ಸವಾಲಾಗಿ ಪರಿಣಮಿಸಿದ ಮೌಲ್ಯಾಧಾರಿತ ಶಿಕ್ಷಣ | ಡಾ. ಮೋಹನ್ ಆಳ್ವ |

ಪುತ್ತೂರು: ವಿದ್ಯಾಕ್ಷೇತ್ರವೂ ಪ್ರಸ್ತುತ ವ್ಯಾಪಾರಿಕರಣಗೊಳ್ಳುತ್ತಿದ್ದು, ಇದರ ನಡುವೆ ಮೌಲ್ಯಾಧಾರಿತ ಶಿಕ್ಷಣ ನೀಡುವುದು ಸವಾಲಾಗಿ ಪರಿಣಮಿಸಿದೆ. ಪ್ರಸ್ತುತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿನ ಮನೋಧರ್ಮ ಬದಲಾಗುತ್ತಿರುವುದು ಕಷ್ಟದ ವಿಷಯ ಎಂದು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಅವರು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಮಾಡಲಾದ ‘ಸ್ವರ್ಣ ಸಾಧನಾ ಪ್ರಶಸ್ತಿ’ಯನ್ನು ಶನಿವಾರ ಪುತ್ತೂರಿನ ಜೈನ ಭವನದಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಿ ಮಾತನಾಡಿದರು. ಬದುಕಿನಲ್ಲಿ ಯಾವತ್ತೂ ಋಣಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳದೆ ಧನಾತ್ಮಕ […]

ಸವಾಲಾಗಿ ಪರಿಣಮಿಸಿದ ಮೌಲ್ಯಾಧಾರಿತ ಶಿಕ್ಷಣ | ಡಾ. ಮೋಹನ್ ಆಳ್ವ | Read More »

ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಗೆ ಬಿದ್ದ ಕಾರು | ಆರು ಮಂದಿಗೆ ಗಾಯ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಕಿರು ಸೇತುವೆಯಿಂದ ಕೆಳಗೆ ಬಿದ್ದು ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಯಾಡಿ ಸಮೀಪ ಶನಿವಾರ ನಡೆದಿದೆ. ಗಾಯಗೊಂಡವರನ್ನು ಬೆಂಗಳೂರು ಆರ್ ಟಿ ನಗರ ನಿವಾಸಿಗಳೆಂದು ಗುರುತಿಸಲಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದ ಎರಡು ವರ್ಷದ ಮಗುವೊಂದು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಗೆ ಬಿದ್ದ ಕಾರು | ಆರು ಮಂದಿಗೆ ಗಾಯ Read More »

ಆಲಂಕಾರು ಕಾಲೇಜು ರಸ್ತೆಯಲ್ಲಿ ಡಿಜಿಟಲ್ ಸೇವಾ ಕೇಂದ್ರ ಶುಭಾರಂಭ

ಕಡಬ: ತಾಲೂಕು ಆಲಂಕಾರು ಕಾಲೇಜು ರಸ್ತೆಯಲ್ಲಿ ಡಿಜಿಟಲ್ ಸೇವಾ ಕೇಂದ್ರ ಕಾಮನ್ ಸರ್ವೀಸ್ ಸೆಂಟರ್ ಶನಿವಾರ ಶುಭಾರಂಭಗೊಂಡಿತು. ಉದ್ಯಮಿ ಮೋಕ್ಷನ್ ಪೊಳಲಿ ದೀಪ ಬೆಳಗಿಸಿ ಡಿಜಿಟಲ್ ಸೇವಾ ಕೇಂದ್ರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಂತಪ್ಪ ಗೌಡ, ಜನಾರ್ಧನ ಗೌಡ, ಜಗದೀಶ್, ಚಂದ್ರ, ಪುನೀತ್ ಮೂಲ್ಯ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಮಾಲಕರಾದ ಹರೀಶ್ ಕಂದ್ಲಾಜೆ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯಲ್ಲಿ ಎಲ್ಲಾ ತರಹದ ಆನ್‍ಲೈನ್ ಸೇವೆಗಳು ಲಭ್ಯವಿದೆ. ಅಲ್ಲದೆ ಕ್ವಿಕ್ ಪಾಸ್ ಪೋರ್ಟ್ ಸೈನ್ ಫೋಟೊ, ವೆಡ್ಡಿಂಗ್ ಶೂಟ್, ಓಟ್

ಆಲಂಕಾರು ಕಾಲೇಜು ರಸ್ತೆಯಲ್ಲಿ ಡಿಜಿಟಲ್ ಸೇವಾ ಕೇಂದ್ರ ಶುಭಾರಂಭ Read More »

ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ

ಸುಳ್ಯ: ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಪ್ರಕ್ರಿಯೆ ಜೂ.17 ಶನಿವಾರ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸುಳ್ಯ ತಹಶೀಲ್ದಾರ್ ಮಂಜುನಾಥ್ ಜಿ., ಕಡಬ ತಹಶೀಲ್ದಾರ್ ರಮೇಶ್ ಬಾಬು, ಸುಳ್ಯ ತಾ.ಪಂ. ಇಒ ಭವಾನಿಶಂಕರ್ ಎನ್., ಕಡಬ ತಾ.ಪಂ. ಇಒ ನವೀನ್ ಕುಮಾರ್, ಜಿಲ್ಲಾಧಿಕಾರಿ ಕಛೇರಿಯ ಚುನಾವಣಾಧಿಕಾರಿಗಳು ಭಾಗವಹಿಸಿದ್ದರು. ಇಒ ಭವಾನಿಶಂಕರ್ ಸ್ವಾಗತಿಸಿದರು. ಮೀಸಲಾತಿ

ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ Read More »

ವಿಟ್ಲದಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ | ಸವಾರರಿಗೆ ಗಾಯ

ವಿಟ್ಲ: ಬೈಕ್ ಗಳೆರಡು ಡಿಕ್ಕಿ ಹೊಡೆದುಕೊಂಡು ಬೈಕ್‍ ಸವಾರರಿಬ್ಬರೂ ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಬೈಕ್‍ ಸವಾರರಾದ ಧ್ಯಾನ್ ಹಾಗೂ ರಮೇಶ್ ಗಾಯಗೊಂಡವರು. ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ವಿಟ್ಲದಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ | ಸವಾರರಿಗೆ ಗಾಯ Read More »

ಪುತ್ತೂರಿನಲ್ಲಿ ಮೇಳೈಸಿದ “ಹಲಸು-ಹಣ್ಣು ಮೇಳ-2023” | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆಗಳತ್ತ ಆಗಮಿಸಿದ ಹಲಸು ಪ್ರಿಯರ ದಂಡು

ಪುತ್ತೂರು: ನವತೇಜಸ್ ಪುತ್ತೂರು, ಐಐಎಚ್ ಆರ್ ಬೆಂಗಳೂರು ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 6ನೇ :ಹಲಸು-ಹಣ್ಣು ಮೇಳ-2023” ಕ್ಕೆ ಶನಿವಾರ ಬೆಳಿಗ್ಗೆ ಬಪ್ಪಳಿಗೆ ಜೈನ ಭವನದಲ್ಲಿ ಚಾಲನೆ ನೀಡಲಾಯಿತು. ಎರಡು ದಿನಗಳ ಕಾಲ ನಡೆಯುವ ಹಲಸು ಹಣ್ಣು ಮೇಳಕ್ಕೆ ಬೆಂಗಳೂರಿನ ಐಐಎಚ್ ಅರ್‍ ನಿರ್ದೇಶಕ ಡಾ.ಸಂಜಯ ಕುಮಾರ್ ಸಿಂಗ್ ಹಲಸಿನ ಗಿಡಕ್ಕೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಮಾತನಾಡಿ, ಹಲಸಿನಹಣ್ಣು ಪ್ರಕೃತಿದತ್ತ ಹಾಗೂ ನಮ್ಮ ಸಂಸ್ಕೃತಿಯ ಹಣ್ಣು. ಇವುಗಳ ಕುರಿತು ಕಳೆದ ಕೆಲವು ವರ್ಷಗಳಿಂದ

ಪುತ್ತೂರಿನಲ್ಲಿ ಮೇಳೈಸಿದ “ಹಲಸು-ಹಣ್ಣು ಮೇಳ-2023” | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆಗಳತ್ತ ಆಗಮಿಸಿದ ಹಲಸು ಪ್ರಿಯರ ದಂಡು Read More »

ಕೋಮು ದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 25 ಲಕ್ಷ ಪರಿಹಾರ

ಬೆಂಗಳೂರು:: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ನಾಲ್ವರು ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿಗಳನ್ನು ಪರಿಹಾರದ ರೂಪದಲ್ಲಿ ಘೋಷಣೆ ಮಾಡಿದೆ. ಓರ್ವ ಬಿಜೆಪಿ ಕಾರ್ಯಕರ್ತ ಹಾಗೂ ಮೂವರು ಮುಸ್ಲಿಂ ಸಮುದಾಯದ ಯುವಕರ ಕುಟುಂಬಕ್ಕೆ ಪರಿಹಾರ ಘೋಷಣೆಯಾಗಿದೆ. ಮಂಗಳೂರಿನಲ್ಲಿ 2018ರ ಜನವರಿ ಮೂರರಂದು ಕೊಲೆಯಾದ ಕಾಟಿಪಳ್ಳದ ದೀಪಕ್​ ರಾವ್​, 2022ರ ಜುಲೈ 19ರಂದು ಮೃತಪಟ್ಟ ಬೆಳ್ಳಾರೆಯ ಮಸೂದ್​,ಜುಲೈ 28ರಂದು ಕೊಲೆಯಾದ ಮಂಗಳಪೇಟೆಯ ಮಹಮ್ಮದ್​ ಫಾಜಿಲ್​, ಡಿಸೆಂಬರ್​ 24ರಂದು ಹತ್ಯೆಗೀಡಾದ ಕಾಟಿಪಳ್ಳದ ಅಬ್ದುಲ್​

ಕೋಮು ದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 25 ಲಕ್ಷ ಪರಿಹಾರ Read More »

ಪುತ್ತೂರು ತಾಲೂಕಿನ 22 ಗ್ರಾಪಂಗಳ ಮೀಸಲಾತಿ ನಿಗದಿ ಪ್ರಕ್ರಿಯೆ | ಚುನಾವಣಾ ಆಯೋಗದ ವಿಶೇಷ ಸಾಫ್ಟ್ ವೇರ್ ಮೂಲಕ ಮೀಸಲಾತಿ ನಿಗದಿ

ಪುತ್ತೂರು: ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಪ್ರಕ್ರಿಯೆ ಶುಕ್ರವಾರ ಪುತ್ತೂರು ಪುರಭವನದಲ್ಲಿ ನಡೆಯಿತು. ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ಅವರ ನೇತೃತ್ವದಲ್ಲಿ ಗ್ರಾಪಂ ಸದಸ್ಯರ ಸಮ್ಮುಖದಲ್ಲಿ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಿತು. ಕಳೆದ 2020 ರಿಂದ ಇದುವರೆಗೆ ಆಯ್ಕೆಯಾದ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಟ್ಟಿದ್ದರು. ಚುನಾವಣಾ ಆಯೋಗ ಮೀಸಲಾತಿ ಆಯ್ಕೆ ಪ್ರಕ್ರಿಯೆಗೆ ವಿಶೇಷ ಸಾಫ್ಟ್ ವೇರ್‍ ನ್ನು ಅಭಿವೃದ್ಧಿ ಪಡಿಸಿತ್ತು.

ಪುತ್ತೂರು ತಾಲೂಕಿನ 22 ಗ್ರಾಪಂಗಳ ಮೀಸಲಾತಿ ನಿಗದಿ ಪ್ರಕ್ರಿಯೆ | ಚುನಾವಣಾ ಆಯೋಗದ ವಿಶೇಷ ಸಾಫ್ಟ್ ವೇರ್ ಮೂಲಕ ಮೀಸಲಾತಿ ನಿಗದಿ Read More »

ದಕ್ಷಿಣ ಕನ್ನಡ ನೂನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ !

ಮಂಗಳೂರು: ದ.ಕ.ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಅವರನ್ನು ನೇಮಕ ಮಾಡಲಾಗಿದೆ. ದ.ಕ.ಜಿಲ್ಲಾಧಿಕಾರಿಯಾಗಿದ್ದ ಎಂ.ಆರ್.ರವಿ ಕುಮಾರ್ ಹಾಗೂ ಜಿಪಂ ಸಿಇಒ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮುಲ್ಲೈ ಮುಹಿಲನ್ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಜಿಲ್ಲಾಧಿಕಾರಿ ರವಿ ಕುಮಾರ್ ಅವರ ನಿಯೋಜನೆ ಸ್ಥಳದ ಮಾಹಿತಿ ಲಭ್ಯವಾಗಿಲ್ಲ. ಸಿಇಒ ಕುಮಾರ್ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ನೂನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ ! Read More »

ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ಕೊಲೆ ಆರೋಪಿ ಸಂತೋಷ್ ರಾವ್ ನಿರ್ದೋಷಿ | ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು

ಧರ್ಮಸ್ಥಳ: ಧರ್ಮಸ್ಥಳ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ವಿಚಾರಣೆಯಲ್ಲಿರುವ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದಿಂದ ಖುಲಾಸೆ ಮಾಡಿದೆ. ಸಂತೋಷ್ ರಾವ್ ವಿರುದ್ಧ ಸಲ್ಲಿಕೆಯಾಗಿರುವ ಸಾಕ್ಷ್ಯಾಧ್ಯಾರಗಳ ಕೊರತೆ ಹಿನ್ನಲೆಯಲ್ಲಿ ಆರೋಪಿಯನ್ನು ದೋಷಮುಕ್ತಿಗೊಳಿಸಲಾಗಿದೆ. ಈ ಕುರಿತು ನ್ಯಾಯಮೂರ್ತಿ ಸಿ.ಬಿ.ಸಂತೋಷ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಉಜಿರೆ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು

ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ಕೊಲೆ ಆರೋಪಿ ಸಂತೋಷ್ ರಾವ್ ನಿರ್ದೋಷಿ | ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು Read More »

error: Content is protected !!
Scroll to Top