ನಾಳೆ (ಮಾ.26) : ಪುತ್ತೂರು ಕೆಎಸ್‍ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ ಸಮಾರಂಭ ಮಾ.26 ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕರ್ನಾಟಕ ಸರಕಾರದ ಸಾರಿಗೆ ಸಚಿವ ಬಿ.ಶ್ರೀರಾಮುಲು ನಾಮಫಲಕ ಅನಾವರಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಸಚಿವರಾದ ಎಸ್.ಅಂಗಾರ, ಕೋಟಿ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ […]

ನಾಳೆ (ಮಾ.26) : ಪುತ್ತೂರು ಕೆಎಸ್‍ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ Read More »

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ, ಗುರುನಮನ ಕಾರ್ಯಕ್ರಮ

ಪುತ್ತೂರು: ಸ್ವ ಗ್ರಾಮದ ಶಾಲೆಗಳಲ್ಲಿ ಅದರಲ್ಲೂ ಮಾತೃ ಭಾಷೆಯಲ್ಲಿ ಕಲಿತ ಶಿಕ್ಷಣದಿಂದ ಮಾತ್ರ ಪರಿಪೂರ್ಣತೆ ಪಡೆಯಲು ಸಾಧ್ಯ ಎ೦ದು ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿಶ್ವೇಶ್ವರ ವಿ.ಕೆ. ಹೇಳಿದರು. ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ ಜಿ ಅವರ ನಿವೃತ್ತಿ ಹಿನ್ನೆಲೆಯಲ್ಲಿ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅವರು ದೇಶದ ಅಮೃತ ಮಹೋತ್ಸವದ

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ, ಗುರುನಮನ ಕಾರ್ಯಕ್ರಮ Read More »

ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಶಿವರಾಮಕಾರಂತ ಅಧ್ಯಯನ ಕೇಂದ್ರದಿಂದ ಕೊಡಮಾಡುವ ನಿರಂಜನ ಪ್ರಶಸ್ತಿಯನ್ನು ಈ ವರ್ಷ ಕತೆಗಾರರು, ಕಾದಂಬರಿಕಾರರಾದ ಗಂಗಾ ಪಾದೇಕಲ್ಲು ಅವರಿಗೆ ನೀಡಲಾಗುವುದು ಎಂದು.ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ತಿಳಿಸಿದ್ದಾರೆ. ನಿರಂಜನ ಪ್ರಶಸ್ತಿಯು  15 ಸಾವಿರ ರೂ. ನಗದು, ಪ್ರಶಸಿ  ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಗಂಗಾ ಪಾದೇಕಲ್ಲು ಅವರು ಸೆಪ್ಟಂಬರ್ 01, 1985 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು

ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ Read More »

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ

ಕಾರವಾರ : ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ ಭಾಗಿಯಾಗಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ Read More »

ಉಜ್ವಲ ಯೋಜನೆಯ ಫಲಾನುಭವಿಗಳ ಸಿಲಿಂಡರ್‌ಗೆ 200 ರೂ. ಸಬ್ಸಿಡಿ

ವರ್ಷದಲ್ಲಿ 12 ಸಿಲಿಂಡರ್‌ಗೆ ಸಿಗಲಿದೆ ಸಹಾಯಧನ ದೆಹಲಿ : ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಈ ಸಬ್ಸಿಡಿ ಸಿಗಲಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸಚಿವ ಸಂಪುಟ ವರ್ಷಕ್ಕೆ 12 ರೀಫಿಲ್‌ಗಳಿಗೆ ತಲಾ 200 ರೂ. ಸಬ್ಸಿಡಿ ನೀಡಲು ಅನುಮೋದನೆ ನೀಡಿದೆ. ಈ ಯೋಜನೆಗೆ 9.59 ಕೋಟಿ ಫಲಾನುಭವಿಗಳಿದ್ದಾರೆ. ಸಹಾಯಧನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ

ಉಜ್ವಲ ಯೋಜನೆಯ ಫಲಾನುಭವಿಗಳ ಸಿಲಿಂಡರ್‌ಗೆ 200 ರೂ. ಸಬ್ಸಿಡಿ Read More »

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ

ಬೆಂಗಳೂರು : ಬಹು ಸಮಯದಿಂದ ನಿರೀಕ್ಷಿಸುತ್ತಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬೆಳಗ್ಗೆ ದಿಢೀರ್‌ ಎಂದು ಬಿಡುಗಡೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲೇ ಸಿದ್ದರಾಮಯ್ಯ ಹೆಸರಿದ್ದು, ಅವರಿಗೆ ವರುಣಾ ಕ್ಷೇತ್ರವನ್ನು ನೀಡಲಾಗಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಬಗೆಹರಿದಿದೆ. ವರುಣಾದಲ್ಲಿ ಪ್ರಸ್ತುತ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಶಾಸಕರಾಗಿದ್ದಾರೆ.ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರಿದ್ದು, ನಂಜನಗೂಡಿನಲ್ಲಿ ಧ್ರುವ ನಾರಾಯಣ್‌ ಅವರ ಪುತ್ರ ದರ್ಶನ್‌,ಕನಕಪುರದಿಂದ ಡಿ. ಕೆ. ಶಿವಕುಮಾರ್‌, ದೇವನಹಳ್ಳಿಯಿಂದ ಎಚ್‌. ಸಿ. ಮುನಿಯಪ್ಪ ಸ್ಪರ್ಧಿಸಲಿದ್ದಾರೆ.ಕಾಪುವಿನಿಮದ ವಿನಯ್‌ ಕುಮಾರ್‌

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ Read More »

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಇನ್ನು ಓದಿದರೂ ಪಾಸ್ ಆಗಬಹುದು…

ಕೊನೆಯ ಹಂತದ ಪ್ಲಾನಿಂಗ್ ಹೀಗಿರಲಿ ಪ್ರೀತಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೇ ನಿಮಗೆಲ್ಲಾ ಮೊದಲಾಗಿ ನಮ್ಮ ಶುಭಾಶಯಗಳು.ನಿಮ್ಮ ಜೀವನದ ಮೊದಲ ಬೋರ್ಡ್ ಪರೀಕ್ಷೆಯನ್ನು ಬರೆಯುತ್ತಿದ್ದೀರಿ. ಇದು ನೀವು ಎದುರಿಸುವ ಮೊದಲ ರಾಜ್ಯಮಟ್ಟದ ಪರೀಕ್ಷೆ. ಮುಂದೆ ನೀವು ಎದುರಿಸುವ ಹಲವು ಬೋರ್ಡ್ ಪರೀಕ್ಷೆಗಳಿಗೆ ಇದು ಖಂಡಿತವಾಗಿಯೂ ಪಂಚಾಂಗ ಆಗುತ್ತದೆ.2023ರ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಈಗಾಗಲೇ ಕ್ಷಣಗಣನೆಯು ಆರಂಭ ಆಗಿದೆ. ಮಾ.31ರಂದು ನಿಮ್ಮ ಪರೀಕ್ಷೆಗಳು ಆರಂಭ ಆಗಲಿವೆ. ನಿಮಗೆ ಕಳೆದ ವರ್ಷ ಮೇ 16ರಿಂದ ಇಂದಿನ ದಿನದವರೆಗೂ ನಿಮ್ಮ ಅಧ್ಯಾಪಕರ ಮಾರ್ಗದರ್ಶನದಲ್ಲಿ ಉತ್ತಮವಾದ ತರಬೇತಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಇನ್ನು ಓದಿದರೂ ಪಾಸ್ ಆಗಬಹುದು… Read More »

ಕುದ್ದುಪದವು-ತೋರಣಕಟ್ಟೆ-ಸಾಜ-ಬಿಳಿಯೂರುಕಟ್ಟೆ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

ಪುತ್ತೂರು: ತಾಲೂಕಿನ ಕುದ್ದುಪದವು-ತೋರಣಕಟ್ಟೆ-ಸಾಜ ಬಿಳಿಯೂರುಕಟ್ಟೆ ರಸ್ತೆ ಅಭಿವೃದ್ಧಿಗೆ 1.80 ಕೋಟಿ ಅನುದಾನ ಒದಗಿಸಲಾಗಿದ್ದು, ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬಲ್ನಾಡು ಗ್ರಾಮಕ್ಕೆ 17.40 ಕೋಟಿ ರೂ. ಅನುದಾನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗಿದೆ. ಇದೀಗ ಈ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಶಿಲಾನ್ಯಾಸ ಮಾಡಲಾಗಿದ್ದು, ಶೀಘ್ರ ಸಾರ್ವಜನಿಕರಿಗೆ ಲೋಕಾರ್ಪಣೆಯಾಗಲಿ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಪ್ರಸ್ತುತ ಜಗತ್ತು ನಮ್ಮ

ಕುದ್ದುಪದವು-ತೋರಣಕಟ್ಟೆ-ಸಾಜ-ಬಿಳಿಯೂರುಕಟ್ಟೆ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ನಗರದ ಬೊಳುವಾರಿನಲ್ಲಿರುವ ಜಾಗದಲ್ಲಿ ಆಶ್ಲೇಷ ಬಲಿ, ಅರ್ಧ ಏಕಾಹ ಭಜನೆ ಹಾಗೂ ಜನಜಾಗೃತಿ ಸಭೆ ಶುಕ್ರವಾರ ರಾತ್ರಿ ನಡೆಯಿತು. ಸಭೆಯಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಡೆಯಬಾರದು ಎಂಬ ಹೋರಾಟಕ್ಕೆ ಸಂಘಟನೆ ಮೂಲಕ ಯಶಸ್ಸು ಸಿಕ್ಕಿದೆ. ಬೊಳುವಾರಿ ಕುಕ್ಕೆ ಕ್ಷೇತ್ರಕ್ಕೆ ಜಾಗ ದಾನ ಕೊಟ್ಟವರು ಬ್ರಾಹ್ಮಣರು. ಈ ಜಾಗವನ್ನು ಮತ್ತೆ ಸ್ವಾಧೀನ ಪಡೆಯಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಾಗಲಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ Read More »

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ನಾಳೆ ಅಂದರೆ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರುವರು. ಶ್ರೀ ವಿದ್ಯಾಭೂಷಣ ಅವರ ಗಾಯನ ಕಾರ್ಯಕ್ರಮವನ್ನು ಇದೇ ಸಂದರ್ಭ ಏರ್ಪಡಿಸಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಮೆಟ್ರೋ ನಿಲ್ದಾಣ ಪಕ್ಕವಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ,

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ Read More »

error: Content is protected !!
Scroll to Top