ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಯತ್ನಾಳ್

ಪುತ್ತೂರು: ಇಲ್ಲಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಯುವಕರಿಗೆ ಧೈರ್ಯ ತುಂಬಿದರು. ಪಂಚವಟಿ, ಬಿಜೆಪಿ ಕಚೇರಿಗೆ ತೆರಳಿ ಬಳಿಕ ಮಹಾವೀರ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆ ಆವರಣದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಯತ್ನಾಳ್ ಅವರನ್ನು ಸ್ವಾಗತಿಸಿದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಯತ್ನಾಳ್ Read More »

ಪುತ್ತೂರಿಗೆ ಆಗಮಿಸಿದ ಫೈರ್ ಬ್ರಾಂಡ್ ಯತ್ನಾಳ್

ಪುತ್ತೂರು: ಬಿಜೆಪಿ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಆಗಮಿಸಿದ್ದಾರೆ. ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರ ಆರೋಗ್ಯ ವಿಚಾರಿಸಿ, ಸೂಕ್ತ ನ್ಯಾಯ ಒದಗಿಸಿಕೊಡುವ ಸಲುವಾಗಿ ಆಗಮಿಸಿರುವ ಯತ್ನಾಳ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ. ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯತ್ನಾಳ್ ಅವರು, ಅಲ್ಲಿಂದ ವಾಹನದಲ್ಲಿ ಪುತ್ತೂರಿಗೆ ಆಗಮಿಸಿದರು. ಬೆಳಿಗ್ಗೆಯಿಂದಲೇ ಪುತ್ತೂರಿನಲ್ಲಿ ತಮ್ಮ ನೆಚ್ಚಿನ ನಾಯಕನಿಗಾಗಿ ಕಾದು ಕುಳಿತಿದ್ದ ಅಭಿಮಾನಿಗಳು, ಯತ್ನಾಳ್ ಬರುತ್ತಿದ್ದಂತೆ ಮುತ್ತಿಕ್ಕಿದರು.

ಪುತ್ತೂರಿಗೆ ಆಗಮಿಸಿದ ಫೈರ್ ಬ್ರಾಂಡ್ ಯತ್ನಾಳ್ Read More »

ಡಿವೈಎಸ್ಪಿ ಹುದ್ದೆಗೆ ಕಳಂಕ ತಂದ ಪುತ್ತೂರು ಡಿವೈಎಸ್ಪಿಯ ಅಮಾನತು ಮಾಡಿ

ಕಡಬ: ಪುತ್ತೂರು ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಹುದ್ದೆಯನ್ನು ಅರಿಯದ ಸಾಮಾನ್ಯ ವ್ಯಕ್ತಿಯಂತೆ ಹಲ್ಲೆ ನಡೆಸಿದ ಪುತ್ತೂರು ಡಿವೈಎಸ್ಪಿಯನ್ನು ಕೂಡಲೇ ಅಮಾನತು ಮಾಡಬೇಕೆಂದು ವಿ.ಹಿಂ.ಪ. ಕಡಬ ಪ್ರಖಂಡ ಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ ಆಗ್ರಹಿಸಿದ್ದಾರೆ. ಈ ಬಗ್ಗೆ ಅವರು ಮಾತನಾಡಿ, ಇದೇ ಡಿವೈಎಸ್ಪಿ ಕೊಂಬಾರು ಆನೆ ದಾಳಿ ಪ್ರಕರಣದಲ್ಲಿ ಕೂಡ ತಾನೂ ಡಿವೈಎಸ್ಪಿ ಎಂಬುದನ್ನು ಮರೆತು ಅನಾಗರಿಕನಂತೆ ವರ್ತಿಸಿದ್ದಾರೆ. ಸಮಸ್ಯೆಗಳು ಬಂದಾಗ ಅದನ್ನು ಬಗೆಹರಿಸುವ ಬಗ್ಗೆ ಯೋಚಿಸದೆ ಒಟ್ಟಾರೆಯಾಗಿ ವರ್ತಿಸಿರುವುದು ಕಂಡು ಬಂದಿದೆ. ಸಾಮಾನ್ಯ ಜನರಿಗೆ ಕಾನೂನು

ಡಿವೈಎಸ್ಪಿ ಹುದ್ದೆಗೆ ಕಳಂಕ ತಂದ ಪುತ್ತೂರು ಡಿವೈಎಸ್ಪಿಯ ಅಮಾನತು ಮಾಡಿ Read More »

ಇಂದು ಮಲೇರಿಯಾ, ಡೆಂಗ್ಯೂ ಡೇ | ತಾಲೂಕಿನ ಆಶಾ ಕಾರ್ಯಕರ್ತರಿಗೆ ಟಾರ್ಚ್ ಲೈಟ್ ವಿತರಣೆ

ಪುತ್ತೂರು: ಮಲೇರಿಯಾ, ಡೆಂಗ್ಯೂ ಡೇ ಹಾಗೂ ತಾಲೂಕಿನ ಆಶಾ ಕಾರ್ಯಕರ್ತರಿಗೆ ಟಾರ್ಚ್ ಲೈಟ್ ವಿತರಣೆ ಸಮಾರಂಭ ಮೇ 19ರಂದು ಮಧ್ಯಾಹ್ನ 2.30ಕ್ಕೆ ಪುತ್ತೂರು ತಾಲೂಕು ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ನಡೆಯಲಿದೆ. ಮುತ್ತೂಟ್ ಫೈನಾನ್ಸ್, ಕಶ್ವಿ ಹಸಿರು ದಿಬ್ಬಣ, ಪುತ್ತೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಕಾರ್ಯಕ್ರಮ ಆಯೋಜಿಸಿದೆ. ಎಸ್.ಆರ್.ಕೆ. ಲ್ಯಾಡರ್ಸಿನ ಕೇಶವ್ ಅಮೈ ಕಾರ್ಯಕ್ರಮ ಉದ್ಘಾಟಿಸುವರು. ಡಿ.ಸಿ.ಆರ್.ಆರ್. ರತ್ನಾಕರ್ ರೈ, ಮಂಗಳೂರು ಮುತ್ತೂಟ್ ಫೈನಾನ್ಸ್ ರೀಜನಿನ ರೀಜನಲ್ ಮ್ಯಾನೇಜರ್ ಉದಯ್ ಶ್ಯಾಮ್ ಖಂಡಿಗೆ,

ಇಂದು ಮಲೇರಿಯಾ, ಡೆಂಗ್ಯೂ ಡೇ | ತಾಲೂಕಿನ ಆಶಾ ಕಾರ್ಯಕರ್ತರಿಗೆ ಟಾರ್ಚ್ ಲೈಟ್ ವಿತರಣೆ Read More »

ಮೇ 19ರಿಂದ 23: ಶಾಂತಿಗೋಡು ಶಾಲೆಯಲ್ಲಿ ಉಚಿತ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಪುತ್ತೂರು: IRCMD ಶಿಕ್ಷಣ ಸಂಸ್ಥೆ ಮತ್ತು ನರಿಮೊಗರು ಗ್ರಾಮ ಪಂಚಾಯತ್ ಗ್ರಂಥಾಲಯದ ಆಶ್ರಯದಲ್ಲಿ ಉಚಿತ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಮೇ 19ರಿಂದ 23ರವರೆಗೆ ಶಾಂತಿಗೋಡು ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳಿಗೆ ಬೇಸಿಗೆ ರಜೆ ಸಮಯವನ್ನು ಪರಿಣಾಮಕಾರಿಯಾಗಿ ಉಪಯೋಗಿಸಿ ಮಕ್ಕಳನ್ನು ವಿವಿಧ ರೀತಿಯಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ವಿಜ್ಞಾನ ಪ್ರಯೋಗಗಳು, ಮಕ್ಕಳಿಗೆ ಸುಲಭ ಗಣಿತ ತಂತ್ರ, ಕ್ಯಾಲಿಗ್ರಫಿ ಬರವಣಿಗೆ, ಕಲೆ ಮತ್ತು ಕರಕುಶಲ, ಯೋಗ ಇತ್ಯಾದಿ ವಿಷಯಗಳನ್ನು ಶಿಬಿರದಲ್ಲಿ ಹೇಳಿಕೊಡಲಾಗುವುದು. ಒಟ್ಟು 5

ಮೇ 19ರಿಂದ 23: ಶಾಂತಿಗೋಡು ಶಾಲೆಯಲ್ಲಿ ಉಚಿತ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ Read More »

ಬ್ಯಾನರ್ ಪ್ರಕರಣದಲ್ಲಿ ಬಿಜೆಪಿ ನಾಯಕರಿಂದ ಪೊಲೀಸರಿಗೆ ಒತ್ತಡ : ಬೇಕಿದ್ದರೆ ಕಾಲ್ ಲಿಸ್ಟ್ ತೆಗೆಯಿರಿ : ಅಶೋಕ್ ಕುಮಾರ್ ರೈ

ಪುತ್ತೂರು: ಬಿಜೆಪಿ ನಾಯಕರ ಬ್ಯಾನರ್ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕಿರುವುದು ಬಿಜೆಪಿ ನಾಯಕರೇ. ಬೇಕಿದ್ದರೆ ಕಾಲ್ ಲಿಸ್ಟ್ ತೆಗೆಯಿರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಸವಾಲು ಹಾಕಿದ್ದಾರೆ. ಬಿಜೆಪಿ ನಾಯಕರ ಬ್ಯಾನರ್ ಹಾಕಿ, ಅದಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣ ಇದೀಗ ವಿವಿಧ ಮಗ್ಗುಲು ಬದಲಿಸಿಕೊಳ್ಳುತ್ತಿದೆ. ಇದರ ನಡುವೆ ಪುತ್ತೂರಿಗೆ ಆಗಮಿಸಿದ್ದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಕಾಂಗ್ರೆಸ್ ಸರಕಾರದ ಮೇಲೆ ಆರೋಪ ಹೊರಿಸಿದ್ದರು. ಇದಕ್ಕೆ

ಬ್ಯಾನರ್ ಪ್ರಕರಣದಲ್ಲಿ ಬಿಜೆಪಿ ನಾಯಕರಿಂದ ಪೊಲೀಸರಿಗೆ ಒತ್ತಡ : ಬೇಕಿದ್ದರೆ ಕಾಲ್ ಲಿಸ್ಟ್ ತೆಗೆಯಿರಿ : ಅಶೋಕ್ ಕುಮಾರ್ ರೈ Read More »

ಹೊಸ ಸರ್ಕಾರ ಬಂದಾಕ್ಷಣ ಹಿಂದೂ ಕಾರ್ಯಕರ್ತರಿಗೆ ದೌರ್ಜನ್ಯ: ಡಾ. ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ಹೊಸ ಸರ್ಕಾರ ಬಂದ ತಕ್ಷಣ ಮುಂದಿನ‌ 5 ವರ್ಷ ಏನಾಗ್ತದೆ ಎಂಬುದಕ್ಕೆ ಸಾಕ್ಷಿ ಈ ಘಟನೆ. ಕಂಬಳದಲ್ಲಿ ಕೋಣಗಳ ಮೇಲೆ ಹೊಡೆಯಬಾರದು ಎಂದು ಹೇಳುತ್ತಾರೆ. ಅದಕ್ಕಿಂತಲೂ ಅಮಾನವೀಯವಾದ ಕೃತ್ಯ. ಆದ್ದರಿಂದ ಈ ಘಟನೆಗೆ ಕಾರಣರಾದ ಡಿವೈಎಸ್ಪಿಯನ್ನೇ ಅಮಾನತು ಮಾಡುವಂತೆ ಹಿಂದೂ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಆಗ್ರಹಿಸಿದರು. ಗುರುವಾರ ಪುತ್ತೂರು ಮಹಾವೀರ ಆಸ್ಪತ್ರೆಗೆ ಆಗಮಿಸಿ ಪೊಲೀಸರಿಂದ ಹಲ್ಲೆಗೊಳಗಾಗಿ ದಾಖಲಾಗಿರುವ ಯುವಕರ ಆರೋಗ್ಯ ವಿಚಾರಿಸಿ ಮಾಧ್ಯಮಗಳ ಜೊತೆ ಮಾತನಾಡಿದರು. ಸರ್ಕಾರ ಬಂದು 2-3 ದಿನ ಆಗಿದೆಯಷ್ಟೇ.

ಹೊಸ ಸರ್ಕಾರ ಬಂದಾಕ್ಷಣ ಹಿಂದೂ ಕಾರ್ಯಕರ್ತರಿಗೆ ದೌರ್ಜನ್ಯ: ಡಾ. ಕಲ್ಲಡ್ಕ ಪ್ರಭಾಕರ ಭಟ್ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಆಶಾ ತಿಮ್ಮಪ್ಪ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕರನ್ನು ಆಶಾ ತಿಮ್ಮಪ್ಪ ಅವರು ಗುರುವಾರ ಭೇಟಿಯಾದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪಅವರು ಯುವಕರ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಆಶಾ ತಿಮ್ಮಪ್ಪ Read More »

ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಯ್ತು ಬಿಜೆಪಿ ಮುಖಂಡನ ಶವ!

ಸುಳ್ಯ: ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತಿಯ ಮಾಜಿ ಸದಸ್ಯ ನವೀನ್ ರೈ ಮೇನಾಲ ಅವರ ಮೃತದೇಹ ಸುಳ್ಯದ ಹೊಳೆಯಲ್ಲಿ ಪತ್ತೆಯಾಗಿದೆ. ಪಯಸ್ವಿನಿ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ಪತ್ತೆಯಾಗಿಲ್ಲ. ಪಂಪ್ ರಿಪೇರಿಗೆ ತೆರಳಿದ್ದ ಅವರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಯ್ತು ಬಿಜೆಪಿ ಮುಖಂಡನ ಶವ! Read More »

ಟ್ವೀಟ್‌ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್‌ ಸಿಂಹ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರಲ್ಲಿ ಸಂಸದ ಪ್ರತಾಪ್‌ ಸಿಂಹ ಅವರು ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ್ದಾರೆ. ನಮ್ಮ ಪರವಾಗಿ ಮತ ಕೇಳುವ, ಬ್ಯಾನರ್ ಬಂಟಿಂಗ್ ಕಟ್ಟುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಘಟನೆಗೆ ಸಂಬಂಧಿಸಿದಂತೆ ಪಕ್ಷ ಸೋತಾಗ ಅನಾಥನಾಗುವುದು, ಅಪಾಯಕ್ಕೆ ಸಿಲುಕುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ

ಟ್ವೀಟ್‌ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್‌ ಸಿಂಹ Read More »

error: Content is protected !!
Scroll to Top