ಪ್ರಚೋದನಕಾರಿ ಭಾಷಣದ ಆರೋಪ ಜೆಡಿಎಸ್ ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು : ನಟಿ, ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶ್ರುತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್​ ಆರೋಪ ಮಾಡಿದೆ. ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್​​ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್​ಗೆ ಮತ […]

ಪ್ರಚೋದನಕಾರಿ ಭಾಷಣದ ಆರೋಪ ಜೆಡಿಎಸ್ ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆದಂಬಾಡಿ ಗ್ರಾಮದ ಗುತ್ತು ಎಂಬಲ್ಲಿ ಎ. 7 ರಂದು ಸಂಭವಿಸಿದೆ. ಯಶವಂತ ಜಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಇವರು ಎ. 5 ರ ರಾತ್ರಿ ತನ್ನ ಅಣ್ಣನ ಮೊಬೈಲ್ ಗೆ ಕರೆ ಮಾಡಿ ಮಾತನಾಡಿದ್ದು, ಆ ಬಳಿಕ ಕರೆ ಮಾಡಿದರೂ ಸ್ವೀಕರಿಸದೇ, ತನ್ನ ಮನೆಗೂ ಬಾರದೇ, ಎ. 7 ರ ಸಂಜೆ ಕೆದಂಬಾಡಿ ಗ್ರಾಮದ ಗುತ್ತು ಎಂಬಲ್ಲಿ ಮ್ಯಾಂಜಿಯಮ್ ಮರಕ್ಕೆ ನೈಲಾನ್

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ Read More »

ಪ್ರಧಾನಿ ಮೋದಿಯಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ

ಹೈದರಾಬಾದ್ : ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು.ಹೈದರಾಬಾದ್’ಗೆ ಬೇಟಿ ನೀಡಿರುವ ಮೋದಿಯವರು, ಸಿಕಂದರಾಬಾದ್ ರೈಲು ನಿಲ್ದಾಣದಿಂದ ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿ, ಬಳಿಕ ಸ್ಟೇಷನರಿ ರೈಲು ಹತ್ತಿದ ಮೋದಿಯವರು ಶಾಲಾ ಮಕ್ಕಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತೆಲಂಗಾಣದ ಸಿಕಂದರಾಬಾದ್ ಮತ್ತು ನೆರೆಯ ಆಂಧ್ರಪ್ರದೇಶದ ತಿರುಪತಿ ನಡುವಿನ ಪ್ರಯಾಣದ ಸಮಯವನ್ನು ಸುಮಾರು ಮೂರೂವರೆ ಗಂಟೆಗಳಷ್ಟು ಕಡಿಮೆ ಮಾಡುತ್ತದೆ.

ಪ್ರಧಾನಿ ಮೋದಿಯಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ Read More »

ಸೋಷಿಯಲ್ ಮೀಡಿಯಾ, ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿರುವ ‘ನಂದಿನಿ ಉಳಿಸಿ-ಅಮುಲ್ ತಿರಸ್ಕರಿಸಿ’ ಅಭಿಯಾನ

ಬೆಂಗಳೂರು : ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿದ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಈ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ, ಮಾಧ್ಯಮಗಳಲ್ಲಿ ನಂದಿನಿ ಉಳಿಸಿ ಅಭಿಯಾನ ಜೋರು ಸದ್ದು ಮಾಡುತ್ತಿದೆ. ಹಾಲು ಮತ್ತು ಮೊಸರಿನ ರೂಪದಲ್ಲಿ ಹೊಸ ತಾಜಾತನವನ್ನು ಅಮುಲ್ ತರುತ್ತಿದೆ. ಆನ್ ಲೈನ್

ಸೋಷಿಯಲ್ ಮೀಡಿಯಾ, ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿರುವ ‘ನಂದಿನಿ ಉಳಿಸಿ-ಅಮುಲ್ ತಿರಸ್ಕರಿಸಿ’ ಅಭಿಯಾನ Read More »

ಸತತ ನಾಲ್ಕು ದಿನಗಳ ರಜೆಯ ಹಿನ್ನೆಲೆ ದೇವಸ್ಥಾನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನಸಾಗರ

​​ಗೋ ಗರ್ಭ ಅಣೆಕಟ್ಟು ದಾಟಿದ ತಿಮ್ಮಪ್ಪನ ದರ್ಶನದ ಸಾಲು ಕೊಲ್ಲೂರು ಶ್ರೀ ಮೂಕಾಂಬಿಕೆ ಕ್ಷೇತ್ರದಲ್ಲಿ ಸಾಲುಗಟ್ಟಿ ನಿಂತ ಭಕ್ತಸಮೂಹ ಪುತ್ತೂರು : ರಜೆಯ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತಜನಸಾಗರವೇ ಹರಿದು ಬರುತ್ತಿದೆ. ಈ ವಾರಾಂತ್ಯದಲ್ಲಿ ಬರೋಬ್ಬರಿ ನಾಲ್ಕು ದಿನಗಳ ರಜೆ ಇರುವುದರಿಂದ ಅಧಿಕ ಸಂಖ್ಯೆಯಲ್ಲಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ತಿರುಮಲದಲ್ಲಿ ದೇವರ ದರ್ಶನಕ್ಕೆ ಎರಡು ದಿನ ಬೇಕಾಗುವುದರಿಂದ ಟ್ರಾಫಿಕ್ ಅನ್ನು ಗಮನದಲ್ಲಿಟ್ಟುಕೊಂಡು ಭಕ್ತರು ತಮ್ಮ ಪ್ರವಾಸವನ್ನು ಯೋಜಿಸಬೇಕೆಂದು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಕೋರಿದೆ. ತಿರುಮಲ

ಸತತ ನಾಲ್ಕು ದಿನಗಳ ರಜೆಯ ಹಿನ್ನೆಲೆ ದೇವಸ್ಥಾನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನಸಾಗರ Read More »

ಕೆಎಂಎಫ್​​ನ ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ, ಕಾಂಗ್ರೆಸ್ ಅಮುಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ : ಸಿಎಂ ಬೊಮ್ಮಾಯಿ

ದೆಹಲಿ : ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬ್ರ್ಯಾಂಡ್ ನಂದಿನಿ ಯ ಜಾಗಕ್ಕೆ ಗುಜರಾತ್ ಮೂಲದ ಅಮೂಲ್ ನ್ನು ತರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಈಗ ಬಹುಚರ್ಚಿತ ವಿಷಯ. ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಎಂಎಫ್​​ನ ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್. ನಂದಿನಿ ಬ್ರ್ಯಾಂಡ್ ದೇಶದಲ್ಲಿ

ಕೆಎಂಎಫ್​​ನ ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ, ಕಾಂಗ್ರೆಸ್ ಅಮುಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ : ಸಿಎಂ ಬೊಮ್ಮಾಯಿ Read More »

ಆಮ್ ಆದ್ಮಿ ರಾಷ್ಟ್ರಾದ್ಯಂತ ಸ್ಪರ್ಧೆ | ದ.ಕ.ದ 5 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಪುತ್ತೂರು: ಆಮ್‍ ಆದ್ಮಿ ಪಕ್ಷ ಕಳೆದ 10 ವರ್ಷಗಳಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ರಾಷ್ಟ್ರಾದ್ಯಂತ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಈಗಾಗಲೇ ದ.ಕ.ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಅಭ್ಯರ್ಥಿಯ ಪಟ್ಟಿ ಪ್ರಕಟಗೊಳಿಸಲಾಗಿದೆ ಎಂದು ಆಮ್‍ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್‍ ಎಡಮಲೆ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಪುತ್ತೂರಿನ ಸರಕಾರ ಆಸ್ಪತ್ರೆ ಮೇಲ್ದರ್ಜೆ ಸಹಿತ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬೆಂಬಲ ನೀಡುವ ಮೂಲಕ ಗುಣಮಟ್ಟದ ಆರೋಗ್ಯ ಹಾಗೂ ಶಿಕ್ಷಣ ಒದಗಿಸುವ

ಆಮ್ ಆದ್ಮಿ ರಾಷ್ಟ್ರಾದ್ಯಂತ ಸ್ಪರ್ಧೆ | ದ.ಕ.ದ 5 ಅಭ್ಯರ್ಥಿಗಳ ಪಟ್ಟಿ ಪ್ರಕಟ Read More »

ಡಿವೈಡರ್‌ ಗೆ ಕಾರು ಡಿಕ್ಕಿ : ನಂದರಬೆಟ್ಟು ಸದಾಶಿವ ಆಚಾರ್ಯ ಮೃತ್ಯು

ಬಂಟ್ವಾಳ : ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎ. 7 ರಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ಸಂಭವಿಸಿದೆ. ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ (77) ಎಂಬವರೇ ಮೃತಪಟ್ಟ ವ್ಯಕ್ತಿ. ಮಂಗಳೂರು – ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ಸದಾಶಿವ ಆಚಾರ್ಯ ಮೃತಪಟ್ಟು, ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ

ಡಿವೈಡರ್‌ ಗೆ ಕಾರು ಡಿಕ್ಕಿ : ನಂದರಬೆಟ್ಟು ಸದಾಶಿವ ಆಚಾರ್ಯ ಮೃತ್ಯು Read More »

ಮಂಗಳೂರು : ಮೂರು ಶೂಟೌಟ್‌ ಪ್ರಕರಣದಲ್ಲಿ ಬನ್ನಂಜೆರಾಜ ಖುಲಾಸೆ

ಮಂಗಳೂರು : ಕುಖ್ಯಾತ ಪಾತಕಿ ಬನ್ನಂಜೆರಾಜನ ವಿರುದ್ದ ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಖುಲಾಸೆಗೊಂಡಿದೆ. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರೂ ಪ್ರಕರಣಗಳಲ್ಲಿ ಖುಲಾಸೆಗೊಳಿಸಿ ತೀರ್ಪು ನೀಡಿದೆ.ಈತನ ವಿರುದ್ದ ಪಾಂಡೇಶ್ವರ ಪೊಲೀಸ್‌ ಠಾಣೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂರೂ ಪ್ರಕರಣಗಳಲ್ಲಿ ಪೊಲೀಸರು ತನಿಖೆ ನಡೆಸಿ ಬನ್ನಂಜೆರಾಜ ಮತ್ತು ಆತನ ಸಹಚರರ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಘಟನೆಗಳ ವೇಳೆಯಲ್ಲಿ ಬನ್ನಂಜೆರಾಜ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. 2015 ನೇ ಇಸವಿಯಲ್ಲಿ

ಮಂಗಳೂರು : ಮೂರು ಶೂಟೌಟ್‌ ಪ್ರಕರಣದಲ್ಲಿ ಬನ್ನಂಜೆರಾಜ ಖುಲಾಸೆ Read More »

ಪುತ್ತೂರಿನಲ್ಲಿ ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ

ಪುತ್ತೂರು:  ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್‌ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್ಗಳಲ್ಲಿಯೂ ಗುಡ್‌ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು. ಕಲ್ವಾರಿ ಬೆಟ್ಟದ ಮೇಲೆ ಪ್ರಭು ಕ್ರಿಸ್ತರು ಮನುಕುಲದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ದಿನವನ್ನು ಶುಭ ಶುಕ್ರವಾರವನ್ನಾಗಿ ಆಚರಿಸಲಾಗುತ್ತದೆ. ಆ ದಿನದಂದು ಜಗತ್ತಿನಾದ್ಯಂತ ಕ್ರೈಸ್ತ ದೇವಾಲಯಗಳಲ್ಲಿ ಬಲಿಪೂಜೆಗಳು ಇರುವುದಿಲ್ಲ. ಆದರೆ ಅರ್ಥವತ್ತಾದ ಆರಾಧನೆ ಮತ್ತು ಪ್ರಾರ್ಥನೆಗಳು ಶುಕ್ರವಾರ ಬೆಳಿಗ್ಗೆಯಿಂದಲೇ ಆಯಾ ಚರ್ಚ್ ಗಳಲ್ಲಿ ನಡೆಯುತ್ತದೆ.

ಪುತ್ತೂರಿನಲ್ಲಿ ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ Read More »

error: Content is protected !!
Scroll to Top