ಪುತ್ತೂರು ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಅವಧಿ ಕೊನೆ | ದ.ಕ.ಜಿಲ್ಲಾಧಿಕಾರಿ ಆಡಳಿತಾಧಿಕಾರಿಯಾಗಿ ನೇಮಕ

ಪುತ್ತೂರು: ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್. ಗೌಡಿ ಅಧಿಕಾರವಧಿ ಮುಗಿದಿದ್ದು, ಆಡಳಿತಾಧಿಕಾರಿಯಾಗಿ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಅವರನ್ನು ನೇಮಕಗೊಳಿಸಲಾಗಿದೆ. ಮುಂದಿನ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕ್ರಿಯೆ ನಡೆದು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಅಧಿಕಾರ ವಹಿಸಿಕೊಳ್ಳುವ ತನಕ ಜಿಲ್ಲಾಧಿಕಾರಿಯವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಅವರನ್ನು ಆಡಳಿತಾಧಿಕಾರಿಯಾಗಿ ನೇಮಕಗೊಳಿಸಿ ಮೇ 25 ರಂದು ಆದೇಶ ಹೊರಡಿಸಲಾಗಿತ್ತು.

ಪುತ್ತೂರು ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಅವಧಿ ಕೊನೆ | ದ.ಕ.ಜಿಲ್ಲಾಧಿಕಾರಿ ಆಡಳಿತಾಧಿಕಾರಿಯಾಗಿ ನೇಮಕ Read More »

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ತಿಂಗಳಲ್ಲಿ ಸಂಪೂರ್ಣ | ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಚುನಾವಣಾ ಆಯೋಗ ಆದೇಶ

ಪುತ್ತೂರು: ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ  ಜುಲೈ ತಿಂಗಳಲ್ಲಿ ಕೊನೆಗೊಳ್ಳಲಿದ್ದು, ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ  ಆಯ್ಕೆಗೆ ಮೀಸಲಾತಿ ನಿಗದಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 5948 ಗ್ರಾಪಂಗಳಿಗೆ ತಾಲೂಕುವಾರು, ವರ್ಗವಾರು ಚುನಾವಣೆ 2020 ರಲ್ಲಿ ನಡೆದಿತ್ತು. ಅದಾದ ಬಳಿಕ ಎರಡನೇ ಅವಧಿಗೆ  ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸಲಾಗಿದೆ. ಪರಿಶಿಷ್ಟ ಪಂಗಡ, ಜಾತಿ, ಹಿಂದುಳಿದ ವರ್ಗ ಹೀಗೆ

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ತಿಂಗಳಲ್ಲಿ ಸಂಪೂರ್ಣ | ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಚುನಾವಣಾ ಆಯೋಗ ಆದೇಶ Read More »

ಪ್ರವೀಣ್ ನೆಟ್ಟಾರು ಪತ್ನಿ ನೂತಾನಾ ಮರುನೇಮಕ : ಸಿಎಂ ಸಿದ್ದರಾಮಯ್ಯ ಘೋಷಣೆ | ವಜಾ ಮಾಡಿದ್ದರಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲವೆಂದು ಸಿಎಂ ಟ್ವೀಟ್

ಬೆಂಗಳೂರು: ಪ್ರವೀಣ್ ನೆಟ್ಟಾರು ಅವರ ಪತ್ನಿಯನ್ನು ವಜಾ ಮಾಡಿದ್ದ ಒಂದು ದಿನದೊಳಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಹೊರಡಿಸಿದ್ದು, ಸಿ ಗ್ರೂಪ್ ಹುದ್ದೆಗೆ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದಲ್ಲಿ ನೀಡಲಾದ ಹುದ್ದೆಯಿಂದ ವಜಾ ಮಾಡುತ್ತಿದ್ದಂತೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತಂತೆ ಇಂದು ಟ್ವಿಟ್ ಮಾಡಿರುವ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು

ಪ್ರವೀಣ್ ನೆಟ್ಟಾರು ಪತ್ನಿ ನೂತಾನಾ ಮರುನೇಮಕ : ಸಿಎಂ ಸಿದ್ದರಾಮಯ್ಯ ಘೋಷಣೆ | ವಜಾ ಮಾಡಿದ್ದರಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲವೆಂದು ಸಿಎಂ ಟ್ವೀಟ್ Read More »

ರಸ್ತೆ ಬದಿ ನೀರು ಹೋಗುವ ಚರಂಡಿ ನಾಪತ್ತೆ | ಜೆ.ಜೆ.ಎಂ. ಯೋಜನೆಯ ಪೈಪ್ ಲೈನ್ ಅಳವಡಿಕೆ ವೇಳೆ ಘಟನೆ

ನಿಡ್ಪಳ್ಳಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯು ಒಂದು. ಮನೆ ಮನೆಗೆ ಕುಡಿಯುವ ನೀರು ಪೂರೈಕೆಗಾಗಿ ಇರುವ ಈ ಯೋಜನೆಯಿಂದ ನಿಡ್ಪಳ್ಳಿ ಗ್ರಾಮದಲ್ಲಿ ಕೊಳವೆ ಬಾವಿ ಕೊರೆದು‌ ಟ್ಯಾಂಕ್ ನಿರ್ಮಾಣ ನಡೆದಿದೆ. ಇದೀಗ ಕಾಮಗಾರಿ ಮುಂದುವರಿದು ರಸ್ತೆ ಬದಿಯಲ್ಲಿ ಪೈಪು ಅಳವಡಿಕೆ ಕಾಮಗಾರಿ ಭರದಿಂದ ನಡೆಯುತ್ತಿದೆ. ಹೆಚ್ಚಿನ ಕಡೆ ರಸ್ತೆ ಬದಿಯ ಚರಂಡಿ ಮೂಲಕವೇ ಗುಂಡಿ ತೆಗೆದು ಪೈಪು ಆಳವಡಿಸಲಾಗುತ್ತಿದೆ. ಆದರೆ ಪೈಪ್ ಅಳವಡಿಸಿದ ನಂತರ ಮೊದಲಿದ್ದ ಚರಂಡಿ ನಾಪತ್ತೆ. ನಿಡ್ಪಳ್ಳಿ ಗ್ರಾಮದ ಕೊಪ್ಪಳ

ರಸ್ತೆ ಬದಿ ನೀರು ಹೋಗುವ ಚರಂಡಿ ನಾಪತ್ತೆ | ಜೆ.ಜೆ.ಎಂ. ಯೋಜನೆಯ ಪೈಪ್ ಲೈನ್ ಅಳವಡಿಕೆ ವೇಳೆ ಘಟನೆ Read More »

ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಭಿನಂದನೆ

ಮಂಗಳೂರು: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಗೊಂಡ ಬಿಜೆಪಿಯ ಶಾಸಕರಿಗೆ ಅಭಿನಂದನಾ ಸಮಾರಂಭ ಮಂಗಳೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಜನರಿಂದ ಆಯ್ಕೆಯಾದ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹರೀಶ್ ಪೂಂಜಾ, ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕೋಟಾ ಶ್ರೀನಿವಾಸ್ ಪೂಜಾರಿ, ಗೋಪಾಲಕೃಷ್ಣ ಹೇರಳೆ, ಸಂತೋಷ್ ಕುಮಾರ್ ರೈ ಮೊದಲಾದವರು

ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಭಿನಂದನೆ Read More »

ಪುರಾತನ ದೇವಳದ ಗರ್ಭಗುಡಿಯೊಳಗೆ ರಕ್ತ, ಮಾಂಸದ ಕೋಡಿ | ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

ಚಿಕ್ಕಬಳ್ಳಾಪುರ: ಪುರಾತನ ದೇವಾಲಯದ ಒಳಗಡೆ ರಕ್ತ ಹಾಗೂ ಮಾಂಸ ಹಾಕಿ, ಅಪವಿತ್ರಗೊಳಿಸಿದ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಿಂದ ವರದಿಯಾಗಿದೆ. ರಕ್ತದ ಕೋಡಿ ದೇವರ ಮೂರ್ತಿಯ ಪಾದದವರೆಗೂ ಚೆಲ್ಲಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಬ್ಯಾಟರಾಯ ಸ್ವಾಮಿ ದೇವಸ್ಥಾನದ ಕಿಟಕಿಯಿಂದ ರಕ್ತ, ಮಾಂಸವನ್ನು ಚೆಲ್ಲಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ, ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪುರಾತನ ದೇವಳದ ಗರ್ಭಗುಡಿಯೊಳಗೆ ರಕ್ತ, ಮಾಂಸದ ಕೋಡಿ | ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ Read More »

24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಪುತ್ತೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ 24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಬೆಳಿಗ್ಗೆ  ನಡೆದ  ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಥಾವರ್ ಚಂದ್ ಗೆಹ್ಲೋಟ್ , ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನೂತನ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ Read More »

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ | ಮರು ನೇಮಕಾತಿ ಬಗ್ಗೆ ಸಿಎಂ ಜೊತೆ ಮಾತನಾಡುವೆ’: ಪುತ್ತೂರು  ಶಾಸಕ ಅಶೋಕ್ ರೈ

ಪುತ್ತೂರು : ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿರುವ  ವಿಚಾರ ಈಗಾಗಲೇ ವರದಿಯಾಗಿದ್ದು,  ಈ ಕುರಿತು ಮುಖ್ಯಮಂತ್ರಿಗಳ ಜತೆ ಮತನಾಡುವೆ ಎಂದು  ಪುತ್ತೂರು ಶಾಸಕ ಅಶೋಕ್ ರೈ ಪ್ರತಿಕ್ರಿಯೆ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಬಗ್ಗೆ ಮಾಧ್ಯಮ ವರದಿಯನ್ನು ನೋಡಿದ ಬಳಿಕ ನನಗೆ ತಿಳಿದಿದೆ. ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ನಮೂದಿಸಿದ್ದು,ಇದು

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ | ಮರು ನೇಮಕಾತಿ ಬಗ್ಗೆ ಸಿಎಂ ಜೊತೆ ಮಾತನಾಡುವೆ’: ಪುತ್ತೂರು  ಶಾಸಕ ಅಶೋಕ್ ರೈ Read More »

ಮಾನಕ ಜ್ಯುವೆಲ್ಲರ‍್ಸ್‌ನ ನೂತನ ಮಳಿಗೆ ಉದ್ಘಾಟನೆ | ಹತ್ತೂರಿನಲ್ಲಿ ಮನೆಮಾತಾಗಿರುವ ಮಾನಕ ಜ್ಯುವೆಲ್ಲರ್ಸ್

ಪುತ್ತೂರು: ಪುತ್ತೂರಿನಲ್ಲಿ ಕಳೆದ 18 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಮಾನಕ ಜ್ಯುವೆಲ್ಲರರ್ಸ್ ನ ನೂತನ ಬೃಹತ್ ಜ್ಯುವೆಲ್ಲರಿ ಶೋರೂಮ್ ಮೇ.27 ರಂದು ಪುತ್ತೂರು ಮುಖ್ಯರಸ್ತೆಯಲ್ಲಿ ಸಿಪಿಸಿ ಪ್ಲಾಝಾದ ಎದುರು ಉದ್ಘಾಟನೆಗೊಂಡಿತ್ತು. ಸಂಜೀವ ಶೆಟ್ಟಿ ಜವುಳಿ ಮಳಿಗೆಯ ಗಿರಿಧರ್  ನೂತನ ಮಳಿಗೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರ ಸಹೋದರ ಶಿವಶಂಕರ್, ಮಾಜಿ ಪುರಸಭೆ ಅಧ್ಯಕ್ಷರಾದ  ರಾಜೇಶ್ ಬನ್ನೂರು, ಗಣೇಶ್ ರಾವ್, ದಯಾರೇಶ್ ಕದಾಮ್, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ಉಲಾಸ್ ಪೈ, ಗಿರಿಧರ್ ಅವರ ಪತ್ನಿ ವಿದ್ಯಾ,

ಮಾನಕ ಜ್ಯುವೆಲ್ಲರ‍್ಸ್‌ನ ನೂತನ ಮಳಿಗೆ ಉದ್ಘಾಟನೆ | ಹತ್ತೂರಿನಲ್ಲಿ ಮನೆಮಾತಾಗಿರುವ ಮಾನಕ ಜ್ಯುವೆಲ್ಲರ್ಸ್ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ

ಪುತ್ತೂರು: ತಮ್ಮಲ್ಲಿ ಅಡಕವಾಗಿರುವ ಪ್ರತಿಭೆಗಳು ಮತ್ತು ಹವ್ಯಾಸಗಳು ವಿದ್ಯಾರ್ಥಿ ದೆಸೆಯಲ್ಲಿ ಪ್ರದರ್ಶಿತವಾಗಿ ಕಮರಿ ಹೋಗುವಂತಾಗಬಾರದು ಬದಲಿಗೆ ಜೀವನದುದ್ದಕ್ಕೂ ಅದು ಬೆಳೆದು ಪ್ರದರ್ಶಿತವಾಗಬೇಕು ಇದರಿಂದ ಮಾನಸಿಕ ಒತ್ತಡವನ್ನು ಕಡಿಮೆಮಾಡಿಕೊಳ್ಳಬಹುದು ಎಂದು ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಸಾದ್ ಶಾನುಬೋಗ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಪ್ರತಿಭಾ ದಿನ ಸಮಾರಂಭದದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ವೃತ್ತಿಪರ ಶಿಕ್ಷಣದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಕಷ್ಟ ಸಾಧ್ಯ ಅದರಲ್ಲೂ ಕೊರೋನಾ ನಂತರ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ Read More »

error: Content is protected !!
Scroll to Top