ಕಡಬ ತಾಲೂಕು ಕಛೇರಿಯಲ್ಲಿ 5 ತಿಂಗಳಾದರೂ ವಿಲೇವಾರಿವಾಗದ 94ಸಿ ಕಡತ! ಪ್ರಶ್ನಿಸಿದ ಪತ್ರಕರ್ತನಿಗೆ ದಬಾಯಿಸಿದ ತಾಲೂಕು ಕಛೇರಿ ಸಿಬ್ಬಂದಿ

ಕಡಬ: ಕಡಬ ತಾಲೂಕು ಕಚೇರಿಯಲ್ಲಿ ವಿಲೇವಾರಿಯಾಗದೆ ಉಳಿದ 94 ಸಿ ಕಡತದ ಬಗ್ಗೆ ವಿಚಾರಿಸಲು ತೆರಳಿದ ಪತ್ರಕರ್ತರಿಗೆ ಕಡತ ವಿಲೇವಾರಿ ಸಿಬಂದಿ ಅನುಚಿತವಾಗಿ ವರ್ತಿಸಿದ ಅರೋಪ ವ್ಯಕ್ತವಾಗಿದೆ.  ಕಳೆದ 5 ತಿಂಗಳ ಹಿಂದೆ ಸುಬ್ರಹ್ಮಣ್ಯದ ಮಹಿಳೆಯೋರ್ವರು 94 ಸಿ ಅರ್ಜಿ ಸಲ್ಲಿಸಿದ್ದರು.  ಬಳಿಕ ಕುಂಟುತ್ತಾ ಸಾಗುತ್ತಾ ವಿಲೇವಾರಿಯಾಗಲಿಲ್ಲ. ಈ ಬಗ್ಗೆ ಸುಬ್ರಹ್ಮಣ್ಯ ಗ್ರಾಮದ ಕಡತ ವಿಲೇವಾರಿ ಮಾಡುವ ಸಿಬ್ಬಂದಿ ಬಳಿ ತೆರಳಿ  ಕಡಬದ ಪತ್ರಕರ್ತರೋರ್ವರು  ವಿಚಾರಿಸುವ  ವೇಳೆ  ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಾರೆ. ಪತ್ರಕರ್ತರು ಎಂದು ಪರಿಚಯಿಸಿಕೊಂಡು ಇಲ್ಲಿಗೆ […]

ಕಡಬ ತಾಲೂಕು ಕಛೇರಿಯಲ್ಲಿ 5 ತಿಂಗಳಾದರೂ ವಿಲೇವಾರಿವಾಗದ 94ಸಿ ಕಡತ! ಪ್ರಶ್ನಿಸಿದ ಪತ್ರಕರ್ತನಿಗೆ ದಬಾಯಿಸಿದ ತಾಲೂಕು ಕಛೇರಿ ಸಿಬ್ಬಂದಿ Read More »

ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ (23) ಹೃದಯಾಘಾತದಿಂದ ಮೇ 31ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಮೂಲತಃ ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿಯಾಗಿರುವ ಇವರನ್ನು ಚಿಕ್ಕಮಗಳೂರಿಗೆ ವಿವಾಹ ಮಾಡಿಕೊಡಲಾಗಿತ್ತು. ಕೆಲ ದಿನಗಳಿಂದ ಹೃದಯ ನೋವಿನಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ. ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆದುಕೊಂಡಿದ್ದು, ಆ ಸಂದರ್ಭ ಸಾಲಿಯಾತ್ ಅವರು ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿಯಾಗಿ ಗಮನ ಸೆಳೆದಿದ್ದರು.

ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ Read More »

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ| ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮತ್ತೊಮ್ಮೆ ಚುರುಕು ಪಡೆದ ಎನ್.ಐ.ಎ. ದಾಳಿ

ಮಂಗಳೂರು: ಪ್ರವೀಣ್ ನೆಟ್ಟಾರು‌ ಪ್ರಕರಣದ ಬಳಿಕ ಉಗ್ರ ಕೃತ್ಯಗಳ ಜಾಡು‌ ಹಿಡಿದಿರುವ ಎನ್.ಐ.ಎ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಮಿಂಚಿನ ದಾಳಿ ನಡೆಸಿದೆ.  ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ| ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮತ್ತೊಮ್ಮೆ ಚುರುಕು ಪಡೆದ ಎನ್.ಐ.ಎ. ದಾಳಿ Read More »

ಆಲಂಕಾರು ಶ್ರೀ ಭಾರತಿ ಹಿ.ಪ್ರಾ. ಶಾಲೆಯಲ್ಲಿ 6-8ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

ಕಡಬ: ವ್ಯವಹಾರಿಕ ದೃಷಿಕೋನದಿಂದ ಆಂಗ್ಲ ಮಾಧ್ಯಮ ಶಿಕ್ಷಣ ಅಗತ್ಯವಾಗಿದೆ ಎಂದು ನಂಬಿರುವ ಕಾಲಘಟ್ಟದಲ್ಲಿ ಶಿಕ್ಷಣದೊಂದಿಗೆ ಭಾರತೀಯ ಸಂಸ್ಕಾರ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು. ಭಾರತೀಯತೆಯ ಮೂಲ ತತ್ತ್ವವನ್ನು ಉಳಿಸಿಕೊಂಡು ಸಮಾಜದ ಪ್ರಗತಿಯ ವೇಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ನೀಡುವುದು ಶಿಕ್ಷಣ ಸಂಸ್ಥೆಗಳ ಜವಬ್ದಾರಿಯಾಗಿದೆ ಎಂದು  ಮಂಗಳೂರು ಶಾರದಾ ಗ್ರೂಪ್ ಆಫ್ ಇನ್ಸ್ಸ್ಟಿಟ್ಯೂಷನ್ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಹೇಳಿದರು. ಆಲಂಕಾರು ಗ್ರಾಮದ ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ರಿಂದ 8ನೇ ತರಗತಿಯವರೆಗಿನ ಆಂಗ್ಲ ಮಾಧ್ಯಮ ಶಿಕ್ಷಣ ತರಗತಿ ಉದ್ಘಾಟಿಸಿ

ಆಲಂಕಾರು ಶ್ರೀ ಭಾರತಿ ಹಿ.ಪ್ರಾ. ಶಾಲೆಯಲ್ಲಿ 6-8ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ Read More »

ಅಕ್ಷಯ ಕಾಲೇಜಿನಲ್ಲಿ “ಯಕ್ಷಸಿಂಚನ” ಯಕ್ಷಗಾನ ಕಲಾ ಸಂಘ ಉದ್ಘಾಟನೆ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಯಕ್ಷಗಾನ ಕಲಾ ಸಂಘ “ಯಕ್ಷಸಿಂಚನ“ ಉದ್ಘಾಟನೆಗೊಂಡಿತು. ಹನುಮಗಿರಿ ಯಕ್ಷಗಾನ ಮೇಳದ ಖ್ಯಾತ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಉದ್ಘಾಟಿಸಿ, ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು. ಗೆಜ್ಜೆಗಿರಿ ಮೇಳದ ಪ್ರಧಾನ ಭಾಗವತ ಗಿರೀಶ್ ರೈ ಕಕ್ಕೆಪದವು ಮುಖ್ಯ ಅಥಿತಿಗಳಾಗಿ ಶುಭಕೋರಿದರು. ಈ ಸಂದರ್ಭದಲ್ಲಿ ಭಾಗವತರಾದ ರವಿಚಂದ್ರ  ಕನ್ನಡಿಕಟ್ಟೆ ಮತ್ತು ಗಿರೀಶ್ ರೈ ಕಕ್ಕೆಪದವು ತಮ್ಮ ಸುಮಧುರ ಕಂಠದಿಂದ ಭಾಗವತಿಕೆ ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಕಾಲೇಜಿನ

ಅಕ್ಷಯ ಕಾಲೇಜಿನಲ್ಲಿ “ಯಕ್ಷಸಿಂಚನ” ಯಕ್ಷಗಾನ ಕಲಾ ಸಂಘ ಉದ್ಘಾಟನೆ Read More »

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಗೆ ಸಿದ್ಧತೆ!

ಬೆಂಗಳೂರು: ಕಾಂಗ್ರೆಸ್ ನೀಡಿದ ಭರವಸೆಯಂತೆ ಕರ್ನಾಟಕ ರಾಜ್ಯದ ಸಾರಿಗೆ ನಿಗಮಗಳ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಬಗ್ಗೆ ವರದಿ ಸಿದ್ಧವಾಗಿದೆ. ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಗ್ಯಾರಂಟಿಗಳು ಖಂಡಿತ ಈಡೇರುತ್ತವೆ. ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವೆಂದು ಹೇಳಿದ್ದೇವೆ. ಅದನ್ನು ಈಡೇರಿಸುತ್ತೇವೆ’ ಎಂದರು. ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಗೆ ಸಿದ್ಧತೆ! Read More »

ನಾಳೆ (ಮೇ 31) :ಸವಣೂರು ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ತಪಾಸಣೆ

ಸವಣೂರು:ಸವಣೂರು ಗ್ರಾಮ ಪಂಚಾಯಿತಿಯ ಕುಮಾರಧಾರ ಸಭಾಂಗಣದಲ್ಲಿ ಗ್ರಾ.ಪಂ.ನ ಆರೋಗ್ಯ ಅಮೃತ ಅಭಿಯಾನದಡಿ ಆರೋಗ್ಯ ಇಲಾಖಾ ವತಿಯಿಂದ ಆರೋಗ್ಯ ತಪಾಸಣೆ ಮೇ 31 ಬುಧವಾರ ನಡೆಯಲಿದೆ. ಶಿಬಿರದಲ್ಲಿ ಹಲವು ರೋಗಗಳಿಗೆ ಸಂಬಂಧಿಸಿದ ತಪಾಸಣೆ ನಡೆಸಲಾಗುವುದು. ಆರೋಗ್ಯ ತಪಾಸಣೆಯಲ್ಲಿ ನರೇಗ ಯೋಜನೆ ಕೂಲಿಕಾರರು, ಸಾರ್ವಜನಿಕರು, ಸ್ತ್ರೀಶಕ್ತಿ ಒಕ್ಕೂಟದವರು ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳುವಂತೆ ಗ್ರಾ.ಪಂ.ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಮೇ 31) :ಸವಣೂರು ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ತಪಾಸಣೆ Read More »

ನರಿಮೊಗರು : ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದೀಕ್ಷಾ ಸಮಾರಂಭ

ನರಿಮೊಗರು: ಇಲ್ಲಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ  ಶೈಕ್ಷಣಿಕ  ವರ್ಷದ  ನೂತನ  ವಿದ್ಯಾರ್ಥಿಗಳಿಗೆ  ದೀಕ್ಷಾ  ಸಮಾರಂಭ  ಹಾಗೂ  ಶಾಲಾ  ಪ್ರಾರಂಭೋತ್ಸವ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಯತೀಶ್‌ ಅರ್ವಾರ ಮಾತನಾಡಿ, ನಾವು ಶಾಲೆಯಲ್ಲಿ ಹೇಳುವಂತಹ ಶ್ಲೋಕಕ್ಕೆ ಪೂರಕವಾದ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿ ನೂತನ ಶೈಕ್ಷಣಿಕ ವರ್ಷಕ್ಕೆ ಶುಭಾಶಯ ಕೋರಿದರು. ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ್‌ ಆಚಾರ್‌ ಹಿಂದಾರು ಮಾತನಾಡಿ, ನಾವು  ಆಯ್ಕೆ  ಮಾಡಿಕೊಂಡ ಯಾವುದೇ ಕ್ಷೇತ್ರವಿರಲಿ  ಭವಿಷ್ಯತ್ತಿನಲ್ಲಿ  ಯಾರಿಗೂ  ತೊಂದರೆ  ಕೊಡದಂತಹ  ವ್ಯಕ್ತಿಗಳಾಗಿ ಬೆಳಗಬೇಕು. ಇನ್ನೊಬ್ಬರಿಗೆ ಸಹಾಯಹಸ್ತ ನೀಡುವ ವ್ಯಕ್ತಿಗಳಾಗಿ ಸಮಾಜಕ್ಕೆ ಮಾದರಿಯಾಗಿರಬೇಕು ಎಂದು ಹೇಳಿ  ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ಮಾತನಾಡಿ, ರಾಮ-ಕೃಷ್ಣರ  ಹಾಗೆ  ಶ್ರಮ ಪಟ್ಟು  ಉತ್ತಮ  ಸಾಧನೆ  ಮಾಡಿ 

ನರಿಮೊಗರು : ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದೀಕ್ಷಾ ಸಮಾರಂಭ Read More »

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ

ಕಾಸರಗೋಡು: ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ದಾಸ್ತಾನು ಇಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಮಹಮ್ಮದ್ ಮುಸ್ತಫಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 7 ಸಾವಿರ ಡಿಟೋನೇಟರ್‌ಗಳು, 2,800 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳು ದಿನನಿತ್ಯದಂತೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಮ್ಮದ್ ಮುಸ್ತಫಾ ಎಂಬವನ ವಾಹನದಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ನಂತರ ಅವನ ಮನೆಗೆ ತೆರಳಿದಾಗ ಅಲ್ಲಿ

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ Read More »

ಮನೆ ಮೇಲೆ ಮರಬಿದ್ದು ಅಪಾರ ಹಾನಿ

ಕಡಬ: ಸೋಮವಾರ ರಾತ್ರಿ ಬೀಸಿದ ಗಾಳಿ, ‌ಸಿಡಿಲು ಸಹಿತ ಮಳೆಗೆ ಕಡಬ ತಾಲೂಕಿನ ಕೊಡಿಂಬಾಳ ಗ್ರಾಮದ ಪೆಲತ್ತೊಡಿ ಗಣೇಶ್ ಎಂಬವರ ಮನೆಗೆ ಹಾನಿಯಾಗಿದೆ. ಮನೆ ಸಮೀಪದ ಮರವೊಂದು ಮನೆ ಮೇಲೆ ಬಿದ್ದಿದೆ. ವಿದ್ಯುತ್ ಕಂಬದ ಮೇಲೂ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಮನೆ ಮೇಲೆ ಬಿದ್ದಿದೆ. ಮನೆ ಬಾಗಶಃ ಹಾನಿಯಾಗಿದೆ. ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ಪರಿಸರದ ವಿವಿದೆಡೆ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು ಹಾನಿಯಾಗಿದೆ.

ಮನೆ ಮೇಲೆ ಮರಬಿದ್ದು ಅಪಾರ ಹಾನಿ Read More »

error: Content is protected !!
Scroll to Top