ಪುತ್ತೂರು ಜಿಲ್ಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ | ವಿಟ್ಲ ಕಾರ್ಯಕರ್ತರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ
ಪುತ್ತೂರು: ಪುತ್ತೂರು ಜಿಲ್ಲೆಯಾಗಿ ಪರಿವರ್ತಿಸಲು ಎಲ್ಲಾ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಪು್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹೇಳಿದರು. ಅವರು ವಿಟ್ಲದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪುತ್ತೂರು ಕೇಂದ್ರೀಕೃತವಾಗಿ ನೂತನ ಜಿಲ್ಲೆಯ ಕನಸು ಈ ಭಾಗದಲ್ಲಿದೆ. ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದ ಅವರು, ಕಳೆದ ಐದು ವರ್ಷಗಳಲ್ಲಿ ರಾಜ್ಯದ ಡಬಲ್ ಇಂಜಿನ್ ಸರಕಾರದ ಸಾಧನೆಗಳು ಬಿಜೆಪಿಗೆ ಶ್ರೀರಕ್ಷೆಯಾಗಲಿದ್ದು, ಶಾಸಕ ಸಂಜೀವ ಮಠಂದೂರು ಅವರು ಒಂದೂವರೆ ಸಾವಿರ ಕೋಟಿ ಅನುದಾನ […]










