ಪೊಲೀಸ್ ದೌರ್ಜನ್ಯದ ಫೊಟೋ, ವೀಡಿಯೋದ ಮಾಹಿತಿ ತಿಳಿದುಕೊಂಡು ಕ್ರಮ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅವಹೇಳನಕಾರಿಯಾಗಿ ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ದೌರ್ಜನ್ಯದ ಬಗೆಗಿನ ಫೊಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಒಟ್ಟು ಪ್ರಕರಣದ ಮಾಹಿತಿ ಪಡೆದುಕೊಂಡು, ಘಟನೆಯ ಸತ್ಯಾಂಶದ ಬಗ್ಗೆ ತಿಳಿದುಕೊಳ್ಳಲಾಗುವುದು. ನಂತರ ಮುಂದಿನ ಕ್ರಮ ಕೈಗೊಳ‍್ಳಲಾಗುವುದು ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೊಟೋ, ವೀಡಿಯೋದ ಬಗ್ಗೆ ಶಾಸಕರನ್ನು ಕೇಳಿದಾಗ, ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಪೊಲೀಸ್ ದೌರ್ಜನ್ಯದ ಫೊಟೋ, ವೀಡಿಯೋದ ಮಾಹಿತಿ ತಿಳಿದುಕೊಂಡು ಕ್ರಮ: ಶಾಸಕ ಅಶೋಕ್ ಕುಮಾರ್ ರೈ Read More »

ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಮೋರಿ ರಚನೆ: ವಾಹನ ಸಂಚಾರಕ್ಕೆ ಅಡಚಣೆ

ಕಡಬ: ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬರುವ ಮರ್ಧಾಳ ಸಮೀಪದ ನೆಕ್ಕಿತಡ್ಕ ಎಂಬಲ್ಲಿ ರಸ್ತೆಗೆ  ಮೋರಿ ಅಳವಡಿಸಲು ಪ್ರಾರಂಭಿಸಿ ಎರಡು ತಿಂಗಳಾದರೂ ಕಾಮಗಾರಿ ಮುಗಿಯದೆ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಅಪಘಾತಗಳು ಸಂಭವಿಸುತ್ತಲೇ ಇದೆ. ಈಗ ಮೋರಿ ಅಳವಡಿಸುತ್ತಿರುವ  ಸ್ಥಳದಲ್ಲಿ ಈ ಹಿಂದೆ ಎರಡು ಫೀಟ್ ಸುತ್ತಳತೆಯ ಪೈಪ್ ಅಳವಡಿಸಿರುವುದರಿಂದ ಮಳೆಗಾಲದಲ್ಲಿ ಇಲ್ಲಿ ನೀರು ಸರಾಗವಾಗಿ ಹರಿಯದೆ ಮಳೆ ನೀರು ಶೇಕರಣೆಯಾಗಿ ಸಮಸ್ಯೆ ತಲೆದೋರುತ್ತಿತ್ತು. ಈ ಬಗ್ಗೆ  ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿ ಸದೃಢ ಮೋರಿ ಅಳವಡಿಸುವಂತೆ ಕೇಳಿಕೊಂಡಿದ್ದರು.

ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಮೋರಿ ರಚನೆ: ವಾಹನ ಸಂಚಾರಕ್ಕೆ ಅಡಚಣೆ Read More »

ಕಟೀಲು ದೇವಳದ ಮುಂಭಾಗ MRPL ಬಸ್ ಬೆಂಕಿಗಾಹುತಿ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಮುಂಭಾಗದಲ್ಲಿ ಬಸ್ಸೊಂದು ಹೊತ್ತಿ ಉರಿದ ಘಟನೆ ಬುಧವಾರ ಮಧ್ಯಾಹ್ನ ವರದಿಯಾಗಿದೆ. ಬೆಂಕಿಗೆ ಆಹುತಿಯಾದ ಬಸ್ ಎಂಆರ್‌ಪಿಯಲ್ ಗೆ ಸೇರಿದ್ದು ಎನ್ನಲಾಗಿದೆ. ಇದು ಕಟೀಲು ದೇವಸ್ಥಾನದ ಮುಂಭಾಗವಾಗಿ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆಗೆ ಬಸ್ಸಿನಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದು ಯಾವುದೇ ಪ್ರಾಣ ಹಾನಿ

ಕಟೀಲು ದೇವಳದ ಮುಂಭಾಗ MRPL ಬಸ್ ಬೆಂಕಿಗಾಹುತಿ Read More »

ಚಪ್ಪಲಿ ಹಾರ ಹಾಕಿದ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ | ಫೊಟೋಗಳ ಬಗ್ಗೆ ಹೇಳಿಕೆ ನೀಡಿದ ಪುತ್ತೂರು ಡಿವೈಎಸ್ಪಿ

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರವಿರುವ ಬ್ಯಾನರಿಗೆ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾದ ಆರೋಪಿಗಳಿಗೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರವನ್ನು ಹಾಕಿ, ಅದರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಎಂಬ ಶೀರ್ಷಿಕೆ ನೀಡಿ, ಅದಕ್ಕೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 9 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ

ಚಪ್ಪಲಿ ಹಾರ ಹಾಕಿದ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ | ಫೊಟೋಗಳ ಬಗ್ಗೆ ಹೇಳಿಕೆ ನೀಡಿದ ಪುತ್ತೂರು ಡಿವೈಎಸ್ಪಿ Read More »

ಮುಂದಿನ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ಎದುರಿಸಲು ಈಗಲೇ ಸಿದ್ಧರಾಗಿ : ಪ್ರಾಕೃತಿಕ ವಿಕೋಪ ಸಭೆಯಲ್ಲಿ ಸಹಾಯ ಆಯುಕ್ತರಿಂದ ಅಧಿಕಾರಿಗಳಿಗೆ ಸೂಚನೆ

ಪುತ್ತೂರು: ಮುಂದಿನ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಂದರ್ಭದಲ್ಲಿ ಸಮರ್ಪಕವಾಗಿ ಎದುರಿಸಲು ಎಲ್ಲಾ ಇಲಾಖೆಗೆಳ ಸಹಕಾರ ಅತೀ ಆವಶ್ಯಕವಾಗಿದ್ದು, ಉತ್ತಮ ರೀತಿಯಲ್ಲಿ ಸ್ಪಂಧಿಸಿ, ಸಹಕರಿಸುವ ನಿಟ್ಟಿನಲ್ಲಿ ಈಗಲೇ ಸಜ್ಜಾಗಿ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಅಗ್ನಿಶಾಮಕ ಇಲಾಖೆಯವರ ಪಾತ್ರ ಪ್ರಾಮುಖ್ಯವಾಗಿದೆ. ಜೊತೆಗೆ ಎಸ್‌ಡಿಆರ್‌ಎಫ್ ತಂಡವಿದೆ. ಹೋಂಗಾರ್ಡ್ ನವರು ಜೊತೆಗೆ ಸಹಕರಿಸಲಿದ್ದಾರೆ.

ಮುಂದಿನ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ಎದುರಿಸಲು ಈಗಲೇ ಸಿದ್ಧರಾಗಿ : ಪ್ರಾಕೃತಿಕ ವಿಕೋಪ ಸಭೆಯಲ್ಲಿ ಸಹಾಯ ಆಯುಕ್ತರಿಂದ ಅಧಿಕಾರಿಗಳಿಗೆ ಸೂಚನೆ Read More »

ಅಂತರಾಷ್ಟ್ರೀಯ ಮಟ್ಟದ ಕರಾಟೆ “ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರಮಥ ಎಂ.ಭಟ್ ಗೆ ಚಿನ್ನದ ಪದಕ

ಪುತ್ತೂರು: ಕೇರಳದ ತ್ರಿಶೂರ್ ನಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಇಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ಟನ ಪುತ್ತೂರು ಶಾಖೆಯ ಪ್ರಮಥ ಎಮ್ ಭಟ್ ಇವರು ಕುಮಿಟೆಯಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಅವರು ಸಂಸ್ಥೆಯ ಮುಖ್ಯ ಶಿಕ್ಷಕ ನಿತಿನ್ ಎನ್ ಸುವರ್ಣ ಇವರ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಶಿವಪ್ರಸಾದ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ. ಮೈತ್ರಿ ಎಲೆಕ್ಟ್ರಿಕ್ ಕಂ. ಯ ಮಾಲಕರಾದ ರವಿನಾರಾಯಣ

ಅಂತರಾಷ್ಟ್ರೀಯ ಮಟ್ಟದ ಕರಾಟೆ “ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರಮಥ ಎಂ.ಭಟ್ ಗೆ ಚಿನ್ನದ ಪದಕ Read More »

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ

ಪುತ್ತೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ನಾಳೆ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ನಡೆಯಲಿದೆ. ಈ ಬಗ್ಗೆ ಇದೀಗ ಅಧಿಕೃತ ಪ್ರಕಟಣೆ ಹೊರ ಬಿದ್ದಿದೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಲಿದ್ದಾರೆ.

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ Read More »

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದಾತನ ಸೆರೆ

ವಿಟ್ಲ: ವಿಟ್ಲದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿ ಕನ್ಯಾನದ ಅಬೂಬಕ್ಕರ್ (46) ಬಂಧಿತ. ದಾರಿ ಕೇಳುವ ನೆಪದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಘಟನೆ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಅವರು ಮನೆಯವರಿಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿದ್ದರು. ಬಳಿಕ ಪೊಲೀಸ್ ಠಾಣೆಗೂ ಭೇಟಿ ನೀಡಿ, ಆರೋಪಿಯನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರೂ ಕೂಡ

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದಾತನ ಸೆರೆ Read More »

ಮಸೀದಿಗಳಿಗೆ ನೀಡಿದ ದೇಣಿಗೆ ವಾಪಾಸ್ ನೀಡುವಂತೆ ಜಾಹೀರಾತು|64 ಮಸೀದಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ ಕೆಜಿಎಫ್ ಅಭ್ಯರ್ಥಿ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು 64 ಮಸೀದಿಗಳಿಗೆ ತಾನು ನೀಡಿದ ದೇಣಿಗೆ ಚೆಕ್‌ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ. ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದ ಕೆಜಿಎಫ್ ಬಾಬು 64 ಮಸೀದಿಗಳ ಸಮಿತಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ್ದರು. ಸೋತ ನಂತರ ಸಮಿತಿಗಳಿಗೆ ನನ್ನ ಹಣ ಹರಾಮ್ ಆಗಿದ್ದು ಅದನ್ನು ಖರ್ಚು ಮಾಡಬೇಡಿ, ಸಾಧ್ಯವಾದಷ್ಟೂ ಬೇಗ ಅದನ್ನು ವಾಪಸ್ ಕೊಡಿ ಎಂದು ಹೇಳಿದ್ದಾರೆ. ದಾರುಲ್

ಮಸೀದಿಗಳಿಗೆ ನೀಡಿದ ದೇಣಿಗೆ ವಾಪಾಸ್ ನೀಡುವಂತೆ ಜಾಹೀರಾತು|64 ಮಸೀದಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ ಕೆಜಿಎಫ್ ಅಭ್ಯರ್ಥಿ Read More »

ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ : ಮತ್ತೆ 7 ಮಂದಿಯ ವಿಚಾರಣೆ

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರದೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯ ಬರಹ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ 7 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅಭಿ (ಅವಿನಾಶ್), ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕೆಎಸ್ಆರ್‌‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಪ್ರಕರಣಕ್ಕೆ

ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ : ಮತ್ತೆ 7 ಮಂದಿಯ ವಿಚಾರಣೆ Read More »

error: Content is protected !!
Scroll to Top