಯಲ್ಲಿರುವ ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಿಧ್ಯಾರ್ಥಿನಿಯರು ಮತ್ತೊಂದು ವಿಧ್ಯಾರ್ಥಿನಿ ವಾಶ್ ರೂಂ ನಲ್ಲಿರು ವೇಳೆ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ ಎಂಬ ಆರೋಪ ಇದ್ದು, ಈ ಹಿನ್ನಲೆ ಆರೋಪಿ ವಿದ್ಯಾರ್ಥಿನಿಯರು ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 509,204,175,34 ಐ,ಪಿ,ಸಿ,ಮತ್ತು 66(ಇ) ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ

ಉಡುಪಿ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರಿಗೆ ಶರತ್ತುಬದ್ಧ ಜಾಮೀನು ಮಂಜೂರು Read More »

error: Content is protected !!
Scroll to Top