ಅನ್ನಭಾಗ್ಯಕ್ಕೆ ಇಂದು ಚಾಲನೆ|ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ಹಣ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್‌ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಪ್ಲಾನ್ ಅನ್ನು ಆಹಾರ ಇಲಾಖೆ ಮಾಡಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ, ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿ ಆಗಬೇಕಿತ್ತು. ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ 5 ಕೆಜಿ ಅಕ್ಕಿಗೆ ಹಣ ಹಾಕಲು […]

ಅನ್ನಭಾಗ್ಯಕ್ಕೆ ಇಂದು ಚಾಲನೆ|ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ಹಣ Read More »

ಜು.13 : ಡಾ.ಶ್ರೀಧರ ಎಚ್‍.ಜಿ. ಅವರ ““ನಾಥಪಂಥ” ಕೃತಿ ಲೋಕಾರ್ಪಣೆ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ, ಕನ್ನಡ ಸಂಘ, ವಿವೇಕಾನಂದ ಸಂಶೋಧನ ಕೇಂದ್ರ ಮತ್ತು ಆಂತರಿಕ ಗುಣಮಟ್ಟ ಭರವಸೆ ಘಟಕದ ಸಹಯೋಗದಲ್ಲಿ ಡಾ.ಶ್ರೀಧರ ಎಚ್‍.ಜಿ. ಅವರ “ನಾಥಪಂಥ” ಕೃತಿ ಲೋಕಾರ್ಪಣೆ ಜು.13 ರಂದು ಬೆಳಿಗ್ಗೆ 10.30 ಕ್ಕೆ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಬಿ.ವಿ.ವಸಂತ ಕುಮಾರ್ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸುವರು.

ಜು.13 : ಡಾ.ಶ್ರೀಧರ ಎಚ್‍.ಜಿ. ಅವರ ““ನಾಥಪಂಥ” ಕೃತಿ ಲೋಕಾರ್ಪಣೆ Read More »

ಜೈನಮುನಿಗಳ ಹತ್ಯೆ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಶಾಸಕ ಅಶೋಕ್ ರೈ

ಪುತ್ತೂರು: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಅಶ್ರಮದ ಕಾಮಕುಮಾರ ನಂದಿ ಮಹಾರಾಜ ಮುನಿಗಳನ್ನು ಹತ್ಯೆ ಮಾಡಿದ ಕೃತ್ಯ ಅತ್ಯಂತ ಖಂಡನೀಯ ಮತ್ತು ಅಮಾನವೀಯತೆಯಿಂದ ಕೂಡಿದ್ದು, ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಸರಕಾರಕ್ಕೆ ಮನವಿ ಮಾಡಿದ್ದಾರೆ. ಸರಕಾರ ಈಗಾಗಲೇ ಈ ಕೊಲೆ ಕೃತ್ಯದ ತನಿಖೆಗೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸದಾ ಶಾಂತಿಯನ್ನೇ ಬಯಸುವ ಮತ್ತು ಸಮಾಜದಲ್ಲಿ ಸೋಧರತೆಯ , ಸೌಹಾರ್ಧತೆಯ ಪ್ರತಿಬಿಂಬವಾಗಿರುವ

ಜೈನಮುನಿಗಳ ಹತ್ಯೆ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಶಾಸಕ ಅಶೋಕ್ ರೈ Read More »

ವಂದೇ ಭಾರತ್ ರೈಲಿಗೆ ಹೊಸ ಖದರ್ | ಬಿಡುಗಡೆಗೆ ಸಜ್ಜು

ಚೆನ್ನೈ,: ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಜ್ಜಾಗಿದೆ. ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದೆ. ನೀಲಿ, ಬಿಳಿ ಬಣ್ಣದ ಬದಲು ಕೇಸರಿ ಬಿಳಿ ಬಣ್ಣವನ್ನು

ವಂದೇ ಭಾರತ್ ರೈಲಿಗೆ ಹೊಸ ಖದರ್ | ಬಿಡುಗಡೆಗೆ ಸಜ್ಜು Read More »

ಪಿಕಪ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ : ಓರ್ವ ಮೃತ್ಯು, ಮಹಿಳೆ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಪಿಕಪ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ : ಓರ್ವ ಮೃತ್ಯು, ಮಹಿಳೆ ಗಂಭೀರ Read More »

ಪಾಲದಿಂದ ಬಿದ್ದು ನೀರು ಪಾಲಾದ ವ್ಯಕ್ತಿಯ ಶವ ಪತ್ತೆ

ಸುಳ್ಯ: ಪಾಲದಿಂದ ಬಿದ್ದು ನೀರು ಪಾಲಾದ ವ್ಯಕ್ತಿಯ ಶವ ಭಾನವಾರ ಪತ್ತೆಯಾಗಿದೆ. ನಾಲ್ಕು ದಿನಗಳ ಹಿಂದೆ ಕೂಲಿಕಾರ್ಮಿಕ ನಾರಾಯಣನ್ ಎಂಬವರು ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿದ್ದ ಸಂದರ್ಭ ಕಾಲು ಜಾರಿ ಹರಿಯುತ್ತಿದ್ದ ನೀರಿಗೆ ಬಿದ್ದು ಕಣ್ಮರೆಯಾಗಿದ್ದರು. ತಕ್ಷಣದಿಂದಲೇ ಸುಳ್ಯ ಅಗ್ನಿಶಾಮಕ ದಳ ಹಾಗೂ ಎಸ್‍ ಡಿಆರ್ ಎಫ್, ಪೊಲೀಸ್ ಇಲಾಖೆ ಪತ್ತೆಗಾಗಿ ಕಾರ್ಯಾಚರಣೆಗೆ ಇಳಿದಿತ್ತು. ಅಲ್ಲದೆ ಕಲ್ಲುಗುಂಡಿಯ ವಿಖಾಯ ತಂಡ, ಪೈಚಾರಿನ ಮುಳುಗು ತಜ್ಞರು ಶೋಧ ಕಾರ್ಯದಲ್ಲಿ ತೊಡಗಿದ್ದರು.  ಇದೀಗ ಆಲೆಟ್ಟಿಯ ಕನ್ನಿಗುಂಡಿ ಬಳಿಯ ಪಯಸ್ವಿನಿ ಹೊಳೆ

ಪಾಲದಿಂದ ಬಿದ್ದು ನೀರು ಪಾಲಾದ ವ್ಯಕ್ತಿಯ ಶವ ಪತ್ತೆ Read More »

1win Ci En Côte D’ivoire ᐉ Site Officiel De Paris Sporti

1win Ci En Côte D’ivoire ᐉ Site Officiel De Paris Sportif “1win ᐉ Paris Sportifs En Ligne ᐉ 1win Côte D’ivoire Content Paris Esports Chez 1win Ci Comment Télécharger 1win Ci Pour I Phone Et Ipad Bonus De Bienvenue Pour Les Nouveaux Utilisateurs De L’application Mobile Les Rome Sportifs Électroniques Vers 1win Côte D’ivoire In

1win Ci En Côte D’ivoire ᐉ Site Officiel De Paris Sporti Read More »

ಓಮ್ನಿ-ಸಿಫ್ಟ್ ಕಾರು ಡಿಕ್ಕಿ | ಪ್ರಯಾಣಿಕರಿಗೆ ಗಾಯ

ಬಂಟ್ವಾಳ : ಓಮ್ನಿಯೊಂದಕ್ಕೆ ಹಿಂದಿನಿಂದ ಬಂದ ಶಿಪ್ಟ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಪಲ್ಟಿಯಾಗಿ ಪ್ರಯಾಣಿಕರು ಕ ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಬಿ.ಸಿ.ರೋಡು-ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿರುವ ಪರ್ಲ ಚರ್ಚ್ ಬಳಿ ಕಾರು ಚಾಲಕ ರಾಯಿಸನ್ ಹಾಗೂ ಮಕ್ಕಳು ಸಹಿತ ಮೂವರು ಜನ ಹಾಗೂ ಸಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಓಮ್ನಿ ಕಾರನ್ನು ಸ್ವಲ್ಪ ದೂರದ ವರೆಗೆ ತಳ್ಳಿಕೊಂಡು ಹೋಗಿದೆ. ಅಪಘಾತದಿಂದ ಕಾರಿನೊಳಗೆ ಸಿಲುಕಿದ್ದವರನ್ನು ಗಾಜು ಒಡೆದು ಹೊರಕ್ಕೆ

ಓಮ್ನಿ-ಸಿಫ್ಟ್ ಕಾರು ಡಿಕ್ಕಿ | ಪ್ರಯಾಣಿಕರಿಗೆ ಗಾಯ Read More »

ಬೆಂಕಿಯಿಟ್ಟು ಯುವಕನ ಬರ್ಬರ ಹತ್ಯೆ | ಆರೋಪಿ ಬಂಧನ | ಶಾರ್ಟ್ ಸರ್ಕ್ಯೂಟ್ ನಿಂದ ಸಾವು ಎಂದು ಆರೋಪಿಯಿಂದ ನಾಟಕ

ಮಂಗಳೂರು : ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನಲ್ಲಿ ನಡೆದಿದೆ. ಜಗ್ಗು (35) ಹತ್ಯೆಯಾದ ಯುವಕ. ಹತ್ಯೆಗೈದ ಆರೋಪಿ ತೌಸಿಫ್ ಹುಸೈನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ಬೆಳಿಗ್ಗೆ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಜಗ್ಗು ನನ್ನು ಕ್ಷುಲ್ಲಕ ಕಾರಣಕ್ಕೆ ಬೆಂಕಿಯಿಟ್ಟು ಸುಟ್ಟುಹಾಕಿದ್ದು, ಸ್ಥಳೀಯರು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪ್ರಕರಣದಿಂದ ತಪ್ಪಿಸಿಕೊಳ್ಳಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೃತಪಟ್ಟಿದ್ದಾನೆ ಎಂದು ಸಾರ್ವಜನಿಕರಲ್ಲಿ

ಬೆಂಕಿಯಿಟ್ಟು ಯುವಕನ ಬರ್ಬರ ಹತ್ಯೆ | ಆರೋಪಿ ಬಂಧನ | ಶಾರ್ಟ್ ಸರ್ಕ್ಯೂಟ್ ನಿಂದ ಸಾವು ಎಂದು ಆರೋಪಿಯಿಂದ ನಾಟಕ Read More »

ಯುವವಾಹಿನಿ ಪುತ್ತೂರು ಘಟಕದ ವತಿಯಿಂದ “ವಧು-ವರಾನ್ವೇಷಣೆ-2023” |  ವಧು-ವರ ಅನ್ವೇಷಣೆಯಲ್ಲಿ ತೊಡಗಿಕೊಂಡವರಿಗೆ ಸೂಕ್ತ ವೇದಿಕೆಯಾದ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ “ಬಿಲ್ಲವ ವಧು-ವರಾನ್ವೇಷಣೆ-2023” ಭಾನುವಾರ ಬೆಳಗ್ಗೆ ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಿತು. ವಧು-ವರಾನ್ವೇಷಣೆಯಲ್ಲಿ ತೊಡಗಿಕೊಂಡ ಸುಮಾರು 180 ಕ್ಕೂ ಅಧಿಕ ಮಂದಿ ನೋಂದಾವಣೆ ಮಾಡಿಕೊಂಡಿದ್ದು, ಕಾರ್ಯಕ್ರಮದಲ್ಲಿ ನೋಂದಾವಣೆಯಾದವರ ಸಂಪೂರ್ಣ ಮಾಹಿತಿಯನ್ನು ಎಲ್‍ಇಡಿ ಸ್ಕ್ರೀನ್‍ ನಲ್ಲಿ ಡಿಸ್ ಪ್ಲೇ ಮಾಡಲಾಯಿತು. ಈ ಸಂದರ್ಭದಲ್ಲಿ ವಧು ಅನ್ವೇಷಣೆ ಹಾಗೂ ವರ ಅನ್ವೇಣೆಯಲ್ಲಿ ತೊಡಗಿಕೊಂಡವರಿಗೆ ನಂಬರ್ ನೀಡಲಾಗಿದ್ದು, ನಂಬರ್ ಪಡೆದುಕೊಂಡವರಿಗೆ, ತಮ್ಮ ವಧು ಅಥವಾ ವರ ಆಯ್ಕೆಯಾದವರಿಗೆ

ಯುವವಾಹಿನಿ ಪುತ್ತೂರು ಘಟಕದ ವತಿಯಿಂದ “ವಧು-ವರಾನ್ವೇಷಣೆ-2023” |  ವಧು-ವರ ಅನ್ವೇಷಣೆಯಲ್ಲಿ ತೊಡಗಿಕೊಂಡವರಿಗೆ ಸೂಕ್ತ ವೇದಿಕೆಯಾದ ಕಾರ್ಯಕ್ರಮ Read More »

error: Content is protected !!
Scroll to Top