ಪ್ರವೀಣ್ ನೆಟ್ಟಾರು ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಪುತ್ತೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ, ಪ್ರವೀಣ್ ಹೆತ್ತವರೊಂದಿಗೆ ಮಾತನಾಡಿದರು. ಪ್ರವೀಣ್ ನೆಟ್ಟಾರು ಅವರ ಪುತ್ಥಳಿಗೆ ನಮಸ್ಕರಿಸಿ, ಪ್ರವೀಣ್ ನೆಟ್ಟಾರು ಅವರ ತಂದೆ – ತಾಯಿಯ ಆಶೀರ್ವಾದ ಪಡೆದರು. ಇತ್ತೀಚೆಗೆ ಪ್ರವೀಣ್ ನೆಟ್ಟಾರು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದು, ರಾಜ್ಯ – ದೇಶದ ಗಮನ ಸೆಳೆದಿತ್ತು. ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಹೊಸ ಮನೆಯನ್ನು ನಿರ್ಮಿಸಿಕೊಡಲಾಗಿತ್ತು.

ಪ್ರವೀಣ್ ನೆಟ್ಟಾರು ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ Read More »

ಬುಡಸಹಿತ ರಿಕ್ಷಾದ ಮೇಲೆ ಬಿದ್ದ ಮರ | ಅಂಗವಿಕಲ ಸಹೋದರನಿಗೆ ತಾಯಿಯಾಗಿದ್ದ ಪುಷ್ಪಾ ಸಹಿತ ಇಬ್ಬರ ದಾರುಣ ಸಾವು

ಕಾಪು: ಬೃಹತ್ ಮರವೊಂದು ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದು, ಇಬ್ಬರು ಪ್ರಯಾಣಿಕರು ಮೃತಪಟ್ಟಿರುವ ಬಗ್ಗೆ ಕಾಪು – ಶಿರ್ವ ರಸ್ತೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಮರ ಬುಡಸಹಿತ ಬಿದ್ದಿದ್ದು, ಮಲ್ಲಾರು ಚಂದ್ರನಗರದ ಬಳಿ ಗುರುವಾರ ರಾತ್ರಿ 8 ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ. ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಪಾದೂರು ಕೂರಾಲು ರೈಸ್‌ಮಿಲ್‌ ಬಳಿಯ ನಿವಾಸಿ ಪುಷ್ಪಾ ಕುಲಾಲ್‌ (45) ಮತ್ತು

ಬುಡಸಹಿತ ರಿಕ್ಷಾದ ಮೇಲೆ ಬಿದ್ದ ಮರ | ಅಂಗವಿಕಲ ಸಹೋದರನಿಗೆ ತಾಯಿಯಾಗಿದ್ದ ಪುಷ್ಪಾ ಸಹಿತ ಇಬ್ಬರ ದಾರುಣ ಸಾವು Read More »

ಬೈಕ್‌ನಲ್ಲಿ ಕದ್ರಿ ದೇವಳಕ್ಕೆ ನುಗ್ಗಿದ ನಾಲ್ವರು ಯುವಕರು | ಯುವಕರ ಉದ್ದೇಶದ ಬಗ್ಗೆ ಹಲವು ಅನುಮಾನ

ಮಂಗಳೂರು: ಮಂಗಳೂರಿನ‌ ಪುರಾಣ ಪ್ರಸಿದ್ಧ ಐತಿಹಾಸಿಕ ಕದ್ರಿ ದೇಗುಲಕ್ಕೆ ಅಪರಿಚಿತರು ಬೈಕ್‌ನೊಂದಿಗೆ ನುಗ್ಗಿರುವ ಘಟನೆ ನಡೆದಿದೆ. ಮೂವರು ಯುವಕರು ಬೈಕ್​ನೊಂದಿಗೆಯೇ ದೇವಾಲಯದ ಆವರಣ ಪ್ರವೇಶಿಸಿದ್ದಾರೆ. ಅನುಮಾನಾಸ್ಪದವಾಗಿ ದೇಗುಲ ಪ್ರವೇಶಿಸಿದವರನ್ನು ಸ್ಥಳೀಯರು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಸೈಗೋಳಿ ನಿವಾಸಿಗಳಾದ ಹಸನ್ ಶಾಹಿನ್‌, ಜಾಫರ್‌, ಫಾರೂಕ್‌ನನ್ನು ಕದ್ರಿ ಪೊಲೀಸರಿಗೆ ಒಪ್ಪಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕದ್ರಿ ಠಾಣೆಯಲ್ಲಿ ವಶಕ್ಕೆ ಪಡೆದಿರುವವರ ತೀವ್ರ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ಶಂಕಿತ ಉಗ್ರ

ಬೈಕ್‌ನಲ್ಲಿ ಕದ್ರಿ ದೇವಳಕ್ಕೆ ನುಗ್ಗಿದ ನಾಲ್ವರು ಯುವಕರು | ಯುವಕರ ಉದ್ದೇಶದ ಬಗ್ಗೆ ಹಲವು ಅನುಮಾನ Read More »

ಕಾರ್ಯಕರ್ತರ ಅವಗಣನೆಗೆ ತಕ್ಕ ಉತ್ತರ ನೀಡಿದ್ದೇವೆ: ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಒಂದು ಬದ್ಧತೆಗಾಗಿ ಚುನಾವಣೆ ಎದುರಿಸಿದ್ದೇವೆ. ಸ್ಪಷ್ಟ ಸಂದೇಶವನ್ನು ನಾಯಕರಿಗೆ ನೀಡಿದ್ದೇವೆ. ಚುನಾವಣಾ ಆಯೋಗ ತಿಳಿಸಿದ ಪರಿಮಿತಿಯೊಳಗಡೇ ಖರ್ಚು – ವೆಚ್ಚಗಳನ್ನು ಸರಿದೂಗಿಸಿದ್ದೇವೆ. ಇದನ್ನೆಲ್ಲಾ ಕಾರ್ಯಕರ್ತರೇ ನಿರ್ವಹಿಸಿದ್ದು, ಆದ್ದರಿಂದ ಚುನಾವಣೆಯ ಗೆಲುವು ಕಾರ್ಯಕರ್ತರ ಗೆಲುವು ಎಂದು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹೇಳಿದರು. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಕಾರ್ಯಕರ್ತರಿಂದ, ಮತದಾರರಿಂದ ಅಭೂತಪೂರ್ವ ಬೆಂಬಲ ಸಿಕ್ಕಿದೆ. ನಿರೀಕ್ಷೆಗೂ ಮೀರಿದ ಪ್ರೋತ್ಸಾಹ, ಬೆಂಬಲ ವ್ಯಕ್ತವಾಗಿದೆ. ಹಾಗಾಗಿ ಚುನಾವಣೆಯಲ್ಲಿ ಗೆಲುವು ಪಡೆಯುವುದು ನಿಶ್ಚಿತ. ಸುಮಾರು 8ರಿಂದ 9

ಕಾರ್ಯಕರ್ತರ ಅವಗಣನೆಗೆ ತಕ್ಕ ಉತ್ತರ ನೀಡಿದ್ದೇವೆ: ಅರುಣ್ ಕುಮಾರ್ ಪುತ್ತಿಲ Read More »

ಕುಟುಂಬಕ್ಕೆ ಆಧಾರವಾಗಿದ್ದ ಸಹೋದರರಿಗೆ ಅಪಘಾತ | ಚಿಕಿತ್ಸಾ ವೆಚ್ಚ ಭರಿಸಲು ಆರ್ಥಿಕ ಸಹಾಯಕ್ಕೆ ಮೊರೆ

ಪುತ್ತೂರು: ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟಿಪ್ಪರ್ ಅಪ್ಪಳಿಸಿತ್ತು. ಅಷ್ಟೇ, ಬೈಕಿನಲ್ಲಿದ್ದ ಸಹೋದರರಿಬ್ಬರಿಗೂ ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು. ನೆರವಿಗೆ ನಿಲ್ಲಬೇಕಿದ್ದ ತಂದೆ ವಿಕಲಚೇತನ. ಸಹಾಯಕ್ಕೆ ನಿಲ್ಲುವವರಾರು? ಕುಟುಂಬದ ಜವಾಬ್ದಾರಿಗೆ ಹೆಗಲು ಕೊಡುವವರಾರು? ಇಂತಹ ದೈನವೀ ಸ್ಥಿತಿಯಲ್ಲಿ ಸಹೋದರರಿಗೆ ನೆರವಾಗುವಂತೆ ತಾಯಿ ಮನವಿ ಮಾಡಿಕೊಂಡಿದ್ದಾರೆ. ಇದು ಕುಟುಂಬವೊಂದರ ಹೃದಯ ವಿದ್ರಾವಕ ಸ್ಥಿತಿ. ಕಡಬ ತಾಲೂಕಿನ ಕುದ್ಮಾರು ಗ್ರಾಮದ ಪದ್ಮಯ್ಯ ಗೌಡ ಪುಷ್ಪಲತಾ ದಂಪತಿ ಪುತ್ರರಾದ ಮಿಥುನ್ ಹಾಗೂ ಚಿಂತನ್ ಅಪಘಾತಕ್ಕೀಡಾದವರು.

ಕುಟುಂಬಕ್ಕೆ ಆಧಾರವಾಗಿದ್ದ ಸಹೋದರರಿಗೆ ಅಪಘಾತ | ಚಿಕಿತ್ಸಾ ವೆಚ್ಚ ಭರಿಸಲು ಆರ್ಥಿಕ ಸಹಾಯಕ್ಕೆ ಮೊರೆ Read More »

ಆಶಾ ತಿಮ್ಮಪ್ಪ ಪರ 70ರಿಂದ 80 ಸಾವಿರ ಮತ | ಗೆಲುವು ಖಂಡಿತಾ ಎಂದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಈ ಬಾರಿ ಉತ್ತಮ ಮತದಾನವಾಗಿದ್ದು, ಶೇ. 80ರಷ್ಟು ಮತದಾರರು ಮತದಾನ ಮಾಡಿದ್ದಾರೆ. ಇದರಲ್ಲಿ 75 ಸಾವಿರದಿಂದ 80 ಸಾವಿರದಷ್ಟು ಮತಗಳು ಬಿಜೆಪಿ ಪರವಾಗಿ ಬಿದ್ದಿವೆ ಎಂದು ಶಾಸಕ ಸಂಜೀವ ಮಠಂದೂರು ವಿಶ್ವಾಸ ವ್ಯಕ್ತಪಡಿಸಿದರು. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ಹಿಂದುತ್ವಕ್ಕೆ ಒತ್ತು ನೀಡಿರುವ ಕ್ರಮ, ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡಿರುವ ಸಮರೋಪಾದಿ ಕೆಲಸಗಳ ಪರಿಣಾಮವಾಗಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಬಹುಮತದಿಂದ ಗೆದ್ದು ಬರಲಿದ್ದಾರೆ ಎಂದರು. ಹಿಂದಿನ ವಿಧಾನಸಭಾ

ಆಶಾ ತಿಮ್ಮಪ್ಪ ಪರ 70ರಿಂದ 80 ಸಾವಿರ ಮತ | ಗೆಲುವು ಖಂಡಿತಾ ಎಂದ ಶಾಸಕ ಸಂಜೀವ ಮಠಂದೂರು Read More »

ಮತ ಎಣಿಕೆಯಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿವರೆಗೆ 144 ಸೆಕ್ಷನ್

ಪುತ್ತೂರು: ಮತ ಎಣಿಕೆ ಕಾರ್ಯ ನಡೆಯುವ ಮೇ 13ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಆದೇಶಿಸಿದ್ದಾರೆ. ಮೇ 13ರ ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು

ಮತ ಎಣಿಕೆಯಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿವರೆಗೆ 144 ಸೆಕ್ಷನ್ Read More »

ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸದವರಿಗೆ ಅಂತಿಮ ಅವಕಾಶ : ಮೇ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಪುತ್ತೂರು: 2023ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸುಗಳ ಸರಕಾರಿ ಸೀಟುಗಳ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಂತಿಮ ಅವಕಾಶ. ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಕಷ್ಟು ಅವಕಾಶಗಳನ್ನು ನೀಡಲಾಗಿತ್ತು. ಆದಾಗ್ಯೂ ಕೆಲವು ಪೋಷಕರು ಹಾಗು ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಸಿಇಟಿ-2023ಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕೊನೆಯ ಹಾಗು ಅಂತಿಮ ಅವಕಾಶವನ್ನು ನೀಡಿದ್ದು, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್‌ಸಿ (ನರ್ಸಿಂಗ್‌) ಮುಂತಾದ ಕೋರ್ಸುಗಳ ಪ್ರವೇಶಕ್ಕೆ ಇಲ್ಲಿಯವರೆಗೆ ಸಿಇಟಿ-2023ಕ್ಕೆ

ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸದವರಿಗೆ ಅಂತಿಮ ಅವಕಾಶ : ಮೇ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Read More »

25ರಿಂದ 30 ಸಾವಿರ ಮತಗಳ ಅಂತರದಿಂದ ಜಯ: ಅಶೋಕ್ ಕುಮಾರ್ ರೈ ವಿಶ್ವಾಸ | ಹಾರ, ಸನ್ಮಾನ ಬೇಡ, ಆ ಹಣ ಬಡವರಿಗೆ ನೀಡಿ | ಬೇರೆ ಪಕ್ಷದವರಿಗೂ ನೋವುಂಟು ಮಾಡಬೇಡಿ | ಕಾಂಗ್ರೆಸ್ ಒಗ್ಗಟ್ಟಿಗೆ ಅಭಿನಂದನೆ ತಿಳಿಸಿದ ಅಶೋಕ್ ಕುಮಾರ್ ರೈ

ಪುತ್ತೂರು: ಚುನಾವಣೆಯಲ್ಲಿ ಗೆಲುವಿನ ಅಲೆ ನಮ್ಮ ಪರವಾಗಿದೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದ್ದರಿಂದ ಕಾಂಗ್ರೆಸ್ ಈ ಬಾರಿ ಗೆಲುವುದು ಖಂಡಿತಾ. ಪುತ್ತೂರಿನಲ್ಲಿ 25ರಿಂದ 30 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಚುನಾವಣೆ ಉತ್ತಮ ರೀತಿಯಲ್ಲಿ ನಡೆದಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಈ ಚುನಾವಣೆಯಲ್ಲಿ ಮತದಾರರು ನಮಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ

25ರಿಂದ 30 ಸಾವಿರ ಮತಗಳ ಅಂತರದಿಂದ ಜಯ: ಅಶೋಕ್ ಕುಮಾರ್ ರೈ ವಿಶ್ವಾಸ | ಹಾರ, ಸನ್ಮಾನ ಬೇಡ, ಆ ಹಣ ಬಡವರಿಗೆ ನೀಡಿ | ಬೇರೆ ಪಕ್ಷದವರಿಗೂ ನೋವುಂಟು ಮಾಡಬೇಡಿ | ಕಾಂಗ್ರೆಸ್ ಒಗ್ಗಟ್ಟಿಗೆ ಅಭಿನಂದನೆ ತಿಳಿಸಿದ ಅಶೋಕ್ ಕುಮಾರ್ ರೈ Read More »

10ರಿಂದ 12 ಸಾವಿರ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

ಪುತ್ತೂರು: ಪ್ರಜಾಪ್ರಭುತ್ವದ ಮೌಲ್ಯವನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ ಎನ್ನುವುದು ನಿನ್ನೆಯ ಮತದಾನದಿಂದ ತಿಳಿದುಬರುತ್ತದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮ ಮತದಾನವಾಗಿದ್ದು, ಬಿಜೆಪಿ ಜಯ ಗಳಿಸುವುದು ನಿಶ್ಚಿತ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮತದಾನದ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಬಿಜೆಪಿ ಗೆಲುವು ನಿಶ್ಚಿತ. ಅದರಲ್ಲಿ ಎರಡು ಮಾತಿಲ್ಲ. ಗೆಲುವಿನ ಅಂತರ ಸುಮಾರು 10ರಿಂದ 12 ಸಾವಿರದಷ್ಟು ಇರಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಮತದಾನದಲ್ಲಿ ಮತದಾರರು ಉತ್ಸಾಹದಿಂದ ಪಾಲ್ಗೊಂಡಿರುವುದು

10ರಿಂದ 12 ಸಾವಿರ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ Read More »

error: Content is protected !!
Scroll to Top