ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ

ಚಿಕ್ಕಮಗಳೂರು : ಟಿಕೆಟ್​ ಖಚಿತ ಎಂದು ಭರವಸೆ ಸಿಕ್ಕ ಮೇಲೆಯೇ ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈಎಸ್​ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್​ ತಪ್ಪಿದೆ. ಕಾಂಗ್ರಸ್ ಸಿಗುತ್ತೆ ಎಂದು ಬಹಳ ನಿರೀಕ್ಷೆಗಳೊಂದಿಗೆ ದತ್ತಾ ಜೆಡಿಎಸ್ ಬಿಟ್ಟುಬಂದಿದ್ದರು. ಆದ್ರೆ, ಅಂತಿಮವಾಗಿ ಕಾಂಗ್ರೆಸ್​, ಆನಂದ್​ ಅವರಿಗೆ ಮಣೆ ಹಾಕಿದೆ. ಇದರಿಂದ ದತ್ತಾ ಅಸಮಾಧಾನಗೊಂಡಿದ್ದು, ಅಭಿಮಾನಿಗಳಿಗೆ ಒಂದು ಬಹಿರಂಗಪತ್ರ ಬರೆದಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.ನನ್ನ ಮತ್ತು […]

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ Read More »

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ

ಮೈಸೂರು : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ. ಇವರು ಮೂವರು ಪುತ್ರರನ್ನು ಅಗಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ Read More »

ಏ. 23 : ರಾಮನಿಗೆ 155 ದೇಶದ ನದಿಗಳ ನೀರಿನಿಂದ ‘ಜಲಾಭಿಷೇಕ’

ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಂದ ಜಲಾಭಿಷೇಕ ಅಯೋಧ್ಯೆ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏ.23 ರಂದು 155 ದೇಶಗಳ ನದಿಗಳ ನೀರಿನಿಂದ ಅಯೋಧ್ಯೆಯಲ್ಲಿ ರಾಮಲಲ್ಲಾ ದೇವರಿಗೆ ‘ಜಲಾಭಿಷೇಕ’ ನಡೆಸಲಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.ದಿಲ್ಲಿಯ ರಾಮ ಭಕ್ತ ವಿಜಯ್ ಜಾಲಿ ನೇತೃತ್ವದ ತಂಡ 155 ದೇಶಗಳ ನದಿಗಳ ನೀರನ್ನು ಆದಿತ್ಯನಾಥ್‌ಗೆ ಹಸ್ತಾಂತರಿಸಲಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 2024ರ

ಏ. 23 : ರಾಮನಿಗೆ 155 ದೇಶದ ನದಿಗಳ ನೀರಿನಿಂದ ‘ಜಲಾಭಿಷೇಕ’ Read More »

ವಿಮಾನ ಲ್ಯಾಂಡಿಂಗ್‌ ವೇಳೆ ತೊಡಕು

ಪ್ರಯಾಣಿಕರು ಪಾರು ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವ ವೇಳೆ ತೊಡಕು ಉಂಟಾದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದ ಇಂಡಿಗೋ 6E6858 ವಿಮಾನ ಲ್ಯಾಂಡಿಂಗ್‌ ಆಗುವ ವೇಳೆ ತೊಂದರೆ ಉಂಟಾಗಿದೆ. ಈ ವೇಳೆ ಮತ್ತೊಮ್ಮೆ ವಿಮಾನವನ್ನು ಟೇಕ್‌ ಆಫ್‌ ಮಾಡಿ ಪುನಃ ಲ್ಯಾಂಡ್‌ ಮಾಡಲಾಗಿದೆ. ಪ್ರಯಾಣಿಕರು ಸುರಕ್ಷಿತವಾಗಿ ಬಂದಿಳಿದಿದ್ದಾರೆ.

ವಿಮಾನ ಲ್ಯಾಂಡಿಂಗ್‌ ವೇಳೆ ತೊಡಕು Read More »

ರೈಲ್ವೇ ಟ್ರ್ಯಾಕಿನಲ್ಲಿ ಪತ್ತೆಯಾಯ್ತು KSRTC ಚಾಲಕನ ಮೃತದೇಹ!

ಪುತ್ತೂರು: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕಿನಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಕುಸುಮಾಧರ ಗೌಡ ಅಭೀರ (34 ವ.) ಎಂಬವರ ಮೃತದೇಹ ಇದಾಗಿದೆ. ಗುರುವಾರ ರಾತ್ರಿ ಕರ್ತವ್ಯದಿಂದ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು. ಶುಕ್ರವಾರ ಬೆಳಿಗ್ಗೆ ಮೃತದೇಹ ರೈಲ್ವೇ ಟ್ರ್ಯಾಕಿನಲ್ಲಿ ಪತ್ತೆಯಾಗಿದೆ. ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕುಸುಮಾಧರ ಕೆಲಸ ನಿರ್ವಹಿಸುತ್ತಿದ್ದರು. 1 ವರ್ಷದ ಹಿಂದೆ ವಿವಾಹವಾಗಿದ್ದರು. ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೈಲ್ವೇ ಟ್ರ್ಯಾಕಿನಲ್ಲಿ ಪತ್ತೆಯಾಯ್ತು KSRTC ಚಾಲಕನ ಮೃತದೇಹ! Read More »

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಏ.9ರ ನಂತರ ಪ್ರಕಟ

ಅಂತಿಮ ಹಂತದ ಆಯ್ಕೆ ಪ್ರಕ್ರಿಯೆ ದಿಲ್ಲಿಯಲ್ಲಿ ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಏ.9 ರಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ಪಕ್ಷದ ಕೇಂದ್ರ

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಏ.9ರ ನಂತರ ಪ್ರಕಟ Read More »

ನೈಸರ್ಗಿಕ ಅನಿಲ ದರ ನಿಗದಿಗೆ ಹೊಸ ಮಾನದಂಡ – ಗ್ಯಾಸ್‌ ಬೆಲೆ ಕಡಿಮೆಯಾಗಲಿದೆ

ಸಿಎನ್‌ಜಿ ವಾಹನ ಬಳಸುವವರಿಗೆ ಅನುಕೂಲ ದೆಹಲಿ : ನೈಸರ್ಗಿಕ ಅನಿಲದ ದರ ನಿಗದಿಗಪಡಿಸುವ ಹೊಸ ಮಾನದಂಡ ಜಾರಿ ಮಾಡಲು ಕೇಂದ್ರ ಒಪ್ಪಿಗೆ ನೀಡಿದೆ. ಈ ಮಾನದಂಡ ಜಾರಿಗೆ ಬಂದ ಬಳಿಕ ಗೃಹ ಬಳಕೆಯ ಪಿಎನ್‌ಜಿ ಮತ್ತು ವಾಹನಗಳಿಗೆ ಬಳಸುವ ಸಿಎನ್‌ಜಿ ತೈಲದ ದರ ಶೇ. 10ರ ವರೆಗೆ ಕಡಿಮೆಯಾಗಲಿದೆ.ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ಹಲವು ಮಹತ್ವದ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗುವ ಬೆಲೆ ಏರಿಳಿತಗಳಿಂದ ಭಾರತದ ಗ್ರಾಹಕರನ್ನು ರಕ್ಷಿಸಲು ಇದು ನೆರವಾಗಲಿದೆ. ಹೊಸ ಮಾರ್ಗದರ್ಶಿ

ನೈಸರ್ಗಿಕ ಅನಿಲ ದರ ನಿಗದಿಗೆ ಹೊಸ ಮಾನದಂಡ – ಗ್ಯಾಸ್‌ ಬೆಲೆ ಕಡಿಮೆಯಾಗಲಿದೆ Read More »

ಆರೋಗ್ಯ ಧಾರಾ- ಬೇಸಿಗೆಯಲ್ಲಿ ದೇಹ ತಂಪಾಗಿಡುವುದು…

ಬಿಸಿಲಿನ ತಾಪ ಏರಿದಂತೆ ನಮ್ಮ ದೇಹ ಅದಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತದೆ. ಸೆಕೆಗಾಲದಲ್ಲಿ ವಾತ ದೋಷವು ಉಲ್ಬಣಗೊಳ್ಳುತ್ತದೆ. ಅಲ್ಪ ಶರೀರ ಬಲ ಹಾಗೂ ದುರ್ಬಲ ಜೀರ್ಣ ಶಕ್ತಿಯಿಂದ ದೇಹವು ಜರ್ಜರಿತವಾಗುತ್ತದೆ. ಇದನ್ನೆಲ್ಲಾ ತಡೆಯಲು ಇಲ್ಲಿದೆ ಕೆಲವು ಟಿಪ್ಸ್• ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಪ್ರಖರ ಸೂರ್ಯ ಕಿರಣವಿರುವುದರಿಂದ ಆದಷ್ಟು ಬಿಸಿಲಿನಲ್ಲಿ ಸಮಯ ಕಳೆಯಬೇಡಿ. ಅನಿವಾರ್ಯವಿದ್ದರೆ ತಲೆಗೆ ಕ್ಯಾಪ್ ಅಥವಾ ಛತ್ರಿಯನ್ನು ಉಪಯೋಗಿಸಿ. ಕಣ್ಣಿಗೆ ಗಾಗಲ್ ಹಾಕಿ. ತಿಳಿ ಬಣ್ಣದ ಬಟ್ಟೆಯನ್ನು ಧರಿಸಿ. ಹತ್ತಿ ಬಟ್ಟೆಯನ್ನು ಧರಿಸಿದರೆ

ಆರೋಗ್ಯ ಧಾರಾ- ಬೇಸಿಗೆಯಲ್ಲಿ ದೇಹ ತಂಪಾಗಿಡುವುದು… Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಕಾರ್ಯಕ್ರಮಗಳ ಉದ್ಘಾಟನೆ, ಅತಿಥಿ ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವೇದಿಕೆ ಆಶ್ರಯದಲ್ಲಿ ವಿಜ್ಞಾನ ವೇದಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಪುತ್ತೂರಿನ ದಂತ ವೈದ್ಯ ಡಾ| ಎಲ್‌. ಕೃಷ್ಣಪ್ರಸಾದ್‌ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ವಂ|ಡಾ| ಆಂಟನಿ ಪ್ರಕಾಶ್‌ ಮೊಂತೆರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕ್ಯಾಂಪಸ್‌ ನಿರ್ದೇಶಕ ವಂ| ಸ್ಟ್ಯಾನಿ ಪಿಂಟೋ ಶುಭ ಹಾರೈಸಿದರು. ಬಳಿಕ ಡಾ.ಎಲ್‌ ಕೃಷ್ಣಪ್ರಸಾದ್‌ʼದಂತ ವೈದ್ಯಕೀಯ ಮತ್ತು ರಸಾಯನ ಶಾಸ್ತ್ರ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಕಾರ್ಯಕ್ರಮಗಳ ಉದ್ಘಾಟನೆ, ಅತಿಥಿ ಉಪನ್ಯಾಸ Read More »

ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚನೆ : ಆರೋಪಿ ಬಂಧನ

ಮಂಗಳೂರು : ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, 30ಕ್ಕೂ ಹೆಚ್ಚು ಮಂದಿಗೆ ವಂಚಿಸಿ, 50 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಆರೋಪದ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಿಜೈ ಮೂಲದ ಸುಧೀರ್ ರಾವ್ ವಿ ಆರ್. ಬಲ್ಗೇರಿಯಾದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಹಲವರಿಂದ 50 ಲಕ್ಷ ರೂ.ಗೂ ಹೆಚ್ಚು ಹಣವನ್ನು ವಸೂಲಿ ಮಾಡಿದ್ದನು. ಹಣ ಪಡೆದಿದ್ದ ಆತ ನಂತರ ವೀಸಾ ಕೊಡಿಸಿಲ್ಲ ಅಥವಾ ಹಣವನ್ನು ಹಿಂದಿರುಗಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿ

ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚನೆ : ಆರೋಪಿ ಬಂಧನ Read More »

error: Content is protected !!
Scroll to Top