ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಮಾತೃ ವಿಯೋಗ

ಪುತ್ತೂರು: ಸರ್ವೆ ಗ್ರಾಮದ ದಿ.ಅಚ್ಚುತ ಪೂಜಾರಿ ಸೊರಕೆಯವರ ಪತ್ನಿ ಸುನೀತಿ (92) ಶನಿವಾರ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದಿದ್ದ ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸೇರಿದಂತೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಮಾತೃ ವಿಯೋಗ Read More »

ಕುದ್ಮಾರು ರಾಮಚಂದ್ರ ಬನಾರಿ ನಿಧನ

ಕುದ್ಮಾರು: ಕಡಬ ತಾಲೂಕಿನ ಕುದ್ಮಾರು ನಿವಾಸಿ ರಾಮಚಂದ್ರ ಬನಾರಿ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ವೃತ್ತಿಯಲ್ಲಿ ಟೈಲರ್ ಆಗಿದ್ದ  ಅವರು ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ನಳಿನಾಕ್ಷಿ, ಪುತ್ರ ಸ್ವಸ್ತಿಕ್, ಪುತ್ರಿ ಚೈತನ್ಯ ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ.

ಕುದ್ಮಾರು ರಾಮಚಂದ್ರ ಬನಾರಿ ನಿಧನ Read More »

ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ | ಪುತ್ತೂರಿಗೆ ಮಹೇಶ್ಚಂದ್ರ ನೇಮಕ

ಪುತ್ತೂರು : ಪುತ್ತೂರು ಸಹಾಯ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ. ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಅವರ ವರ್ಗಾವಣೆಯಿಂದ ತೆರವಾದ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ | ಪುತ್ತೂರಿಗೆ ಮಹೇಶ್ಚಂದ್ರ ನೇಮಕ Read More »

ರಾಜ್ಯ ಸರಕಾರದ ಬಜೆಟ್ ಭವಿಷ್ಯದಲ್ಲಿ ನಾಗರಿಕರ ಜೇಬಿಗೆ ಕತ್ತರಿಯ ಬದಲು ಗರಗಸವನ್ನೇ ಹಾಕುವ ಸಾಧ್ಯತೆ ಹೆಚ್ಚು : ಶಾಸಕ ಸುನಿಲ್ ಕುಮಾರ್

ಕಾರ್ಕಳ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಪುಸ್ತಕದಲ್ಲಿ‌ ಹೊಸ ಸಂಪ್ರದಾಯವನ್ನು ತುರುಕಿದ್ದಾರೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಹಿಂದಿನ‌ ಸರ್ಕಾರ ಹಾಗೂ‌‌ ಕೇಂದ್ರ ಸರ್ಕಾರದ ನಿಂದನೆಗೆ ನೀಡಿದಷ್ಟು ಸ್ಥಳಾವಕಾಶವನ್ನು ಹೊಸ ಯೋಜನೆಗಳ ಪ್ರಕಟಣೆಗೆ ನೀಡಿಲ್ಲ. ಈ ಬಜೆಟ್ ನಲ್ಲಿ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಹಿನ್ನೋಟವೇ ಜಾಸ್ತಿ ಇದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ  52 ಸಾವಿರ ಕೋಟಿ ರೂ. ಖರ್ಚಾಗುತ್ತದೆ ಎಂದು ಲೆಕ್ಕಕೊಟ್ಟಿದ್ದರೂ, ಅದಕ್ಕೆ ಯಾವ ಮೂಲದಿಂದ ಹಣಕಾಸು ಹೊಂದಿಸುತ್ತಾರೆಂಬ ಬಗ್ಗೆ ಸ್ಪಷ್ಟತೆ ಇಲ್ಲ.

ರಾಜ್ಯ ಸರಕಾರದ ಬಜೆಟ್ ಭವಿಷ್ಯದಲ್ಲಿ ನಾಗರಿಕರ ಜೇಬಿಗೆ ಕತ್ತರಿಯ ಬದಲು ಗರಗಸವನ್ನೇ ಹಾಕುವ ಸಾಧ್ಯತೆ ಹೆಚ್ಚು : ಶಾಸಕ ಸುನಿಲ್ ಕುಮಾರ್ Read More »

ಕಾಂಗ್ರೆಸ್ ಸರಕಾರ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೇ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದೆ : ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು  ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್  ತಿಳಿಸಿದ್ದಾರೆ. ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದರೂ, ಬಜೆಟ್ ನಲ್ಲಿ ಇದರ ವೆಚ್ಚದ ಉಲ್ಲೇಖವಿಲ್ಲ

ಕಾಂಗ್ರೆಸ್ ಸರಕಾರ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೇ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದೆ : ಸಂಸದ ನಳಿನ್ ಕುಮಾರ್ ಕಟೀಲ್ Read More »

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ | ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಂಸದರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು,  ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ ಚರ್ಚಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ | ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಂಸದರು Read More »

ಖಾವಂದರು ಧರ್ಮಸ್ಥಳ ಯೋಜನೆಯ ಮೂಲಕ ಜನರ ಬದುಕನ್ನು ಸಮೃದ್ಧಿಯೆಡೆಗೆ ಕೊಂಡೊಯ್ದಿದ್ದಾರೆ  : ಮಾಜಿ ಶಾಸಕ ಸಂಜೀವ ಮಠಂದೂರು | ನವಜೀವನ ಸದಸ್ಯರ ಸಮಾವೇಶ

ಪುತ್ತೂರು: ಕಳೆದ 40 ವರ್ಷಗಳಿಂದ ಹಲವಾರು ಯೋಜನೆಗಳನ್ನು ರೂಪಿಸಿಕೊಂಡು ಜನರ ಬದುಕನ್ನು ಸಮೃದ್ಧಿಯ ಕಡೆಗೆ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ ಧರ್ಮಸ್ಥಳದ ಖಾವಂದರು. ಸರ್ಕಾರ ಮಾಡದ ಕೆಲಸವನ್ನು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಜನೆಯ ಮೂಲಕ ಮಾಡಿ ತೋರಿಸಿದ್ದಾರೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ಮತ್ತು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಪುತ್ತೂರು ಇವುಗಳ ಸಹಯೋಗದಲ್ಲಿ

ಖಾವಂದರು ಧರ್ಮಸ್ಥಳ ಯೋಜನೆಯ ಮೂಲಕ ಜನರ ಬದುಕನ್ನು ಸಮೃದ್ಧಿಯೆಡೆಗೆ ಕೊಂಡೊಯ್ದಿದ್ದಾರೆ  : ಮಾಜಿ ಶಾಸಕ ಸಂಜೀವ ಮಠಂದೂರು | ನವಜೀವನ ಸದಸ್ಯರ ಸಮಾವೇಶ Read More »

ದಕ್ಷಿಣ ಕನ್ನಡದಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರಗಳ ಸ್ಥಾಪನೆ | ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸಂಸ್ಥೆಯು ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು. ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್ ಆಸ್ಪತ್ರೆಗಳ ನಿರ್ಮಾಣ

ದಕ್ಷಿಣ ಕನ್ನಡದಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರಗಳ ಸ್ಥಾಪನೆ | ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಮನೆಗೆ ಗುಡ್ಡ ಜರಿದು ಮಹಿಳೆ ಮೃತ್ಯು | ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಬಂಟ್ವಾಳ : ಮನೆಗೆ ಗುಡ್ಡ ಜರಿದು ಮಹಿಳೆಯೋರ್ವಳು ಮೃತಪಟ್ಟ ಸಜಿಪ ಮುನ್ನೂರು ಗ್ರಾಮದ ನಂದಾವರದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿದ್ದಾರೆ . ಅವಘಡ ಸಂಭವಿಸಿದ ಕುಟುಂಬಕ್ಕೆ ರೂ. ಐದು ಲಕ್ಷ ಪರಿಹಾರ ಮತ್ತು ಮನೆ ರಿಪೇರಿಗೆ 1.20 ಲಕ್ಷಪರಿಹಾರವನ್ನು ಸರಕಾರದಿಂದ ನೀಡುವ ಭರವಸೆ ನೀಡಿದರು. ಜೊತೆಗೆ ತಾಲೂಕಿನಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ತಾಲುಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಶಿಲ್ದಾರ್ ಎಸ್.ವಿ.ಕೂಡಲಗಿ, ತಾ.ಪಂ. ಕಾರ್ಯ ನಿರ್ವಹಣಾ ಧಿಕಾರಿ

ಮನೆಗೆ ಗುಡ್ಡ ಜರಿದು ಮಹಿಳೆ ಮೃತ್ಯು | ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ನೀರಿನ ಟ್ಯಾಂಕಿಗೆ ಹಾರಿ ಮಹಿಳೆ ಆತ್ಮಹತ್ಯೆ

ವಿಟ್ಲ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ಮಹಿಳೆಯೊಬ್ಬರು ನೀರಿನ‌ ಟ್ಯಾಂಕಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಶಾಂತಲಾ (41) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದು ಅವರು, ಜೀವನದಲ್ಲಿ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

ನೀರಿನ ಟ್ಯಾಂಕಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

error: Content is protected !!
Scroll to Top