ವಿಜಯ್‌ ಮಲ್ಯ ಒಡೆತನದಲ್ಲಿದ್ದ ಟಿಪ್ಪುವಿನ ಖಡ್ಗ 145 ಕೋಟಿ ರೂ. ಗೆ ಹರಾಜು

ಬೆಂಗಳೂರು: ಮೈಸೂರಿನ ಹುಲಿ ಎಂದೇ ಖ್ಯಾತರಾಗಿರುವ ಟಿಪ್ಪು ಸುಲ್ತಾನ್ ಗೆ ಸೇರಿದ್ದ ಖಡ್ಗವನ್ನು ಮಂಗಳವಾರ ಲಂಡನ್‌ನ ಬೊನ್ಹಾಮ್‌ನಲ್ಲಿ ಹರಾಜು ಹಾಕಲಾಗಿದ್ದು, ಈ ಖಡ್ಗ ಬರೋಬ್ಬರಿ ರೂ. 145 ಕೋಟಿಗೆ ಹರಾಜಾಗಿದೆ. ಈ ಹಿಂದೆ ವಿಜಯ್‌ ಮಲ್ಯ ಒಡೆತನದಲ್ಲಿ ಇದ್ದ ಈ ಖಡ್ಗವನ್ನು ಮಲ್ಯ ಅವರಿಂದ ರೂ 1.5 ಕೋಟಿಗೆ ಪಡೆದುಕೊಳ್ಳಲಾಗಿತ್ತು. ಈ ಖಡ್ಗವನ್ನು ಮಲ್ಯ 2004ರಲ್ಲಿ ಕೊಂಡುಕೊಂಡಿದ್ದರು. ಬ್ಯಾಂಕ್‌ಗಳಿಗೆ ಸಾಲ ಮರುಪಾವತಿಸದೆ ವಂಚಿಸಿದ ಆರೋಪ ಎದುರಿಸುತ್ತಿರುವ ಮಲ್ಯ ಈ ಖಡ್ಗ ತಮ್ಮ ಕುಟುಂಬಕ್ಕೆ ದುರದೃಷ್ಟವಾಗಿದೆ ಎಂದು ಹೇಳಿಕೊಂಡು […]

ವಿಜಯ್‌ ಮಲ್ಯ ಒಡೆತನದಲ್ಲಿದ್ದ ಟಿಪ್ಪುವಿನ ಖಡ್ಗ 145 ಕೋಟಿ ರೂ. ಗೆ ಹರಾಜು Read More »

ಸಮುದ್ರ ಕಿನಾರೆಗೆ ಅಪ್ಪಳಿಸಿದ ಮೀನುಗಾರಿಕೆ ಬೋಟ್; 12 ಲಕ್ಷ ನಷ್ಟ

ಕುಂದಾಪುರ: ಮೀನುಗಾರಿಕೆ ನಡೆಸುತ್ತಿರುವಾಗ ತೇಲಿ ಬಂದ ಬಲೆಯು ಬೋಟಿನ ಪ್ಯಾನಿಗೆ ಸಿಲುಕಿದ ಪರಿಣಾಮ ಬೋಟ್ ನ ಇಂಜಿನ್ ಸ್ಥಬ್ಧಗೊಂಡ ಪರಿಣಾಮ ಗಾಳಿಯ ರಭಸಕ್ಕೆ ಮರಳು ದಿಬ್ಬಕ್ಕೆ ಬಡಿದು ಮುಳುಗಿದ ಘಟನೆ ಪಾರಂಪಳ್ಳಿ ಪಡುಕರೆ ಸಮೀಪ ನಡೆದಿದೆ. ಬೆಂಗ್ರೆ ನಿವಾಸಿ ಸಂದೀಪ್ ತೋಳಾರ್ ಮಾಲೀಕತ್ವದ ಶ್ರೀ ದುರ್ಗಾಪರಮೇಶ್ವರಿ ರುಕ್ಮಯ್ಯ ಹೆಸರಿನ ಬೋಟ್ ಇದಾಗಿದ್ದು, ಅವಘಡದ ವೇಳೆ ಅಕ್ಕಪಕ್ಕದ ಬೋಟ್ ಗಳು ಸಹಾಯಕ್ಕೆ ಬಂದರೂ ಕೂಡ ಪ್ರಯೋಜನವಾಗಿಲ್ಲ. ಬೋಟಿನಲ್ಲಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಬೇರೆ ಬೋಟಿನವರು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದು, ಯಾವುದೇ

ಸಮುದ್ರ ಕಿನಾರೆಗೆ ಅಪ್ಪಳಿಸಿದ ಮೀನುಗಾರಿಕೆ ಬೋಟ್; 12 ಲಕ್ಷ ನಷ್ಟ Read More »

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಸಚಿವರ ಮನೆ ಧ್ವಂಸ

ಇಂಫಾಲ: ಘರ್ಷಣೆ ಪೀಡಿತ ಮಣಿಪುರದ ಬಿಷ್ಣುಪುರ್ ಹಾಗೂ ಚುರಾಚಂದ್‌ಪುರ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಶಂಕಿತ ಉಗ್ರರು ಹಾಗೂ  ಜನರ ಗುಂಪಿನ ನಡುವೆ ನಡೆದ ಹೊಸ ಹಿಂಸಾಚಾರದಲ್ಲಿ ಓರ್ವ  ಸಾವನ್ನಪ್ಪಿದ್ದಾನೆ ಹಾಗೂ ಇನ್ನೊಬ್ಬನು ಗಾಯಗೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಏತನ್ಮಧ್ಯೆ, ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಸರಕಾರವು ಮತ್ತೊಂದು ಸಮುದಾಯಕ್ಕೆ ಸೇರಿದ ಉಗ್ರಗಾಮಿಗಳಿಂದ ಸ್ಥಳೀಯರನ್ನು ರಕ್ಷಿಸಲು ಸಾಕಷ್ಟು ಕೆಲಸ  ಮಾಡುತ್ತಿಲ್ಲ ಎಂದು ಆರೋಪಿಸಿ ಮಣಿಪುರದ ಪಿಡಬ್ಲ್ಯೂಡಿ ಸಚಿವ ಕೊಂತೌಜಮ್ ಗೋವಿಂದಸ್ ಅವರ ಬಿಷ್ಣುಪುರ ಜಿಲ್ಲೆಯಲ್ಲಿರುವ  ಮನೆಯನ್ನು ಬುಧವಾರ ಧ್ವಂಸಗೊಳಿಸಿದೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಸಚಿವರ ಮನೆ ಧ್ವಂಸ Read More »

ಆಲಂಕಾರಿನಲ್ಲಿ ಬಸ್ಸಿನಿಂದ ಎಸೆಯಲ್ಪಟ್ಟು ಮಹಿಳೆಗೆ ಗಾಯ

ಕಡಬ:  ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಗಂಭೀರ ಗಾಯಗೊಂಡ ಘಟನೆ ಆಲಂಕಾರು ಪೇಟೆಯಲ್ಲಿ ಗುರುವಾರ ನಡೆದಿದೆ. ಗಾಯಗೊಂಡವರನ್ನು ರಾಮಕುಂಜ ಗ್ರಾಮದ ಶಾರದಾನಗರ ನಿವಾಸಿ ಗುಲಾಬಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್‌.ಆರ್‌.ಟಿ.ಸಿ. ಬಸ್ಸಿಗೆ ಗೋಳಿತ್ತಡಿಯಲ್ಲಿ ಹತ್ತಿದ ಮಹಿಳೆ ಆಲಂಕಾರು ಮುಟ್ಟುತ್ತಿದ್ದಂತೆ ಇಳಿಯಲು ಯತ್ನಿಸಿ ರಸ್ತೆಗೆ ಎಸೆಯಲ್ಪಟ್ಟರು. ರಸ್ತೆಗೆ ಬಿದ್ದ ಪರಿಣಾಮ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರಿಗೆ ಸ್ಥಳೀಯ ಕ್ಲೀನಿಕ್‌ ನಲ್ಲಿ  ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ

ಆಲಂಕಾರಿನಲ್ಲಿ ಬಸ್ಸಿನಿಂದ ಎಸೆಯಲ್ಪಟ್ಟು ಮಹಿಳೆಗೆ ಗಾಯ Read More »

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ‌ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ವೇಳೆ ದೇವಳದ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಶಾಸಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣಪ್ತಸಾದ್ ಆಳ್ವ, ಗ್ರಾಪಂ ಸದಸ್ಯ ನವೀನ್ ರೈ ಚೆಲ್ಯಡ್ಕ, ಸದಾಶಿವ ರೈ ಅಜ್ಜಿಕಲ್ಲು ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ರೈ ಭೇಟಿ Read More »

ಮುಂದಿನ 20 ದಿನಗಳಲ್ಲಿ ಪುತ್ತೂರು-ಉಪ್ಪಿನಂಗಡಿ ರಸ್ತೆ ಕಾಮಗಾರಿ ಮುಗಿಸಬೇಕು | ಅಧಿಕಾರಿ, ಗುತ್ತಿಗೆದಾರರಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಕಾಮಗಾರಿಯನ್ನು ಅಚ್ಚುಕಟ್ಟಾಗಿ ಮುಂದಿನ 20 ದಿನಗಳಲ್ಲಿ ಮುಗಿಸಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅವರು ಗುರುವಾರ ಕಾಂಗಾರಿ ಹಂತದಲ್ಲಿರುವ ಉಪ್ಪಿನಂಗಡಿ-ಪುತ್ತೂರು ಚತುಷ್ಪಥ ಕಾಮಗಾರಿಯನ್ನು ವೀಕ್ಷಿಸಿ ಈ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಗುತ್ತಿಗೆದಾರರು, ಕಾಂಗ್ರೆಸ್ ಮುಖಂಡರು, ಉಪಸ್ಥಿತರಿದ್ದರು.

ಮುಂದಿನ 20 ದಿನಗಳಲ್ಲಿ ಪುತ್ತೂರು-ಉಪ್ಪಿನಂಗಡಿ ರಸ್ತೆ ಕಾಮಗಾರಿ ಮುಗಿಸಬೇಕು | ಅಧಿಕಾರಿ, ಗುತ್ತಿಗೆದಾರರಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ Read More »

ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಕುರಿತು ಸಭೆ

ಉಪ್ಪಿನಂಗಡಿ : ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಅಭಿವೃದ್ದಿ ವಿಚಾರಕ್ಕೆ ಸಂಬಂದಿಸಿ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿ ಹಾಗೂ ಇನ್ನಿತರ ಚಟುವಟಿಕೆಗಳು ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಆಧ್ಯಕ್ಷ ಡಾ. ರಾಜಾರಾಂ ಕೆ ಬಿ, ಕಾಂಗ್ರೆಸ್ ಮುಖಂಡರಾದ ಚಂದ್ರಹಾಸ ಶೆಟ್ಟಿ,ನಝೀರ್ ಮಠ, ಗ್ರಾಪಂ ಸದಸ್ಯ ಯು ಟಿ ತ ಸೀಫ್, ಅಬ್ದುಲ್ ರಹಿಮಾನ್ ಯುನಿಕ್, ಮುರಳೀದರ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರ್ ಸೇರಿದಂತೆ ಹಲವು ಮಂದಿ

ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಕುರಿತು ಸಭೆ Read More »

ಕಡಬ ಪ್ರಾಕೃತಿಕ ವಿಕೋಪ ತಡೆ ಮುಂಜಾಗ್ರತ ಸಭೆ | ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿ, ಅಧಿಕಾರಿಗಳಿಗೆ ಎ.ಸಿ ಸೂಚನೆ

ಕಡಬ: ಮುಂಬರುವ ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪವನ್ನು ಎಲ್ಲಾ  ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮರ್ಪಕವಾಗಿ ನಿರ್ವಹಣೆ ಮಾಡಲು ಎಲ್ಲರೂ ಸಿದದ್ರಗಬೇಕು ಎಂದು ಪುತ್ತೂರು ಸಹಯಕ ಆಯುಕ್ತ ಗಿರೀಶ್ ನಂದನ್ ಸೂಚನೆ ನೀಡಿದರು. ಅವರು ಬುಧವಾರ ಕಡಬ ಅಂಬೇಡ್ಕರ್ ಭವನದಲ್ಲಿ  ಪ್ರಾಕೃತಿಕ ವಿಕೋಪದಡಿ ಹಾನಿಯಾಗುವ ಪ್ರಕರಣಗಳ ಬಗ್ಗೆ ಮುಂಜಾಗ್ರತ ಕ್ರಮ ವಹಿಸಲು ಕಾರ್ಯತಂತ್ರ ರೂಪಿಸುವ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲರೂ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ನೆರೆ, ಭೂ ಕುಸಿತ ಮುಂತಾದ ಪ್ರಾಕೃತಿಕ ವಿಪತ್ತುಗಳನ್ನು  ಸಮರ್ಥವಾಗಿ

ಕಡಬ ಪ್ರಾಕೃತಿಕ ವಿಕೋಪ ತಡೆ ಮುಂಜಾಗ್ರತ ಸಭೆ | ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿ, ಅಧಿಕಾರಿಗಳಿಗೆ ಎ.ಸಿ ಸೂಚನೆ Read More »

ಸ್ಪೀಕರ್ ಯು.ಟಿ. ಖಾದರ್ ರಾಜೀನಾಮೆ!?

ಬೆಂಗಳೂರು: ಶಾಸಕ ಯು.ಟಿ. ಖಾದರ್ ಅವರು ಕಾಂಗ್ರೆಸಿನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದು ಬಹುತೇಕ ಪಕ್ಕಾ ಆಗಿದೆ ಎಂದು ಹೇಳಲಾಗಿದೆ. ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಸ್ವತಃ ಯು.ಟಿ. ಖಾದರ್ ಅವರೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಸ್ಪೀಕರ್ ಆಗಿ ಆಯ್ಕೆಯಾಗಿರುವ ಬೆನ್ನಿಗೇ ಯು.ಟಿ. ಖಾದರ್ ಅವರು ಈ ಹೇಳಿಕೆ ನೀಡಿದ್ದಾರೆ. ಸ್ಪೀಕರ್ ತಟಸ್ಥರಾಗಿರಬೇಕು ಎಂಬ ಕಾರಣಕ್ಕೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ಕರಾವಳಿ ಭಾಗದಿಂದ ಅತೀ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.

ಸ್ಪೀಕರ್ ಯು.ಟಿ. ಖಾದರ್ ರಾಜೀನಾಮೆ!? Read More »

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ  ಅವರು, ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡುತ್ತಿದ್ದು, ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ. ಪಕ್ಷದ ಜತೆ ಸದಾ ನಿಲ್ಲುತ್ತೇನೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಸೋಲೇ ಅಂತಿಮವಲ್ಲ. ಸೋಲಿನಿಂದ ಕಂಗೆಡದೆ ಪಕ್ಷವನ್ನು ಬಲವಾಗಿ ಕಟ್ಟುವ ಉದ್ದೇಶದಿಂದ ನಾವೆಲ್ಲರೂ ಅರ್ಪಣಾ ಮನೋಭಾವದೊಂದಿಗೆ ಕೆಲಸ ಮಾಡಬೇಕಿದೆ.

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ Read More »

error: Content is protected !!
Scroll to Top