ಸಾಮಾಜಿಕ ಜಾಲತಾಣದಲ್ಲಿ ನಳಿನ್ ಕುಮಾರ್ ಕಟೀಲ್ ರಾಜೀನಾಮೆಗೆ ಒತ್ತಾಯ!?
ಪುತ್ತೂರು: ರಾಜ್ಯ ಬಿಜೆಪಿಯ ಸೋಲಿನ ಹೊಣೆ ಹೊತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತನ್ನ ಹುದ್ದೆಗೆ ರಾಜೀನಾಮೆ ಕೊಡುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದರ ನಡುವೆ ನೈತಿಕ ಹೊಣೆ ಹೊತ್ತವರ ರಾಜೀನಾಮೆ ಯಾವಾಗ? ಎಂಬಿತ್ಯಾದಿ ಒಕ್ಕಣೆಯ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂರಕವಾಗಿ ಕಾಮೆಂಟ್ ಗಳನ್ನು ನೀಡಲಾಗುತ್ತಿದೆ. ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಟ್ರೋಲ್ ಮಾಡಲು ನೆಟ್ಟಿಗರು ಶುರು ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನಳಿನ್ ಕುಮಾರ್ ಕಟೀಲ್ ರಾಜೀನಾಮೆಗೆ ಒತ್ತಾಯ!? Read More »










