ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದಿಂದ ಮತಾಂತರ ಕಾಯಿದೆ ವಾಪಾಸು | ವಿಎಚ್‌ಪಿ, ಬಜರಂಗದಳದಿಂದ ಪ್ರತಿಭಟನೆ

ಪುತ್ತೂರು :  ನಮ್ಮ ಸಂಘಟನೆಯ ನೇತೃತ್ವದಲ್ಲಿ ರಾಜ್ಯಪಾಲರ ಮನೆ ಮುಂದೆ ಅಮರಣಾಂತ ಉಪವಾಸ ಕೂತಾದರೂ ಮತಾಂತರ  ಕಾಯಿದೆಯನ್ನು ಹಿಂಪಡೆಯುವುದನ್ನು ತಡೆಯುವುದಾಗಿ ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ. ಅವರು ಸೋಮವಾರ ಸಂಜೆ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ  ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯಿದೆಯನ್ನು ಹಿಂಪಡೆಯುವುದರ ವಿರುದ್ಧ ವಿಶ್ವಹಿಂದು ಪರಿಷತ್ ಬಜರಂಗದಳದ ವತಿಯಿಂದ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು ಹಿಂದಿನ ಬಿಜೆಪಿ ಸರಕಾರ ಜಾರಿತಂದ ಕಾಯಿದೆಯನ್ನು ಸಚಿವ ಸಂಪುಟದಲ್ಲಿ […]

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದಿಂದ ಮತಾಂತರ ಕಾಯಿದೆ ವಾಪಾಸು | ವಿಎಚ್‌ಪಿ, ಬಜರಂಗದಳದಿಂದ ಪ್ರತಿಭಟನೆ Read More »

ಜೂನ್ 21 : ಕಡಬದಲ್ಲಿ ಜನಜಾಗೃತಿ ವೇದಿಕೆಯ ಪದಗ್ರಹಣ, ನವಜೀವನೋತ್ಸವ ಕಾರ್ಯಾಕ್ರಮ

ಕಡಬ:  ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಜನಜಾಗೃತಿ ವೇದಿಕೆಯ ಪದಗ್ರಹಣ ಸಮಾರಂಭ, ಯೋಜನೆಯ ವತಿಯಿಂದ ನಡೆಯುವ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಮದ್ಯಮುಕ್ತರ ನವಜೀವನೋತ್ಸವ ಕಾರ್ಯಕ್ರಮ  ಜೂನ್ 21 ಬುಧವಾರ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಡಬ ತಾಲೂಕು ಜಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು ಹೇಳಿದರು. ಅವರು ಸೋಮವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮತನಾಡಿ,  ಕಡಬ ನೂತನ ತಾಲೂಕು ಆಗಿರುವ ಹಿನ್ನಲೆಯಲ್ಲಿ

ಜೂನ್ 21 : ಕಡಬದಲ್ಲಿ ಜನಜಾಗೃತಿ ವೇದಿಕೆಯ ಪದಗ್ರಹಣ, ನವಜೀವನೋತ್ಸವ ಕಾರ್ಯಾಕ್ರಮ Read More »

ಕೋಡಿಂಬಾಡಿ ಶಾಸಕ ಅಶೋಕ್ ರೈಗೆ ಹುಟ್ಟೂರ ಸನ್ಮಾನ | ಕೋಡಿಂಬಾಡಿ ಗ್ರಾಮಸ್ಥರು ತಲೆತಗ್ಗಿಸುವ ಕೆಲಸವನ್ನು ಎಂದಿಗೂ ಮಾಡಲಾರೆ | ಶಾಸಕ ಅಶೋಕ್ ರೈ

ಪುತ್ತೂರು: ನಾನು 20 ವರ್ಷ ಬಿಜೆಪಿಯಲ್ಲಿ ಸಕ್ರೀಯನಾಗಿದ್ದೆ, ಈ ಬಾರಿ ಬಿಜೆಪಿಯಲ್ಲಿ ಟಿಕೆಟ್ ಕೇಳಿದ್ದೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ಸೇರಿದೆ, ಅವಕಾಶ ಸಿಕ್ಕಿತ್ತು, ಸ್ಪರ್ದೆ ಮಾಡಿದೆ, ಗೆದ್ದೆ , ಶಾಸಕನಾದೆ. ನಾನು ಹಣ ಮಾಡಬೇಕೆಂಬ ಉದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ, ಬಡವರ ಸೇವೆ ಮಾಡಬೇಕು ಎಂಬ ಏಕೈಕ ಉದ್ದೇಶದಿಂದ ರಾಜಕೀಯ ಸೇರಿದೆ. ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೆವಸ್ಥಾನದ ಸಭಾಂಗಣದಲ್ಲಿ ಶಾಸಕರಿಗೆ ಗ್ರಾಮಸ್ಥರು ಆಯೋಜಿಸಿದ

ಕೋಡಿಂಬಾಡಿ ಶಾಸಕ ಅಶೋಕ್ ರೈಗೆ ಹುಟ್ಟೂರ ಸನ್ಮಾನ | ಕೋಡಿಂಬಾಡಿ ಗ್ರಾಮಸ್ಥರು ತಲೆತಗ್ಗಿಸುವ ಕೆಲಸವನ್ನು ಎಂದಿಗೂ ಮಾಡಲಾರೆ | ಶಾಸಕ ಅಶೋಕ್ ರೈ Read More »

ಎರಡು ಬಸ್‍ ಗಳು ಮುಖಾಮುಖಿ ಡಿಕ್ಕಿ : ಏಳು ಸಾವು, 40 ಮಂದಿಗೆ ಗಾಯ

ತಮಿಳುನಾಡು : ತಮಿಳುನಾಡಿನ ಕಡಲೂರು ಜಿಲ್ಲೆಯ ಮೇಲ್ಪಟ್ಟಂಪಕ್ಕಂನಲ್ಲಿ ಸೋಮವಾರ ಬೆಳಗ್ಗೆ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಸ್‌ಗಳ ಡಿಕ್ಕಿಯ ಹಿಂದಿನ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಅಪಘಾತದಲ್ಲಿ ಭಾಗಿಯಾದವರ ಜೊತೆ ಮಾತನಾಡಿದ ನಂತರವಷ್ಟೇ ತಿಳಿಯಲಿದೆ ಎಂದು ಕಡಲೂರು ಪೊಲೀಸ್

ಎರಡು ಬಸ್‍ ಗಳು ಮುಖಾಮುಖಿ ಡಿಕ್ಕಿ : ಏಳು ಸಾವು, 40 ಮಂದಿಗೆ ಗಾಯ Read More »

ಪ್ರಸ್ತುತ ವರ್ಷದಲ್ಲಿ ತಾಲೂಕಿನಲ್ಲಿ 6 ಮಂದಿಯಲ್ಲಿ ಕುಷ್ಠರೋಗ ಲಕ್ಷಣ ಪತ್ತೆ | ಕುಷ್ಠರೋಗ ನಿವಾರಣಾ ಜಾಗೃತ ಸಮಿತಿ ಸಭೆಯಲ್ಲಿ ಮಾಹಿತಿ

ಪುತ್ತೂರು: ಪುತ್ತೂರಿನಲ್ಲಿ2021 ರಲ್ಲಿ 2 ಕುಷ್ಠರೋಗ ಪ್ರಕರಣ ಕಂಡು ಬಂದಿದ್ದು, ಈ ವರ್ಷ ಆರು ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ಜೂ.19 ರಿಂದ ಜು.6 ರ  ತನಕ ರಾಷ್ಟ್ರೀಯ ಕುಷ್ಠರೋಗ ನಿವಾರಣಾ ಅಭಿಯಾನ ಯೋಜನೆಯಡಿ ಮನೆ ಮನೆ ಭೇಟಿ ನಡೆಯಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ. ಅವರು ಸೋಮವಾರ ತಾಲೂಕು ಆಡಳಿತ ಸೌಧದ ಸಹಾಯಕ ಕಮೀಷನರ್ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕುಷ್ಠರೋಗ ನಿವಾರಣಾ ಜಾಗೃತ ಸಮಿತಿ ಸಭೆಯಲ್ಲಿ ಮತನಾಡಿದರು. ಪ್ರಸ್ತುತ ವರ್ಷದಲ್ಲಿ ಕುಷ್ಠರೋಗಿಗಳಲ್ಲಿ ಏರಿಕೆ

ಪ್ರಸ್ತುತ ವರ್ಷದಲ್ಲಿ ತಾಲೂಕಿನಲ್ಲಿ 6 ಮಂದಿಯಲ್ಲಿ ಕುಷ್ಠರೋಗ ಲಕ್ಷಣ ಪತ್ತೆ | ಕುಷ್ಠರೋಗ ನಿವಾರಣಾ ಜಾಗೃತ ಸಮಿತಿ ಸಭೆಯಲ್ಲಿ ಮಾಹಿತಿ Read More »

ಸರಕಾರಿ ಆಸ್ಪತ್ರೆ ಲಂಚ ಪ್ರಕರಣದಲ್ಲಿ ಸೇವಾ ಸಂಸ್ಥೆಗಳ ಬಗ್ಗೆ ಸುಳ್ಳು ಆರೋಪ ಮಾಡಬೇಡಿ :ಕಲಿಯುಗ ಸೇವಾ ಸಮಿತಿಯಿಂದ ಮನವಿ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸುವ ನೌಕರರಿಗೆ ಕಡಿಮೆ ಸಂಬಳ ಇರುವುದು ಬೇಸರ ತಂದಿದೆ. ಇದನ್ನೆ ಮುಂದಿಟ್ಟು ಬರವರಿಂದ ಶವ ಪರೀಕ್ಷೆಗೆ ಹಣ ಪಡೆದುಕೊಳ್ಳುವುದು ಸರಿಯೇ ? ಎಂದು ಕಲಿಯುಗ ಸೇವಾ ಸಮಿತಿ ಪ್ರಶ್ನಿಸಿದೆ. ಸಮಿತಿಯ ಕಾರ್ಯದರ್ಶಿ ಸಂಪತ್ ಕುಮಾರ್ ಜೈನ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಣ ಪಡೆದವರ ಪರ ಆರೋಗ್ಯಾಧಿಕಾರಿಯವರು ಮಾತನಾಡುವ ಮೂಲಕ ಲಂಚ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವವರ ನೈತಿಕ ಬಲ ಕಳೆದುಕೊಳ್ಳುವಂತಾಗಿದೆ ಎಂದು ತಿಳಿಸಿದ ಅವರು, ಈ ನಿಟ್ಟಿನಲ್ಲಿ

ಸರಕಾರಿ ಆಸ್ಪತ್ರೆ ಲಂಚ ಪ್ರಕರಣದಲ್ಲಿ ಸೇವಾ ಸಂಸ್ಥೆಗಳ ಬಗ್ಗೆ ಸುಳ್ಳು ಆರೋಪ ಮಾಡಬೇಡಿ :ಕಲಿಯುಗ ಸೇವಾ ಸಮಿತಿಯಿಂದ ಮನವಿ Read More »

ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ IRCMD ಶಿಕ್ಷಣ ಸಂಸ್ಥೆ ವತಿಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ.

ಕಡಬ : ಕಡಬದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ, ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ದಿ ಶಕ್ತಿ ಉತ್ತಮಗೊಳ್ಳುತ್ತದೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿಯೂ ಪ್ರಗತಿ ಸಾಧಿಸುತ್ತಾರೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಪುತ್ತೂರು

ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ IRCMD ಶಿಕ್ಷಣ ಸಂಸ್ಥೆ ವತಿಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ. Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮ

ಪುತ್ತೂರು: ಸಾಂಸ್ಕೃತಿಕ ಕಲೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು ಭಾರತೀಯ ಮನಸ್ಸಿನ ಬೆಳವಣಿಗೆಗೆ ಪೂರಕವಾಗಿದೆ. ಇವುಗಳು ಮನಸ್ಸಿಗೆ ಮನೋರಂಜನೆ ಒದಗಿಸುವುದು ಮಾತ್ರವಲ್ಲದೆ ವ್ಯಕ್ತಿಯನ್ನು ಸಂವೇದನಶೀಲರನ್ನಾಗಿಸುತ್ತದೆ. ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಭಟ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನಾಲ್ಕು ಗೋಡೆಯ ಶಿಕ್ಷಣ ಪ್ರಸ್ತುತ ಕಾಲಘಟ್ಟದಲ್ಲಿ ಸಾಕಾಗುವುದಿಲ್ಲ. ಜ್ಞಾನ ಹೆಚ್ಚಿಸಿಕೊಳ್ಳಬೇಕಾದರೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಓದುವುದರ ಜೊತೆಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮ Read More »

ಜೂ.22 ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ

ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ಜೂ.22 ರಂದು ಕರ್ನಾಟಕ ಬಂದ್ ಗೆ ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್  ಕರೆ ನೀಡಿದೆ. ಕೆಸಿಸಿಐ ಮತ್ತು ಇತರ ಜಿಲ್ಲಾ ವಾಣಿಜ್ಯ ಮಂಡಳಿಗಳು ಬಂದ್‍ ಗೆ ಕರೆ ನೀಡಿದ್ದು, ಎಲ್ಲಾ ವ್ಯಾಪಾರ, ಕೈಗಾರಿಕೆಗಳು ಹಾಗೂ ಇಂಡಸ್ಟ್ರೀಸ್ ಗಳು ಅಂದು ಬಂದ್ ಆಗಲಿವೆ. ಈಗಾಗಲೇ ಬಂದ್‍ ಗೆ 25 ಕ್ಕೂ ಹೆಚ್ಚು ಜಿಲ್ಲಾ ಚೇಂಬರ್‍ ಗಳ ಬೆಂಬಲ ದೊರಕಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಈ ಕುರಿತು

ಜೂ.22 ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ Read More »

ಜೆ.ಇ.ಇ. ಎಡ್ವಾನ್ಸ್ಡ್ ರಾಷ್ಟ್ರೀಯ ಮಟ್ಟದ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವರ್ಷಿತ್ ಮತ್ತು ಅಮೋಘ್‌ರವರಿಗೆ ರ್‍ಯಾಂಕ್ | ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ

ಪುತ್ತೂರು: ಕೇಂದ್ರ ಸರಕಾರದ ಎನ್.ಟಿ.ಎ. ನಡೆಸುವ ರಾಷ್ಟ್ರೀಯ ಮಟ್ಟದ ಜೆ.ಇ.ಇ. ಎಡ್ವಾನ್ಸ್ಡ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವರ್ಷಿತ್ ಜೆ ಮತ್ತು ಅಮೋಘ್ ಎ.ಪಿ. ಉತ್ತಮ ರ್‍ಯಾಂಕುಗಳನ್ನು ಗಳಿಸಿ ರಾಷ್ಟ್ರಮಟ್ಟದ ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ವರ್ಷಿತ್ ಜೆ 108 ಅಂಕಗಳನ್ನು ಗಳಿಸುವ ಮೂಲಕ ಸಾಮಾನ್ಯ ವರ್ಗದಲ್ಲಿ 1540 ರ್‍ಯಾಂಕ್, ಒ.ಬಿ.ಸಿ. ವಿಭಾಗದಲ್ಲಿ 3806  ರ್‍ಯಾಂಕ್ ಗಳಿಸಿದ್ದಾರೆ. ಇವರು ಬಂಟ್ವಾಳ ತಾಲೂಕಿನ ಮೂಡ ಭಂಡಾರಿ ಬೆಟ್ಟುವಿನ ಜಯಂತ ಆರ್ ಮತ್ತು ಸೌಮ್ಯ ಜೆ ದಂಪತಿ

ಜೆ.ಇ.ಇ. ಎಡ್ವಾನ್ಸ್ಡ್ ರಾಷ್ಟ್ರೀಯ ಮಟ್ಟದ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವರ್ಷಿತ್ ಮತ್ತು ಅಮೋಘ್‌ರವರಿಗೆ ರ್‍ಯಾಂಕ್ | ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ Read More »

error: Content is protected !!
Scroll to Top