ಶಂಕರಾಚಾರ್ಯರು ಜಗತ್ತಿನ ಮೊದಲ ತತ್ವಜ್ಞಾನಿ| ಅಂಬಿಕಾ ಮಹಾವಿದ್ಯಾಲಯದಲ್ಲಿ ನಡೆದ ಶಂಕರ ಜಯಂತಿಯಲ್ಲಿ ವಿದ್ವಾನ್ ಕೇಶವ ಭಟ್ ಕೇಕಣಾಜೆ
ಪುತ್ತೂರು: ಕೇರಳದ ಕಾಲಡಿಯಲ್ಲಿ ಹುಟ್ಟಿದ ಶಂಕರಾಚಾರ್ಯರು ಸಮಾಜದಲ್ಲಿ ತುಂಬಿದ್ದ ಕರಾಳತೆಯನ್ನು ಮಟ್ಟಹಾಕಲು ಪಣತೊಟ್ಟರು. ಸಮಗ್ರ ಭಾರತವನ್ನು ಅದ್ವೈತ ತತ್ವದಡಿಯಲ್ಲಿ ಒಂದುಗೂಡಿಸಿದರು. ಅವರು ವೈದಿಕ ಸಂಸ್ಕೃತಿಯ ಮೂಲಕ ವೇದಗಳನ್ನು ಹಾಗೂ ಧರ್ಮವನ್ನು ಸಂರಕ್ಷಿಸಿದ ಪರಿ ಅದ್ಭುತವಾದುದು ಎಂದು ವಿದ್ವಾಂಸ ವಿದ್ವಾನ್ ಕೇಶವ ಭಟ್ಟ ಕೇಕಣಾಜೆ ಹೇಳಿದರು. ಅವರು ನಗರದ ನಟ್ಟೋಜ ಪೌಂಢೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಐಕ್ಯೂಎಸಿ ಹಾಗೂ ತತ್ವಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸೋಮವಾರದಂದು ಆಚರಿಸಲಾದ ಶಂಕರ ಜಯಂತಿ ಹಾಗೂ ವಿಶ್ವ ತತ್ವಜ್ಞಾನಿಗಳ ದಿನಾಚರಣೆಯ ಪ್ರಯುಕ್ತ […]










