ಸವಣೂರುನಲ್ಲಿ ತಂಬಾಕು ವಿರೋಧಿ ದಿನಾಚರಣೆ

ತಂಬಾಕು ಸೇವನೆ ರೋಗವನ್ನು ಕ್ರಯಕ್ಕೆ ಪಡೆದಂತೆ – ತಾರಾನಾಥ ಸವಣೂರು ಸವಣೂರು :  ತಂಬಾಕು ಸೇವನೆಯೊಂದು ಚಟ. ಈ ಚಟದಿಂದ ರೋಗಗಳನ್ನು ಕ್ರಯಕ್ಕೆ ಪಡೆದಂತೆ ಎಂದು ವೀರಮಂಗಲ ಶಾಲಾ ಮುಖ್ಯಗುರು ತಾರಾನಾಥ ಸವಣೂರು ನುಡಿದರು. ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್  ಸವಣೂರು , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ಇವುಗಳ ಆಶ್ರಯದಲ್ಲಿ ಸವಣೂರಿನ ಶ್ರೀ ವಿನಾಯಕ ಸಭಾ ಭವನದಲ್ಲಿ ನಡೆದ […]

ಸವಣೂರುನಲ್ಲಿ ತಂಬಾಕು ವಿರೋಧಿ ದಿನಾಚರಣೆ Read More »

ಕಟ್ಟತ್ತಾರು-ಗುಂಡಿಗದ್ದೆಯಲ್ಲಿ ಸೇತುವೆ ನಿರ್ಮಾಣ

ಕಾಣಿಯೂರು : ಕಾಣಿಯೂರು ಗ್ರಾಮದ, ಕಟ್ಟತ್ತಾರು-ಗುಂಡಿಗದ್ದೆ ಎಂಬಲ್ಲಿ  ನೂತನವಾಗಿ ನಿರ್ಮಾಣಗೊಂಡಿರುವ ಸೇತುವೆಯ ಉದ್ಘಾಟನೆ ಭಾನುವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇತುವೆಯನ್ನು ಉದ್ಗಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ ಹಿರಿಯರು, ಊರವರು ಉಪಸ್ಥಿತರಿದ್ದರು.

ಕಟ್ಟತ್ತಾರು-ಗುಂಡಿಗದ್ದೆಯಲ್ಲಿ ಸೇತುವೆ ನಿರ್ಮಾಣ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಕುಂಜೂರು ಪಂಜ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ

ಪುತ್ತೂರು: ಶ್ರೀ  ಕ್ಷೇತ್ರ ಧರ್ಮಸ್ಥಳ  ಗ್ರಾಮಭಿವೃದ್ಧಿ ಯೋಜನೆ  ಬಿ, ಸಿ, ಟ್ರಸ್ಟ್( ರಿ ) ಪುತ್ತೂರು ಪ್ರಗತಿ  ಬಂದು  ಸ್ವ ಸಹಾಯ  ಸಂಘಗಳ  ಒಕ್ಕೂಟ ಕುಂಜೂರು ಪಂಜ ಒಕ್ಕೂಟ ಸಭೆ  ಮತ್ತು ಪರಿಸರ  ಮಾಹಿತಿ ಕಾರ್ಯಕ್ರಮ ದೇವಸ್ಯ  ಶ್ರೀ  ಮಂಜುನಾಥ  ಸಭಾಭವನದಲ್ಲಿ  ಭಾನುವಾರ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ  ಸರಸ್ವತಿ, ಜನಜಾಗೃತಿ  ಅಧ್ಯಕ್ಷ ಮಹಾಬಲ ರೈ  ದೀಪ  ಬೆಳಗಿಸಿ  ಉದ್ಘಾಟನೆ ಮಾಡಿದರು. ಒಕ್ಕೂಟದ  ಅಧ್ಯಕ್ಷ  ಮಹಾಲಿಂಗ ನಾಯ್ಕ ಅದ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪುತ್ತೂರು ತಾಲೂಕು ಕೃಷಿ ಅಧಿಕಾರಿ

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಕುಂಜೂರು ಪಂಜ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ Read More »

ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ಪುತ್ತೂರು: ಕೊಕ್ಕಡದ ವಿದ್ಯಾರ್ಥಿನಿಯೋರ್ವಳು ಪುತ್ತೂರಿನ ಪಡೀಲ್‌ನಲ್ಲಿರುವ ಹಾಸ್ಟೇಲ್ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ. ಪುಷ್ಪ ದಂಪತಿ ಪುತ್ರಿ ರೇಖಾ (೧೫) ಆತ್ಮಹತ್ಯೆ ಮಾಡಿಕೊಂಡವರು. ಅವಳ ತಾಯಿ ಪುಷ್ಪ  ಅವರು  ಕಳೆದ ವರ್ಷ ನಿಧನರಾಗಿದ್ದರು. ತಂದೆ ಕೂಲಿ ಕೆಲಸ ಮಾಡುತ್ತಿದ್ದು, ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದಳು.ಅಲ್ಲದೆ ಆಕೆ ತಮ್ಮ ಸಂಬಂಧಿಕರ ಮನೆಯಿಂದ ಶಾಲೆ ಹೋಗುತ್ತಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಅತ್ತೆ ಒತ್ತಾಯದ

ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ Read More »

ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ | ಉಸ್ತುವಾರಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಆರೋಗ್ಯ ತುರ್ತು ಸಂದರ್ಭದಲ್ಲಿ ಬಡವರಿಗೆ ವರದಾನವಾಗಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಹಿಂದಿನ ಸರಕಾರ ನಿಷ್ಕ್ರೀಯಗೊಳಿಸಿದ್ದು ಅದನ್ನು ಮುಂದುವರೆಸುವಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.  ಗ್ರಾಮೀಣ ಪ್ರದೇಶಗಳ ಸಹಾಕಾರಿ ಸಂಘಗಳ ಸದಸ್ಯರು, ಸ್ತ್ರೀ ಶಕ್ತಿ ಗುಂಪು ಸ್ವ-ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಸಹಕಾರಿ ಸಂಘ ಸಹಕಾರಿ ಬ್ಯಾಂಕ್‌ಗಳಲ್ಲಿ ಹಣಕಾಸಿನ ವಹಿವಾಟು ಹೊಂದಿರುವ ಸ್ವ-ಸಹಾಯ ಗುಂಪಿನ

ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ | ಉಸ್ತುವಾರಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ Read More »

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕಡಬದಲ್ಲಿ ಚಾಲನೆ

ಕಡಬ: ರಾಜ್ಯ ಸರಕಾರದ ಮಹಾತ್ವಾಕಾಂಕ್ಷೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕಡಬದಲ್ಲಿ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರು ಸಂಭ್ರಮ ಸಡಗರದಿಂದ ಚಾಲನೆ ನೀಡಿದರು. ಕಡಬ-ಶಾಂತಿಮೊಗೇರು-ಪುತ್ತೂರು ಸರಕಾರಿ ಬಸ್ಸಿಗೆ ಕಡಬದಲ್ಲಿ ಶೃಂಗಾರ ಮಾಡಿ ಕಾಂಗ್ರೇಸ್ ಕಾರ್ಯಕರ್ತರು ಕಾಂಗ್ರೇಸ್ ಧ್ವಜ ಹಿಡಿದು ಮುಖ್ಯ ಮಂತ್ರಿ ಸಿದ್ದರಾಮಯ್ಯ , ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಘೋಷಣೆ ಕೂಗಿದರು. ಬಳಿಕ ಕಡಬ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಸತೀಶ್ ನಾಕ್ ಮೇಲಿನ ಮನೆ ತೆಂಗಿನ ಕಾಯಿ ಒಡೆಯುವ ಮೂಲಕ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕಡಬದಲ್ಲಿ ಚಾಲನೆ Read More »

ಉತ್ತಮ ಮಳೆಗಾಗಿ ರುದ್ರ ಪಠಣ, ಪರ್ಜನ್ಯ ಜಪ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ

ಪುತ್ತೂರು: ಉತ್ತಮ ಮಳೆಗಾಗಿ ವೇದ ಸಂವರ್ಧನಾ ಪ್ರತಿಷ್ಟಾನದಿಂದ ರುದ್ರ ಪಠಣ, ಪರ್ಜನ್ಯ ಜಪ ಮತ್ತು ಭಕ್ತರಿಂದ ಸಾಮೂಹಿಕ ಪ್ರಾರ್ಥನೆಯು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು. ತಡವಾದ ಮಳೆಯು ಪ್ರಕೃತಿಯ ಸಮತೋಲನ ಮೇಲೆ ಪರಿಣಾಮ ಬೀರುವುದರಿಂದ ಎಲ್ಲಾ ವ್ಯವಸ್ಥೆಯಲ್ಲೂ ಸಮಸ್ಯೆ ಆಗದಂತೆ ಲೋಕಕ್ಷೇಮ ಮತ್ತು ಉತ್ತಮ ಮಳೆಗಾಗಿ ಪರ್ಜನ್ಯ ಜಪವನ್ನು ಮಾಡಲಾಯಿತು. ದೇವಳದ ಗೋಪುರದಲ್ಲಿ ರುದ್ರ ಪಠಣ, ಪರ್ಜನ್ಯ ಜಪ ಮಾಡಲಾಯಿತು

ಉತ್ತಮ ಮಳೆಗಾಗಿ ರುದ್ರ ಪಠಣ, ಪರ್ಜನ್ಯ ಜಪ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ Read More »

ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆಗಮನವಾಗಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಅಲರ್ಟ್

ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಯಲ್ಲೋ ಅಲರ್ಟ್ ಘೋಷಣೆ Read More »

ರಾಜ್ಯ ಸರಕಾರದ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ

ಪುತ್ತೂರು: ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ “ಶಕ್ತಿ” ಯೋಜನೆಗೆ ಭಾನುವಾರ ನಗರದ ಕೋಟಿ-ಚೆನ್ನಯ  ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಕಿಕ್ಕಿರಿದು ತುಂಬಿದ ಮಹಿಳೆಯರು, ಸಾರ್ವಜನಿಕರು ಈ ಐತಿಹಾಸಿಕ ಯೋಜನೆಗೆ ಸಾಕ್ಷಿಯಾದರು. ಉದ್ಘಾಟನೆಗೆ ಮುನ್ನ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ಬ್ಯಾಂಡ್ ವಾದ್ಯದ ಮೂಲಕ ವೇದಿಕೆಗೆ ಕರೆ ತರಲಾಯಿತು. ಬಳಿಕ ದೀಪ ಬೆಳಗಿಸುವ ಮೂಲಕ ಶಾಸಕರು “ಶಕ್ತಿ” ಯೋಜನೆಗೆ ಚಾಲನೆ ನೀಡಿದರು. ಸಮಾರಂಭದ ಉದ್ಘಾಟನೆ

ರಾಜ್ಯ ಸರಕಾರದ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ Read More »

ಪುತ್ತೂರು ಸರಕಾರಿ ಆಸ್ಪತ್ರೆಗಳ ಸೌಲಭ್ಯ ಹೆಚ್ಚಿಸಿ | ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೆಲವೊಂದು ಸೌಲಭ್ಯಗಳ ಕೊರತೆ ಇದ್ದು ಆಕೊರತೆಯನ್ನು ನೀಗಿಸಿ ಜನರಿಗೆ ಸೇವೆ ನೀಡುವಲ್ಲಿ ವ್ಯವಸ್ಥೆಯನ್ನು ಕೈಗೊಳ್ಳುವಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾನ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದರು. ಸಾಮಾನ್ಯ ಮಹಿಳಾ ರೋಗಿಗಳಿಗೆ ಕೊಠಡಿ ವ್ಯವಸ್ಥೆ, ೫೦ ಹಾಸಿಗೆಗಳನ್ನು ಹಾಕುವಲ್ಲಿ ನೂತನ ಕೊಠಡಿಯನ್ನು ನಿರ್ಮಾಣ ಮಾಡುವುದು, ಆಸ್ಪತ್ರೆಯ ಆವರಣದ ಬಾಕಿ ಇರುವಲ್ಲಿ ಇಂಟರ್‌ಲಾಕ್ ಅಳವಡಿಸುವುದು, ರಕ್ತ ಶೇಖರಣಾ ಘಟಕದ ನವೀಕರಣ ಮಾಡುವುದು, ಆಸ್ಪತ್ರೆಯಲ್ಲಿ

ಪುತ್ತೂರು ಸರಕಾರಿ ಆಸ್ಪತ್ರೆಗಳ ಸೌಲಭ್ಯ ಹೆಚ್ಚಿಸಿ | ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ Read More »

error: Content is protected !!
Scroll to Top