ಪ್ರತಿಭಟನೆ ಎಂಬ ನಾಟಕದ ಮೂಲಕ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ : ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ
ಪುತ್ತೂರು: ಬ್ಯಾನರ್ ವಿಷಯದಲ್ಲಿ ಬಿಜೆಪಿಯವರು ಪ್ರತಿಭಟನೆ ಎಂಬ ನಾಟಕದ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಬಿ.ವಿಶ್ವನಾಥ ರೈ ಆರೋಪಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಿಂದ ಬಿಜೆಪಿ ವಿಲವಿಲ ಒದ್ದಾಡುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಬಿಜೆಪಿ ನಾಯಕರು ಹತಾಶರಾಗಿ ಏನೇನೋ ಹೇಳಲು ಹೊರಟಿದ್ದಾರೆ.ಯಾರಿಗೂ ಚಪ್ಪಲಿ ಹಾಕುವ ದುಸ್ಥಿತಿ ನಮಗೆ ಬಂದಿಲ್ಲ ಎಂದರು. ಆದರೂ ಚಪ್ಪಲಿ ಹಾಕಿರುವ ಸಂಗತಿ ಖಂಡನೀಯ ಎಂದ ಅವರು, […]










