ಮೆಕ್ ಮಹೊನ್ ರೇಖೆಯೇ ಚೀನಾ-ಅರುಣಾಚಲ ಪ್ರದೇಶದ ನಡುವಿನ ಗಡಿ ರೇಖೆ: ಭಾರತ ಪರ ನಿಂತ ಅಮೆರಿಕಾ

ವಾಷಿಂಗ್ಟನ್: ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ. ಮೆಕ್ ಮಹೊನ್ ರೇಖೆಯೇ ಚೀನಾ ಮತ್ತು ಅರುಣಾಚಲ ಪ್ರದೇಶದ ನಡುವಿನ ಅಂತಾರಾಷ್ಟ್ರೀಯ ಗಡಿ ಎಂದು ಅಮೆರಿಕಾ ಹೇಳಿದೆ. ಅಮೆರಿಕದ ಉಭಯ ಪಕ್ಷೀಯ ಸೆನೆಟ್ ನಲ್ಲಿ ಸೆನೆಟರ್ ಜೆಫ್ ಮರ್ಕ್ಲಿ ಈ ನಿರ್ಣಯವನ್ನು ಪರಿಚಯಿಸಿದ್ದು ಸೆನೆಟರ್ ಜಾನ್ ಕಾರ್ನಿನ್ ನಿರ್ಣಯವನ್ನು ಸಹ ಪ್ರಾಯೋಜಿಸಿದರು. ಈ ವೇಳೆ ಇಂಡೋ-ಪೆಸಿಫಿಕ್‌ಗೆ ಚೀನಾ ಗಂಭೀರ ಬೆದರಿಕೆಗಳನ್ನು ಒಡ್ಡುತ್ತಿದೆ. ಅಂತಹ ಸಮಯದಲ್ಲಿ ನಮ್ಮ ಕಾರ್ಯತಂತ್ರದ ಪಾಲುದಾರ ದೇಶಗಳೊಂದಿಗೆ, ಅದರಲ್ಲೂ ವಿಶೇಷವಾಗಿ ಭಾರತದೊಂದಿಗೆ ಒಗ್ಗಟ್ಟಾಗಿ ನಿಲ್ಲುವುದು ನಿರ್ಣಾಯಕವಾಗಿದೆ […]

ಮೆಕ್ ಮಹೊನ್ ರೇಖೆಯೇ ಚೀನಾ-ಅರುಣಾಚಲ ಪ್ರದೇಶದ ನಡುವಿನ ಗಡಿ ರೇಖೆ: ಭಾರತ ಪರ ನಿಂತ ಅಮೆರಿಕಾ Read More »

ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಮುನ್ನವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಉಡುಗೊರೆಗಳ ಸುರಿಮಳೆಗೈಯುತ್ತಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಇಸಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಸಾಧ್ಯತೆಯಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸೇರಿದ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ಸೆಳೆಯಲು ಸೀರೆ, ಬೆಳ್ಳಿ, ಬಂಗಾರದ ವಸ್ತುಗಳು, ಪ್ರೆಷರ್ ಕುಕ್ಕರ್, ಮಿಕ್ಸರ್ ಗ್ರೈಂಡರ್, ಟೆಲಿವಿಷನ್ ಸೆಟ್, ಮೊಬೈಲ್‌ಗಳನ್ನು ಹಂಚುತ್ತಿದ್ದಾರೆ. ಹಾವೇರಿ ಜಿಲ್ಲೆಯ

ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ Read More »

ಕೃತಕ ಹೂವುಗಳ ಪ್ರದರ್ಶನಕ್ಕೆ ಚಾಲನೆ | ಲಯನ್ಸ್ ಸೇವಾ ಮಂದಿರದಲ್ಲಿ ಪ್ರದರ್ಶನ

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು, ರೋಹಿಣಿ ಹೊಲಿಗೆ ಆರ್ಟ್ & ಕ್ರಾಫ್ಟ್ ತರಬೇತಿ ಕೇಂದ್ರದ ಆಶ್ರಯದಲ್ಲಿ ಬುಧವಾರ ಬೆಳಿಗ್ಗೆ ಲಯನ್ಸ್ ಸೇವಾ ಮಂದಿರದಲ್ಲಿ ಕೃತಕ ಹೂವುಗಳ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ಅವರು ಕೃತಕ ಹೂವುಗಳ ಪ್ರದರ್ಶನಕ್ಕೆ ಚಾಲನೆ ನೀಡಿ, ಶುಭಹಾರೈಸಿದರು. ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಕೇಶವ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷ ಶಾಂತಿ ಹೆಗಡೆ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಗಣೇಶ್ ಶೆಟ್ಟಿ ಕೆ., ಜಿಲ್ಲಾ ಸಂಪನ್ಮೂಲ

ಕೃತಕ ಹೂವುಗಳ ಪ್ರದರ್ಶನಕ್ಕೆ ಚಾಲನೆ | ಲಯನ್ಸ್ ಸೇವಾ ಮಂದಿರದಲ್ಲಿ ಪ್ರದರ್ಶನ Read More »

ಕಪ್ಪು ಸಮುದ್ರದ ಮೇಲೆ ಅಮೆರಿಕಾದ ಡ್ರೋನ್‌ ಹೊಡೆದುರುಳಿಸಿದ ರಷ್ಯಾದ ಯುದ್ಧವಿಮಾನ

ಕೀವ್: ರಷ್ಯಾದ ಫೈಟರ್ ಜೆಟ್ ಕಪ್ಪು ಸಮುದ್ರದ ಮೇಲೆ ಅಮೆರಿಕಾದ ಕಣ್ಗಾವಲು ಡ್ರೋನ್‌ನ ಪ್ರೊಪೆಲ್ಲರ್ ಅನ್ನು ಹೊಡೆದುರುಳಿಸಿದ್ದು ಇದು ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ ಎಂದು ಅಮೆರಿಕಾ ಆರೋಪಿಸಿದೆ. ಆದರೆ ಈ ಆರೋಪವನ್ನು ತಳ್ಳಿಹಾಕಿರುವ ರಷ್ಯಾ ತನ್ನ ಯುದ್ಧವಿಮಾನ ಅಮೆರಿಕಾದ ಡ್ರೋನ್ ಅನ್ನು ಹೊಡೆದುರುಳಿಸಿಲ್ಲ. ಬದಲಾಗಿ, ಡ್ರೋನ್ ಅನ್ನು ತಡೆಯಲು ಯತ್ನಿಸಿತ್ತು. ಈ ವೇಳೆ ನಿಯಂತ್ರಣ ಕಳೆದುಕೊಂಡ ಡ್ರೋನ್ ಸಮುದ್ರಕ್ಕೆ ಬಿದ್ದಿದೆ ಎಂದು ರಷ್ಯಾ ಹೇಳುತ್ತಿದೆ. ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಇದನ್ನು ಅಂತಾರಾಷ್ಟ್ರೀಯ ಕಾನೂನಿನ

ಕಪ್ಪು ಸಮುದ್ರದ ಮೇಲೆ ಅಮೆರಿಕಾದ ಡ್ರೋನ್‌ ಹೊಡೆದುರುಳಿಸಿದ ರಷ್ಯಾದ ಯುದ್ಧವಿಮಾನ Read More »

ಕರಾವಳಿಗೆ ತಂಪೆರೆದ ಮಳೆ | ಪುಣಚ, ಕಬಕ, ನೇರಳಕಟ್ಟೆಯಲ್ಲಿ ಸುರಿದ ಮಳೆ

ಪುತ್ತೂರು: ಪುತ್ತೂರು ಸೇರಿದಂತೆ ಕರಾವಳಿಯ ಹಲವೆಡೆಗಳಲ್ಲಿ ಬುಧವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದ್ದು, ಕಾದು ಕೆಂಪಗಾಗಿದ್ದ ಕರಾವಳಿಗೆ ಮಳೆ ತುಸು ತಂಪೆರೆದಿದೆ. ಪುಣಚ, ಕಬಕ, ನೇರಳಕಟ್ಟೆ ಮೊದಲಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಬುಧವಾರ ಮಧ್ಯಾಹ್ನ ಮೋಡ ಮುಸುಕಿದ ವಾತಾವರಣವಿದ್ದು, ಗುಡುಗಿನ ಮಾರ್ದನಿಯೂ ಕೇಳಿಸುತ್ತಿತ್ತು. ಮಳೆಯ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದ್ದು, ಮುಂದಿನ 5 ದಿನಗಳ ಕಾಲ ಮಳೆ ಬರಲಿದೆ ಎಂದು ವರದಿ ಮಾಡಿತ್ತು.

ಕರಾವಳಿಗೆ ತಂಪೆರೆದ ಮಳೆ | ಪುಣಚ, ಕಬಕ, ನೇರಳಕಟ್ಟೆಯಲ್ಲಿ ಸುರಿದ ಮಳೆ Read More »

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ – ವಿ. ಸುನೀಲ್‌ ಕುಮಾರ್

ಬೆಂಗಳೂರು‌ : ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ಸುನಿಲ್

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ – ವಿ. ಸುನೀಲ್‌ ಕುಮಾರ್ Read More »

ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮ

ಪುತ್ತೂರು:-ಹತ್ತೂರಿನಲ್ಲೂ ಹೆಸರು ಪಡೆದ ಊರು ಪುತ್ತೂರು. ಇಲ್ಲಿನ ವಿದ್ಯಾವಂತ ಯುವ ಸಮೂಹ ಪುತ್ತೂರಿನ ಹೆಮ್ಮೆ.ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಪ್ರಗತಿಯ ಹಾದಿಯಲ್ಲಿ ಸಾಗುವ ಶೈಕ್ಷಣಿಕ,ಸಮಾಜಮುಖಿ ಕಾರ್ಯವನ್ನು ಪ್ರಗತಿಯ ಸ್ಟಡಿ ಸೆಂಟರ್ ಮಾಡುತ್ತಿದೆ ಎಂದು ಜಿ.ಎಲ್.ಆಚಾರ್ಯ ಸಂಸ್ಥೆಯ ಮುಖ್ಯಸ್ಥ ಬಲರಾಮ ಆಚಾರ್ಯ ಹೇಳಿದರು. ಅವರು ಇಲ್ಲಿಯ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿರು. ಮುಖ್ಯ ಅತಿಥಿಯಾಗಿ ನಗರಸಭೆ ಉಪಾಧ್ಯಕ್ಷೆ ವಿದ್ಯಾಗೌರಿ ಮಾತನಾಡಿ, ಪ್ರಗತಿ ಸಂಸ್ಥೆಯು ಯಾವುದೇ ವಿದ್ಯಾಲಯ

ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮ Read More »

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್

ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ (ESCOM) ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್ Read More »

ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು; ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಕುರಿತು ಪೂರ್ವಭಾವಿ ಸಭೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕೆದಿಲಾಯರವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಉಪ ಸಮಿತಿಗಳ ಸಂಚಾಲಕರು ಹಾಗೂ ಸದಸ್ಯರುಗಳಿಗೆ ಅವರವರ ಜವಾಬ್ದಾರಿಗಳನ್ನು ತಿಳಿಸಿ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರುವಲ್ಲಿ ಎಲ್ಲರ ಸಹಕಾರವನ್ನು ಕೋರಲಾಯಿತು. ಮಾ.21 ರಂದು ಪುತ್ತೂರಿನಲ್ಲಿ ಆಮಂತ್ರಣ ವಿತರಣೆ: ಬ್ರಹ್ಮಕಲಶೋತ್ಸವದ ಪ್ರಚಾರಾರ್ಥವಾಗಿ ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆಯನ್ನು ಮಾ.21 ರಂದು ವಿತರಿಸುವುದಾಗಿ ತೀರ್ಮಾನಿಸಲಾಯಿತು. ಬೆಳಿಗ್ಗೆ 9.30

ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ Read More »

ರಾಜ್ಯದಲ್ಲಿ 115 ಹೆಚ್3ಎನ್2‌ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸದ್ದಿಲ್ಲದೆ ಏರಿಕೆಯಾಗುತ್ತಿದೆ. ಇದರ ನಡುವೆ ಹೆಚ್​3ಎನ್​2 ಭೀತಿ ಕೂಡ ಹೆಚ್ಚಿದ್ದು, ರಾಜ್ಯದಲ್ಲಿ ಪ್ರಸ್ತುತ ಕಳೆದ 82 ದಿನಗಳಲ್ಲಿ 115 ಹೆಚ್​3ಎನ್​2 ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 21 ಜಿಲ್ಲೆಗಳಲ್ಲಿ H3N2 ಸೋಂಕು ಪತ್ತೆಯಾಗಿದ್ದು, ರಾಜಧಾನಿಯಲ್ಲಿ 30 ಪ್ರಕರಣಗಳು ದಾಖಲಾಗಿವೆ. ಬಿಬಿಎಂಪಿ ವ್ಯಾಪ್ತಿ-30, ಶಿವಮೊಗ್ಗ-19, ಧಾರವಾಡ-14, ಮೈಸೂರು-09, ವಿಜಯಪುರ-08, ಬೆಳಗಾವಿ-05, ಹಾಸನ-05, ತುಮಕೂರು-03, ದಾವಣಗೆರೆ-03, ಹಾವೇರಿ-03, ದಕ್ಷಿಣ ಕನ್ನಡ-03, ಬೆಂಗಳೂರು ಗ್ರಾಮಾಂತರ-02, ಗದಗ-02, ರಾಮನಗರ-02, ಚಾಮರಾಜನಗರ-01, ಬಾಗಲಕೋಟೆ-01, ಉತ್ತರ ಕನ್ನಡ-01,

ರಾಜ್ಯದಲ್ಲಿ 115 ಹೆಚ್3ಎನ್2‌ ಪ್ರಕರಣ ಪತ್ತೆ Read More »

error: Content is protected !!
Scroll to Top