ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ದರ್ಖಾಸು ಎಂಬಲ್ಲಿ ಏ. 20 ರಂದು ಸಂಭವಿಸಿದೆ.ಸುಬ್ಬಪ್ಪ (60)ಎಂಬವರೇ ಮೃತ ವ್ಯಕ್ತಿ. ಪಡ್ಪಿನಂಗಡಿ ದರ್ಖಾಸು ಎಂಬಲ್ಲಿರುವ ವಿಮಲ ರವರ ವಾಸದ ಮನೆಯ ಜಗಲಿಯಲ್ಲಿ ಛಾವಣಿಯ ಪಕ್ಕಾಸಿಗೆ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ಅನನ್ಯ ರಾಜ್ಯಕ್ಕೆ ಪ್ರಥಮ

ಕಾರ್ಕಳ : 2023 ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನ ವಾಣಿಜ್ಯ ವಿಭಾಗದ ಅನನ್ಯ 600 ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕೌಶಿಕ್ 600ಕ್ಕೆ 596 ಅಂಕಗಳನ್ನು ಗಳಿಸಿ ಮೊದಲನೇ ಸ್ಥಾನ ಪಡೆದರೆ, ಕಲಾ ವಿಭಾಗದಲ್ಲಿ ಜಯನಗರ NMKRV ಕಾಲೇಜು ವಿದ್ಯಾರ್ಥಿನಿ ಥಬಸುಮ್ ಶಾಯಿಕ್ 600ಕ್ಕೆ 593 ಪಡೆದು ಪ್ರಥಮ ಸ್ಥಾನಿಯಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ಫಲಿತಾಂಶ ಪ್ರಕಟ ಪಡಿಸಲಾಗಿದೆ

ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ಅನನ್ಯ ರಾಜ್ಯಕ್ಕೆ ಪ್ರಥಮ Read More »

ಅಡಿಲು ಮೋನಪ್ಪ ಕರ್ಕೇರಾ ನಿಧನ

ಪುತ್ತೂರು: ರಾಜ್ಯ ಸರಕಾರದ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಅಡಿಲು ಮೋನಪ್ಪ ಕರ್ಕೇರಾ (75) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಹಠಾತ್ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ನಿಧನರಾದರು. ಅವರು ಪ್ರತಿಷ್ಠಿತ ಕೃಷಿ  ಪಂಡಿತ ಪ್ರಶಸ್ತಿ ಪಡೆದಿರುವುದಲ್ಲದೆ ಮೀನುಗಾರಿಕೆಯಲ್ಲಿ ನಿರ್ದೇಶಕರಾಗಿ ಸೇವಿಸಲ್ಲಿಸಿರುತ್ತಾರೆ. ಅವರು ಪತ್ನಿ, ಮಕ್ಕಳು  ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ

ಅಡಿಲು ಮೋನಪ್ಪ ಕರ್ಕೇರಾ ನಿಧನ Read More »

ಅನನ್ಯಾ, ಕೌಶಿಕ್, ತಬಸ್ಸುಮ್ ಉತ್ತಮ ಸಾಧನೆ ಮೂಲಕ ಮೊದಲನೆ ಸ್ಥಾನ

ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್‌ಗಳಾಗಿ ಮಿಂಚಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಪಡೆದುಕೊಂಡಿದ್ದು, ಬೆಂಗಳೂರಿನ ಜಯನಗರದ ಎನ್ಎಂಕೆಆರ್‌ವಿ ಕಾಲೇಜು ಕಲಾ ವಿಭಾಗದ ವಿದ್ಯಾರ್ಥಿನಿ ತಬಸ್ಸುಮ್ 600ಕ್ಕೆ 593 ಅಂಕಗಳನ್ನು ಪಡೆದುಕೊಂಡಿದ್ದಾರೆ. ಅಂತೆಯೇ ಕೋಲಾರದ ಗಂಗೋತ್ರಿ ಕಾಲೇಜು ವಿದ್ಯಾರ್ಥಿ ಕೌಶಿಕ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 596

ಅನನ್ಯಾ, ಕೌಶಿಕ್, ತಬಸ್ಸುಮ್ ಉತ್ತಮ ಸಾಧನೆ ಮೂಲಕ ಮೊದಲನೆ ಸ್ಥಾನ Read More »

ಸಚಿವ ಅಂಗಾರರಿಗೆ ಅವಕಾಶ ನೀಡದಿರುವುದು ಮೊಗೇರ ಸಮುದಾಯಕ್ಕೆ ಬೇಸರ ತಂದಿದೆ : ಪ್ರಸಾದ್ ಬೊಲ್ಮಾರು

ಪುತ್ತೂರು: ಯಾವುದೇ ಭ್ರಷ್ಟಾಚಾರ, ಕ್ರಿಮಿನಲ್ ಕೇಸ್ ಇಲ್ಲದ ಸಚಿವ ಸುಳ್ಯದ ಅಂಗಾರ ಅವರಿಗೆ ಈ ಬಾರಿ ಅವಕಾಶ ನೀಡದಿರುವುದು ಜಿಲ್ಲಾ ಮೊಗೇರ ಸಮುದಾಯಕ್ಕೆ ಅತೀವ ಬೇಸರ ತಂದಿದೆ ಎಂದು ಜಿಲ್ಲಾ ಮೊಗೇರ ಸಂಘದ ಸದಸ್ಯ ಪ್ರಸಾದ್ ಬೊಲ್ಮಾರ್ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಪಕ್ಷದಿಂದ ಭಾಗೀರಥಿ ಮುರುಳ್ಯ ಅವರಿಗೆ ಅವಕಾಶ ನೀಡಿರುವುದಕ್ಕೆ ನಮಗೆ ಯಾವುದೇ ಬೇಸರವಿಲ್ಲ. ಆರು ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿ ಭ್ರಷ್ಟಾಚಾರ, ಕ್ರಿಮಿನಲ್ ಕೇಸ್ ಗಳ ಯಾವುದೇ ಕಳಂಕವನ್ನು ಹೊತ್ತುಕೊಳ್ಳದ

ಸಚಿವ ಅಂಗಾರರಿಗೆ ಅವಕಾಶ ನೀಡದಿರುವುದು ಮೊಗೇರ ಸಮುದಾಯಕ್ಕೆ ಬೇಸರ ತಂದಿದೆ : ಪ್ರಸಾದ್ ಬೊಲ್ಮಾರು Read More »

ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ‘ಗ್ಯಾಂಗ್‌ಸ್ಟರ್‌’ ಸ್ನೇಹಿತ ಗಡಿಯಾ ಹೆಸರು : ಶೋಭಾ ಕರಂದ್ಲಾಜೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ಉತ್ತರ ಪ್ರದೇಶದ ಇಮ್ರಾನ್‌ ಪ್ರತಾಪ್‌ ಗಡಿಯಾ ಹೆಸರಿದ್ದು, ಈತ ಇತ್ತೀಚೆಗೆ ಹತ್ಯೆಯಾದ ‘ಗ್ಯಾಂಗ್‌ಸ್ಟರ್‌’ ಅತೀಕ್ ಅಹ್ಮದ್‌ನ ಆತ್ಮೀಯ ಸ್ನೇಹಿತ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ದೂರಿದರು. ‘ಈ ಮೂಲಕ ಕಾಂಗ್ರೆಸ್‌ ಪಕ್ಷವು ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ದೇಶ ದ್ರೋಹಿಗಳು ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.‘ಅತೀಕ್ ಅಹ್ಮದ್‌ ತನ್ನ ಗುರುವೆಂದು ಹೇಳುತ್ತಿದ್ದುದು

ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ‘ಗ್ಯಾಂಗ್‌ಸ್ಟರ್‌’ ಸ್ನೇಹಿತ ಗಡಿಯಾ ಹೆಸರು : ಶೋಭಾ ಕರಂದ್ಲಾಜೆ Read More »

ಪೂಂಚ್ ಭಯೋತ್ಪಾದಕ ದಾಳಿ

ವಾಹನಕ್ಕೆ ಬೆಂಕಿ ಹತ್ತಿಕೊಂಡು ಐವರು ಯೋಧರು ಹುತಾತ್ಮ ಪೂಂಚ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಗುರುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಘಟನೆ ಬಳಿಕ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.ದಾಳಿ ನಡೆದ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಉಗ್ರರ ಪತ್ತೆಗೆ ಡ್ರೋಣ್’ಗಳು, ಸ್ನಿಫ್ಪರ್ ಡಾಗ್ ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಗಡಿ ಜಿಲ್ಲೆಗಳಾದ

ಪೂಂಚ್ ಭಯೋತ್ಪಾದಕ ದಾಳಿ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ(95%) ಜಿಲ್ಲೆ ಪ್ರಥಮ ಮತ್ತು ಉಡುಪಿ (95%) ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕೊಡಗು(91%) ತೃತೀಯ ಸ್ಥಾನ ಲಭಿಸಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಪತ್ರಿಕಾಗೋಷ್ಠಿಯಿಂದ ಹೊರಗುಳಿಯಲಿದ್ದಾರೆ. ಫಲಿತಾಂಶಗಳನ್ನು ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ ಅಧ್ಯಕ್ಷರಾದ ರಾಮಚಂದ್ರನ್ ಆರ್ ಮಾಧ್ಯಮಗಳನ್ನುದ್ದೇಶಿಸಿ ಫಲಿತಾಂಶ ಪ್ರಕಟಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಒದಗಿಸಿದ ಅಂಕಿಅಂಶಗಳ ಪ್ರಕಾರ,

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »

ವಾಹನ ಖರೀದಿಯಲ್ಲಿ ಅಕ್ರಮ : ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕ ಆಪ್ ಆಗ್ರಹ

ಬೆಂಗಳೂರು : ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್‌ ಆದ್ಮಿ ಪಕ್ಷ ಗುರುವಾರ ಆಗ್ರಹಿಸಿದೆ.ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಮ್‌ ಆದ್ಮಿ ಪಕ್ಷದ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಅವರು, ಅಕ್ರಮದ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಹೇಳಿದರು.“ಬಿಬಿಎಂಪಿಯು ಹೊರಡಿಸಿರುವ ಆದೇಶದ ಪ್ರಕಾರ 2017-18ರಿಂದ 166 ಹುದ್ದೆಗಳನ್ನು ಅಲಂಕರಿಸಿದ ವ್ಯಕ್ತಿಗಳಿಗೆ, ಬಿಬಿಎಂಪಿಯು ವಾಹನಗಳನ್ನು ಪೂರೈಸುತ್ತಿದೆ. ಆದರೆ, ಈ ಪೈಕಿ

ವಾಹನ ಖರೀದಿಯಲ್ಲಿ ಅಕ್ರಮ : ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕ ಆಪ್ ಆಗ್ರಹ Read More »

ಇಂದು : ಶ್ರೀ ಮೂಕಾಂಬಿಕಾ ಕಲ್ಚರಲ್ ಅರ್ಪಿಸುವ ನೃತ್ಯಾಂತರಂಗ-97

ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ ನೃತ್ಯಾಂತರಂಗ-97 ಏ.21 ಶುಕ್ರವಾರ ಸಂಜೆ 5.45 ಕ್ಕೆ ದರ್ಬೆ ಶಶಿಶಂಕರ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಪಾಲ್ಗೊಳ್ಳಲಿದ್ದಾರೆ. ವಿದ್ವಾನ್ ದೀನಪ್ ಕುಮಾರ್, ವಿದುಷಿ ಪ್ರೀತಿಕಲಾ, ಅಪೂರ್ವಗೌರಿ ದೇವಸ್ಯ, ಶುಭಾ ಅಚಳ್ಳಿ, ವಿಂಧ್ಯಾ ಕಾರಂತ, ವಿಭಾಶ್ರೀ ಗೌಡ, ಪ್ರಣಮ್ಯ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು : ಶ್ರೀ ಮೂಕಾಂಬಿಕಾ ಕಲ್ಚರಲ್ ಅರ್ಪಿಸುವ ನೃತ್ಯಾಂತರಂಗ-97 Read More »

error: Content is protected !!
Scroll to Top