ಪುತ್ತೂರು ಶಾಸಕರು ಫಸಲ್ ಭಿಮಾ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ. | ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪುತ್ತೂರು: ಪುತ್ತೂರು ಶಾಸಕರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ಮಾಹಿತಿ ಇಲ್ಲದೆ ಕೃಷಿಕರು ಹಾಗೂ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಅವರು ಶನಿವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯು ಅಡಿಕೆ, ಕಾಳು ಮೆಣಸು ಇತ್ಯಾದಿ ತೋಟಗಾರಿಕಾ […]

ಪುತ್ತೂರು ಶಾಸಕರು ಫಸಲ್ ಭಿಮಾ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ. | ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ Read More »

ಪುಳಿಕುಕ್ಕು ಸೇತುವೆ ಬಳಿ ಕಾಡೆಮ್ಮೆ ಮೃತದೇಹ ಪತ್ತೆ

ಕಡಬ : ಕಡಬದ ಕೋಡಿಂಬಾಳ ಸಮೀಪದ ಪುಳಿಕುಕ್ಕು ಸೇತುವೆಯ ಬಳಿ ಬೃಹತ್ ಕಾಡೆಮ್ಮೆ ಮೃತದೇಹ ಪತ್ತೆ ನದಿಯಲ್ಲಿ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಡೆಮ್ಮೆ ಮೃತಪಟ್ಟಿರುವುದಕ್ಕೆ ಕಾರಣಗಳು ತಿಳಿದು ಬಂದಿಲ್ಲ.

ಪುಳಿಕುಕ್ಕು ಸೇತುವೆ ಬಳಿ ಕಾಡೆಮ್ಮೆ ಮೃತದೇಹ ಪತ್ತೆ Read More »

ಹೆಚ್ಚುವರಿ ಸಾಲಿಸಿಟರ್ ಜನರಲ್‍ ಕೆ.ಎಂ.ನಟರಾಜ್ ಮರು ನೇಮಕ

ಪುತ್ತೂರು: ಹೆಚ್ಚುವರಿ ಜನರಲ್ ಕೆ.ಎಂ.ನಟರಾಜ್ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಮರ ನೇಮಕಗೊಳಿಸಿ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿಸಿದೆ. ಹಿರಿಯ ವಕೀಲ ತುಷಾರ್ ಮೆಹ್ತಾ ಅವರನ್ನು ಮತ್ತೆ ಮೂರು ವರ್ಷಗಳ ಅವಧಿಗೆ ಭಾರತದ ಸಾಲಿಸಿಟರ್ ಜನರಲ್‍ ಆಗಿ ನೇಮ ಮಾಡಲಾಗಿದೆ. ಜತೆಗೆ ಹೆಚ್ಚುವರಿ ಸಾಲಿಸಿಟರ್ ಆಗಿ ಕೆ.ಎಂ.ನಟರಾಜ್ ಅವರನ್ನು ಮರು ನೇಮಕ ಮಾಡಲಾಗಿದೆ. ವಿಕ್ರಮ್ ಜಿತ್ ಬ್ಯಾನರ್ಜಿ, ಬಲ್ವೀರ್ ಸಿಂಗ್, ಎಸ್‍.ವಿ.ರಾಜು, ಎನ್.ವೆಂಕಟರಾಮನ್, ಐಶ್ವರ್ಯ ಭಾಟಿ ಸುಪ್ರೀಂ ಕೋರ್ಟ್‍ಗೆ ಮರು ನೇಮಕಗೊಂಡಿರುವ

ಹೆಚ್ಚುವರಿ ಸಾಲಿಸಿಟರ್ ಜನರಲ್‍ ಕೆ.ಎಂ.ನಟರಾಜ್ ಮರು ನೇಮಕ Read More »

ಗಣೇಶ್ ಆಚಾರ್ಯ ನಿಧನ

ಪುತ್ತೂರು: ಉರ್ಲಾಂಡಿ ನಿವಾಸಿ ಗಣೇಶ್ ಆಚಾರ್ಯ (63) ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಇಲ್ಲಿಯ ಬ್ಲಡ್ ಬ್ಯಾಂಕ್ ಬಿಲ್ಡಿಂಗ್ ನಲ್ಲಿ ಮಂಗಳಾ ಝೆರಾಕ್ಸ್ ಸೆಂಟರ್ ನಡೆಸುತ್ತಿದ್ದರು. ಮೃತರು ಪತ್ನಿ,  ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಗಣೇಶ್ ಆಚಾರ್ಯ ನಿಧನ Read More »

ಪುರುಷರಕಟ್ಟೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ |

ಪುತ್ತೂರು: ಪುತ್ತೂರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುರುಷರಕಟ್ಟೆಯಲ್ಲಿ ಶನಿವಾರ ನಡೆದಿದೆ. 7 ವರ್ಷದ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಆತನ ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತೂಹಲಕ್ಕೆ ಪುಷ್ಟಿ ನೀಡಿದೆ. ಪುರುಷರಕಟ್ಟೆ ಇಂದಿರಾನಗರ ದಿ.ಪ್ರವೀಣ್ ಎಂಬವರ ಪತ್ನಿ ಕಾವ್ಯ(38ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. 7 ವರ್ಷದ ಹಿಂದೆ ಅವರ ಪತಿ ಪ್ರವೀಣ್ ಅವರು ಕೂಡಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಕಾವ್ಯ

ಪುರುಷರಕಟ್ಟೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ | Read More »

ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯ | ಎಲ್ಲೋ, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಕರಾವಳಿಯಲ್ಲೂ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಜು.1 ರಿಂದ3 ರ ವರೆಗೆ ಎಲ್ಲೋ ಅಲರ್ಟ್ ಹಾಗೂ 4 ಹಾಗೂ 5 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳೆದ ಹತ್ತು ದಿನಗಳಿಂದಲೂ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 3 ರಂದು ಭಾರಿ

ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯ | ಎಲ್ಲೋ, ಆರೆಂಜ್ ಅಲರ್ಟ್ ಘೋಷಣೆ Read More »

ಚುನಾವಣೆ ಸಂದರ್ಭ ವಾಮಾಚಾರ ಹೋಮ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ | ಕ್ರಮ ಕೈಗೊಳ್ಳುವಂತೆ ನಗರ ಪೊಲೀಸರಿಗೆ ದೂರು

ಪುತ್ತೂರು: ಚುನಾವಣೆ ಸಂದರ್ಭ ಅರುಣ್ ಕುಮಾರ್ ಪುತ್ತಿಲರ ಮೇಲೆ ವಾಮಾಚಾರ ಹೋಮ ಮಾಡಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಮೇಲೆ ಬರುತ್ತಿರುವ ಆರೋಪ ಆಧಾರರಹಿತವಾಗಿದೆ. ಆರೋಪಿಗಳಿಗೆ ಹಾಗೂ ಕುಮ್ಮಕ್ಕು ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಪುತ್ತೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ನೀಡುವ ಮೊದಲು ಶುಕ್ರವಾರ ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿ ಸಂದೇಶ ರವಾನೆ ಮಾಡುತ್ತಿರುವವರಿಗೆ ಸದ್ಭುದ್ಧಿ ಕರುಣಿಸುವಂತೆ

ಚುನಾವಣೆ ಸಂದರ್ಭ ವಾಮಾಚಾರ ಹೋಮ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ | ಕ್ರಮ ಕೈಗೊಳ್ಳುವಂತೆ ನಗರ ಪೊಲೀಸರಿಗೆ ದೂರು Read More »

ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ

ಪುತ್ತೂರು: ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆಗೊಳಿಸುವಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಶಸ್ವಿಯಾಗಿದ್ದಾರೆ. ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ಅವಧಿ ಮುಗಿಯುತ್ತಾ ಬಂದರೂ ಪ್ರೀಮಿಯಂ ಪಾವತಿಯ ಬಗ್ಗೆ ರೈತರಿಗೆ ಯಾವುದೇ ಸೂಚನೆ ನೀಡದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಮತ್ತು ಕಾಳುಮೆಣಸನ್ನು ಯೋಜನೆಯಿಂದ ಹೊರಗಿಡಲಾಗಿದೆ ಎಂದು ವರದಿಯಾಗಿತ್ತು. ಇದರಿಂದ ರೈತರು ನಿರಾಶಡಗೊಂಡಿದ್ದರು. ಈ ಕುರಿತು ಮಾಹಿತಿ ಸಂಗ್ರಹಿಸಿದ ಶಾಸಕ ಅಶೋಕ್ ರೈ ಬೆಂಗಳೂರಿನಲ್ಲಿ ತೋಟಗಾರಿಕಾ ಸಚಿವ

ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ Read More »

ರಾಜ್ಯ ಸರಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ : ಸ್ವಾಮೀಜಿಗಳಿಂದ ನಿರ್ಧಾರ

ಮಂಗಳೂರು: ರಾಜ್ಯ ಸರ್ಕಾರ ತನ್ನ ಹಿಂದೂ ವಿರೋಧಿ ನಡೆಯನ್ನು ಕೈ ಬಿಡದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವ ಬಗ್ಗೆ ಸ್ವಾಮೀಜಿಗಳು ಕೈಗೊಂಡಿದ್ದಾರೆ. ಕಾಂಗ್ರೆಸ್​​ನ ಹಿಂದೂ ವಿರೋಧಿ ನಡೆಯ ವಿರುದ್ಧ ನಗರದ ಬಾಳಂಭಟ್​ ಹಾಲ್​​ನಲ್ಲಿ ಸ್ವಾಮೀಜಿಗಳು ಧರ್ಮ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಕಾಂಗ್ರೆಸ್​ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರವನ್ನು ಈ ಕೂಡಲೇ ಕೈ ಬಿಡಬೇಕು ಎಂದು ಗುರುಪುರ ವಜ್ರದೇಹಿ ಸ್ವಾಮೀಜಿ, ಒಡಿಯೂರು ಗುರುದೇವಾನಂದ ಸ್ವಾಮೀಜಿ, ಮಾಣಿಲ ಸ್ವಾಮೀಜಿ, ಕೇಮಾರು ಸೇರಿ

ರಾಜ್ಯ ಸರಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ : ಸ್ವಾಮೀಜಿಗಳಿಂದ ನಿರ್ಧಾರ Read More »

ವಾಯುವ್ಯ ಪಾಕಿಸ್ತಾನದಲ್ಲಿ ಒಂದೇ ಕುಟುಂಬದ 9 ಸದಸ್ಯರ ಗುಂಡಿಕ್ಕಿ ಹತ್ಯೆ

ಪೇಷಾವರ :  ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಮದುವೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 9 ಸದಸ್ಯರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಲಾಕಂಡ್ ಜಿಲ್ಲೆಯ ಬಟ್‍ಖೆಲಾ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಮದುವೆಯ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆ. ರಾತ್ರಿ ವೇಳೆ ಮನೆಗೆ ನುಗ್ಗಿದ ಗುಂಪು, ನಿದ್ದೆಯಲ್ಲಿದ್ದ 9 ಮಂದಿಯನ್ನು ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿರುವುದಾಗಿ ವರದಿಯಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಾಂತೀಯ ಅರೆಸೇನಾ ಪಡೆ

ವಾಯುವ್ಯ ಪಾಕಿಸ್ತಾನದಲ್ಲಿ ಒಂದೇ ಕುಟುಂಬದ 9 ಸದಸ್ಯರ ಗುಂಡಿಕ್ಕಿ ಹತ್ಯೆ Read More »

error: Content is protected !!
Scroll to Top