ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸ್ಪೀಕರ್ ಸ್ಥಾನಕ್ಕೆ ನಾಳೆ (ಮೇ 24) ಚುನಾವಣೆ ನಡೆಯಲಿದ್ದು, ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು  ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ. ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಝಮೀರ್ ಅಹ್ಮದ್, ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.

ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ Read More »

ಬೈಕ್-ಕಾರು ಅಪಘಾತ: ಕೆವಿಜಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಸುಳ್ಯ: ಬೈಕ್ ಮತ್ತು ಕಾರಿನ ಮಧ್ಯೆ  ಅಪಘಾತ ನಡೆದು ಬೈಕ್ ಸವಾರ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಚಿಕ್ಕಬಳ್ಳಾಪುರದ ಸ್ವರೂಪ್ ಮೃತಪಟ್ಟವರು. ಆದಿತ್ಯವಾರ ರಾತ್ರಿ ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಇನ್ನೋರ್ವ ಸವಾರ ಸಂಭ್ರಮ್ ಎಂಬವರಿಗೆ

ಬೈಕ್-ಕಾರು ಅಪಘಾತ: ಕೆವಿಜಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ವಿದ್ಯುತ್ ಸ್ಪರ್ಶ : ಯುವಕ ಮೃತ್ಯು

ಪುತ್ತೂರು : ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಕುಮಾರಧಾರ ನದಿ ತೀರದ ಬಳಿ ನಡೆದಿದೆ. ಶರೀಫುದ್ದೀನ್ (19) ವಿದ್ಯುತ್ ಶಾಕ್‍ನಿಂದ ಮೃತಪಟ್ಟ ಯುವಕ. ಹಮ್ಮಬ್ಬ ಎಂಬವರ ಅಳಿಯ ಶರೀಪುದ್ದೀನ್ , ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿದ್ದು, ಮೇ.21 ರಂದು ಸಂಜೆ ಪುತ್ತೂರು ತಾಲೂಕು ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಕುಮಾರಧಾರ ನದಿ ಕಿನಾರೆಯ ಬಳಿ ವಿದ್ಯುತ್ ಸ್ಪರ್ಶವಾಗಿ ಅಸ್ವಸ್ಥಗೊಂಡವರನ್ನು ಸಾರ್ವಜನಿಕರ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಬಗ್ಗೆ

ವಿದ್ಯುತ್ ಸ್ಪರ್ಶ : ಯುವಕ ಮೃತ್ಯು Read More »

ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸಸ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸಸ್‌ನ ನೂತನ ಆಡಳಿತ ಕಚೇರಿಯನ್ನು ಸೋಮವಾರ ಉದ್ಘಾಟಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಯಂ ಕೃಷ್ಣ ಭಟ್, ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು, ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್ ಎಂ.ಪಿ. ಹಾಗೂ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರುಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಸಕ್ತ ವರ್ಷದಲ್ಲಿ ಬಿ.ಫಾರ್ಮಾ ಹಾಗೂ ಡಿ. ಫಾರ್ಮಾ ಆರಂಭಗೊಳ್ಳಲಿದ್ದು, ದಾಖಲಾತಿ

ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸಸ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ Read More »

ವಿವಾಹ ನಿಶ್ಚಿತಾರ್ಥ | ರಂಜಿತ್ ಪೂಜಾರಿ – ಕವಿತಾ ಸಾಲ್ಯಾನ್

ಪುತ್ತೂರು: ಆರ್ಯಾಪು ಗ್ರಾಮದ ನೀಲಪ್ಪ ಕೋಟ್ಯಾನ್ ಅವರ ಮಗ ರಂಜಿತ್ ಪೂಜಾರಿ ಹಾಗೂ ಮಾಣಿ ಏನಾಜೆ ರಾಮಪ್ಪ ಪೂಜಾರಿ ಪುತ್ರಿ ಕವಿತಾ ಸಾಲ್ಯಾನ್ ಅವರ ನಿಶ್ಚಿತಾರ್ಥ ಮಾಣಿ ಏನಾಜೆ ವಧುವಿನ ಮನೆಯಲ್ಲಿ ನಡೆಯಿತು.

ವಿವಾಹ ನಿಶ್ಚಿತಾರ್ಥ | ರಂಜಿತ್ ಪೂಜಾರಿ – ಕವಿತಾ ಸಾಲ್ಯಾನ್ Read More »

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರಮಾಣ ವಚನ

ಬೆಂಗಳೂರು : ರಾಜ್ಯದ 16ನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಮೇ 24ರಿಂದ ರಾಜ್ಯದ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿದ್ದು, 3 ದಿನಗಳ ಕಾಲ ಅಧಿವೇಶನ ನಡೆಯಲಿದೆ. ವಿಧಾನಸಭೆ ಚುನಾವಣೆಯಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಶಾಸಕರಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಜೊತೆಗೆ ಸಭಾಪತಿ ಅವರ ಆಯ್ಕೆಯೂ ಇದರಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಅವರು ಬೆಂಗಳೂರಿನಲ್ಲಿ ನಡೆದ ಮೊದಲ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರಮಾಣ ವಚನ Read More »

ಪುತ್ತೂರಿನಲ್ಲಿ ಮಲೇರಿಯಾ ಡೆಂಗ್ಯೂ ದಿನಾಚರಣೆ | ಮುತ್ತೂಟ್ ಫೈನಾನ್ಸ್, ಕಸ್ವಿ ಹಸಿರು ದಿಬ್ಬಣ, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ

ಪುತ್ತೂರು: ಮುತ್ತೂಟ್ ಫೈನಾನ್ಸ್, ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ಕಸ್ವಿ ಹಸಿರು ದಿಬ್ಬಣ ಹಾಗೂ ಪುತ್ತೂರು ತಾಲೂಕು ಆರೋಗ್ಯ ಕೇಂದ್ರದ ಆಶ್ರಯದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಲೇರಿಯಾ – ಡೆಂಗ್ಯು ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ ಮತ್ತು ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಎಸ್.ಆರ್.ಕೆ. ಲ್ಯಾಡರ್ಸಿನ ಕೇಶವ್ ಅಮೈ ಮಾತನಾಡಿ, ಮುತ್ತೂಟ್ ಫೈನಾನ್ಸ್ ಹಲವಾರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಆಶಾ ಕಾರ್ಯಕರ್ತೆಯರ ಸೇವಾ ಕಾರ್ಯವನ್ನು ಗಮನಿಸಿ ಅವರಿಗೆ ಗೌರವಪೂರ್ವಕವಾಗಿ ಟಾರ್ಚ್ ಲೈಟ್

ಪುತ್ತೂರಿನಲ್ಲಿ ಮಲೇರಿಯಾ ಡೆಂಗ್ಯೂ ದಿನಾಚರಣೆ | ಮುತ್ತೂಟ್ ಫೈನಾನ್ಸ್, ಕಸ್ವಿ ಹಸಿರು ದಿಬ್ಬಣ, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ Read More »

RSS ಪುತ್ತೂರು ಜಿಲ್ಲಾ ಸಂಘಚಾಲಕ್ ಕೊಡ್ಮಣ್ ಕಾಂತಪ್ಪ ಶೆಟ್ಟಿ ನಿಧನ

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ, ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 22ರಂದು ಮಧ್ಯಾಹ್ನ  ನಿಧನರಾದರು. ಕೆಲ ಸಮಯಗಳಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದರು. ಅವರು ಪತ್ನಿ, ತಮ್ಮ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲ್, ಆರ್ ಎಸ್ ಎಸ್

RSS ಪುತ್ತೂರು ಜಿಲ್ಲಾ ಸಂಘಚಾಲಕ್ ಕೊಡ್ಮಣ್ ಕಾಂತಪ್ಪ ಶೆಟ್ಟಿ ನಿಧನ Read More »

ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಬೆಂಗಳೂರು: ಕರ್ನಾಟಕದ ಮುರ್ಮು ಖ್ಯಾತಿಯ ಭಾಗೀರಥಿ ಮುರುಳ್ಯ ಶಾಸಕಿಯಾಗಿ ಮೊದಲ ಬಾರಿಗೆ ಪ್ರವೇಶ ಮಾಡುತ್ತಿರುವ ಸಂದರ್ಭದಲ್ಲಿ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದರು. ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಮೊದಲ ಬಾರಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ನಮಿಸಿದರು. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆದರ್ಶವನ್ನು ಅನುಕರಣೆ ಮಾಡಿರುವುದನ್ನು ಇಲ್ಲಿ ಗಮನಿಸಬಹುದು.

ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ Read More »

ವಿದ್ಯುತ್ ತಂತಿ ರಸ್ತೆಗೆ: ಕೌಡಿಚಾರು – ಸುಳ್ಯಪದವು ರಸ್ತೆ ಸಂಚಾರ ಬಂದ್

ಪುತ್ತೂರು: ಭಾರೀ ಮಳೆಗೆ ಟಿವಿ, ವಿದ್ಯುತ್ ತಂತಿಗಳಿಗೆ ಹಾನಿಯಾಗಿದ್ದು, ಕೌಡಿಚ್ಚಾರು – ಸುಳ್ಯಪದವು ರಸ್ತೆ ಸಂಚಾರಕ್ಕೆ ತೊಡಕಾಗಿದೆ. ರಸ್ತೆಗಡ್ಡವಾಗಿ ಮರ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಟ್ರಾನ್ಸ್ ಫಾರ್ಮರ್ ಹಾನಿಯಾಗಿರುವುದರಿಂದ ವಿದ್ಯುತ್ ಕಡಿತ ಉಂಟಾಗಿದೆ. ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಗೆ ಬಿದ್ದಿವೆ. ಇದರಿಂದ ಜನರ ಓಡಾಟಕ್ಕೂ ತೊಂದರೆಯಾಗಿದೆ. ರಸ್ತೆಗೆ ಬಿದ್ದಿರುವ ಮರವನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದೆ. ಮೆಸ್ಕಾಂ ಇಲಾಖೆಯೂ ವಿದ್ಯುತ್ ತಂತಿಗಳ ಸರಿಪಡಿಸುವ ಕಾರ್ಯದಲ್ಲಿ ಮಗ್ನವಾಗಿದೆ.

ವಿದ್ಯುತ್ ತಂತಿ ರಸ್ತೆಗೆ: ಕೌಡಿಚಾರು – ಸುಳ್ಯಪದವು ರಸ್ತೆ ಸಂಚಾರ ಬಂದ್ Read More »

error: Content is protected !!
Scroll to Top