76ನೇ ಪ್ರತಿಷ್ಠಿತ ಸೀನಿಯರ್ ನ್ಯಾಷನಲ್ ಅಕ್ವಾಟಿಕ್ ಈಜು ಚಾಂಪಿಯನ್ ಶಿಪ್‍ನಲ್ಲಿ ವೈಷ್ಣವ್ ಹೆಗ್ಡೆಗೆ ಬೆಳ್ಳಿ ಪದಕ

ಪುತ್ತೂರು: ಜುಲೈ 6ರಂದು ಹೈದರಾಬಾದ್ ನ ಗಚಿಬೌಲಿಯಲ್ಲಿ ನಡೆದ 76ನೇ ಪ್ರತಿಷ್ಠಿತ ಸೀನಿಯರ್ ನ್ಯಾಷನಲ್ಸ್ ಅಕ್ವಾಟಿಕ್ ಚಾಂಪಿಯನ್ ಶಿಪ್‌ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿರುವ ಭಾರತೀಯ ನೌಕಾಪಡೆಯ ಈಜುಗಾರ ವೈಷ್ಣವ್ ಹೆಗ್ಡೆಯವರು 50 ಮೀಟರ್ ಬ್ರೆಸ್ಟ್ ಸ್ಟೋಕ್‌ನಲ್ಲಿ 28.8 ಸೆಕೆಂಡುಗಳಲ್ಲಿ ತಮ್ಮ ವೈಯಕ್ತಿಕ ಅತ್ಯುತ್ತಮ ಸಮಯದೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವೈಷ್ಣವ್ ಈ ವರ್ಷದ ಹಿರಿಯ ಸೀನಿಯರ್ಸ್ ರಾಷ್ಟ್ರೀಯ ಪದಕವನ್ನು ಗೆದ್ದ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಈಜುಗಾರರೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯುವ ರಾಷ್ಟ್ರೀಯ […]

76ನೇ ಪ್ರತಿಷ್ಠಿತ ಸೀನಿಯರ್ ನ್ಯಾಷನಲ್ ಅಕ್ವಾಟಿಕ್ ಈಜು ಚಾಂಪಿಯನ್ ಶಿಪ್‍ನಲ್ಲಿ ವೈಷ್ಣವ್ ಹೆಗ್ಡೆಗೆ ಬೆಳ್ಳಿ ಪದಕ Read More »

ಆರ್ಯಾಪು ಗ್ರಾಪಂ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಸುಬ್ರಹ್ಮಣ್ಯ ಬಲ್ಯಾಯ ನಾಮಪತ್ರ ಸಲ್ಲಿಕೆ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯಿತಿ ಉಪ ಚುನಾವಣೆಗೆ ಪುತ್ತಿಲ ಪರಿವಾರದಿಂದ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಮಂಗಳವಾರ ನಾಮಪತ್ರ ಸಲ್ಲಿಸಿದರು. ಈ ಹಿಂದಿನ ಅಭ್ಯರ್ಥಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಆರ್ಯಾಪು ಗ್ರಾಮ ಪಂಚಾಯಿತಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು. ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ,  ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ,  ಪ್ರಮುಖರಾದ ವಾಣಿಶ್ರೀ, ಶ್ರೀಕರಿ, ನವೀನ್ ರೈ ಮೇಗಿನಪಂಜ, ಜಗದೀಶ್ ಪೂಜಾರಿ, ನಾರಾಯಣ ಕುಲಾಲ್, ತಿಮ್ಮಪ್ಪ ನಾಯ್ಕ್

ಆರ್ಯಾಪು ಗ್ರಾಪಂ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಸುಬ್ರಹ್ಮಣ್ಯ ಬಲ್ಯಾಯ ನಾಮಪತ್ರ ಸಲ್ಲಿಕೆ Read More »

ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಚಂದ್ರಶೇಖರ ಪ್ರಭು ನಾಮಪತ್ರ ಸಲ್ಲಿಕೆ

ಪುತ್ತೂರು: ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಿಡ್ಲಳ್ಳಿ ಗ್ರಾಮ ಪಂಚಾಯಿತಿಯಿಂದ ನಾಮಪತ್ರ ಸಲ್ಲಿಸಿದರು.  ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತಿ ಮತ್ತು ನಿಡ್ನಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ 23ರಂದು ಉಪಚುನಾವಣೆ ನಡೆಯಲಿದೆ. ನಿಡ್ನಳ್ಳಿ ಗ್ರಾಮ ಪಂಚಾಯತಿಯ ಒಂದನೇ ವಾರ್ಡ್ ಸದಸ್ಯ ಮುರಳೀಕೃಷ್ಣ ಭಟ್ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ತೆರವಾದ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಸಾಜ

ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಚಂದ್ರಶೇಖರ ಪ್ರಭು ನಾಮಪತ್ರ ಸಲ್ಲಿಕೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರತಿಭಟನೆ ನಡೆಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಸಮನ್ಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ್ದ ಶಾಸಕ ರವಿ ಸುಬ್ರಹ್ಮಣ್ಯ,  ಮಾಜಿ ಮೇಯರ್ ಗಳಾದ ಕಟ್ಟೆ ಸತ್ಯನಾರಾಯಣ, ಉಮೇಶ್ ಶೆಟ್ಟಿ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ 11 ಮಂದಿ ಮೇಲೆ ಪ್ರಕರಣ ದಾಖಲಿದ್ದು, ಈ ಪೈಕಿ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಯುವವಾಹಿನಿ, ಹಿಂದೂ ಸಂಘಟನೆ ಮತ್ತು ಬಿಜೆಪಿಯಲ್ಲಿ ಸಕ್ರಿಯವಾಗಿದ್ದ ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಪ್ರವೀಣ್ ಅವರನ್ನು 2021ರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರತಿಭಟನೆ ನಡೆಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಸಮನ್ಸ್ ಗೆ ಹೈಕೋರ್ಟ್ ತಡೆ Read More »

ಜಾಗದ ವಿಚಾರದಲ್ಲಿ ನೆರೆಮನೆಯ ನಾಲ್ವರಿಂದ ಹಲ್ಲೆ

ಕಡಬ: ಜಾಗದ ವಿಚಾರಕ್ಕೆ ಸಂಬಂಧಿಸಿ ಪಕ್ಕದ ಮನೆಯವರ ಮೇಲೆ ಹಲ್ಲೆ ಮಾಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆಯಲ್ಲಿ ನಡೆದಿದೆ. ಆರ್ಲ ನಿವಾಸಿ, ಸೈನಿಕ ಅಝೀಝ್‍, ಪತ್ನಿ ಫೌಝಿಯಾ ಹಾಗೂ ಮಗ ಮತ್ತು ಇನ್ನೋರ್ವರು ಹಲ್ಲೆಗೊಳಗಾದವರು ಕಲ್ಲುಗುಡ್ಡೆಯಲ್ಲಿರುವ ತಂದೆ ಮನೆಗೆ ಫೌಝಿಯಾ ಹೋಗಿದ್ದರು. ಈ ಸಂದರ್ಭದಲ್ಲಿ ನೆರೆಮನೆಯ ನಾಲ್ವರು ಜಾಗದ ವಿಚಾರದಲ್ಲಿ ಜಗಳ ತೆಗೆದಿದ್ದಾರೆ. ಮಾತಿಗೆ ಮಾತು ಬೆಳೆದು ಫೌಝಿಯಾ ಮೇಲೆ ನಾಲ್ವರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಫೌಝಿಯಾ ಅವರ ತಂದೆ ಮೇಲೂ ಹಲ್ಲೆ ನಡೆದಿದೆ

ಜಾಗದ ವಿಚಾರದಲ್ಲಿ ನೆರೆಮನೆಯ ನಾಲ್ವರಿಂದ ಹಲ್ಲೆ Read More »

ಶಾಲಾ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜ್ಯಾರಿ | ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು

ಬೆಂಗಳೂರು :  ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ಚರ್ಚೆ ನಡೆಸಿ ಆ ಬಳಿಕ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಸೋಮವಾರ, ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಕರ ವಸ್ತ್ರಸಂಹಿತೆಗೆ ನಿಯಮಗಳಿಲ್ಲ. ಅಂತಹ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ. ವಸ್ತ್ರಸಂಹಿತೆ ಒಳಿತು ಎನ್ನುವುದಾದರೆ ಎಲ್ಲರ ಜತೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯದಲ್ಲಿ ಶಿಕ್ಷಕರ ಕೊರತೆ

ಶಾಲಾ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜ್ಯಾರಿ | ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು Read More »

ಪುತ್ತೂರಿನಲ್ಲಿ ಅತೀ ದೊಡ್ಡ ಸ್ಪೋರ್ಟ್ಸ್ ಶೋರೂಂ “ಸ್ಪೋರ್ಟ್ಸ್ ವರ್ಲ್ಡ್” | ಎಲ್ಲಾ ತರದ ಬ್ರಾಂಡೆಡ್ ಸ್ಪೋರ್ಟ್ಸ್ ಐಟಂಗಳು ಲಭ್ಯ

ಪುತ್ತೂರು: ಕ್ರೀಡಾ ಪ್ರಿಯರೇ ಪುತ್ತೂರಿನ ಅತೀ ದೊಡ್ಡ ಸ್ಪೋರ್ಟ್ಸ್‍ ಶೋರೂಂ “ಸ್ಪೋರ್ಟ್ಸ್ ವರ್ಲ್ಡ್” ಇದೀಗ ಪುತ್ತೂರಿನಲ್ಲಿ ತನ್ನ ಮಳಿಗೆಯನ್ನು ತೆರೆದಿದೆ. ನಗರದ ಮುಖ್ಯ ರಸ್ತೆಯಲ್ಲಿರುವ ಅಮರ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸ್ಪೋರ್ಟ್ಸ್ ವರ್ಲ್ಡ್ ನಲ್ಲಿ ಎಲ್ಲಾ ತರದ ಬ್ರಾಂಡೆಡ್ ವಸ್ತುಗಳು, ಟ್ರೋಫಿಗಳು, ಸ್ಪೋರ್ಟ್ಸ್ ಶೂ, ಸ್ಪೋರ್ಟ್ಸ್ ವೇರ್ಸ್ ಸಹಿತ ಮತ್ತಿರ ಕ್ರೀಡಾ ಸಾಮಾಗ್ರಿಗಳು ಲಭ್ಯವಿದ್ದು, ತಮಗಿಷ್ಟ ಬಂದ ಸ್ಪೋರ್ಟ್ಸ್ ವಸ್ತುಗಳನ್ನು ಅತ್ಯುತ್ತಮ ದರದೊಂದಿಗೆ ಖರೀದಿಸಬಹುದು. ಸಂಸ್ಥೆಯಲ್ಲಿ ಟ್ರೋಫಿಗಳ ಮೇಲೆ ವಿಶೇಷ ರಿಯಾಯಿತಿ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸ್ಥೆಯ

ಪುತ್ತೂರಿನಲ್ಲಿ ಅತೀ ದೊಡ್ಡ ಸ್ಪೋರ್ಟ್ಸ್ ಶೋರೂಂ “ಸ್ಪೋರ್ಟ್ಸ್ ವರ್ಲ್ಡ್” | ಎಲ್ಲಾ ತರದ ಬ್ರಾಂಡೆಡ್ ಸ್ಪೋರ್ಟ್ಸ್ ಐಟಂಗಳು ಲಭ್ಯ Read More »

ಜು.30 ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ | ಪ್ರತಿಭಾ ಪುರಸ್ಕಾರಕ್ಕೆ ಮಾಹಿತಿ ನೀಡುವಂತೆ ವಿನಂತಿ

ಪುತ್ತೂರು: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ಜು.20 ರೊಳಗೆ ಸಲ್ಲಿಸುವಂತೆ ತಿಳಿಸಿದೆ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆಧಾರ್ ಕಾರ್ಡ್‍ ಪ್ರತಿ ಹಾಗೂ ದೃಢೀಕರಣ ಅಂಕ ಪಟ್ಟಿಯನ್ನು ಸಂಘದ ಕಚೇರಿಯಲ್ಲಿ ನೀಡತಕ್ಕದ್ದು. ಜು.30 ರಂದು ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯುವ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೀಡಲಾಗುವುದು. 2022-23 ರ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ

ಜು.30 ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ | ಪ್ರತಿಭಾ ಪುರಸ್ಕಾರಕ್ಕೆ ಮಾಹಿತಿ ನೀಡುವಂತೆ ವಿನಂತಿ Read More »

ಪುತ್ತೂರು ಸಹಾಯಕ ಆಯುಕ್ತರಾಗಿ ಕೆ.ಮಹೇಶಚಂದ್ರ ಅಧಿಕಾರ ಸ್ವೀಕಾರ

ಪುತ್ತೂರು : ಪುತ್ತೂರಿನ ನೂತನ ಸಹಾಯಕ ಆಯುಕ್ತರಾಗಿ ಕೆ. ಮಹೇಶಚಂದ್ರ ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಕೆ. ಮಹೇಶಚಂದ್ರ ಆಗಮಿಸಿದ್ದಾರೆ. ಮಹೇಶಚಂದ್ರ ಅವರು ಕೆ.ಐ.ಎ.ಡಿ.ಬಿ.ಯ ಬೈಕಂಪಾಡಿ ಕಚೇರಿಯಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದು, ಇನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತರಾಗಿ ಕೆ.ಮಹೇಶಚಂದ್ರ ಅಧಿಕಾರ ಸ್ವೀಕಾರ Read More »

ಚಿಂತನೆಗಳು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದು ನಮ್ಮ ಕರ್ತವ್ಯ : ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ | ಕಾವೂರು ಬಿಜಿಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ

ಮಂಗಳೂರು:  ಸಾಮಾಜಿಕ ಮೌಲ್ಯಗಳನ್ನು ಬಾಲ್ಯದಲ್ಲೇ ಬೆಳೆಸಿಕೊಳ್ಳಬೇಕು. ಪರಿವರ್ತನೆಯ ಹಾದಿ ನಿರಂತರವಾಗಿ ಬದಲಾವಣೆ ಪರ್ವವನ್ನು ಕಾಣುತ್ತದೆ. ಪ್ರತಿ ಚಿಂತನೆಗಳು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಬಿಜಿಎಸ್‌ ಕಾವೂರು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ತಿಳಿಸಿದರು. ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸದ್ಗುಣಗಳನ್ನು ರೂಢಿಸಿಕೊಳ್ಳಬೇಕು. ಶಿಸ್ತುಬದ್ಧ ಜೀವನ ಇದ್ದರೆ ಬಹುರೂಪಿಯಾಗಿ ಬೆಳೆಯಬಹುದಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಅಧೀಕ್ಷಕ ಲೋಕಾಯುಕ್ತ ಚೆಲುವರಾಜು

ಚಿಂತನೆಗಳು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದು ನಮ್ಮ ಕರ್ತವ್ಯ : ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ | ಕಾವೂರು ಬಿಜಿಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ Read More »

error: Content is protected !!
Scroll to Top