ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ 6.5 ರಲ್ಲೇ ಮುಂದುವರಿಕೆ |ಸಾಲಗಾರರಿಗೆ ಬಿಗ್ ರಿಲೀಫ್

ದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್​ ರೆಪೋ ದರವನ್ನು 6.5 ಶೇಕಡಾದಲ್ಲಿಯೇ ಮುಂದುವರಿಸಲು ನಿರ್ಧಾರ ಕೈಗೊಂಡಿದ್ದು, ಪರಿಣಾಮ ಸಾಲಗಾರರಿಗೆ ಬಿಗ್​ ರಿಲೀಫ್​ ಸಿಕ್ಕಂತಾಗಿದೆ. ಆರ್‍ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಹಣದುಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ಬಡ್ಡಿದರ ಏರಿಕೆ ಮಾಡುವ ಪ್ರಮೇಯ ಬರಲಿಲ್ಲ. ಆದರೆ ಹಣದುಬ್ಬರ ಇಳಿಕೆಯಾಗಿದ್ದರೂ ಸಹ ಸಮಾಧಾನಕರ ಸ್ಥಿತಿಗೆ ನಾವು ಬಂದಿಲ್ಲ. ನಮ್ಮ ಗುರಿ ಇನ್ನೂ ಮೇಲ್ಮಟ್ಟದಲ್ಲಿದೆ. ಹೀಗಾಗಿ ನಾವು ಹಣದುಬ್ಬರದ ಬಗ್ಗೆ ಅರ್ಜುನನ ಕಣ್ಣಿಡಬೇಕು ಎಂದು ಹೇಳಿದ್ದಾರೆ. ಕಳೆದ ಮೂರು […]

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ 6.5 ರಲ್ಲೇ ಮುಂದುವರಿಕೆ |ಸಾಲಗಾರರಿಗೆ ಬಿಗ್ ರಿಲೀಫ್ Read More »

ಪ್ರೇಯಸಿಯನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ, ಕುಕ್ಕರಿನಲ್ಲಿ ಬೇಯಿಸಿದ

ಮುಂಬಯಿ: ವ್ಯಕ್ತಿಯೊಬ್ಬ ಸಂಗಾತಿಯನ್ನು ಕೊಂದು ದೇಹವನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ ಬರ್ಬರ ಕೃತ್ಯ ಮುಂಬಯಿಯ ಮಿರಾರೋಡ್ನಲ್ಲಿ ಸಂಭವಿಸಿದೆ.ಆರೋಪಿ ಮನೋಜ್ ಸಹಾನಿಯನ್ನು (56) ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಲಿವ್ ಇನ್ ಪಾರ್ಟ್ನರ್ ಸಂಗಾತಿಯನ್ನೇ ಬರ್ಬರವಾಗಿ ಸಾಯಿಸಿದ್ದಾನೆ. ಸರಸ್ವತಿ ವೈದ್ಯ (36) ಹತ್ಯೆಯಾಗಿರುವ ಮಹಿಳೆ. ಪೊಲೀಸರು ಬಂದು ಬಾಗಿಲು ತೆರೆದು ಮನೆಯೊಳಗೆ ಹೋದಾಗ ಕೊಳೆತ ಸ್ಥಿತಿಯಲ್ಲಿದ್ದ ದೇಹದ ತುಂಡುಗಳು ಎಲ್ಲೆಂದರಲ್ಲಿ ಬಿದ್ದುಕೊಂಡಿದ್ದವು. ಕೊಲೆ ನಡೆದ ಮೂರ್ನಾಲ್ಕು ದಿನಗಳ ಬಳಿಕ ಇದು ಹೊರಜಗತ್ತಿಗೆ ತಿಳಿದುಬಂದಿದೆ. ಮನೋಜ್

ಪ್ರೇಯಸಿಯನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ, ಕುಕ್ಕರಿನಲ್ಲಿ ಬೇಯಿಸಿದ Read More »

ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ?

ಬೆಂಗಳೂರು: ಚುನಾವಣೆಯ ಬಳಿಕ ಮೊದಲ ಬಾರಿಗೆ ಬಿಜೆಪಿ ಗುರುವಾರ ಸಂಜೆ ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದೆ.ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ

ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ? Read More »

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ | ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ಪರಿಣಾಮ ಮೂವರು ಸಜೀವ ದಹನ

ಮಣಿಪುರ: ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಆಂಬುಲೆನ್ಸ್ ಒಂದಕ್ಕೆ ಬೆಂಕಿ ಹಚ್ಚಿದೆ ಪರಿಣಾಮ ಮೂವರು ಸಜೀವ ದಹನಗೊಂಡ ಘಟನೆ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಏಳು ವರ್ಷದ ಗಾಯಾಳು ಬಾಲಕ, ಆತನ ತಾಯಿ ಹಾಗೂ ಮತ್ತೊಬ್ಬ ಮಹಿಳೆ ಸೇರಿದಂತೆ ಮೂವರು ದಹನಗೊಂಡಿದ್ದಾರೆ. ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಮೀಸಲಾತಿ ಬಗ್ಗೆ ಘರ್ಷಣೆಗಳು ನಡೆಯುತ್ತಿದೆ.

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ | ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ಪರಿಣಾಮ ಮೂವರು ಸಜೀವ ದಹನ Read More »

ಪುತ್ತೂರು: ದ.ಕ. : ಹೆಚ್ಚುತ್ತಿರುವ ಹೃದಯ ಕಾಯಿಲೆ : ತಪಾಸಣೆಗೆ ಹೃದಯ ವೈಶಾಲ್ಯ ವಿನೂತನ ಕಾರ್ಯಕ್ರಮ | ಜೂ.14ರಂದು ಕೊಳ್ತಿಗೆ ,ಜೂ. 21ರಂದು ವಿಟ್ಲ ಆರೋಗ್ಯ ಕೇಂದ್ರಗಳು ಕೇಂದ್ರದಲ್ಲಿ ಹೃದಯ ವೈಶಾಲ್ಯ 

ಪುತ್ತೂರು :  ಗ್ರಾಮೀಣ ಜನರ ಆರೋಗ್ಯ ಕಾಳಜಿಗೆ ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆಗಳು, ಹೃದಯಾಘಾತದ ಪ್ರಕರಣಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ‘ಹೃದಯ ವೈಶಾಲ್ಯ’ ಎಂಬ ವಿನೂತನ ಕಾರ್ಯಕ್ರಮ ಆಯೋಜನೆಗೊಂಡಿದೆ. ದ.ಕ.ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾರ್ಡಿಯಾಲಜಿ ಎಟ್ ಡೋರ್‌ಸ್ಟೆಪ್ ಫೌಂಡೇಷನ್ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕಾರ್ಡಿಯಾಲಜಿ ಎಟ್ ಡೋರ್‌ಸ್ಟೆಪ್ ಫೌಂಡೇಷನ್ ಜಿಲ್ಲೆಯ ವಿವಿಧೆಡೆಗಳ ಆರೋಗ್ಯ ಕೇಂದ್ರಗಳಿಗೆ 135 ಇಸಿಜಿ ಯಂತ್ರಗಳನ್ನು ಉಚಿತವಾಗಿ ಪೂರೈಸಿದೆ. ಇದರಿಂದಾಗಿ ಗ್ರಾಮೀಣ ಜನರು ಹೃದಯ

ಪುತ್ತೂರು: ದ.ಕ. : ಹೆಚ್ಚುತ್ತಿರುವ ಹೃದಯ ಕಾಯಿಲೆ : ತಪಾಸಣೆಗೆ ಹೃದಯ ವೈಶಾಲ್ಯ ವಿನೂತನ ಕಾರ್ಯಕ್ರಮ | ಜೂ.14ರಂದು ಕೊಳ್ತಿಗೆ ,ಜೂ. 21ರಂದು ವಿಟ್ಲ ಆರೋಗ್ಯ ಕೇಂದ್ರಗಳು ಕೇಂದ್ರದಲ್ಲಿ ಹೃದಯ ವೈಶಾಲ್ಯ  Read More »

ಇಂದು (ಜೂ.8)  :ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್-ಕಾಲೇಜು ಫೆಸ್ಟ್

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಕಾಲೇಜುಗಳ ಅಂತರ್-ಕಾಲೇಜು ಮ್ಯಾನೇಜ್ಮೆಂಟ್ ಹಾಗೂ ಸಾಂಸ್ಕೃತಿಕ ಫೆಸ್ಟ್ ‘ಕೃತ್ವ ‘ಜೂ.8 ರಂದು ಕಾಲೇಜಿನಲ್ಲಿ ಜರಗಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಫೈನಾನ್ಸ್ ಆಫೀಸರ್ ಪ್ರೊ|ವೈ ಸಂಗಪ್ಪರವರು ಫೆಸ್ಟ್ ಅನ್ನು ದೀಪ ನ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಚೇರ್ ಮ್ಯಾನ್ ಜಯಂತ್ ನಡುಬೈಲುರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಮಾಜಿ  ಕಾರ್ಪೋರೇಟರ್ ಹಾಗೂ ಕುಳಾಯಿ ಫೌಂಡೇಶನ್ ನ

ಇಂದು (ಜೂ.8)  :ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್-ಕಾಲೇಜು ಫೆಸ್ಟ್ Read More »

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್ ರವರಿಗೆ ಮನವಿ ಮಾಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸಚಿವರ ಬಳಿ ತೆರಳಿದ ಶಾಸಕರು ಸಚಿವರ ಜೊತೆ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀರ್ಘ ಮತುಕತೆ ನಡೆಸಿದರು. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸ್ ಕೇಂದ್ರವನ್ನು ತಕ್ಷಣವೇ ಆರಂಭಿಸಬೇಕಿದೆ. ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಿ, ಮೂರು ಡಯಾಲಿಸಿಸ್

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ Read More »

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ | ರಾಷ್ಟ್ರೀಯ. ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಮಾಣಿ-ಮೈಸೂರು ರಾ. ಹೆದ್ದಾರಿ 257 ರ ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಭಾರತ ಪ್ರಾಂತೀಯ (ನ್ಯಾಷನಲ್ ಹೈವೇ ಸೌತ್ ಇಂಡಿಯಾ ಝೋನ್) ಅಧಿಕಾರಿ ಮಹೇಂದ್ರ ಶರ್ಮ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾನಿಯಿಂದ ಪುತ್ತೂರು ತನಕ ಚತುಷ್ಪಥ ಕಾಮಗಾರಿ ಆರಂಭದಲ್ಲಿ ನಡೆಸುವಂತೆ

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ | ರಾಷ್ಟ್ರೀಯ. ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಮನವಿ Read More »

ಕೊಯಿಲ ಪರಿಸರದಲ್ಲಿ ಅಕ್ರಮ ಕಸಾಯಿಖಾನೆ : ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯ

ಕಡಬ: ತಾಲೂಕಿನ ಕೊÊಲ ಗ್ರಾಮದಲ್ಲಿ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಿಸುತ್ತಿದ್ದು, ಪರಿಸರದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಎಸೆಯಲಾಗುತ್ತಿ..  ಗೋಳಿತ್ತಡ- ಏಣಿತಡ್ಕ ರಸ್ತೆಯ ತ್ರಿವೇಣಿ ಸರ್ಕಲ್ ಬಳಿ ದನದ ಕಾಲಿನ ಎಲುಬು ಮಂಗಳವಾರ ಪತ್ತೆಯಾಗಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿರುವುದಕ್ಕೆ ಪುಷ್ಠಿ ನೀಡಿದೆ. ಗ್ರಾಮದ ಕುದುಳೂರು, ಕೊರೆಪದವು, ಕಲಾಯಿ, ಕೊಯಿಲ ಗೇಟ್ ಬಳಿ, ಜನತಾ ಕಾಲೋನಿ, ಆತೂರು ಬೈಲು, ಪೂರಿಂಗ ಮುಂತಾದೆಡೆ ಅಕ್ರಮ ಕಸಾಯಿಖಾನೆಗಳು ಕಾಯಾಚರಿಸುತ್ತಿದ್ದು, ಅಕ್ರಮವಾಗಿ ಗೋವಧೆ ನಿರಂತರವಾಗಿ ನಡೆಯುತ್ತಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ರಾತ್ರೋ ರಾತ್ರಿ ಗೋವುಗಳನ್ನು

ಕೊಯಿಲ ಪರಿಸರದಲ್ಲಿ ಅಕ್ರಮ ಕಸಾಯಿಖಾನೆ : ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯ Read More »

ಪುತ್ತೂರು, ಕಡಬ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ಪುತ್ತೂರು ಹಾಗೂ ಕಡಬ ತಾಲೂಕಿನ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆ ನೇಮಕಾತಿಗಾಗಿ ಜೂ.8ರಿಂದ 22ರವರೆಗೆ ಅರ್ಜಿ ಆಹ್ವಾನಿಸಲಾಗಿದೆ. ಪುತ್ತೂರು ತಾಲೂಕಿನ ಬನ್ನೂರು, ಕಡಬ ತಾಲೂಕಿನ ಕೊಣಾಜೆ ಹಾಗೂ ನೆಲ್ಯಾಡಿ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆ ಖಾಲಿ ಇದ್ದು, ಅರ್ಹ ವಿಕಲಚೇತನ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಜೂ.22ರಂದು ಅಪರಾಹ್ನ 5.30ರೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಶೇ.40ರಷ್ಟು ಅಂಗವಿಕಲತೆ 18

ಪುತ್ತೂರು, ಕಡಬ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ Read More »

error: Content is protected !!
Scroll to Top