ಬೆಳಂದೂರು ಗ್ರಾ.ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಕಡಬ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸದುಪಯೋಗವನ್ನು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮಕ್ಕಳು ಪಡೆದುಕೊಳ್ಳಬೇಕು. ಆ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಲಿ ಎಂದು ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಹೇಳಿದರು. ಅವರು ಬೆಳಂದೂರು ಗ್ರಾ.ಪಂ. ಗ್ರಂಥಾಲಯ ವತಿಯಿಂದ ಬೆಳಂದೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕುದ್ಮಾರು ಶಾಲಾ ಮುಖ್ಯಶಿಕ್ಷಕ  ಕುಶಾಲಪ್ಪ ಗೌಡ ಅವರು ಮಾಹಿತಿ ನೀಡಿದರು. ಗ್ರಾ. ಪಂ. ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಸದಸ್ಯರಾದ […]

ಬೆಳಂದೂರು ಗ್ರಾ.ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ Read More »

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ

ಕಡಬ: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜೂ ೧೧ರಿಂದ ಜೂ ೧೩ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಕ್ಷೇತ್ರದಲ್ಲಿ ಸುದರ್ಶನ ಹೋಮ ಹಾಗೂ ಉಚ್ಚಾಟನ ಹೋಮ  ನಡೆಯಿತು. ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬಳ್ಳುಕ್ಕುರಾಯ ಇವರ ನೇತೃತ್ವದಲ್ಲಿ ವೈದಿಕ ವಿಧಿವಿಧಾನ ನೆರವೇರಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಆಡಳಿತ ಮೊಕ್ತೇಸರ

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ Read More »

ಕಾಣಿಯೂರು: ಗ್ರಾಮೀಣ ಮಕ್ಕಳ ಬೇಸಿಗೆ  ಶಿಬಿರ

ಕಡಬ: ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸದುಪಯೋಗವನ್ನು ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಮಕ್ಕಳು ಪಡೆದುಕೊಳ್ಳಬೇಕು. ಆ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಬೇಕು ಎಂದು ಕಾಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ ಹೇಳಿದರು. ಕಾಣಿಯೂರು ಗ್ರಾ.ಪಂ. ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಕಾಣಿಯೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾ.ಪಂ. ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ವಸಂತ ಪೆರ್ಲೋಡಿ, ಗ್ರಾ.ಪಂ.

ಕಾಣಿಯೂರು: ಗ್ರಾಮೀಣ ಮಕ್ಕಳ ಬೇಸಿಗೆ  ಶಿಬಿರ Read More »

ಆನೆ ಹಾವಳಿಯಿಂದ ರಕ್ಷಣೆ ನೀಡಲು ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು : ಬಿ.ಎಂ.ಭಟ್ ಆಗ್ರಹ

ಪುತ್ತೂರು: ಕಡಬ ತಾಲೂಕಿನಲ್ಲಿ ನಿರಂತರ ಆನೆ ಹಾವಳಿಯಿಂದ ಜನರು ಜೀವಭಯದಿಂದ ಬದುಕುವಂತಾಗದ್ದು, ರಕ್ಷಣೆ ಒದಗಿಸಲು ಸರಕಾರು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಬಿ.ಎಂ.ಭಟ್ ಸರಕಾರವನ್ನು ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವಅವರು, ಜನರ ಜೀವಕ್ಕೆ ಅಪಾಯವಾಗುತ್ತಿರುವುದು ನಮ್ಮಕಣ್ಣ ಮುಂದೇ ಇದ್ದರೂ ಅದರ ಬಗ್ಗೆ ಸರಕಾರ ಗಮನ ನೀಡದಿರುವುದು ಖಂಡನೀಯ. ಬಿಜೆಪಿ ಸರಕಾರ ಆನೆ ತಡೆಗೆ ಯಾವುದೇ ವ್ಯವಸ್ಥೆ ಮಾಡದೇ ಜನರ ಸಾವಿಗೆ ಕಾರಣವಾಗಿತ್ತು. ಇದೀಗ ಪುನಃ ಆನೆ ದಾಳಿ

ಆನೆ ಹಾವಳಿಯಿಂದ ರಕ್ಷಣೆ ನೀಡಲು ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು : ಬಿ.ಎಂ.ಭಟ್ ಆಗ್ರಹ Read More »

ಅಭಿಮಾನಿಗಳಿಗೆ ಅಶೋಕ್ ರೈ ಬುದ್ಧಿವಾದ ಹೇಳಲಿ | ಸುಳ್ಯದ ಪ್ರಮಿತ್ ರಾವ್ ಮನೆಗೆ ಭೇಟಿ ನೀಡಿ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಫೇಸ್ ಬುಕ್ ಬರವಣಿಗೆಯನ್ನು ಆಕ್ಷೇಪಿಸಿ ಅಶೋಕ್ ಕುಮಾರ್ ರೈ ಅವರ ಅಭಿಮಾನಿಗಳು ಹೆಂಗಸು – ಮಕ್ಕಳಿರುವ ಮನೆಗೆ ಭೇಟಿ ನೀಡಿ ಜಗಳ ಮಾಡಿದ್ದು, ಇದು ಸರಿಯಾದ ಕ್ರಮವಲ್ಲ. ಆ ಅಭಿಮಾನಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಬುದ್ಧಿವಾದ ಹೇಳಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಸುಳ್ಯದ ಜಯನಗರ ನಿವಾಸಿ ಪ್ರಮೀತ್ ರಾವ್ ಅವರು ಫೇಸ್ ಬುಕಿನಲ್ಲಿ ಬರಹ ಬರೆದಿದ್ದು, ಇದನ್ನು ಆಕ್ಷೇಪಿಸಿ ಅಶೋಕ್ ಕುಮಾರ್ ರೈ ಅಭಿಮಾನಿಗಳು ಮೇ 24ರಂದು ತಡರಾತ್ರಿ

ಅಭಿಮಾನಿಗಳಿಗೆ ಅಶೋಕ್ ರೈ ಬುದ್ಧಿವಾದ ಹೇಳಲಿ | ಸುಳ್ಯದ ಪ್ರಮಿತ್ ರಾವ್ ಮನೆಗೆ ಭೇಟಿ ನೀಡಿ ಶಾಸಕಿ ಭಾಗೀರಥಿ ಮುರುಳ್ಯ Read More »

ಕೊಯಿಲದ ಯುವಕ  ವಿದೇಶದಲ್ಲಿ ಆತ್ಮಹತ್ಯೆ

ಕಡಬ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ  ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿರಾಷ್ಟ್ರದ  ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು

ಕೊಯಿಲದ ಯುವಕ  ವಿದೇಶದಲ್ಲಿ ಆತ್ಮಹತ್ಯೆ Read More »

24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ 4 ಕೂಟ ದಾಖಲೆ ಸಹಿತ 16 ಚಿನ್ನದ ಪದಕ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆಯಲ್ಲಿ ೪ ನೂತನ ಕೂಟ ದಾಖಲೆಗಳ ಸಹಿತ 16 ಚಿನ್ನದ ಪದಕ, 11 ಬೆಳ್ಳಿಯ ಪದಕ ಮತ್ತು 11 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಮಹಿಳೆಯರ ವಿಭಾಗದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ, ಮಹಿಳೆಯರ ವಿಭಾಗದ ಚಾಂಪಿಯನ್‌ ಶಿಪ್ ಟ್ರೋಫಿ, ಪುರುಷರ ವಿಭಾಗದ ಚಾಂಪಿಯನ್‌ನಲ್ಲಿ ಪ್ರಥಮ ರನ್ನರ್ ಅಪ್ ಟ್ರೋಫಿ ಹಾಗೂ ಕೂಟದ ಸಮಗ್ರ

24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ 4 ಕೂಟ ದಾಖಲೆ ಸಹಿತ 16 ಚಿನ್ನದ ಪದಕ Read More »

ಮುರುಳ್ಯ: ಯಶಸ್ವಿಯಾಗಿ ನಡೆದ ಬೇಸಗೆ ಶಿಬಿರ, ಶಾಸಕಿಗೆ ಅಭಿನಂದನೆ

ಕಾಣಿಯೂರು: ಮುರುಳ್ಯ ಗ್ರಾಮ ಪಂಚಾಯಿತಿಯ ಬೇಸಗೆ ಶಿಬಿರವು ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು. ಶಿಬಿರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಾನಕಿ ಮುರುಳ್ಯ ಉದ್ಘಾಟಿಸಿದ್ದು, ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಕ್ರೀಯಾಶೀಲ ಮಕ್ಕಳಿಗೆ ಬಹುಮಾನ ನೀಡಿ ಪುರಸ್ಕರಿಸಲಾಯಿತು. ಗ್ರಾಮ ಪಂಚಾಯಿತಿಯ ಅಮೃತ ಸರೋವರ ಪೂದೆಕೆರೆ, ಸಂಜೀವಿನಿ ಸದಸ್ಯೆಯರ ಹೈನುಗಾರಿಕೆ, ಮಲ್ಲಿಗೆ ಕೃಷಿ ಹಾಗೂ ವಿಶೇಷ ಚೇತನ ನವೀನ ಕಳತ್ತಜೆ ಅವರ ಜೇನುಕೃಷಿ ಮತ್ತಿತರ ಸ್ಥಳೀಯ ಕೃಷಿ ಉದ್ಯಮಗಳ ವೀಕ್ಷಣೆಗೆ ಹೊರಸಂಚಾರ ಚಟುವಟಿಕೆಯನ್ನು ನಡೆಸಲಾಯಿತು. ಶಿಬಿರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದ್ದು, ಅವರನ್ನು

ಮುರುಳ್ಯ: ಯಶಸ್ವಿಯಾಗಿ ನಡೆದ ಬೇಸಗೆ ಶಿಬಿರ, ಶಾಸಕಿಗೆ ಅಭಿನಂದನೆ Read More »

ಶಿವಮಣಿ ಕಲಾವಿದರ ಹುಟ್ಟುಹಬ್ಬ ಸಂಭ್ರಮಾಚರಣೆ

ಪುತ್ತೂರು: ಇಲ್ಲಿನ ನೆಹರುನಗರದ ಶಿವನಗರ ಶಿವಮಣಿ ಕಲಾ ಸಂಘದ ವತಿಯಿಂದ ಕಲಾವಿದರ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಭಾನುವಾರ ಆಚರಿಸಲಾಯಿತು. ಶಿವಮಣಿ ಬಾಲ ಸಮಿತಿಯ ಮುಂದಿನ ಯೋಜನೆಗಳು ಹಾಗೂ ಕಾರ್ಯವೈಖರಿಯನ್ನು ಸಭೆಯ ಮುಂದಿಟ್ಟ ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್, ಉತ್ತಮ ಸಂಘಟನೆ, ಹೊಸ ಹುರುಪು, ಆತ್ಮವಿಶ್ವಾಸ, ಪ್ರಾಮಾಣಿಕತೆ ನಮ್ಮ ಜೀವನದ ಯಶಸ್ಸಿನ ಸೂತ್ರಗಳು. ಈ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕಲೆ, ‘ಕಲಿಕೆ’ ಹಾಗೂ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಸಂಘದ ಉಪಾಧ್ಯಕ್ಷ, ಕಲಾವಿದ ಕೃಷ್ಣಪ್ಪ ಶಿವಾಮಣಿ ಅವರು

ಶಿವಮಣಿ ಕಲಾವಿದರ ಹುಟ್ಟುಹಬ್ಬ ಸಂಭ್ರಮಾಚರಣೆ Read More »

ಮಣಿಪುರ: ಹಿಂಸಾ ನಿರತ 40 ಕುಕಿ ಉಗ್ರರ ಹತ್ಯೆಗೈದ ಕಮಾಂಡೋ

ಹೊಸದಿಲ್ಲಿ : ಮಣಿಪುರದಲ್ಲಿ ಹಿಂಸಾಚಾರ ನಡೆಸುತ್ತಿರುವ ಕುಕಿ ಉಗ್ರರನ್ನು ನಿಗ್ರಹಿಸಲು ಅಲ್ಲಿನ ಪೊಲೀಸ್ ಪಡೆಯ ಕಮಾಂಡೋಗಳು ಉಗ್ರ ಕಾರ್ಯಾಚರಣೆ ನಡೆಸಿದ್ದಾರೆ. ಭಾನುವಾರ ಬೆಳಗ್ಗಿನಿಂದ ಮಣಿಪುರದ ವಿವಿಧೆಡೆ ಕಮಾಂಡೊಗಳು ಸಾಕಷ್ಟು ದಂಗೆಕೋರರನ್ನು ಹತ್ಯೆಗೈಯುವಲ್ಲಿ ಸಫಲರಾಗಿದ್ದಾರೆ. ಸುಮಾರು 40 ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಿಳಿಸಿದ್ದಾರೆ. ಈ ಉಗ್ರರು ಎಂ-16 ಮತ್ತು ಎಕೆ-47 ರೈಫಲ್​ಗಳು ಮತ್ತು ಸ್ನೈಪರ್ ಗನ್​ಗಳನ್ನು ಜನಸಾಮಾನ್ಯರ ಮೇಲೆ ಉಪಯೋಗಿಸುತ್ತಿದ್ದಾರೆ. ಹಳ್ಳಿಗಳಿಗೆ ಹೋಗಿ ಮನೆಗಳನ್ನು ಸುಟ್ಟುಹಾಕುತ್ತಿದ್ದಾರೆ. ನಮ್ಮ ಸೇನೆ ಮತ್ತು ಭದ್ರತಾ

ಮಣಿಪುರ: ಹಿಂಸಾ ನಿರತ 40 ಕುಕಿ ಉಗ್ರರ ಹತ್ಯೆಗೈದ ಕಮಾಂಡೋ Read More »

error: Content is protected !!
Scroll to Top