ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೂಡಿನಬಳಿ ಯಲ್ಲಿ ನಡೆದಿದೆ. ಮೃತನನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ತಿಳಿದುಬಂದಿದೆ. ಕೂಲಿ ಕೆಲಸ ಮಾಡುತ್ತಿದ್ದ ಈತ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮಾಡಿಕೊಂಡಿದ್ದಾರೆ. ಮೃತರು ತಂದೆ, ತಾಯಿ, 6 ಮಂದಿ ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು […]

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ಚಾಲಕ ಅಪಾಯದಿಂದ ಪಾರು

ಬಂಟ್ವಾಳ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದುಕೊಂಡು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ. ವಿಟ್ಲದ ಕೊಡಂಗಾಯಿಯಲ್ಲಿ ಈ ಅಪಘಾತ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಿಂದಲೇ ವಿದ್ಯುತ್ ಕಂಬ ಮೇಲಕ್ಕೆದ್ದಿದೆ. ಕಾರಿನ ಮೇಲೆಯೇ ಕಂಬ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ಚಾಲಕ ಅಪಾಯದಿಂದ ಪಾರು Read More »

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ | ಹೀಗೆಂದು ಟ್ವಿಟ್ ಮಾಡಿದೆ ಕಾಂಗ್ರೆಸ್

ಬೆಂಗಳೂರು: ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ. ಹೀಗೆಂದು ಕಾಂಗ್ರೆಸ್ ಟ್ವಿಟ್ ಮೂಲಕ ಲೇವಡಿ ಮಾಡಿದೆ. ಸರಕಾರ ರಚನೆ ಆಯ್ತು ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಆದರೆ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗಲಿಲ್ಲ. ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬನೇ ಒಬ್ಬ ಶಾಸಕನಿಲ್ಲದಿರುವುದು

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ | ಹೀಗೆಂದು ಟ್ವಿಟ್ ಮಾಡಿದೆ ಕಾಂಗ್ರೆಸ್ Read More »

ಜು.5 : ವಿವೇಕಾನಂದ ಕಾಲೇಜಿನಲ್ಲಿ ’ತಿರಿ’ ಕೃತಿ ಬಿಡುಗಡೆ ಹಾಗೂ  ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಪದವಿ ಕಾಲೇಜಿನ ಕನ್ನಡ ಸಂಘ ಹಾಗೂ ಐಕ್ಯೂಎಸಿ ಇದರ ಸಹಯೋಗದಲ್ಲಿ ಸಿದ್ದಮೂಲೆ ಶಂಕರನಾರಾಯಣ ಭಟ್ ಸ್ಥಾಪಿತ ’ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಹಾಗೂ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಎಂ ಇವರ ’ತಿರಿ’ ಎಂಬ ಕೃತಿ ಲೋಕಾರ್ಪಣೆ ಕಾರ್‍ಯಕ್ರಮವು ಜು.5 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್‍ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ವಹಿಸಲಿದ್ದು ಮುಖ್ಯ

ಜು.5 : ವಿವೇಕಾನಂದ ಕಾಲೇಜಿನಲ್ಲಿ ’ತಿರಿ’ ಕೃತಿ ಬಿಡುಗಡೆ ಹಾಗೂ  ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ Read More »

ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜನಾರ್ದನ್ ಕುಲಾಲ್ ನಿಧನ | ರೈಲಿನಲ್ಲಿ ಹೃದಯಾಘಾತ

ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ, ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ್ ಕುಲಾಲ್ (75) ಅವರು ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜುಲೈ 2ರ ರವಿವಾರ ರಾತ್ರಿ ಘಟನೆ ನಡೆದಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಜನಾರ್ದನ ಅವರು ತಮ್ಮ ಕುಟುಂಬದ ಜತೆ ರವಿವಾರ ಸಂಜೆಯ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ

ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜನಾರ್ದನ್ ಕುಲಾಲ್ ನಿಧನ | ರೈಲಿನಲ್ಲಿ ಹೃದಯಾಘಾತ Read More »

ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ | ವಿವಿಧ ಬೇಡಿಕೆ ಸಲ್ಲಿಕೆ

ಪುತ್ತೂರು: ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಕೆಪಿಸಿಸಿ ಸದಸ್ಯ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಾಪಂ ಮಾಜಿ ಉಪಾಧ್ಯಕ್ಷ ಶೀನಪ್ಪ ಗೌಡ ಬೈತಡ್ಕ, ಅವಿನಾಶ್ ಬೈತಡ್ಕ, ಜಯಪ್ರಕಾಶ್, ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.

ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ | ವಿವಿಧ ಬೇಡಿಕೆ ಸಲ್ಲಿಕೆ Read More »

ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಗುರುಪೂರ್ಣಿಮೆ ಆಚರಣೆ, ಗುರುವಂದನಾ ಕಾರ್ಯಕ್ರಮ

ಪುತ್ತೂರು : ಶಿಕ್ಷಕನಾದವನು ಗುರು ಸ್ಥಾನಕ್ಕೆ ಏರಬಹುದಾದ ಅವಕಾಶಗಳಿರುವುದು ಸತ್ಯ. ಬದುಕಿಗೆ ದಾರಿದೀಪವಾಗುವವರು ಗುರುಗಳೆನಿಸುತ್ತಾರೆ. ಹೆತ್ತವರ ನಂತರ ಮಕ್ಕಳ ಜವಾಬ್ದಾರಿಯನ್ನು ಹೊತ್ತು ಅವರ ಅಧ್ಯಯನದ ಕಾಲದಲ್ಲಿ ನಿರಂತರವಾಗಿ ಕಾಪಾಡುತ್ತಾ, ಬದುಕನ್ನು ರೂಪಿಸುತ್ತಾ ಸಾಗುವ ಮಹಾನ್ ವ್ಯಕ್ತಿತ್ವವೇ ಗುರು ಎಂದೆನಿಸಿಕೊಳ್ಳಲು ಸಾಧ್ಯ ಎಂದು ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸೋಮವಾರ

ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಗುರುಪೂರ್ಣಿಮೆ ಆಚರಣೆ, ಗುರುವಂದನಾ ಕಾರ್ಯಕ್ರಮ Read More »

ಪ್ರಧಾನಿ ಮೋದಿ ನಿವಾಸದ ಬಳಿ ಡ್ರೋನ್ ಹಾರಾಟ | ಪೊಲೀಸರಿಂದ ತನಿಖೆ

ನವದೆಹಲಿ: ನವದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಡ್ರೋನ್‌ ಹಾರಾಟವಾಗಿರುವ ಕುರಿತು ವರದಿಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರ ರಕ್ಷಣೆಗಿರುವ ವಿಶೇಷ ರಕ್ಷಣಾ ತಂಡ ಡ್ರೋನ್‌ ಹಾರಾಟವನ್ನು ನೋಡಿ ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಿದೆ. ಪೊಲೀಸರು ಕೂಡಲೇ ತನಿಖೆ ಆರಂಭಿಸಿದ್ದಾರೆ.ಇನ್ನು ಡ್ರೋನ್‌ ಪತ್ತೆ ಕಾರ್ಯವನ್ನು ಆರಂಭಿಸಿರುವ ಪೊಲೀಸರಿಗೆ ಇದುವರೆಗೆ ಯಾವುದೇ ಡ್ರೋನ್‌ ಪತ್ತೆಯಾಗಿಲ್ಲ ಎಂದು ವರದಿ ತಿಳಿಸಿದೆ. ಮೋದಿ ಅವರ ನಿವಾಸವು ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಆದರೂ ಡ್ರೋನ್‌

ಪ್ರಧಾನಿ ಮೋದಿ ನಿವಾಸದ ಬಳಿ ಡ್ರೋನ್ ಹಾರಾಟ | ಪೊಲೀಸರಿಂದ ತನಿಖೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪೂರ್ವಸಿದ್ಧತಾ ಸಭೆ | ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮತ್ತು ಪೂರ್ವ ಸಿದ್ಧತಾ ಸಭೆ ಭಾನುವಾರ  ಆದರ್ಶ ಆಸ್ಪತ್ರೆ ವಠಾರದಲ್ಲಿ ನಡೆಯಿತು. ಇತ್ತೀಚೆಗೆ ನಿಧನರಾದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಕ್ರೀಯ ಕಾರ್ಯಕರ್ತರ ದಿ. ರಾಧಾಕೃಷ್ಣ ಭಕ್ತ ಅವರಿಗೆ ಸಭೆಯ ಆರಂಭದಲ್ಲಿ ಆತ್ಮಕ್ಕೆ ಚಿರಶಾಂತಿಕೋರಲಾಯಿತು. ಸಮಿತಿ ಗೌರವ ಅಧ್ಯಕ್ಷರಾಗಿ ಡಾ.ಎಂ ಕೆ ಪ್ರಸಾದ್, ಅಧ್ಯಕ್ಷರಾಗಿ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷರಾಗಿ ರಾಧಾಕೃಷ್ಣ ನಂದಿಲ ಅವರನ್ನು ಆಯ್ಕೆ ಮಾಡಲಾಯಿತು. ಉಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪೂರ್ವಸಿದ್ಧತಾ ಸಭೆ | ಪದಾಧಿಕಾರಿಗಳ ಆಯ್ಕೆ Read More »

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟುನಿಂತ ಟೊಮೆಟೋ ಲಾರಿ | ಫುಲ್ ಟ್ರಾಫಿಕ್ ಜಾಮ್

ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ ಟೊಮೊಟೊ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಭಾನುವಾರ ರಾತ್ರಿ ಹತ್ತು ಗಂಟೆ ಸಮಯದಲ್ಲಿ ಪ್ರಾರಂಭವಾದ ಟ್ರಾಫಿಕ್ ಜಾಮ್ ಸುಮಾರು 10 ಕಿ.ಮೀ. ನಷ್ಟು ಉದ್ದಕ್ಕೆ ಉಂಟಾಗಿದ್ದು, ಸಾಲು ಸಾಲಾಗಿ ವಾಹನಗಳು ನಿಂತಿವೆ. ಚಿಕ್ಕಮಗಳೂರು ಹಾಗೂ ದ.ಕ.ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಟೊಮೆಟೋ ಲಾರಿ ಕೆಟ್ಟು ನಿಂತಿದ್ದು ವಾಹನ ಸವಾರರು ಮುಂದಕ್ಕೆ ಚಲಿಸಲು ಇನ್ನೂ ಪರದಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟುನಿಂತ ಟೊಮೆಟೋ ಲಾರಿ | ಫುಲ್ ಟ್ರಾಫಿಕ್ ಜಾಮ್ Read More »

error: Content is protected !!
Scroll to Top