ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ […]

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ Read More »

ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯಧನ ವಿತರಣೆ

ಪುತ್ತೂರು: ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಸುಮಾರು 5 ವರ್ಷಗಳಿಂದ ದಾನಿಗಳ ಸಹಕಾರದಲ್ಲಿ ಹಲವಾರು ಬಡ ಜನರ ಕಷ್ಟಕ್ಕೆ ನೇರವಾಗುತ್ತಿದ್ದು, 14 ವರ್ಷದ ಬಾಲಕನ ಚಿಕಿತ್ಸೆಗೆ ಸಹಾಯಧನ ಚೆಕ್ಕನ್ನು ಸೋಮವಾರ ವಿತರಿಸಲಾಯಿತು. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿದಾನದಲ್ಲಿ ಕರುಳು ಸಂಬತೀತ ಖಾಯಿಲೆಯಿಂದ ಬಳಲುತ್ತಿರುವ ಮಂಗಳೂರಿನ ಗೌರವ್ 14 ವರ್ಷದ ಬಾಲಕನ ಚಿಕಿತ್ಸೆಗೆ 17,259 ರೂಪಾಯಿಯ ಚೆಕ್ಕನ್ನು ಶಶಿoದ್ರ ಜಂಕಲ ಅವರ ಸಹಕಾರದಲ್ಲಿ ಬರಿಮಾರ್  ಶ್ರೀ ಕಾಳಿಕಾಂಬಾ ಗೊಂಬೆ ಬಳಗದ ಮಾಲಕ ರಜನೀಶ್ ವಿತರಿಸಿದರು

ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯಧನ ವಿತರಣೆ Read More »

ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಪ್ರಚಾರ ಶುರು

ಕೊಂಚ ಸಮಯದ ಬಿಡುವಿನ ಬಳಿಕ ಸಕ್ರಿಯ ರಾಜಕಾರಣಕ್ಕೆ ಬಂದ ಕನ್ನಡ ನಟಿ ಬೆಂಗಳೂರು : ಕನ್ನಡ ನಟಿ, ಮಾಜಿ ಸಂಸದೆ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಮತ್ತೆ ಸಕ್ರಿಯ ರಾಜಕೀಯಕ್ಕೆ ಬಂದಿದ್ದಾರೆ. ಇಂದು ಅವರು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಇತ್ತೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ರಮ್ಯಾ ಮುಂದಿನ ಕೆಲ ದಿನಗಳ ಕಾಲ ಮಂಡ್ಯದಲ್ಲಿ ಬಿರುಸಿನಿಂದ ಕೈ ಅಭ್ಯರ್ಥಿಗಳ ಪರವಾಗಿ ಪುಚಾರ ನಡೆಸಲಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್

ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಪ್ರಚಾರ ಶುರು Read More »

ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಸಂಪತ್ತಿನ ದಾಖಲೆ ಶೋಧ ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿ ಅಕ್ರಮ ಆಸ್ತಿ ಗಳಿಸಿರುವ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಯುತ್ತಿದೆ. ಯಲಹಂಕದಲ್ಲಿರುವ ಗಂಗಧರಯ್ಯ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಿವೃತ್ತ ಡಿಸಿಎಫ್ ನಾಗರಾಜ್ ಅವರ ಶಿವಮೊಗ್ಗದ ಮನೆ ಹಾಗೂ‌

ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಲಿಂಗಾಯತ ಯುವ ವೇದಿಕೆಯಿಂದ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಲಿಂಗಾಯತರು ಭ್ರಷ್ಟರು ಹೇಳಿಕೆ ವಿರುದ್ಧ ಸಮುದಾಯದವರ ಆಕ್ರೋಶ ಬೆಂಗಳೂರು : ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಹೇಳಿರುವ ಸಿದ್ದರಾಮಯ್ಯ ವಿರುದ್ಧ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕ ವಿಭಾಗ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಸಿದ್ದರಾಮಯ್ಯನವರ ಲಿಂಗಾಯತ ಸಿಎಂ ಹೇಳಿಕೆ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ, ಬಿಜೆಪಿ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.ಲಿಂಗಾಯತ ಯುವ ವೇದಿಕೆ ಮುಖಂಡ ಬಸವರಾಜ್ ಎನ್ನುವವರು ಚುನಾವಣಾ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿ ಸಿದ್ದರಾಮಯ್ಯ ವಿರುದ್ಧ

ಲಿಂಗಾಯತ ಯುವ ವೇದಿಕೆಯಿಂದ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »

ಬಿಜೆಪಿ ಚುನಾವಣಾ ಪೂರ್ವಭಾವಿ ಸಭೆ

ಪುತ್ತೂರು: ಶಾಂತಿಗೋಡು ಭಾರತೀಯ ಜನತಾ ಪಾರ್ಟಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ ಭಾನುವಾರ ಸಂಜೆ ಪಾರ್ವತಿ ಕರ್ಪುತ್ತಮೂಳೆ ಅವರ ಮನೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸುವ ನಿಟ್ಟಿನಲ್ಲಿ ಕಾರ್ಯಕರ್ತೆರ ಶ್ರಮ ಅಗತ್ಯವಾಗಿದೆ. ಹಿಂದಿನ ಅವಧಿಯಲ್ಲಿ ಸುಮಾರು 20 ಕೋಟಿಗೂ ಮಿಕ್ಕಿ ಅನುದಾನ ಶಾಂತಿಗೋಡು ಗ್ರಾಮಕ್ಕೆ ಬಂದಿದ್ದು, ಕೃಷಿಕರಿಗೆ ಅನುಕೂಲವಾಗುವ  ಕಿಂಡಿ ಅಣೆಕಟ್ಟು, ಏತ ನೀರಾವರಿ ಯೋಜನೆ ಹಾಗೂ ರಸ್ತೆಗಳಿಗೆ ಹಲವಾರು ಅನುದಾನಗಳನ್ನು ನೀಡಲಾಗಿದೆ.. ಮುಂಬರುವ ಚುನಾವಣೆಗೆ ಈ ಅಭಿವೃದ್ಧಿ ಪೂರಕವಾಗಲಿದ್ದು,

ಬಿಜೆಪಿ ಚುನಾವಣಾ ಪೂರ್ವಭಾವಿ ಸಭೆ Read More »

ನದಿಯಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು

ಬ್ರಹ್ಮಾವರ ಸಮೀಪ ಕುದ್ರು ಬಳಿ ನಡೆದ ಘಟನೆ ಉಡುಪಿ : ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ನೀರುಪಾಲಾಗಿರುವ ಘಟನೆ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕುಕ್ಕುಡೆ ಕಿಣಿಯರ ಕುದ್ರು ಬಳಿ ನದಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಇಬಾಜ್, ಫಜಾನ್, ಸೂಫಾನ್, ಫರಾನ್​ ಮೃತರು. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದವರು ಎಂದು ಗುರುತಿಸಲಾಗಿದೆ. ರಂಜಾನ್ ಹಬ್ಬಕ್ಕೆ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದರು. ದೋಣಿ ಮೂಲಕ ಮೀನು ಹಿಡಿಯಲು ಏಳು ಯುವಕರು ತೆರಳಿದ್ದರು. ನದಿಯಲ್ಲಿ ನೀರಿನ ಮಟ್ಟ

ನದಿಯಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು Read More »

ಕಗ್ಗದ ಸಂದೇಶ- ದುಡಿಮೆಯಿಂದಲೇ ಅನ್ನ, ಅನ್ನದಿಂದ ಶಕ್ತಿ…

ದೊರೆವ ಜಿತಕೆ ದುಡಿತ, ಮರುದಿನದ ಚಿಂತೆ ಮಿತ|ಹೊರೆಯ ಹಗುರಾಗಿಸುವ ಕೆಳೆಯರೊಡನಾಟ||ಸರಳತೆಯ ಪರಿತುಷ್ಟಿ, ಪರಮಾರ್ಥ ದೃಷ್ಟಿಯಿವು|ಸರಿಗೂಡೆ ಸುಕೃತವಿದು–ಮಂಕುತಿಮ್ಮ|| ದೊರಕಿದ ಕೆಲಸವನ್ನು ನಿಷ್ಠೆಯಿಂದ ಮಾಡುವುದು. ಮರುದಿನದ ಬಗ್ಗೆ ಚಿಂತೆಯನ್ನು ಮಾಡುವುದನ್ನು ಬಿಟ್ಟು ಬದುಕಿನ ಭಾರವನ್ನು ಹಗುರಾಗಿಸುವಂತಹ ಗೆಳೆಯರ ಒಡನಾಟವನ್ನು ಹೊಂದುವುದು, ಸರಳತೆ ಹಾಗೂ ಸಂತೃಪ್ತಿಯಿಂದ ಬಾಳುವುದರಿಂದ ಭಗವಂತನ ಅನುಗ್ರಹವನ್ನು ಪಡೆವ ಪುಣ್ಯ ಪ್ರಾಪ್ತಿಯಾಗುವುದು ಎಂದು ಮಾನ್ಯ ಡಿವಿಜಿ ಈ ಮುಕ್ತಕದಲ್ಲಿ ಹೇಳಿದ್ದಾರೆಬದುಕನ್ನು ಹೇಗೆ ಬೇಕೋ ಹಾಗೆ ರೂಪಿಸಿಕೊಳ್ಳುವ ಅವಕಾಶ ನಮಗಿರುತ್ತದೆ. ಬದುಕು ಹಸನಾಗುವುದು ಮುಖ್ಯವಾಗಿ ದುಡಿಮೆಯಿಂದ. ಬೀಜ ಬಿತ್ತದೆ ಬರಿದೆ

ಕಗ್ಗದ ಸಂದೇಶ- ದುಡಿಮೆಯಿಂದಲೇ ಅನ್ನ, ಅನ್ನದಿಂದ ಶಕ್ತಿ… Read More »

ಸೆಲೆಬ್ರಿಟಿ ಆಗೋದು ಅಷ್ಟು ಸುಲಭನಾ?

ನುಡಿದಂತೆ ಬದುಕಿ ತೋರಿಸಿದ ಮಹಾನ್‌ ನಟ ಅವರು ಕನ್ನಡದ ವರನಟ ಡಾ.ರಾಜಕುಮಾರ್ ಇನ್ನೂರಕ್ಕಿಂತ ಹೆಚ್ಚು ಸಿನೆಮಾಗಳಲ್ಲಿ ಹೀರೊ ಆಗಿ ಅಭಿನಯಿಸಿದ್ದರು. ಅವರ ಸಿನೆಮಾಗಳು ಮಾಡಿದ ಭಾರಿ ದೊಡ್ಡ ದಾಖಲೆಗಳು ಒಂದೆಡೆ ಆದರೆ ಅವರ ಅಸದೃಶವಾದ ವ್ಯಕ್ತಿತ್ವ ಅದಕ್ಕಿಂತ ಹೆಚ್ಚು ಅನುಕರಣೀಯ.ಡಾ.ರಾಜ್ ಕೆಲವು ಸಿನೆಮಾಗಳಲ್ಲಿ ಪ್ರತಿನಾಯಕನ ಪಾತ್ರಗಳಲ್ಲಿ ನಟಿಸಿದ್ದು ಇದೆ. ಆದರೆ ಅವರು ತಮ್ಮ ಒಂದು ಸಿನೆಮಾದಲ್ಲಿ ಕೂಡ ಕುಡಿಯುವ, ಸಿಗರೇಟ್‌ ಸೇದುವ, ಪಾನ್ ಜಗಿಯುವ ಅಭಿನಯ ಮಾಡಲೇ ಇಲ್ಲ. ತಪ್ಪಿ ಕೂಡ ಒಂದು ಹೆಣ್ಣನ್ನು ಅಪಮಾನ ಮಾಡುವ

ಸೆಲೆಬ್ರಿಟಿ ಆಗೋದು ಅಷ್ಟು ಸುಲಭನಾ? Read More »

ಏ.26 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಪೂರ್ವಭಾವಿ ಸಭೆ

ಪುತ್ತೂರು : ಏ.26 ರಂದು ಪುತ್ತೂರಿನಲ್ಲಿ ಜೈನಭವನದಲ್ಲಿ ನಡೆಯಲಿರುವ ಬಿಜೆಪಿ ಮಹಿಳಾ ಸಮಾವೇಶದ ಪೂರ್ವಭಾವಿ ಸಭೆ ಭಾನುವಾರ ಬಿಜೆಪಿ ಚುನಾವಣಾ ಕಚೇರಿಯಲ್ಲಿ ನಡೆಯಿತು. ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಸಭೆಯನ್ನುದ್ದೇಶಿಸಿ ಮಾತನಾಡಿ, ಸಮಾವೇಶದಲ್ಲಿ ರಾಜ್ಯ ಆರೋಗ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಸೇರಿದಂತೆ ಮತ್ತಿತರ ಮಹಿಳಾ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಅವರು ವಿನಂತಿಸಿದರು. ಸಭೆಯಲ್ಲಿ ಮಹಿಳಾ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷೆ ಜ್ಯೋತಿ ಪಾಂಡೆ, ಮಹಿಳಾ ಆಯೋಗದ ಮಾಜಿ ಸದಸ್ಯೆ, ಮಹಿಳಾ

ಏ.26 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಪೂರ್ವಭಾವಿ ಸಭೆ Read More »

error: Content is protected !!
Scroll to Top