ಸವಣೂರು ವಿದ್ಯಾರಶ್ಮಿಯಲ್ಲಿ ಶಾಲಾ ಪ್ರಾರಂಭೋತ್ಸವ, ಸವಣೂರು ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬ

ಸವಣೂರು: ಎಸ್.ಎನ್.ಆರ್.ರೂರಲ್ ಎಜುಕೇನಲ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬ ಜೂ.9ರಂದು ನಡೆಯಿತು. ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಭಾಗೀರಥಿ ಮುರುಳ್ಯ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಎನ್.ಸುಂದರ ರೈ ,ಕಸ್ತೂರಿ ಕಲಾ ಸೀತಾರಾಮ ರೈ […]

ಸವಣೂರು ವಿದ್ಯಾರಶ್ಮಿಯಲ್ಲಿ ಶಾಲಾ ಪ್ರಾರಂಭೋತ್ಸವ, ಸವಣೂರು ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬ Read More »

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು | ಜೂನ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ

ಬೆಂಗಳೂರು :  ವಿದ್ಯಾರ್ಥಿಗಳು ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿದ್ದು,  ಮೇ 20 ಮತ್ತು 21 ರಂದು ನಡೆದ ಪರೀಕ್ಷೆಯ ಫಲಿತಾಂಶ ಜೂನ್ ಎರಡನೇ ವಾರದ ವೇಳೆಗೆ ಪ್ರಕಟವಾಗುವ ನಿರೀಕ್ಷೆಯಿದೆ. KCET ಫಲಿತಾಂಶವನ್ನು ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ cetonline.karnataka.gov.in ಮೂಲಕ ತಿಳಿದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಲಾಗಿನ್ ವಿವರಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಕೆಸಿಇಟಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಪ್ರತಿ ವರ್ಷ ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದ್ದು, ಈ ಬಾರಿ KEA

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು | ಜೂನ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ Read More »

ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ದ.ಕ.ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿ ನಿವಾಸಿ ಬಾಲಕೃಷ್ಣ (58) ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಕರುಳು ಹಾಗೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕರ್ತವ್ಯ ಮಾಡುತ್ತಿದ್ದರು. ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೃತರ ಪುತ್ರ ಚೇತನ್ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಯುವಕನಿಂದ ವಿದ್ಯಾರ್ಥಿನಿಗೆ ಕಿರುಕುಳ : ಯುವಕನನ್ನು ಕರೆದೊಯ್ದ ನಗರ ಠಾಣಾ ಪೊಲೀಸರು

ಪುತ್ತೂರು: ಯುವಕನೋರ್ವ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಗುರುವಾರ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆ ಕುರಿತು ಪೊಲೀಸರು ಯುವಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಯುವಕನಿಂದ ವಿದ್ಯಾರ್ಥಿನಿಗೆ ಕಿರುಕುಳ : ಯುವಕನನ್ನು ಕರೆದೊಯ್ದ ನಗರ ಠಾಣಾ ಪೊಲೀಸರು Read More »

ಇಂದು ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನದ ಲೋಕಾರ್ಪಣೆ | ಜಮ್ಮುವಿನ ಅತೀ ದೊಡ್ಡ ದೇವಾಲಯಗಳಲ್ಲಿ ಒಂದಾಗಿರುವ ದೇವಾಲಯ

ಜಮ್ಮು: ಜಮ್ಮು ಮತ್ತು ಕಾಶ್ಮೀರ್ ಮಜೀನ್‍ನ ಶಿವಾಲಿಕ್ ಕಾಡುಗಳ ಮಧ್ಯೆ ಇರುವ ಸುಂದರವಾದ ತಿರುಪತಿ ಬಾಲಾಜಿ ದೇವಾಲಯ ಇಂದು ಉದ್ಘಾಟನೆಗೊಳ್ಳಲಿದೆ. ಜೂ.8 ರಂದು ಭಕ್ತಾದಿಗಳಿಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶ್ರೀ ವೆಂಕಟೇಶ್ವರ ದೇವಾ;ಲಯವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಸುಮಾರು 62 ಎಕ್ರೆ ಜಾಗದಲ್ಲಿ ನಿರ್ಮಿಸಲಾದ ಈ ದೇವಸ್ಥಾನ ಜಮ್ಮು ಪ್ರದೇಶದ ಅತೀ ದೊಡ್ಡ ದೇವಾಲಯಗಳಲ್ಲಿ ಒಂದಾಗಲಿದೆ. ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ತಿರುಪತಿ ಬಾಲಾಜಿ ದೇವಾಲಯ ಆಂಧ್ರಪ್ರದೇಶದ

ಇಂದು ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನದ ಲೋಕಾರ್ಪಣೆ | ಜಮ್ಮುವಿನ ಅತೀ ದೊಡ್ಡ ದೇವಾಲಯಗಳಲ್ಲಿ ಒಂದಾಗಿರುವ ದೇವಾಲಯ Read More »

ಸವಣೂರು ಸೀತಾರಾಮ ರೈ 76ನೇ ವರ್ಷದ ಹುಟ್ಟುಹಬ್ಬ | ನಾಳೆ (ಜೂನ್ 9) ಸವಣೂರು ವಿದ್ಯಾರಶ್ಮಿ ಆವರಣದಲ್ಲಿ ಆಚರಣೆ

ಸವಣೂರು: ಸವಣೂರಿನ ಶಿಲ್ಪಿ ಸವಣೂರು ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬದ ಸಂಭ್ರಮ ಜೂನ್ 9ರಂದು ನಡೆಯಲಿದೆ. ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಭಾಗೀರಥಿ ಮುರುಳ್ಯ ಅವರನ್ನು ಗೌರವಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸವಣೂರು ಸೀತಾರಾಮ ರೈ ಅವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಗುವುದು. ಇದೇ ಸಂದರ್ಭ ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸವಣೂರು ಸೀತಾರಾಮ ರೈ 76ನೇ ವರ್ಷದ ಹುಟ್ಟುಹಬ್ಬ | ನಾಳೆ (ಜೂನ್ 9) ಸವಣೂರು ವಿದ್ಯಾರಶ್ಮಿ ಆವರಣದಲ್ಲಿ ಆಚರಣೆ Read More »

ದೈಪಿಲ ಕ್ರೀಡಾ ಸೇವಾ  ಸಂಘದಿಂದ ಶ್ರಮದಾನ

ಪುತ್ತೂರು: ದೈಪಿಲ ಕ್ರೀಡಾ ಸೇವಾ ಸಂಘದವರು ವಿದ್ಯುತ್ ಕಂಬಳಿಗೆ ತಾಕುವ ಮರಗಳನ್ನು ಶ್ರಮದಾನದ ಮೂಲಕ ತೆರವುಗೊಳಿಸಿದರು. ಕಾಪೆಜಾಲಿನಿಂದ ನಾನಿಲ ತನಕ ಎಚ್‍ ಟಿ ಲೈನ್‍ಗಳನ್ನು ಸ್ಪರ್ಶಿಸುವ ಮರದ ಗೆಲ್ಲುಗಳನ್ನು ಕಡಿದು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ದೈಪಿಲ ಕ್ರೀಡಾ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ದೈಪಿಲ ಕ್ರೀಡಾ ಸೇವಾ  ಸಂಘದಿಂದ ಶ್ರಮದಾನ Read More »

ಗೋಪಾಲಕೃಷ್ಣ ಶಗ್ರಿತ್ತಾಯ ನಿಧನ

ಪುತ್ತೂರು: ಶಾಂತಿಗೋಡು ಪುಂಡಿಕಾಯಿ ಯ ಜ್ಯೋತಿಷಿ, ನಿವೃತ್ತ ಶಿಕ್ಷಕ, ಮಕ್ಕಳ ಸಾಹಿತಿ,ಯಕ್ಷಗಾನ ಅರ್ಥಧಾರಿ,ಯಕ್ಷಗಾನ ಮಕ್ಕಳ ಮೇಳ ಸಂಘಟಕ ,ಕನ್ನಡ ರತ್ನ  ಗೋಪಾಲಕೃಷ್ಣ ಶಗ್ರಿತ್ತಾಯ (87) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಬೆಳಗ್ಗೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ರಾಮಕುಂಜ ಓರಿಯಂಟಲ್ ಹೈಸ್ಕೂಲ್ ನಲ್ಲಿ ಅಧ್ಯಾಪನ ವೃತ್ತಿ ಆರಂಭಿಸಿದ ಅವರು ನಂತರ ಪಡುಬೆಟ್ಟು ,ಹೊಸ್ತೋಟ, ಶಿರಾಡಿ ಮುಂತಾದ ಶಾಲೆಗಳಲ್ಲಿ ಮುಖ್ಯ ಶಿಕ್ಷಕರಾಗಿ ಶಿಕ್ಷಕ ವೃತ್ತಿ ನಡೆಸಿ ನಿವೃತ್ತರಾಗಿದ್ದರು. ಯಕ್ಷಗಾನ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಹನ್ನೆರಡು ವರ್ಷದೊಳಗಿನ ಬಾಲಕಲಾವಿದರುಗಳನ್ನೇ ಸಂಘಟಿಸಿ

ಗೋಪಾಲಕೃಷ್ಣ ಶಗ್ರಿತ್ತಾಯ ನಿಧನ Read More »

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಯುಜಿ ಲೆವೆಲ್ ಫೆಸ್ಟ್  ಉದ್ಘಾಟನೆ.

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ  ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಯುಜಿ ಲೆವೆಲ್ ಫೆಸ್ಟ್ “ಕೃತ್ವ 2023” ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ಜಯಂತ್ ದೀಪ ಬೆಳಗಿಸಿ ಉದ್ಘಾಟಿಸಿ, ಟ್ರೋಪಿಗಳನ್ನು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಕುಳಾಯಿ ಫೌಂಡೇಶನ್ ಸ್ಥಾಪಕಾಧ್ಯಕ್ಷೆ ಪ್ರತಿಭಾ ಕುಳಾಯಿ ಮಾತನಾಡಿ, ವಿದ್ಯಾರ್ಥಿಗಳು  ಶಿಕ್ಷಣದ ಮಹತ್ವವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೈಗೂಡಿಸಿಕೊಳ್ಳಬೇಕಾದ ನೈತಿಕತೆಯನ್ನು ತಿಳಿ ಹೇಳಿದರು. ಮತ್ತೋರ್ವ ಅತಿಥಿ ಕೆನರಾ

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಯುಜಿ ಲೆವೆಲ್ ಫೆಸ್ಟ್  ಉದ್ಘಾಟನೆ. Read More »

ಜೂ.13 : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ಷಯಮುಕ್ತ ಭಾರತ ಮಾಹಿತಿ ಶಿಬಿರ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಕ್ಷಯಮುಕ್ತ ಭಾರತ-ಮಾಹಿತಿ ಶಿಬಿರ ಜೂ.13 ಮಂಗಳವಾರ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೆರವೇರಿಸಲಿದ್ದು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದಿಕ್ ನಿರಾಜೆ ಅಧ್ಯಕ್ಷತೆ ವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ದ.ಕ.ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಬದ್ರುದ್ದೀನ್, ಮಂಗಳೂರು ಕ್ಷಯರೋಗ ನಿಯಂತ್ರಣಾಧಿಕಾರಿ ಕಚೇರಿ ಸಂಯೋಜಕ ಮನೋಜ್ ಮಾಹಿತಿ ನೀಡಲಿದ್ದಾರೆ. ಮುಖ್ಯ

ಜೂ.13 : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ಷಯಮುಕ್ತ ಭಾರತ ಮಾಹಿತಿ ಶಿಬಿರ Read More »

error: Content is protected !!
Scroll to Top