ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ | ನಾಲ್ವರಿಗೆ ಗಂಭೀರ ಗಾಯ
ವಿಟ್ಲ: ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ. ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದಾಗಿ […]
ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ | ನಾಲ್ವರಿಗೆ ಗಂಭೀರ ಗಾಯ Read More »







