ಆ ಒಂದು ಎಕ್ಸ್‌ಟ್ರಾ ಮೈಲು ನಡೆಯಲು ನಿಮ್ಮಿಂದಲೂ ಸಾಧ್ಯ!

ಪ್ರತಿಯೊಬ್ಬರಲ್ಲೂ ಇದೆ Walk the EXTRA mile ಸಾಮರ್ಥ್ಯ ಆಂಗ್ಲ ಭಾಷೆಯಲ್ಲಿ Walk the EXTRA mile ಎಂಬ ಜನಪ್ರಿಯ ಮಾತಿದೆ. ಆ EXTRA ಯಾವುದು ಎಂದು ಹುಡುಕಲು ನಾನು ಪ್ರಯತ್ನ ಪಟ್ಟಾಗ ನನಗೆ ಸಿಕ್ಕಿದ ಉತ್ತರಗಳು ತುಂಬಾ ರೋಚಕ ಆಗಿದ್ದವು. ಒಂದೊಂದಾಗಿ ಅವುಗಳನ್ನು ನಾನು ನಿಮ್ಮ ಮುಂದೆ ಇಡುತ್ತಾ ಹೋಗುತ್ತೇನೆ. 1) ಒಬ್ಬಳು ತಾಯಿ ತನ್ನ ಮಗುವಿಗೆ ಎದೆಹಾಲು ಕೊಡುತ್ತಾಳೆ. ಆಗ ಅದರ ಜತೆಗೆ ಒಂದು ಬೊಗಸೆ ಪ್ರೀತಿ ಕೂಡ ಕೊಡುತ್ತಾಳೆ. ಆ ಪ್ರೀತಿ ಸಕ್ಕರೆಯಾಗಿ […]

ಆ ಒಂದು ಎಕ್ಸ್‌ಟ್ರಾ ಮೈಲು ನಡೆಯಲು ನಿಮ್ಮಿಂದಲೂ ಸಾಧ್ಯ! Read More »

ಅವಳಿ ಸಹೋದರಿಯರ ಅವಳಿ ಮಾರ್ಕ್ಸ್ | ಪಿಯು ಫಲಿತಾಂಶದಲ್ಲಿ ಅಚ್ಚರಿಯ ಸಾಧನೆ

ಬೆಳ್ತಂಗಡಿ: ಸ್ಪಂದನಾ ಹಾಗೂ ಸ್ಪರ್ಷಾ ಅವಳಿ ಸಹೋದರಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ )  ಇಬ್ಬರೂ 600ರಲ್ಲಿ 594 ಸಮಾನ (ಶೇಕಡ 99)ಅಂಕ ಪಡೆದು ಅಚ್ಚರಿ ಮೂಡಿಸಿದ್ದಾರೆ. ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿ ಹೊನ್ನಪ್ಪ ಗೌಡ ಮತ್ತು ಗಿರಿಜಾ ಇವರ ಮೊಮ್ಮಕ್ಕಳು, ನೆರಿಯ ಉಮೇಶ್ ಗೌಡ ಪಿ‌.ಹೆಚ್- ‌ಮತ್ತು ಗೀತಾ ದಂಪತಿಯ ಅವಳಿ ಮಕ್ಕಳು ಇವರಾಗಿದ್ದಾರೆ. ಇವರು ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ಪಿಯು ವಿದ್ಯಾಭ್ಯಾಸ ಮಾಡಿರುತ್ತಾರೆ.

ಅವಳಿ ಸಹೋದರಿಯರ ಅವಳಿ ಮಾರ್ಕ್ಸ್ | ಪಿಯು ಫಲಿತಾಂಶದಲ್ಲಿ ಅಚ್ಚರಿಯ ಸಾಧನೆ Read More »

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 10 ನಾಮಪತ್ರ ಸಲ್ಲಿಕೆ | ಎಲ್ಲಾ ನಾಮಪತ್ರ ಸಿಂಧು

ಪುತ್ತೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿವಿಧ ಪಕ್ಷ ಸಹಿತ ಪಕ್ಷೇತರದಿಂದ ಒಟ್ಟು 13 ನಾಮಪತ್ರ ಸಲ್ಲಿಕೆಯಾಗಿದ್ದು, ಎಲ್ಲಾ ನಾಮಪತ್ರಗಳೂ ಸಿಂಧು ಎಂದು ಚುನಾವಣಾಧಿಕಾರಿ, ಸಹಾಯಕ ಆಯುಕ್ತ ಗಿರೀಶ್ ನಂದನ್ ತಿಳಿಸಿದ್ದಾರೆ. ಶುಕ್ರವಾರ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಸಿದ್ದು, ಎಲ್ಲಾ 10 ಅಭ್ಯರ್ಥಿಗಳ ನಾಮಪತ್ರ ಸಿಂಧುವಾಗಿದೆ ಎಂದು ಸಹಾಯಕ ಆಯುಕ್ತರು ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಲು ಪ್ರಕ್ರಿಯೆ ಆರಂಭಗೊಂಡಿತ್ತು. ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನಾಂಕವಾಗಿತ್ತು. ಪುತ್ತೂರು ವಿಧಾನಸಭಾ ಕ್ಷೇತ್ರದ

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 10 ನಾಮಪತ್ರ ಸಲ್ಲಿಕೆ | ಎಲ್ಲಾ ನಾಮಪತ್ರ ಸಿಂಧು Read More »

ಅಫಘಾತದಲ್ಲಿ ಗಾಯಗೊಂಡ ಬಾಲಕಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ಬಾಲಕಿಯನ್ನು ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ತಮ್ಮ ಕಾರಿನಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದ ಘಟನೆ ಶುಕ್ರವಾರ ನಡೆದಿದೆ. ಪ್ರಚಾರದ ಹಿನ್ನಲೆಯಲ್ಲಿ ಜಿಡೆಕಲ್ಲು ರಸ್ತೆಯಾಗಿ ಬರುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಬಾಲಕಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಬಾಲಕಿಯನ್ನು ಆಶಾ ತಿಮ್ಮಪ್ಪ ಅವರು ತಮ್ಮ ಕಾರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತಮ್ಮ ಕಾರ್ಯಕರ್ತರ ಜತೆ ಮಂಗಳೂರಿನ

ಅಫಘಾತದಲ್ಲಿ ಗಾಯಗೊಂಡ ಬಾಲಕಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ Read More »

ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಏ. 19 ರಂದು ಸಂಭವಿಸಿದೆ. ರಹಿಮಾನ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ಸುಮಾರು 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಕಂಕನಾಡಿ ಮತ್ತು ಶಿವಮೊಗ್ಗ ಆಸ್ಪತ್ರೆಯಿಂದ ಚಿಕಿತ್ಸೆಯನ್ನು ಮಾಡಿದ್ದು, ಸರಿಯಾಗಿ ಗುಣಮುಖಗೊಂಡಿರದ ಕಾರಣ ಇವರ ಯೋಗಕ್ಷೇಮವನ್ನು ಇವರ ಚಿಕ್ಕಮ್ಮನ ಮಗ ಮಹಮ್ಮದ್ ಹಾರಿಸ್ ನೋಡಿಕೊಳ್ಳುತ್ತಿದ್ದರು. ಏ. 19 ರಂದು ಸಂಜೆ 6.45

ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಲಕ್ಷ್ಮೀ ದೇವಿ ಬೆಟ್ಟಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ

ಪುತ್ತೂರು : ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕ್ಕೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಶುಕ್ರವಾರ ಭೇಟಿ ನೀಡಿದರು. ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಆಶಾ ತಿಮ್ಮಪ್ಪ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಾಲಿ ಶಾಸಕ ಸಂಜೀವ ಮಠಂದೂರು ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

ಲಕ್ಷ್ಮೀ ದೇವಿ ಬೆಟ್ಟಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ Read More »

ವಿದ್ಯಾರಶ್ಮಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ

ಪುತ್ತೂರು: ಮಾರ್ಚ್ 2023 ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರಶ್ಮಿ ವಿದ್ಯಾಲಯದ ವಾಣಿಜ್ಯ ವಿಭಾಗದ 25 ಮತ್ತು ವಿಜ್ಞಾನ ವಿಭಾಗದ 6 ಅಭ್ಯರ್ಥಿಗಳು ಸೇರಿದಂತೆ ಒಟ್ಟು 34 ವಿದ್ಯಾರ್ಥಿಗಳು ಹಾಜರಾಗಿದ್ದು, 31 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 7 ವಿಶಿಷ್ಟ ಶ್ರೇಣಿ,15 ಪ್ರಥಮ ಹಾಗೂ 3 ದ್ವಿತೀಯ ಹಾಗೂ 6 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ತೇಜಸ್ ಕೆ. (531) ಲೋಕನಾಥ ಮತ್ತು ಶಶಿಕಲಾ ಕುದ್ಮಾರು ದಂಪತಿ ಪುತ್ರ, ನಿಶಾಂತ್ ಡಿ. ಎಚ್

ವಿದ್ಯಾರಶ್ಮಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ Read More »

ಭಾರತೀಯ ವಿದ್ಯಾರ್ಥಿ ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡೇಟಿನಿಂದ ಮೃತ್ಯು

ಕೊಲಂಬಸ್ : ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಯೋರ್ವ ದುಷ್ಕರ್ಮಿಗಳ ಗುಂಡೇಟಿನಿಂದ ಸಾವನ್ನಪ್ಪಿರುವ ಘಟನೆ ಏ. 21 ರಂದು ಅಮೆರಿಕದಲ್ಲಿ ಸಂಭವಿಸಿದೆ.ಮೃತನನ್ನು ಸಾಯಿಶ್ ವೀರಾ(24) ಎಂದು ಗುರುತಿಸಲಾಗಿದೆ. ಇವರು ಕೊಲಂಬಸ್ ನ ಇಂಧನ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂದು ಯುಎಸ್ ರಾಜ್ಯ ಓಹಿಯೋದ ಪೊಲೀಸರು ತಿಳಿಸಿದ್ದಾರೆ. ಸಾಯಿಶ್ ಸ್ನಾತಕೋತ್ತರ ಕೋರ್ಸ್ ಮಾಡುತ್ತಿದ್ದು ಕೇವಲ 10 ದಿನಗಳ ಅಂತರದಲ್ಲಿ ಪದವಿಯೊಂದಿಗೆ H1B ವೀಸಾದ ಅಡಿಯಲ್ಲಿ ಆಯ್ಕೆಯಾಗಿದ್ದರು. ಇಂಧನ

ಭಾರತೀಯ ವಿದ್ಯಾರ್ಥಿ ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡೇಟಿನಿಂದ ಮೃತ್ಯು Read More »

‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಬಿಡುಗಡೆ

ಬೆಂಗಳೂರು : ಬಹುನಿರೀಕ್ಷಿತ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಕೊನೆಗೂ ಬಿಡುಗಡೆಯಾಗಿದೆ. ಆ್ಯಪ್ ಬಳಸಿಕೊಂಡು ಇನ್ನು ಮುಂದೆ ಬೆಂಗಳೂರಿಗರು ಬಿಎಂಟಿಸಿ ಬಸ್’ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಈ ಆ್ಯಪ್ ಅನ್ನು ಬುಧವಾರ ರಾತ್ರಿ ಲೈವ್ ಮಾಡಲಾಗಿದ್ದು, ಆಂಡ್ರಾಯ್ಡ್ ಮತ್ತು ಐಒಎಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಡೌನ್‌ಲೋಡ್ ಮಾಡಬಹುದು ಎಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ್ಯಪ್ ಬೀಟಾ ಪರೀಕ್ಷೆಯ ಹಂತದಲ್ಲಿದ್ದಾಗ ಅದನ್ನು ‘ನಿಮ್ ಬಸ್’ ಎಂದು ಕರೆಯಲಾಗುತ್ತಿತ್ತು. ಇದೀಗ ಲೈವ್ ಮಾಡುವ ವೇಳೆ ಅದನ್ನು ‘ನಮ್ಮ ಬಿಎಂಟಿಸಿ’ ಎಂದು

‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಬಿಡುಗಡೆ Read More »

ಪಿಯು ಫಲಿತಾಂಶ ಪ್ರಕಟ: ಪ್ರೇರಣಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿ

ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರೇರಣಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟು 53 ವಿದ್ಯಾರ್ಥಿಗಳು ಪ್ರೇರಣಾದಲ್ಲಿ ತರಬೇತಿ ಪಡೆದುಕೊಂಡಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. 30 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ ಮಹಮ್ಮದ್ ಶಾಝ್ (560), ಎನ್. ಅಮನ್ ಅಡ್ಯಂತ್ತಾಯ (560), ನೆಬಿಸಾ (544), ಹರ್ಷಿದಾ (535), ನಿಯಾಫ್‍ (524), ಅನ್ಸಫ್ (517), ಅಬ್ದುಲ್ ಅಹದ್ (512),

ಪಿಯು ಫಲಿತಾಂಶ ಪ್ರಕಟ: ಪ್ರೇರಣಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿ Read More »

error: Content is protected !!
Scroll to Top