ನಾಯಿ ದಾಳಿಗೆ ಸಿಲುಕಿ ಜಿಂಕೆ ಮೃತ್ಯು

ಬೆಳ್ತಂಗಡಿ: ಬೀದಿ ನಾಯಿ ದಾಳಿಗೆ ಸಿಲುಕಿ ಜಿಂಕೆಯೊಂದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆ ಹೊಸಮುಗೇರು ಎಂಬಲ್ಲಿ ನಡೆದಿದೆ. ಎರಡು ವರ್ಷ ಪ್ರಾಯದ ಗಂಡು ಜಿಂಕೆ ಮೇಯುತ್ತಾ ಕಡಿನಂಚಿಗೆ ಬಂದ ಸಂದರ್ಭ ನಾಯಿಯ ದಾಳಿಗೆ ಸಿಲುಕಿದೆ, ಗಂಭೀರ ಸ್ಥಿತಿಯಲ್ಲಿದ್ದ ಜಿಂಕೆಯನ್ನು ಕಂಡು ಸ್ಥಳೀಯರು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಗಾಯಗೊಂಡ ಜಿಂಕೆಯನ್ನು ಸಮೀಪದ ಪಶು ಶಿಕಿತ್ಸಾಲಯಕ್ಕೆ ಕೊಂಡೊಯ್ಯಲಾದರೂ ಆದಾಗಲೇ ಜಿಂಕೆ ಸಾವನ್ನಪ್ಪಿದೆ. ಮೃತದೇಹವನ್ನು ಅರಣ್ಯ ಇಲಾಖಾ ಡಿಪೋ ಇರುವ ಮಣ್ಣಗುಂಡಿ […]

ನಾಯಿ ದಾಳಿಗೆ ಸಿಲುಕಿ ಜಿಂಕೆ ಮೃತ್ಯು Read More »

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ |  ಪತಿ ಮೃತ್ಯು – ಪತ್ನಿಯ ಸ್ಥಿತಿ ಗಂಭೀರ

ಪುತ್ತೂರು : ಅನಂತಾಡಿಯ ಬಾಕಿಲ ಎಂಬಲ್ಲಿ ಪತಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟು ಪತ್ನಿಯನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಂತಾಡಿ ಬಾಕಿಲ ನಿವಾಸಿ ಪ್ರತಾಪ್(35) ಮೃತಪಟ್ಟಿದ್ದು ಪತ್ನಿ ವೀಣಾ(32)ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ರಾತ್ರಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಮಾಹಿತಿ ತಿಳಿದು ಇಬ್ಬರನ್ನೂ ಪುತ್ತೂರು ಆಸ್ಪತ್ರೆಗೆ ಕರೆ ತರಲಾಗಿತ್ತು.ಆದರೆ ಪ್ರತಾಪ್ ಮೃತಪಟ್ಟಿದ್ದಾರೆ. ಪತ್ನಿ ವೀಣಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ |  ಪತಿ ಮೃತ್ಯು – ಪತ್ನಿಯ ಸ್ಥಿತಿ ಗಂಭೀರ Read More »

ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ

ಪುತ್ತೂರು : ಧರ್ಮ ಆಧಾರಿತ ರಾಜಕಾರಣ ಇರಬೇಕೆಂಬ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಅವರು ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆದ ಸಾಮೂಹಿಕ ಶ್ರೀ ಶನೈಶ್ಚರ ಪೂಜೆಯ ಅಂಗವಾಗಿ ಹಮ್ಮಿಕೊಂಡ ಧಾರ್ಮಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಮೊಕ್ತೇಸರ ಚಿದಾನಂದ ಬೈಲಾಡಿ ಮಾತನಾಡಿ, ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸ ಮಾಡಲಿದೆ ಎಂದರು. ಈ

ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ Read More »

ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ ನಿಂದ ರೋಬೋಟ್ ಮೂಲಕ ವಿದ್ವಂಸಕ ಕೃತ್ಯಕ್ಕೆ ಸಂಚು | ಸ್ಪೋಟಕ ಮಾಹಿತಿ ಬಯಲು

ಶಿವಮೊಗ್ಗ: ರಾಜ್ಯದಲ್ಲಿ ರೋಬೋಟ್ ಗಳ ಮೂಲಕ ವಿಧ್ವಂಸಕ ಕೃತ್ಯ ಎಸಗಲು ಜಾಗತಿಕ ಭಯೋತ್ಪಾದಕಾ ಸಂಘಟನೆ ಐಸಿಸ್ ಸಂಚು ಹೂಡಿದೆ ಎಂದು ಎನ್ಐಎ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಸ್ಫೋಟಕ ಮಾಹಿತಿ ಬಯಲಾಗಿದೆ. ಶಿವಮೊಗ್ಗ ಟ್ರಾಯಲ್ ಬ್ಲಾಸ್ಟ್ ಮತ್ತು ಐಸಿಸ್ ಲಿಂಕ್ ಕೇಸ್ ನಲ್ಲಿ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಮೆಕಾನಿಕಲ್ ಇಂಜಿನಿಯರ್ ಹಿನ್ನೆಲೆಯ ಐವರು ಶಂಕಿತರಿಂದ ರೋಬೋಟಿಕ್ ದಾಳಿಗೆ ಪ್ಲಾನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಚಾರಣೆ ಸಂದರ್ಭದಲ್ಲಿ ಶಂಕಿತ ಉಗ್ರರು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಶಂಕಿತ ಉಗ್ರ

ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ ನಿಂದ ರೋಬೋಟ್ ಮೂಲಕ ವಿದ್ವಂಸಕ ಕೃತ್ಯಕ್ಕೆ ಸಂಚು | ಸ್ಪೋಟಕ ಮಾಹಿತಿ ಬಯಲು Read More »

ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ ವತಿಯಿಂದ ನೇತ್ರದಾನ ನೋಂದಣಿ, ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರ | ಒಳಿತು ಮಾಡು ಮನುಷ ತಂಡದ 24ನೇ ಕಾರ್ಯಕ್ರಮ

ಪುತ್ತೂರು: ಇಲ್ಲಿನ  ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ,ಜೆಸಿಐ ಪುತ್ತೂರು,ಲಯನ್ಸ್ ಕ್ಲಬ್ ಪುತ್ತೂರು ಇದರ ಸಹಯೋಗದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ  ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 24ನೇ ಯೋಜನೆ  ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ಜೂನ್30 ರಂದು ಪುತ್ತೂರಿನ  ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪುತ್ತೂರು

ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ ವತಿಯಿಂದ ನೇತ್ರದಾನ ನೋಂದಣಿ, ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರ | ಒಳಿತು ಮಾಡು ಮನುಷ ತಂಡದ 24ನೇ ಕಾರ್ಯಕ್ರಮ Read More »

ಪುತ್ತೂರಿನಲ್ಲಿ ತೆಂಗು ರೈತ ಉತ್ಪಾದಕರ ಕಂಪೆನಿ ನಿಯಮಿತ ಕಾರ್ಪೊರೇಟ್ ಕಚೇರಿ ಶುಭಾರಂಭ

ಪುತ್ತೂರು: ವಿಟ್ಲದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ಕಾರ್ಪೊರೇಟ್ ಕಚೇರಿಯು ಪುತ್ತೂರು ಕಲ್ಲಾರೆ ಪವಾಜ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ಶುಭಾರಂಭಗೊಂಡಿತು. ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಕಚೇರಿಯನ್ನು ತೆಂಗಿನ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿ

ಪುತ್ತೂರಿನಲ್ಲಿ ತೆಂಗು ರೈತ ಉತ್ಪಾದಕರ ಕಂಪೆನಿ ನಿಯಮಿತ ಕಾರ್ಪೊರೇಟ್ ಕಚೇರಿ ಶುಭಾರಂಭ Read More »

ಪ್ರವೀಣ್ ನೆಟ್ಟಾರೆ ಹತ್ಯೆ ಆರೋಪಿಗಳಿಗೆ ನ್ಯಾಯಾಲಯಕ್ಕೆ ಶರಣಾಗಲು ಜೂ.30 ಡೆಡ್ ಲೈನ್ | ಶರಣಾಗದ ಆರೋಪಿಗಳು | ಎನ್‍ಐಎ ಮೂಲಗಳಿಂದ ಮಾಹಿತಿ

ಪುತ್ತೂರು: ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳಿಗೆ ಜೂ.30 ರಂದು ಡೆಡ್ ಲೈನ್ ನೀಡಲಾಗಿದ್ದು, ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿಲ್ಲ ಎಂದು ಎನ್‍ಐಎ ಮೂಲಗಳಿಂದ ಮಾಹಿತಿ ಲಭಿಸಿದೆ. ಪ್ರಮುಕ ಆರೋಪಿಗಳಾದ ುಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್, ತುಫೈಲ್, ಮೊಹಮ್ಮದ್ ಮುಸ್ತಾಫಾ ಎನ್‍ಐಗೆ ಬೇಕಾಗಿರುವ ಆರೋಪಿಗಳಾಗಿದ್ದಾರೆ. ಈ ನಾಲ್ಕು ಜನರ ಪತ್ತೆಗೆ 14 ಲಕ್ಷ ರೂ. ಬಹುಮಾನ ಪತ್ತೆ ಮಾಡಿದವರಿಗೆ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಈ ಪೈಕಿ ತುಫೈಲ್, ಮೊಹಮ್ಮದ್ ಮುಸ್ತಾಫ ಸುಳಿವಿಗೆ ತಲಾ

ಪ್ರವೀಣ್ ನೆಟ್ಟಾರೆ ಹತ್ಯೆ ಆರೋಪಿಗಳಿಗೆ ನ್ಯಾಯಾಲಯಕ್ಕೆ ಶರಣಾಗಲು ಜೂ.30 ಡೆಡ್ ಲೈನ್ | ಶರಣಾಗದ ಆರೋಪಿಗಳು | ಎನ್‍ಐಎ ಮೂಲಗಳಿಂದ ಮಾಹಿತಿ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 20 ಕೆ.ಜಿ. ಶ್ರೀಗಂಧದ ಕೊರಡು ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅತೀ ಮುಖ್ಯವಾದ ಶ್ರೀಗಂಧವನ್ನು ಶನಿವಾರ ಸಮರ್ಪಿಸಲಾಯಿತು. ಸರಕಾರದ ಸಬ್ಸಿಡಿ ದರದಲ್ಲಿ ಸುಮಾರು 20 ಕೆ.ಜಿ. ಶ್ರೀಗಂಧದ ಕೊರಡುಗಳು ಶ್ರೀ ದೇವಸ್ಥಾನಕ್ಕೆ ಸಮರ್ಪಣೆಯಾದವು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್‍, ರಾಮದಾಸ ಗೌಡ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಡಾ.ಸುಧಾ ಎಸ್. ರಾವ್, ವೀಣಾ ಬಿ.ಕೆ. ಉಪಸ್ಥಿತರಿದ್ದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 20 ಕೆ.ಜಿ. ಶ್ರೀಗಂಧದ ಕೊರಡು ಸಮರ್ಪಣೆ Read More »

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಒಂದಕ್ಕೊಂದು ಕೊಂಡಿಯಂತೆ ಕೆಲಸ ಮಾಡಬೇಕು | ಕಂದಾಯ ದಿನಾಚರಣೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಒಂದಕ್ಕೊಂದು ಕೊಂಡಿಯಂತೆ ಕೆಲಸ ಮಾಡಿದಾಗ ಜನರಿಗೆ ಉತ್ತಮ ಸೇವೆ ದೊರೆಯುತ್ತದೆ. ಈ ನಿಟ್ಟಿನಲ್ಲಿ ಇಲಾಖೆಯಲ್ಲಿ ಕರ್ತವ್ಯ ಮತ್ತು ಸೇವೆ ಜೊತೆಯಲ್ಲಿ ಹೋದಲ್ಲಿ ಮಾತ್ರ ಬಡವರಿಗೆ ನ್ಯಾಯ ಸಿಗುವ ಕೆಲಸ ಆಗುತ್ತದೆ. ಕರ್ತವ್ಯದ ಜೊತೆ ಸೇವಾ ಮನೋಭಾವ ಇರಲಿ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ಹೇಳಿದರು. ಅವರು ಶನಿವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ನಡೆದ ಕಂದಾಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕಂದಾಯ ದಿನಾಚರಣೆಗೆ ಉತ್ತಮ ಅರ್ಥವಿದೆ. ಭೂಮಿಯನ್ನು ರಕ್ಷಣೆ

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಒಂದಕ್ಕೊಂದು ಕೊಂಡಿಯಂತೆ ಕೆಲಸ ಮಾಡಬೇಕು | ಕಂದಾಯ ದಿನಾಚರಣೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ Read More »

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕಾರ್ಯಗಾರ*

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ  ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಲೆಕ್ಕಶಾಸ್ತ್ರ ವಿಷಯದ ಪರೀಕ್ಷಾ ಮಾದರಿ ಬಗ್ಗೆ ಕಾರ್ಯಗಾರ ನಡೆಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀಧರ್ ಶೆಟ್ಟಿಗಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾದರಿ, ಅಂಕಗಳು, ಉತ್ತರ ಬರೆಯುವ ಕೌಶಲ್ಯಗಳ ಬಗ್ಗೆ ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಉಷಾ ಪಿ ಎಂ, ಭಾಗ್ಯಶ್ರೀ, ಗ್ರೀಷ್ಮ ಹಾಗೂ ದೇವಿಪ್ರಸಾದ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕಾರ್ಯಗಾರ* Read More »

error: Content is protected !!
Scroll to Top