ಉಪ್ಪಿನಂಗಡಿ ದುರ್ಗಾಗಿರಿ, ನಿನ್ನಿಕಲ್ಲು ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಉಪ್ಪಿನಂಗಡಿ: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಿನಂಗಡಿ ಗ್ರಾಮದ ದುರ್ಗಾಗಿರಿ ಮತ್ತು ನಿನ್ನಿಕಲ್ಲು ಒಕ್ಕೂಟದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಸುತ್ತಮುತ್ತಲಿನಲ್ಲಿರುವ ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. ಅಲ್ಲದೆ ದೇವಸ್ಥಾನ ಛಾವಣಿಯನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಮೇಲ್ವಿಚಾರಕ ಶಿವಪ್ಪ, ಜನಜಾಗೃತಿ ವಲಯಾಧ್ಯಕ್ಷ, ಒಕ್ಕೂಟದ ಅಧ್ಯಕ್ಷ ಲೋಕೇಶ್ ಬೆತ್ತೋಡಿ, ಪಂಚಾಯತ್ ಅಧ್ಯಕ್ಷೆ ಉಷಾಚಂದ್ರ ಮುಳಿಯ, ಸೇವಾ ಪ್ರತಿನಿಧಿಗಳಾದ ಉಷಾ ಹರೀಶ್. ಶಶಿ ಗಂಗಾಧರ, […]

ಉಪ್ಪಿನಂಗಡಿ ದುರ್ಗಾಗಿರಿ, ನಿನ್ನಿಕಲ್ಲು ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ತಾಲೂಕಿನಾದ್ಯಂತ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಸುಳ್ಯ: ಸುಳ್ಯ ವಿಧಾನ ಸಭಾಕ್ಷೇತ್ರದ ಕಡಬ ತಾಲೂಕಿನಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಲಂಕಾರು ಗ್ರಾಮ ವನ್ ಕಛೇರಿಗೆ ಭೇಟಿ ನೀಡಿ ಶುಭಾಹಾರೈಸಿದರು. ನಂತರ ಆಲಂಕಾರು ಕಮ್ಮಿತ್ತಿಲು ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿ ಪ್ರಸಾದ ಸ್ವೀಕರಿಸಿದರು. ಪೆರಾಬೆ ಗ್ರಾಮದ ಪೂಂಜಾ ಎಂಬಲ್ಲಿ ಸಾರ್ವಜನಿಕ ರಸ್ತೆಯ ಬದಿಯ ಭೂ ಕುಸಿತದ ವೀಕ್ಷಣೆ ನಡೆಸಿ ಸಾರ್ವಜನಿಕ ಕುಂದು ಕೊರತೆಯನ್ನು ಆಲಿಸಿದರು. ಹಳೆನೇರೆಂಕಿ ದ.ಕ.ಜಿ.ಪ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಶಾಲಾ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ತಾಲೂಕಿನಾದ್ಯಂತ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ Read More »

ಚಾರ್ಮಾಡಿ ಅಕ್ರಮ ಮರಳು ಸಾಗಾಟ ಪ್ರಕರಣ | ಲಾರಿ ವಶಕ್ಕೆ

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಚಾರ್ಮಾಡಿಯಲ್ಲಿ ಪತ್ತೆಹಚ್ಚಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಧರ್ಮಸ್ಥಳ ಎಸ್.ಐ. ಅನಿಲ್ ಕುಮಾರ್ ನೇತೃತ್ವದ ತಂಡ ವಾಹನ ಚಾರ್ಮಾಡಿಯಲ್ಲಿ ತಪಾಸಣೆ ನಡೆಸಿದಾಗ ಈ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಲಾರಿ ಚಾಲಕ ಅನ್ವರ್ ಎಂಬಾತನನ್ನು ಈ ಕುರಿತು ವಿಚಾರಿಸಿದಾಗ ಆತನ ಬಳಿ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ. ಸರಕಾರಕ್ಕೆ ಯಾವುದೇ ರಾಜಸ್ವವನ್ನು ಪಾವತಿಸದೆ ಮರಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆತಲಾಯಿತು. ಮುಂದಿನ ಕ್ರಮಕ್ಕಾಗಿ

ಚಾರ್ಮಾಡಿ ಅಕ್ರಮ ಮರಳು ಸಾಗಾಟ ಪ್ರಕರಣ | ಲಾರಿ ವಶಕ್ಕೆ Read More »

ಇಂದು ತುಳುನಾಡಿನ ವಿಶೇಷ ಆಚರಣೆ ಆಟಿ ಅಮವಾಸ್ಯೆ | ಔಷಧೀಯ ಗುಣವುಳ್ಳ ಪಾಲೆ ಮರದ ಸೇವನೆಗೆ ವಿಶೇಷ ದಿನ

ಪುತ್ತೂರು: ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ಆಚರಿಸುವ ಅಮಾವಾಸ್ಯೆಯಾಗಿದೆ. ಈ ಅಮಾವಾಸ್ಯೆಯನ್ನು ಆಷಾಡ ಅಮಾಸೆ , ದೀವಿಗೆ ಕರ್ನಾಟಕ ಅಮಾವಾಸ್ಯೆ ಅಥವಾ ಮನ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಆಟಿ ಆಚರಣೆಯ ಮೂಲಕ ಮುಂದಿನ ಹಬ್ಬಗಳಿಗೆ ಮುನ್ನುಡಿ ಇಟ್ಟಂತೆ. ಮುಂದಿನ ಹಬ್ಬಗಳು ಸಾಲು ಸಾಲಾಗಿ ಆಚರಣೆಗೊಳ್ಳಲಿವೆ. ಆಟಿ ತಿಂಗಳಲ್ಲಿ ಬರುವ ಈ ಅಮಾವಸ್ಯೆಯು ತುಳುವ ಜನರಿಗೆ ವಿಶೇಷವಾದ ದಿನ ಹಾಗೂ ಇದು ಹಿಂದಿನಿಂದಲೂ ಆಚರಿಸುತ್ತಾ ಬಂದಿರುವ ಆಚರಣೆಯಾಗಿದೆ. ಪಾಲೆ ಮರದ ಕಷಾಯ : ತುಳುನಾಡಿನಲ್ಲಿ ಆಟಿಯ ಅಮವಾಸ್ಯೆಯನ್ನು ವಿಶೇಷವಾಗಿ ಆಚರಿಸುತ್ತಾರೆ. ಈ ದಿನ ಪಾಲೆಯ ರಸದ ಕಷಾಯ ಕುಡಿಯುವುದರಿಂದ ಒಂದು

ಇಂದು ತುಳುನಾಡಿನ ವಿಶೇಷ ಆಚರಣೆ ಆಟಿ ಅಮವಾಸ್ಯೆ | ಔಷಧೀಯ ಗುಣವುಳ್ಳ ಪಾಲೆ ಮರದ ಸೇವನೆಗೆ ವಿಶೇಷ ದಿನ Read More »

ಉಯ್ಯಾಲೆಯಿಂದ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ: ಬಾಲಕನೋರ್ವ ಸೀರೆ ಅಳವಡಿಸಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಭಾನುವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಶ್ರೀಶ (13) ಮೃತಪಟ್ಟ ಬಾಲಕ. ಮುಂಡಾಜೆ ಶಾಲೆಯೊಂದರ 8 ನೇ ತರಗತಿ ವಿದ್ಯಾರ್ಥಿಯಾಗಿರುವ ಶ್ರೀಶ ಉಯ್ಯಾಲೆಯಿಂದ ಬಿದ್ದಿದ್ದನ್ನು ಗಮನಿಸಿದ ಆತನ ತಾಯಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯದರೂ ಅಲ್ಲಿ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ಬಾಲಕನಿಗೆ ತಂದೆ, ತಾಯಿ ಹಾಗೂ ಸಹೋದರಿ

ಉಯ್ಯಾಲೆಯಿಂದ ಬಿದ್ದು ಬಾಲಕ ಮೃತ್ಯು Read More »

ಚಿಕ್ಕೋಡಿ ಜೈನಮುನಿ ಹತ್ಯೆ | ಪುತ್ತಿಲ ಪರಿವಾರದಿಂದ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವಂತೆ ರಾಜ್ಯಪಾಲರಿಗೆ ಮನವಿ

ಪುತ್ತೂರು: ಚಿಕ್ಕೋಡಿ ಜೈನ ಮುನಿವರ್ಯರ ಭೀಕರ ಹತ್ಯೆ ಮಾಡಿದ ಆರೋಪಿಗಳ ಮನೆ ಸಹಿತ ಸಂಪೂರ್ಣ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕಾಗಿ ಪುತ್ತಿಲ ಪರಿವಾರದ ವತಿಯಿಂದ ಸಹಾಯಕ ಕಮಿಷನರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರಕರಣಕ್ಕೆ ಸಂಬಂಧಿತ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮುಂದೆ ಬಿರಿಯಾನಿ ಊಟ ನೀಡುವಂತಹ ಸ್ಥಿತಿ ನಿರ್ಮಾಣವಾಗಬಾರದು. ಧಾರ್ಮಿಕ ಪರಂಪರೆಯನ್ನು ಉಳಿಸುವಲ್ಲಿಯೂ ಕಾರ್ಯ ಸರ್ಕಾರ ಕಟಿ ಬದ್ದವಾಗಿರಬೇಕು. ಮನವಿ ಸಲ್ಲಿಸುವ ಸಂದರ್ಭ ಪುತ್ತಿಲ ಪರಿವಾರದ ಪ್ರಮುಖರಾದ ಉಮೇಶ್ ಗೌಡ , ಪ್ರವೀಣ್ ಭಂಡಾರಿ

ಚಿಕ್ಕೋಡಿ ಜೈನಮುನಿ ಹತ್ಯೆ | ಪುತ್ತಿಲ ಪರಿವಾರದಿಂದ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವಂತೆ ರಾಜ್ಯಪಾಲರಿಗೆ ಮನವಿ Read More »

ನಿಡ್ಪಳ್ಳಿ, ಆರ್ಯಾಪು ಗ್ರಾಪಂ ಉಪಚುನಾವಣೆ : ಪುತ್ತಿಲ ಪರಿವಾರದಿಂದ ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ಪುತ್ತಿಲ ಪರಿವಾರದಿಂದ ನಿಡ್ಪಳ್ಳಿ ಹಾಗೂ ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಮಹಾ ಸಂಪರ್ಕ ಅಭಿಯಾನ ಭಾನುವಾರ ನಡೆಯಿತು. ಶ್ರೀಕ್ಷೇತ್ರ ನಿಡ್ಪಳ್ಳಿಯ ಶಾಂತಾದುರ್ಗಾ ದೇವಸ್ಥಾನ, ಆರ್ಯಾಪು ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಎರಡು ಕ್ಷೇತ್ರದ ಪುತ್ತಿಲ ಪರಿವಾರದ ಬ್ಯಾಟ್ ಚಿಹ್ನೆಯ ಅಭ್ಯರ್ಥಿಗಳಾದ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಹಾಗೂ ಜಗನ್ನಾಥ ರೈ ಕೊಳಂಬೆತ್ತಿಮಾರು ಹಾಗೂ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ತಾಲೂಕು ಸಮಿತಿ ಹಾಗೂ

ನಿಡ್ಪಳ್ಳಿ, ಆರ್ಯಾಪು ಗ್ರಾಪಂ ಉಪಚುನಾವಣೆ : ಪುತ್ತಿಲ ಪರಿವಾರದಿಂದ ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ Read More »

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಆಯ್ಕೆ | ಇಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಇಂಡಿಯನ್ ಕಾನ್ಸರೆನ್ಸ್ ಆಫ್ ಇಂಟಲೆಕ್ಚುವಲ್ಸ್ ನೀಡುವ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಂದು ದಿಲ್ಲಿಯ ಇಂಡಿಯಾ ಇಂಟರ್ ನ್ಯಾಶನಲ್ ಸೆಂಟರ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಒಡಿಶಾ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಮತ್ತು ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದ ರಾಷ್ಟ್ರೀಯ ಅಧ್ಯಕ್ಷರು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸುಪ್ರೀ ಕೋರ್ಟಿನ ನ್ಯಾಯಾಧೀಶ ಪ್ರಶಾಂತ್ ಕುಮಾರ್

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಆಯ್ಕೆ | ಇಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ Read More »

ಮಂಗಳೂರು ಚಿಲಿಂಬಿ ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಎಂ.ಬಿ.ಕಿರಣ್ ಬುಡ್ಲೆಗುತ್ತು ಆಯ್ಕೆ

ಮಂಗಳೂರು: ಒಕ್ಕಲಿಗರ ಗೌಡ ಸೇವಾ ಸಂಘದ ಚಿಲಿಂಬಿ ಮಂಗಳೂರು ಯುವ ಘಟಕದ ಅಧ್ಯಕ್ಷರಾಗಿ ಎಂ.ಬಿ.ಕಿರಣ್ ಬುಡ್ಲೆಗುತ್ತು ಚುನಾಯಿತರಾದರು. ಮಂಗಳೂರಿನಲ್ಲಿ ಶನಿವಾರ ಮಂಗಳೂರು ಯುವ ಘಟಕ ಹಾಗೂ ಮಹಿಳಾ ಘಟಕದ ಆಯ್ಕೆ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರನ್ನು ಸೂಚಿಸಿರುವುದರಿಂದ ಯುವ ನಿರ್ದೇಶಕರು ಕೈ ಎತ್ತಿ ಮತದಾನ ಪ್ರಕ್ರಿಯೆ ನಡೆಸಿದರು. ಕಿರಣ್ ಬುಡ್ಡೆಗುತ್ತುರವರ ಆಪ್ತ ಕಿರಣ್ ಹೊಸೊಳಿಕೆ 16 ಮತ ಪಡೆದರು. ರಾಘವೇಂದ್ರ ಅವರು 1 ಮತ ಪಡೆದು ಪರಾಜಿತಾರಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ,

ಮಂಗಳೂರು ಚಿಲಿಂಬಿ ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಎಂ.ಬಿ.ಕಿರಣ್ ಬುಡ್ಲೆಗುತ್ತು ಆಯ್ಕೆ Read More »

ಶರಣ್ ಪಂಪ್ವೆಲ್ ವಿರುದ್ಧ ಮಾನಹಾನಿಕರ ಪೋಸ್ಟ್| ಕ್ರಮ ಕೈಗೊಳ್ಳುವಂತೆ ಬಜರಂಗದಳ, ವಿಹಿಂಪ ವತಿಯಿಂದ ಠಾಣಾಧಿಕಾರಿಗಲಿಗೆ ಮನವಿ

ಪುತ್ತೂರು: ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ವಿರುದ್ಧ ಮಾನಹಾನಿಕರ ಪೋಸ್ಟ್ ಹಾಕಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಪುತ್ತೂರು ಗ್ರಾಮಾಂತರ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಪ್ರಖಂಡ ಕಾರ್ಯದರ್ಶಿ ರವಿಕುಮಾರ್ ಕೈತಡ್ಕ, ಬಜರಂಗದಳ ಸಂಯೋಜಕ ವಿಶಾಖ್ ಸಸಿಹಿತ್ಲು, ಚಂದ್ರನಾಥ ಮುಕ್ವೆ, ಧನರಾಜ್ ಕೊಡಿಪ್ಪಾಡಿ ಉಪಸ್ಥಿತರಿದ್ದರು.

ಶರಣ್ ಪಂಪ್ವೆಲ್ ವಿರುದ್ಧ ಮಾನಹಾನಿಕರ ಪೋಸ್ಟ್| ಕ್ರಮ ಕೈಗೊಳ್ಳುವಂತೆ ಬಜರಂಗದಳ, ವಿಹಿಂಪ ವತಿಯಿಂದ ಠಾಣಾಧಿಕಾರಿಗಲಿಗೆ ಮನವಿ Read More »

error: Content is protected !!
Scroll to Top