ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ

ಪುತ್ತೂರು: ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು. ಏ.2 ಹಾಗೂ 3 ರಂದು ವಾರ್ಷಿಕ ಜಾತ್ರೋತ್ಸವ, ದೈವಗಳ ನೇಮೋತ್ಸವದ ಅಂಗವಾಗಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲಿದ್ದ ಪ್ಲಾಸ್ಟಿಕ್, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸುವ ಕಾರ್ಯವನ್ನು ಶ್ರಮದಾನ ಮೂಲಕ ಮಾಡಿದರು. ಶ್ರಮದಾನದಲ್ಲಿ ಯುವಕ ಮಂಡಲದ ಸದಸ್ಯರಾದ ಶಿವಪ್ರಸಾದ್ ಕೈಂದಾಡಿ, ಪ್ರಭಾತ್ ಸಾರಕರೆ, ವರುಣ್ ಶಾಂತಿಗೋಡು, ಪ್ರವೀಣ್ ಬೊಳ್ಳೆಕ್ಕು, ಕಾರ್ತಿಕ್ ಕುಕ್ಯಾನ, ಶಶಿ ಕುಮಾರ್ ಓಲಾಡಿ, ಭಾಸ್ಕರ ಓಲಾಡಿ, ವಿನೋದ್ ಓಲಾಡಿ, ಹರ್ಷಿತ್ ಬಂಡಶಾಲೆ, […]

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ Read More »

ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನ

ಬೆಂಗಳೂರು : ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ದಿಲ್ಲಿಯ ಎಐಸಿಸಿ ಕಚೇರಿಯಿಂದ ಮಾತಾಡುತ್ತಿದ್ದೇವೆ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದಾರೆ. 8287309623 ಮೊಬೈಲ್ ನಂಬರ್​​ನಿಂದ ಅಪರಿಚಿತ ವ್ಯಕ್ತಿಗಳು ಆಕಾಂಕ್ಷಿಗಳಿಗೆ ಕರೆ ಮಾಡಿ ಹಣ ಸುಲಿಯಲು ಯತ್ನಿಸಿದ್ದಾರೆ. 2 ಮತ್ತು 3ನೇ ಸ್ತರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚಕರು ಕರೆ ಮಾಡಿ ವಿಧಾನಸಭಾ ಚುನಾವಣೆ ಸ್ಪರ್ಧೆ ಸಂಬಂಧ ಪಟ್ಟಿ ಸಿದ್ಧಗೊಂಡಿದೆ. ಚುನಾವಣೆ ಪಟ್ಟಿಯಲ್ಲಿ ನಿಮ್ಮ

ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನ Read More »

ಕ್ರೀಡೆಗೆ ಪ್ರೋತ್ಸಾಹ ಕೊಡುವ ಮೂಲಕ ಯುವಕರು ಸಾಧಕರಾಗಬೇಕು: ಶಾಸಕ ಮಠಂದೂರು | ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ

ಪುತ್ತೂರು : ಆದಿ ದ್ರಾವಿಡ ಸಮಾಜ ಒಂದು ಕಾರ್ಯಕ್ರಮದ ಮೂಲಕ ಅಂಬೇಡ್ಕರ್ ನೆನಪುಗಳನ್ನು ಮೆಲುಕು ಹಾಕುತ್ತಾ ಈ ದೇಶದ ಇತಿಹಾಸ, ಪರಂಪರೆ, ಹಿಂದೂ ಸಂಸ್ಕೃತಿಗೆ  ಕೊಟ್ಟ ಕೊಡುಗೆಗಳ ಆಧಾರದಲ್ಲಿ ಸಮಾಜಕ್ಕೆ ಸರಕಾರ ಹಲವು ಸವಲತ್ತು ಕೊಟ್ಟಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹಾ ಕ್ರೀಡೆಗಳನ್ನು ಆಯೋಜಿಸಿ ಮನೋರಂಜನೆ ಕೊಡುವ ಕೆಲಸ ಮಾಡಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಮೂಲಕ ಯುವಕರು ಸಾಧಕರಾಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಕೊಟ್ಟಿಗೆ ಪೆರ್ಲ ವಡೆದರ ಆಶ್ರಯದಲ್ಲಿ  ಆದಿ

ಕ್ರೀಡೆಗೆ ಪ್ರೋತ್ಸಾಹ ಕೊಡುವ ಮೂಲಕ ಯುವಕರು ಸಾಧಕರಾಗಬೇಕು: ಶಾಸಕ ಮಠಂದೂರು | ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ Read More »

ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ಮನಸ್ತಾಪ: ರಾಹುಲ್ ಗಾಂಧಿ ವಿರುದ್ಧ ಮೋದಿ ವಾಗ್ದಾಳಿ

ದೆಹಲಿ : ಭಾರತದಲ್ಲಿ ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರು ಕಂಗಾಲಾಗಿದ್ದಾರೆ. ಹೀಗಾಗಿ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಿರಂತರ ದಾಳಿ ನಡೆಸುತ್ತಿದ್ದಾರೆ ಎಂದು ಪ್ರದಾನಿ ನರೇಂದ್ರ ಮೋದಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯನ್ನು ಕುಟುಕಿದ್ದಾರೆ. ಲಂಡನ್‌ನಲ್ಲಿ ರಾಹುಲ್ ಗಾಂಧಿ ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ತುತ್ತಾಗುತ್ತಿದೆ ಎಂದು ನೀಡಿರುವ ಹೇಳಿಕೆ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮೋದಿ ತೀಕ್ಷ್ಣ ವಾಗ್ದಾಳಿ ನಡೆಸಿದರು. ದೇಶ ಅತ್ಯಂತ ಆತ್ಮವಿಶ್ವಾಸದಲ್ಲಿ ಇರುವ ಸಂದರ್ಭದಲ್ಲಿ ಇಡೀ ವಿಶ್ವದ ಬೌದ್ಧಿಕ ಸಮುದಾಯ ಭಾರತದ ಬಗ್ಗೆ

ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ಮನಸ್ತಾಪ: ರಾಹುಲ್ ಗಾಂಧಿ ವಿರುದ್ಧ ಮೋದಿ ವಾಗ್ದಾಳಿ Read More »

ನಾಳೆ (ಮಾ.20) : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಖೋ-ಖೋ ಪಂದ್ಯಾಟ

ಪುತ್ತೂರು : ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋ ಖೋ ಪಂದ್ಯಾಟವು ಮಾರ್ಚ್ 20 ಸೋಮವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಪೂರ್ವಾಹ್ನ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ರಾಷ್ಟ್ರೀಯ ಖೋ ಖೋ ತರಬೇತುದಾರ ಕಾರ್ತಿಕ್.ಎನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ

ನಾಳೆ (ಮಾ.20) : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಖೋ-ಖೋ ಪಂದ್ಯಾಟ Read More »

ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ

ಮಂಗಳೂರು : ಮಂಗಳೂರಿನ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದ ಪೊದೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟಿದ್ದ ದೇವರ ವಿಗ್ರಹಗಳು ಪತ್ತೆಯಾಗಿವೆ. ಶಾರಾದಾ ದೇವಿಯ 2.5 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ

ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ Read More »

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ

ಬೆಂಗಳೂರು : ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದ ವಾಶ್‌ರೂಂನಲ್ಲಿ ಧೂಮಪಾನ ಮಾಡಿದ 20 ವರ್ಷದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಹದಿನೈದು ದಿನಗಳ ಅವಧಿಯಲ್ಲಿ ಇಂಡಿಗೊ ದಾಖಲಾದ ಎರಡನೇ ಪ್ರಕರಣ ಇದು.ಶುಕ್ರವಾರ ಈ ಘಟನೆ ಸಂಭವಿಸಿದೆ. ಅಸ್ಸಾಂ ಮೂಲದ ಸೆಹೆರಿ ಚೌಧುರಿ ಎಂಬ ಯುವಕ ವಾಶ್‌ರೂಮ್‌ನೊಳಗೆ ಸಿಗರೇಟ್ ಸೇದುತ್ತಿದ್ದ.ಪ್ರಯಾಣಿಕರು ವಾಸನೆ ಮತ್ತು ಹೊಗೆಯನ್ನು ಕಂಡು ಕ್ಯಾಬಿನ್ ಸಿಬ್ಬಂದಿಗೆ ತಿಳಿಸಿದ್ದಾರೆ. ವಿಮಾನ ಲ್ಯಾಂಡ್ ಆದ ನಂತರ, ಫ್ಲೈಟ್ ಕ್ಯಾಪ್ಟನ್ ವಿಮಾನ ನಿಲ್ದಾಣ ಪೊಲೀಸ್

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ Read More »

ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಡಬ್‌

ಬೆಂಗಳೂರು : ಎಲ್ಲೆಡೆಯಿಂದ ಅಪಾರ ಮೆಚ್ಚುಗೆ ಪಡೆದ ‘ಕಾಂತಾರ’ ಸಿನಿಮಾ ಇದೀಗ ವಿದೇಶದ ಭಾಷೆಗಳಿಗೆ ಡಬ್‌ ಆಗುತ್ತಿದೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಈ ಚಿತ್ರ ಪ್ರದರ್ಶನ ಕಂಡು ಅಲ್ಲಿದ್ದ ಗಣ್ಯರೂ ಮೆಚ್ಚಿಕೊಂಡಿದ್ದಾರೆ. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಚಿತ್ರವನ್ನು ಡಬ್‌ ಮಾಡಲಾಗುತ್ತಿದೆ. ಈ ಹಿಂದೆ ಇಂಗ್ಲಿಷ್‌ ಗೆ ಡಬ್‌ ಮಾಡಿ ನೆಟ್‌ಫ್ಲಿಕ್ಸ್‌ನಲ್ಲಿ ರಿಲೀಸ್‌ ಮಾಡಲಾಗಿತ್ತು. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಅವತರಣಿಕೆಯ ‘ಕಾಂತಾರ’ ಚಿತ್ರವನ್ನು ಅಲ್ಲಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು

ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಡಬ್‌ Read More »

ಸಿಎಂ ಯೋಗಿ ಆದಿತ್ಯನಾಥ್ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಇತಿಹಾಸ ಸೃಷ್ಟಿ

ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರು ತಿಂಗಳಲ್ಲಿ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ 100ನೇ ಬಾರಿಗೆ ದೇವಾಲಯಕ್ಕೆ ಹೋಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. 2017ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸರಾಸರಿ 21 ದಿನಗಳಿಗೊಮ್ಮೆ ದೇವಸ್ಥಾನಕ್ಕೆ ಬಂದು ಬಾಬಾ ವಿಶ್ವನಾಥನ ಆರಾಧನೆ ಹಾಗೂ ಷೋಡಶೋಪಚಾರ ವಿಧಾನದ ಮೂಲಕ ರಾಜ್ಯದ ಹಾಗೂ ದೇಶದ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ಸಿಎಂ ಯೋಗಿ ತಿಂಗಳಿಗೊಮ್ಮೆಯಾದರೂ ಕಾಶಿಗೆ ಭೇಟಿ ನೀಡುತ್ತಿದ್ದು, ಪ್ರತಿ

ಸಿಎಂ ಯೋಗಿ ಆದಿತ್ಯನಾಥ್ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಇತಿಹಾಸ ಸೃಷ್ಟಿ Read More »

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 2ಎ ನ ಕ್ರಮ ಸಂಖ್ಯೆ 6ಎ

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರಕಾರ ಆದೇಶ Read More »

error: Content is protected !!
Scroll to Top