ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಪುತ್ತೂರಿನಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಕೇಸ್‌ ಬೆಂಗಳೂರು: ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ ಯೂಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರಭಾಕರ್‌ ಭಟ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಪ್ರಭಾಕರ್‌ ಭಟ್‌ ಭಾಷಣ […]

ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ Read More »

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ

ಪುತ್ತೂರಿನಲ್ಲಿ 1.6 ಕ್ವಿಂಟಾಲ್‌ ಗಾಂಜಾ ವಶವಾದ ಪ್ರಕರಣ ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.19ರಂದು 53,03,000 ರೂ .ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42)

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ Read More »

ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು

ಮರಣ ಹೊಂದಿದವರ ಖಾತೆಗೆ ಹಣ ಜಮೆಯಾಗುವುದನ್ನು ತಡೆಯಲು ಹೊಸ ನಿಯಮ ಬೆಂಗಳೂರು : ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗುವುದನ್ನು ತಡೆಯುವ ಉದ್ದೇಶದಿಂದ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗಳಿಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ

ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು Read More »

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು

ಯದ್ವಾತದ್ವಾ ಸ್ಕೂಟಿ ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಬೆಂಗಳೂರು: ಇಬ್ಬರು ಯುವತಿಯರು ಕಂಠಪೂರ್ತಿ ಮದ್ಯ ಸೇವಿಸಿ ಹಾದಿಬೀದಿಯಲ್ಲಿ ರಂಪಾಟ ನಡೆಸಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಹುಳಿಮಾವು ಬಳಿ ಶನಿವಾರ ತಡರಾತ್ರಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯರು ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಕ್ಯಾಬ್‌ಗೆ ಡಿಕ್ಕಿ ಹೊಡೆದು ಚಾಲಕ ಜೊತೆ ಡಿಕ್ಕಿ ಹೊಡೆದು ಜಗಳ ಮಾಡಿದ್ದಾರೆ. ಕ್ಯಾಬ್‌ ಚಾಲಕ ನಿಮ್ಮದೇ ತಪ್ಪು ಎಂದಿದ್ದಕ್ಕೆ ಮದ್ಯದ ಬೆರಳು ತೋರಿಸಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಲು

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು Read More »

ಟಿ20 ವಿಶ್ವಕಪ್‌ : ಅನನುಭವಿ ಅಮೆರಿಕ ಎದುರು ತಿಣುಕಾಡಿದ ಭಾರತ

ಮೊದಲ ಪಂದ್ಯದಲ್ಲೇ ಬ್ಯಾಟಿಂಗ್‌ ಬಂಡವಾಳ ಬಯಲು; ಪ್ರಯಾಸದ ಜಯ ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಮೆರಿಕ ನಡುವಿನ 2026ರ ಟಿ20 ವಿಶ್ವಕಪ್ ಮೊದಲ ದಿನದ ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಜಯ ದಾಖಲಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಗಿಳಿದಿರುವ ಭಾರತ ಗೆಲುವಿನ ಶುಭಾರಂಭ ಮಾಡಿದೆ. ಕ್ರಿಕೆಟಿನಲ್ಲಿನ್ನೂ ಅಂಬೆಗಾಲಿಡುತ್ತಿರುವ ಅಮೆರಿಕ ತಂಡವನ್ನು ಭಾರತ ಸೋಲಿಸಿದೆ. ಈ ಪಂದ್ಯದಲ್ಲಿ ದುರ್ಬಲ ತಂಡದ ಎದುರು ಭಾರತ ದಾಖಲೆಗಳ ಮೇಲೆ ದಾಖಲೆ ಬರೆಯಬಹುದು ಎಂಬ ನಿರೀಕ್ಷೆ

ಟಿ20 ವಿಶ್ವಕಪ್‌ : ಅನನುಭವಿ ಅಮೆರಿಕ ಎದುರು ತಿಣುಕಾಡಿದ ಭಾರತ Read More »

ಬಾರ್ಯ ಕ್ಷೇತ್ರದಲ್ಲಿ ಜಾಂಬವತಿ ಕಲ್ಯಾಣ ತಾಳಮದ್ದಳೆ

ಉಪ್ಪಿನಂಗಡಿ: ಬಾರ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಅಧ್ಯಕ್ಷ ಡಾ. ಶ್ರೀಪತಿ ಕಲ್ಲುರಾಯ ಅವರ ಪ್ರಾಯೋಜಕತ್ವದಲ್ಲಿ ಜಾಂಬವತಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ನಾರಾಯಣ ಶಬರಾಯ ಉಡುಪಿ, ಪದ್ಯಾಣ ಜಯರಾಮ್ ಭಟ್ ಮತ್ತು ಮುರಳಿಧರ ಕಲ್ಲೂರಾಯ , ಬಲರಾಮನಾಗಿ ಡಾ. ಶ್ರೀಪತಿ ಕಲ್ಲೂರಾಯ, ಶ್ರೀ ಕೃಷ್ಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಜಾಂಬವಂತನಾಗಿ ಗಣರಾಜ ಕುಂಬಳೆ, ಜಾಂಬವತಿಯಾಗಿ ರಾಜಶ್ರೀ ಶಬರಾಯ ಉಡುಪಿ ಭಾಗವಹಿಸಿದ್ದರು. ದೇವಳದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ

ಬಾರ್ಯ ಕ್ಷೇತ್ರದಲ್ಲಿ ಜಾಂಬವತಿ ಕಲ್ಯಾಣ ತಾಳಮದ್ದಳೆ Read More »

ಗಾಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

ಬೆಳ್ತಂಗಡಿ: ಚಾರಣಿಗರ ನೆಚ್ಚಿನ ಸ್ಥಳ ಗಡಾಯಿಕಲ್ಲಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಗಡಾಯಿಕಲ್ಲಿಗೆ ತಾತ್ಕಾಲಿಕ ನೆಲೆಯಲ್ಲಿ ಚಾರಣ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೇಸಿಗೆ ಕಾಲವಾದ್ದರಿಂದ ಕಾಡ್ಗಿಚ್ಚು ಹರಡುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಫೆ. 7 ರಿಂದ ಮುಂದಿನ ಆದೇಶದ ವರೆಗೆ ಈ ನಿಷೇಧ ಇರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಗಾಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ Read More »

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ

ವೀರಮಂಗಲ: ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ ಮತ್ತು ದೈವಗಳ ನೇಮೋತ್ಸವ ಫೆ. 15 ರಂದು ನಡೆಯಲಿದೆ. ಫೆ. 9 ರಂದು ನಾಗತಂಬಿಲ, ಫೆ. 10 ರಂದು ಸಂಜೆ 6 ಗಂಟೆಗೆ ನೂತನವಾಗಿ ನಿರ್ಮಾಣವಾಗಿರುವ ಅಂಙಣಪಂಜುರ್ಲಿ ದೈವಸ್ಥಾನದ ವಾಸ್ತು ಪೂಜೆ, ಫೆ. 11 ರಂದು ಹುಲಿ ಚಾಮುಂಡಿ ಮತ್ತು ಅಂಙಣಪಂಜುರ್ಲಿ ದೈವಗಳ ಪುನಃಪ್ರತಿಷ್ಟೆ, ಫೆ. 14 ರಂದು ಕುಮಾರಧಾರಾ ನದಿಯಲ್ಲಿ ಗಂಗಾ ಪೂಜೆ, ಕಲಶ ಜಲ ಮೆರವಣಿಗೆ, ಮಹಾ ಪೂಜೆ, ಅನ್ನಸಂತರ್ಪಣೆ, ರಾತ್ರಿ

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ Read More »

ಸುಳ್ಯ ಕ್ಷೇತ್ರದ ಪ.ಜಾ/ಪಂ.ದ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂ. ಬಿಡುಗಡೆ

ಸುಳ್ಯ: ವಿಧಾನಸಭಾ ಕ್ಷೇತ್ರಕ್ಕೆ 2025-26 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಯಡಿ ರಸ್ತೆ ಅಭಿವೃದ್ಧಿಯ ಹಿನ್ನೆಲೆಯಲ್ಲಿ 75 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. ಹಂಚಿಕೆಯಾಗಿರುವ ಅನುದಾನದಡಿ ವಿವಿಧ ಕ್ರಿಯಾ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಸರ್ಕಾರ ನಿರ್ಧರಿಸಿದೆ. ​ಒಟ್ಟು ಅನುದಾನ: ₹75.00 ಲಕ್ಷಗಳು (8 ಕಾಮಗಾರಿಗಳಿಗೆ)​ಅನುಮೋದನೆಗೊಂಡಿದೆ. ಕಾಮಗಾರಿಗಳ ವಿವರ:ಸುಳ್ಯ ತಾಲೂಕು ಎಡಮಂಗಲ ಗ್ರಾಮದ ಡೆಮ್ಮಾಯಿಲ ಪ. ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷಸುಳ್ಯ ತಾಲೂಕು ದೇವಚಳ್ಳ

ಸುಳ್ಯ ಕ್ಷೇತ್ರದ ಪ.ಜಾ/ಪಂ.ದ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂ. ಬಿಡುಗಡೆ Read More »

ಶಾಸಕರ ಪತ್ನಿಯ ಅವಹೇಳನ: ಆರೋಪಿಯ ಬಂಧನ

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಹೆಂಡತಿಯ ಬಗ್ಗೆ ಶಾಸಕ ಕೆ. ಎಂ. ಶಿವಲಿಂಗೇಗೌಡ ಆಡಿದ್ದಾರೆ ಎನ್ನಲಾದ ಮಾತುಗಳನ್ನು ಉಲ್ಲೇಖ ಮಾಡಿ ಫೇಸ್‌ಬುಕ್‌ನಲ್ಲಿ ಶಾಸಕರ ಪತ್ನಿಯನ್ನು ವ್ಯಕ್ತಿಯೊಬ್ಬ ಅವಮಾನಿಸಿದ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿ ಬಂಟ್ವಾಳದ ಅಮ್ಟಾಡಿಯ ಶರತ್ ರೈ ಎಂಬಾತನನ್ನು ಬಂಧಿಸಲಾಗಿದೆ. ಈತ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೇದವ್ಯಾಸ್ ಕಾಮತ್ ಅವರ ಪತ್ನಿಯನ್ನು ಅವಮಾನಿಸುವಂತೆ ಪೋಸ್ಟ್ ಹಾಕಿದ್ದ. ಈ ಸಂಬಂಧ ಮಹಿಳೆಯೊಬ್ಬರು ದೂರು ದಾಖಲು

ಶಾಸಕರ ಪತ್ನಿಯ ಅವಹೇಳನ: ಆರೋಪಿಯ ಬಂಧನ Read More »

error: Content is protected !!
Scroll to Top