ಸಾಲ ಮರುಪಾವತಿಸಲು ಮಲ್ಯ ಬಳಿ ಹಣವಿದ್ದರೂ ವಿದೇಶದಲ್ಲಿ ಆಸ್ತಿ ಖರೀದಿಸಿದರು : ಸಿಬಿಐ ಆರೋಪ

ದೆಹಲಿ : ಉದ್ಯಮಿ ವಿಜಯ್ ಮಲ್ಯ ಅವರ ಕಿಂಗ್‌ಫಿಶರ್ ಏರ್‌ಲೈನ್ಸ್ ವಿಮಾನ ಸಂಸ್ಥೆಯು ಭಾರಿ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದ ಸಂದರ್ಭದಲ್ಲಿಯೇ 2015- 16ರಲ್ಲಿ ಇಂಗ್ಲೆಂಡ್ ಮತ್ತು ಫ್ರಾನ್ಸ್‌ ದೇಶಗಳಲ್ಲಿ 330 ಕೋಟಿ ರೂ ಮೌಲ್ಯದ ಆಸ್ತಿಗಳನ್ನು ಖರೀದಿಸಿದ್ದರು. ಭಾರತದಿಂದ ಪರಾರಿಯಾಗುವ ಮುನ್ನ ಈ ವ್ಯವಹಾರ ನಡೆಸಿದ್ದರು ಎಂದು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ), ಮುಂಬಯಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಹೇಳಿದೆ.ಐಡಿಬಿಐ ಬ್ಯಾಂಕ್‌ಗೆ 900 ಕೋಟಿ ರೂ ಸಾಲ ವಂಚನೆ ಪ್ರಕರಣದಲ್ಲಿ ಪೂರಕ ಆರೋಪ ಪಟ್ಟಿ ಸಲ್ಲಿಸಿರುವ […]

ಸಾಲ ಮರುಪಾವತಿಸಲು ಮಲ್ಯ ಬಳಿ ಹಣವಿದ್ದರೂ ವಿದೇಶದಲ್ಲಿ ಆಸ್ತಿ ಖರೀದಿಸಿದರು : ಸಿಬಿಐ ಆರೋಪ Read More »

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಬೆಂಗಳೂರು: ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ನಾಳೆಯಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು. ಇದೀಗ ಹೈಕೋರ್ಟ್ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.ಸಾರಿಗೆ ನೌಕರರ ಸಂಘದ

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ Read More »

ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮೋದಿ ಸೂಚನೆ

ದೆಹಲಿ : ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮತ್ತೊಮ್ಮೆ ಮುನ್ನೆಚ್ಚರಿಕೆ ಘೋಷಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಉನ್ನತ ಮಟ್ಟದ ಸಭೆ ನಡೆಸಿ ಎಲ್ಲ ತುರ್ತು ಪರಿಸ್ಥಿತಿಗಳಿಗೆ ಸಿದ್ಧರಾಗಿರುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್-19 ಇನ್ನೂ ಅಂತ್ಯಗೊಂಡಿಲ್ಲ ಎಂಬುದನ್ನು ಒತ್ತಿ ಹೇಳಿದ ಮೋದಿಯವರು, ರೋಗಿಗಳು ಮತ್ತು ಆರೋಗ್ಯ ಕಾರ್ಯಕರ್ತರು ಆಸ್ಪತ್ರೆಯ ಆವರಣದಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ. ಹಿರಿಯ ನಾಗರಿಕರು ಮತ್ತು ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರು

ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮೋದಿ ಸೂಚನೆ Read More »

ಧಾರ್ಮಿಕತೆಯ ಔನ್ನತ್ಯದಲ್ಲಿದ್ದರೂ, ಸರಳತೆಯ ಸಾಕಾರ ಮೂರ್ತಿ | ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ನಿಧನಕ್ಕೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಂತಾಪ

ಪುತ್ತೂರು: ಶ್ರವಣಬೆಳಗೊಳದ ಶ್ರೀ ಜೈನ ಮಠದ ಪೀಠಾಧ್ಯಕರಾದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನಿಧನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಶ್ರೀ ಜೈನಮಠಕ್ಕೆ ಭೇಟಿ ನೀಡಿದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಅಂತಿಮ ದರ್ಶನ ಪಡೆದರು. ಸಂತಾಪ ಸಂದೇಶ ನೀಡಿದ ಅವರು, ಶ್ರೀ ಜೈನಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಇನ್ನಿಲ್ಲವಾದುದು ದುಃಖದ ಸಂಗತಿ. ಪೂಜ್ಯರು ಧಾರ್ಮಿಕ ಕ್ಷೇತ್ರದ ಔನ್ನತ್ಯದ ಸ್ಥಾನದಲ್ಲಿದ್ದರೂ ಸರಳತೆಯ

ಧಾರ್ಮಿಕತೆಯ ಔನ್ನತ್ಯದಲ್ಲಿದ್ದರೂ, ಸರಳತೆಯ ಸಾಕಾರ ಮೂರ್ತಿ | ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ನಿಧನಕ್ಕೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಂತಾಪ Read More »

ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಗೊಂದಲ ಶುಕ್ರವಾರ ಕಾಂಗ್ರೆಸ್‌ನಿಂದ ರಾಜ ಭವನ ಚಲೋ ಪ್ರತಿಭಟನೆ

ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ಕಾಂಗ್ರೆಸ್ ಶುಕ್ರವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾಳೆ ಕಾಂಗ್ರೆಸ್ ನಾಯಕರು ಕಾರ್ಯಕರ್ತರು ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ ಎಂದು ಆರೋಪಿಸಿದರು. ಕೇಂದ್ರ ಸರಕಾರಕ್ಕೆ ಮೀಸಲಾತಿ ಪ್ರಸ್ತಾಪ ಹೋಗಿಲ್ಲ.

ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಗೊಂದಲ ಶುಕ್ರವಾರ ಕಾಂಗ್ರೆಸ್‌ನಿಂದ ರಾಜ ಭವನ ಚಲೋ ಪ್ರತಿಭಟನೆ Read More »

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬ್ರಾಹ್ಮೀ ಬಿ.ಜೆ. ಪ್ರಥಮ ಶ್ರೇಣಿ

ಪುತ್ತೂರು : 2022-23ನೇ ಸಾಲಿನಲ್ಲಿ ನಡೆದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬ್ರಾಹ್ಮೀ ಬಿ.ಜೆ. ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅವರು ಕಡಬ ನೀನಾದ ನೃತ್ಯ ಕಲಾ ಶಾಲಾ ವಿದ್ಯಾರ್ಥಿನಿಯಾಗಿದ್ದು, ವಿದುಷಿ ಪ್ರಮೀಳಾ ಲೋಕೇಶ್ ಅವರ ಶಿಷ್ಯೆ. ಪುತ್ತೂರು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಪ್ರಬಂಧಕ ಜನಾರ್ದನ ಮತ್ತು ರೇಷ್ಮಾ ದಂಪತಿ ಸುಪುತ್ರಿಯಾಗಿದ್ದಾರೆ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬ್ರಾಹ್ಮೀ ಬಿ.ಜೆ. ಪ್ರಥಮ ಶ್ರೇಣಿ Read More »

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ : ತಪ್ಪಿದ ಅನಾಹುತ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನ ವಾಣಿಜ್ಯ ಸಂಕೀರ್ಣವೊಂದರ ಐದನೇ ಮಹಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ತೊಕ್ಕೊಟ್ಟು ಕಲ್ಲಾಪುದಲ್ಲಿರುವ ಕಿಯಾಂಜಾ ಯೂನಿವರ್ಸಲ್ ವಾಣಿಜ್ಯ ಸಂಕೀರ್ಣದಲ್ಲಿರುವ ಮನ್ಹಾಸ್ ಮಂಡಿ ಹೋಟೆಲ್‌ನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ ಅದು ವ್ಯಾಪಿಸಿದೆ.ಇನ್ನು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಐದನೇ ಮಹಡಿ ಹತ್ತಿ ಚಿಮಣಿಗೆ ತಗುಲಿದ ಬೆಂಕಿಯನ್ನು

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ : ತಪ್ಪಿದ ಅನಾಹುತ Read More »

ನಿವೃತ್ತ ಉಪತಹಶೀಲ್ದಾರ್ ಬಾಲಣ್ಣ ಪಿ. ನಿಧನ

ಪುತ್ತೂರು: ನಿವೃತ್ತ ಉಪತಹಶೀಲ್ದಾರ್ ಬಾಲಣ್ಣ ಪಿ. (68) ಬುಧವಾರ ನಿಧನರಾಗಿದ್ದಾರೆ. ಬನ್ನೂರು ನಂದಿಲ ನಿವಾಸಿಯಾದ ಅವರು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದು, ಬಳಿಕ ಕಡಬದಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ನಿವೃತ್ತ ಉಪತಹಶೀಲ್ದಾರ್ ಬಾಲಣ್ಣ ಪಿ. ನಿಧನ Read More »

23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್

ಮಂಗಳೂರು : 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಬಂಧಿತ ಆರೋಪಿ.ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ.ಇನ್ನು ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ಮಾರ್ಚ್ 22

23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್ Read More »

ಬೆಳ್ಳಾರೆ ಕುಸುಮಧರ ಆಚಾರ್ಯ ನಿಧನ

ಪುತ್ತೂರು: ಬೆಳ್ಳಾರೆ ನಿವಾಸಿ ಕುಸುಮಧರ ಆಚಾರ್ಯ ಬುಧವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪ್ರಾರ್ಥಿ‍ವ ಶರೀರವನ್ನು ಗುರುವಾರ ರಾತ್ರಿ ತಂದು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗುವುದು. ಶುಕ್ರವಾರ ಬೆಳ್ಳಾರೆ ಸ್ವಗೃಹಕ್ಕೆ ಕೊಂಡೊಯ್ದು ಅಲ್ಲಿ ಅಂತಿಮ ವಿಧಿವಿಧಾನ ನಡೆಸಿ ಪುತ್ತೂರು ಹಿಂದೂ ರುದ್ರಭೂಮಿಯಲ್ಲಿ ಬೆಳಿಗ್ಗೆ 11.30 ಕ್ಕೆ ಅಗ್ನಿಸ್ಪರ್ಶ ಮಾಡಲಾಗುವುದು.

ಬೆಳ್ಳಾರೆ ಕುಸುಮಧರ ಆಚಾರ್ಯ ನಿಧನ Read More »

error: Content is protected !!
Scroll to Top