ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಪುತ್ತೂರು: ಪುತ್ತೂರು ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಗುರುವಾರ ಪತ್ತೆಯಾಗಿದೆ. ಪಾಂಗ್ಲಾಯಿ ಬಳಿ ಪೊದೆಯೊಂದರಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹ ಯಾರದ್ದೆಂದು, ಮೃತ್ಯುಗೆ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಅನುಮತಿ ಇಲ್ಲದೆ ವಿಜಯೋತ್ಸವ | ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರು, ಜುಲೈ 27: ಅನುಮತಿ ಇಲ್ಲದೆ ವಿಜಯೋತ್ಸವ ಮಾಡಿದ್ದಕ್ಕಾಗಿ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲಾಗಿದೆ. ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯರು ಜಯಗಳಿಸಿದ ಹಿನ್ನಲೆಯಲ್ಲಿ ವಿಜಯೋತ್ಸವ ನಡೆಸಲಾಗಿತ್ತು. ಮಿನಿ ವಿಧಾನಸೌಧದಿಂದ ಮುಕ್ರಂಪಾಡಿವರೆಗೆ ಡಿಜೆ ಮೆರವಣಿಗೆ ನಡೆಸಿದ್ದ ಪುತ್ತಿಲ ಪರಿವಾರ ವಿರುದ್ಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಶಾಂತಿಭಂಗದ ಪ್ರಕರಣ ದಾಖಲಿಸಲಾಗಿದೆ.

ಅನುಮತಿ ಇಲ್ಲದೆ ವಿಜಯೋತ್ಸವ | ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲು Read More »

ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಬಿಡುಗಡೆ

ದೆಹಲಿ : ಕೇಂದ್ರ ಸರ್ಕಾರ ದೇಶದ ರೈತರಿಗೆ ಸಿಹಿಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ- ಕಿಸಾನ್) ಯೋಜನೆಯ 14ನೇ ಕಂತು ಗುರುವಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಪ್ರಕಟಿಸಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿಯಲ್ಲಿ 8.5 ಕೋಟಿ ರೈತರಿಗೆ 14ನೇ ಕಂತಿನ ನಿಧಿಯನ್ನು ಜು.27 ರಂದು ಪ್ರಧಾನ ಮಂತ್ರಿಯವರು ನರೇಂದ್ರ ಮೋದಿ ವಿತರಿಸಲಿದ್ದಾರೆ. ರಾಜಸ್ಥಾನದ ಸಿಕಾರ್‌ನಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಪಿಎಂ ಕಿಸಾನ್ ಕಂತಿನ ಹಣವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ

ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಬಿಡುಗಡೆ Read More »

ಅನುದಾನ ಬಿಡುಗಡೆ ಮಾಡಲು ಕಮಿಷನ್ | ಇಂದು ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು : ಅನುದಾನ ಬಿಡುಗಡೆ ಮಾಡಲು ಕೂಡ ಸಚಿವರು ಕಮಿಷನ್ ಕೇಳುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿ ಶಾಸಕರು ಬರೆದಿರುವ ಪತ್ರದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್‌ನ ಶಾಸಕಾಂಗ ಸಭೆ ನಡೆಯಲಿದೆ. ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಈ ಶಾಸಕಾಂಗ ಸಭೆ ಬಹಳ ಕುತೂಹಲ ಮೂಡಿಸಿದೆ. ಬಿ.ಆರ್.ಪಾಟೀಲ್, ಬಸವರಾಜ ರಾಯರೆಡ್ಡಿ, ಎಂ.ಕೃಷ್ಣಪ್ಪ ಸೇರಿದಂತೆ ಹಲವು ಹಿರಿಯ ಶಾಸಕರೇ ಶಾಸಕಾಂಗ ಸಭೆ ಕರೆಯುವಂತೆ ಒತ್ತಡ ಹಾಕಿದ್ದಾರೆ. ಅಲ್ಲದೆ ಸಚಿವರ ವಿರುದ್ಧ ಶಾಸಕರ ಪತ್ರ

ಅನುದಾನ ಬಿಡುಗಡೆ ಮಾಡಲು ಕಮಿಷನ್ | ಇಂದು ಕಾಂಗ್ರೆಸ್ ಶಾಸಕಾಂಗ ಸಭೆ Read More »

ರೋಟರಿ ಸೆಂಟ್ರಲ್ ವತಿಯಿಂದ  “ಮನೆಗೊಂದು ಗಿಡ “

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಪ್ರಶಾಂತಿ ಸದ್ಭಾವನ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ವತಿಯಿಂದ ಕೇಪುಳು ಸಿಗಂದೂರು ಮನೆಯಲ್ಲಿ ಮನೆಗೊಂದು ಗಿಡ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರಿನ ಅವಧೂತರಾದ ಅರ್ಜುನ್ ಮಹಾರಾಜ್ ಗುರೂಜಿಯವರು ಗಿಡ ವಿತರಣೆಗೆ ಚಾಲನೆ ನೀಡಿದರು. ಸಿಗಂದೂರು ಮನೆಯ ಡಾ ಸಂತೋಷ್ ಪ್ರಭು, ಪ್ರಶಾಂತಿ ಸದ್ಭಾವನಾ ಟ್ರಸ್ಟ್ ನ ಮದುಸೂದನ್ ನಾಯಕ್, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನ ಅಧ್ಯಕ್ಷ ಡಾ ರಾಜೇಶ್ ಬೆಜ್ಜಂಗಳ, ಮೆಂಬರ್ಶಿಪ್ ಡೆವಲಪ್ ಮೆಂಟ್ ಚಯರ್ ಮೇನ್

ರೋಟರಿ ಸೆಂಟ್ರಲ್ ವತಿಯಿಂದ  “ಮನೆಗೊಂದು ಗಿಡ “ Read More »

ಜು.30: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮಹಾಸಭೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಜು.30 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಗಂಟೆ 9.30ಕ್ಕೆ ವಾರ್ಷಿಕ ಮಹಾಸಭೆ ನಡೆಯಲಿದೆ. ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ತಿಳಿಸಿದ್ದಾರೆ.

ಜು.30: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮಹಾಸಭೆ Read More »

ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ | ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಈ ಕುರಿತು ಹೇಳಿದ್ದೇನು | ಇಲ್ಲಿದೆ ಡಿಟೈಲ್ಸ್

ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹೇಳಿದ್ದಾರೆ. ಪ್ರಕರಣದ ಕುರಿತು ಎಸ್ ಪಿ ಹಾಗೂ ಡಿಸಿ ಜೊತೆ ಚರ್ಚಿಸಿದ ಬಳಿಕ ಅವರು ಮಾತನಾಡಿ, ಮಹಿಳಾ ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ.ಯಾವುದೇ ಒಂದು ನಿರ್ದಿಷ್ಟ ಕೋಮುವಿನ ಮಹಿಳೆಯ ರಕ್ಷಣೆ ನಾವು ಬಂದಿಲ್ಲ. ಈ ಪ್ರಕರಣಕ್ಕೆ ಯಾವುದೇ ಕೋಮು

ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ | ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಈ ಕುರಿತು ಹೇಳಿದ್ದೇನು | ಇಲ್ಲಿದೆ ಡಿಟೈಲ್ಸ್ Read More »

ಗ್ರಾಮೀಣ ಬಡವರ ಮಕ್ಕಳೂ ಉನ್ನತ ವ್ಯಾಸಂಗ ಮಾಡುವಂತಾಗಬೇಕು: ಶಾಸಕ ಅಶೋಕ್ ರೈ | ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಸಿಇಟಿ, ನೀಟ್ ಕೋಚಿಂಗ್ ತರಗತಿ ಉದ್ಘಾಟನೆ

ಪುತ್ತೂರು: ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಗದ ಬಡವರ ಮಕ್ಕಳೂ ಸಿಇಟಿ, ನೀಟ್ ಪರೀಕ್ಷೆ ಬರೆದು ಉನ್ನತ ವ್ಯಾಸಂಗ ಮಾಡುವಂತಗಬೇಕು, ಪ್ರತೀಯೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಗಬೇಕೆಂಬುದೇ ನನ್ನ ಉದ್ದೇಶವಾಗಿದೆ ಇದಕ್ಕಾಗಿ ಜಿಲ್ಲೆಯಲ್ಲೇ ಪ್ರಥಮ ಬಾರಿ ಎಂಬಂತೆ ಪುತ್ತೂರಿನ ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಸಿಇಟಿ ಮತ್ತು ನೀಟ್ ಕೋಚಿಂಗ್ ತರಗತಿಯನ್ನು ಪ್ರಾರಂಭಿಸಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಶಿಕ್ಷಕರ ನೂತನ ಕೊಠಡಿ,

ಗ್ರಾಮೀಣ ಬಡವರ ಮಕ್ಕಳೂ ಉನ್ನತ ವ್ಯಾಸಂಗ ಮಾಡುವಂತಾಗಬೇಕು: ಶಾಸಕ ಅಶೋಕ್ ರೈ | ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಸಿಇಟಿ, ನೀಟ್ ಕೋಚಿಂಗ್ ತರಗತಿ ಉದ್ಘಾಟನೆ Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.27 ಗುರುವಾರ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ರಜೆನೀಡಲಾಗಿದೆ ಎಂದು ಜಿಲ್ಲಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ Read More »

ಗೃಹ ಮಂತ್ರಿ ಪರಮೇಶ್ವರರಿಂದ ಕೆಜೆ, ಡಿಜೆ ಹಳ್ಳಿ ಅಮಾಯಕ ಮೇಲಿನ ಕೇಸು ಹಿಂತೆಗೆಯಬೇಕು ಹೇಳಿಕೆ | ವಿಹಿಂಪ, ಬಜರಂಗದಳ ಖಂಡನೆ

ಪುತ್ತೂರು: ಪರಮೇಶ್ವರರವರು ಗೃಹ ಮಂತ್ರಿಗಳಾಗಿ ಕೆಜೆ ಹಳ್ಳಿ .ಡಿಜೆ ಹಳ್ಳಿಯ ಅಮಾಯಕರ ಹೆಸರಿನಲ್ಲಿರುವ ಕೇಸ್ ಗಳನ್ನು ತೆಗೆಯಬೇಕೆಂದು ಹೇಳಿರುವುದನ್ನು ವಿಶ್ವ  ಹಿಂದೂ ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬಜರಂಗದಳ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ಇಂದು ಉಡುಪಿಯಲ್ಲಿ ಬಹಳ ಒತ್ತಡಕ್ಕೆ ಮಣಿದು ಶೌಚಾಲಯದಲ್ಲಿ ವೀಡಿಯೊ ಮಾಡಿರುವ ಮತಾಂಧ ದುಷ್ಟ ಶಕ್ತಿಗಳ ವಿರುದ್ಧ ಎಫ್.ಐ.ಅರ್ ಮಾಡಿದ್ದಾರೆ. ಆದರೆ ಅವರನ್ನು ಬಂಧನ ಮಾಡಲು ಆಗದ ಪೊಲೀಸ್  ವ್ಯವಸ್ಥೆಯನ್ನು ಖಂಡಿಸುತ್ತೇವೆ. ಇದೇ ರೀತಿಯ ಕೆಜೆ

ಗೃಹ ಮಂತ್ರಿ ಪರಮೇಶ್ವರರಿಂದ ಕೆಜೆ, ಡಿಜೆ ಹಳ್ಳಿ ಅಮಾಯಕ ಮೇಲಿನ ಕೇಸು ಹಿಂತೆಗೆಯಬೇಕು ಹೇಳಿಕೆ | ವಿಹಿಂಪ, ಬಜರಂಗದಳ ಖಂಡನೆ Read More »

error: Content is protected !!
Scroll to Top