ಆಧ್ಯಾತ್ಮ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತದೆ : ಶ್ರೀ ಗುರುದೇವಾನಂದ ಸ್ವಾಮೀಜಿ | ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

ಪುತ್ತೂರು : ದೇಹವೆಂಬ ಪಥಕ್ಕೆ ರಥ ಧರ್ಮ. ಸತ್ಯವನ್ನು ಹೇಳುವ ಧರ್ಮ ಚಾಲನಾಶೀಲ. ಮನುಷ್ಯ ಬದುಕಿನ ಸಂವಿಧಾನ ಧರ್ಮ. ಇಲ್ಲಿ ಆತ್ಮ ಸತ್ಯ ಒಂದೇ ಸತ್ಯ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಐತಿಹಾಸಿಕ ಪಡುಮಲೆ ಕ್ಷೇತ್ರದ ಶ್ರೀ ಕೂವೆ ಶಾಸ್ತರ ದೇವಾಲಯದ ಪ್ರತಿಷ್ಟ ಬ್ರಹ್ಮಕಲಶೋತ್ಸವದ ೫ ನೆ ದಿನದ ಧಾರ್ಮಿಕ ಸಭೆಯಲ್ಲಿ ಆಶೀರ್ವಾಚನ ನೀಡಿದರು. ಅಧ್ಯಾತ್ಮ ಎಂಬುದು ಕೀಲಿ ಕೈ. ಅದರ ಮೂಲಕ ಎಲ್ಲಾ ಸಮಸ್ಯೆಗಳಿಂದ ಬಿಡುಗಡೆ ಪಡೆಯಬಹುದು. ಪಡುಮಲೆಯಲ್ಲಿ ಸುಂದರ ಶ್ರದ್ದಾ […]

ಆಧ್ಯಾತ್ಮ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತದೆ : ಶ್ರೀ ಗುರುದೇವಾನಂದ ಸ್ವಾಮೀಜಿ | ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ Read More »

ಮಾ. 4: ಮೊಳಹಳ್ಳಿ ಶಿವರಾಯ ರಸ್ತೆಯ ರೈತ ಸೌಧದಲ್ಲಿ “ವಿ ವಾಕ್” ನೂತನ ಫೂಟ್ ವೇರ್ ಶೋರೂಂ ಶುಭಾರಂಭ

ಪುತ್ತೂರು: ನೂತನ ಫೂಟ್ ವೇರ್ ಶೋ ರೂಂ “ವಿ ವಾಕ್” ಮಾ. 4ರ ಶನಿವಾರ ಬೆಳಿಗ್ಗೆ 8ಕ್ಕೆ ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಭೂ ಅಭಿವೃದ್ಧಿ ಬ್ಯಾಂಕ್ ಕಟ್ಟಡದ ರೈತ ಸೌಧದಲ್ಲಿ ಶುಭಾರಂಭಗೊಳ್ಳಲಿದೆ. ನೂತನ ಶೋ ರೂಂನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ

ಮಾ. 4: ಮೊಳಹಳ್ಳಿ ಶಿವರಾಯ ರಸ್ತೆಯ ರೈತ ಸೌಧದಲ್ಲಿ “ವಿ ವಾಕ್” ನೂತನ ಫೂಟ್ ವೇರ್ ಶೋರೂಂ ಶುಭಾರಂಭ Read More »

ಶಾಸಕ ಸಂಜೀವ ಮಠಂದೂರು, ಸಂಸದ ನಳಿನ್ ಕುಮಾರ್ ಕಾರ್ಯವೈಖರಿಯಿಂದ ಮತ್ತೊಮ್ಮೆ ಬಿಜೆಪಿ ಗೆಲುವು | ಬೂತ್ ವಿಜಯ ಅಭಿಯಾನದಿಂದ ಬಿಜೆಪಿ ಬೂತ್ ಶಕ್ತೀಕರಣ

ಪುತ್ತೂರು: ಮುಂದಿನ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿಯ ಲೋಕಸಭಾ ಚುನಾವಣೆ ಲೀಡ್‌ಗಿಂತಲೂ ಅಧಿಕ ಮತಗಳಿಂದ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಬಿಜೆಪಿ ಅತ್ಯಂತ ಬಲಿಷ್ಠವಾಗಿದ್ದು, ಯೋಜನೆ ಹಾಗೂ ಯೋಚನೆ ಸಹಿತ ಕಾರ್ಯಬದ್ಧತೆಯಲ್ಲಿ ರಾಜಿ ಮಾಡಿಕೊಂಡಿಲ್ಲ. ಪಕ್ಷದ ಯೋಜನೆ, ಯೋಚನೆಗಳಿಗೆ ಪೂರಕವಾಗಿ ಶಾಸಕ ಸಂಜೀವ ಮಠಂದೂರು ಅವರ ಕಾರ್ಯವೈಖರಿ ಯಶಸ್ವಿಯಾಗಿದೆ. ಈ ಹಿನ್ನಲೆಯಲ್ಲಿ ನಮಗೆ ಗೆಲ್ಲುವುದರಲ್ಲಿ ನಿಶ್ಚಯವಿದೆ ಎಂದ ಅವರು,

ಶಾಸಕ ಸಂಜೀವ ಮಠಂದೂರು, ಸಂಸದ ನಳಿನ್ ಕುಮಾರ್ ಕಾರ್ಯವೈಖರಿಯಿಂದ ಮತ್ತೊಮ್ಮೆ ಬಿಜೆಪಿ ಗೆಲುವು | ಬೂತ್ ವಿಜಯ ಅಭಿಯಾನದಿಂದ ಬಿಜೆಪಿ ಬೂತ್ ಶಕ್ತೀಕರಣ Read More »

ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್‍ ಟಿಕೇಟ್ ನೀಡಿ

ಪುತ್ತೂರು, ಸುಳ್ಯ, ಬೆಳ್ತಂಗಡಿ ಒಕ್ಕಲಿಗ ಗೌಡ ಸಮುದಾಯದ ಕಾಂಗ್ರೆಸ್ ಮುಖಂಡರಿಂದ ಡಿಕೆಶಿಗೆ ಮನವಿ ಪುತ್ತೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಕ್ಕಲಿಗ ಗೌಡ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ಒಕ್ಕಲಿಗ ಗೌಡ ಸಮಾಜದ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಇದೇ ಸಂದರ್ಭ ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಗೌಡ ಸಮುದಾಯವನ್ನು ಕಡೆಗಣಿಸಿರುವುದನ್ನು ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತರಲಾಯಿತು. ನಿಯೋಗದ

ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್‍ ಟಿಕೇಟ್ ನೀಡಿ Read More »

ಮರೆಯಲು ಸಾಧ್ಯ ಇಲ್ಲ 2001ರ ಆ ಕೊಲ್ಕತ್ತಾ ಟೆಸ್ಟ್ ಪಂದ್ಯ

ಅಂದು ದ್ರಾವಿಡ್ ಮತ್ತು ಲಕ್ಷ್ಮಣ್ ಮೈಯಲ್ಲಿ ಆವೇಶ ಬಂದಿತ್ತು | ಆಸೀಸ್ ವಿರುದ್ಧ ಫಾಲೋ ಆನ್ ಪಡೆದೂ ಭಾರತ ಆ ಟೆಸ್ಟ್ ಪಂದ್ಯವನ್ನು ಗೆದ್ದಿತ್ತು ಮಂಗಳವಾರ ಮುಗಿದು ಹೋದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್‌ ನಡುವಿನ ಟೆಸ್ಟ್ ಪಂದ್ಯ ಎರಡು ಪ್ರಮುಖವಾದ ಕಾರಣಗಳಿಗೆ ದಾಖಲೆಯನ್ನು ಬರೆಯಿತು. ಮೊದಲನೇ ದಾಖಲೆ ಎಂದರೆ ನ್ಯೂಜಿಲೆಂಡ್ ಒಂದು ರನ್ ಅಂತರದಲ್ಲಿ ಆ ಟೆಸ್ಟ್ ಪಂದ್ಯವನ್ನು ಗೆದ್ದದ್ದು. ಇತಿಹಾಸದಲ್ಲಿ ಇದು ಅಂತಹ ಕೇವಲ ಎರಡನೇ ದೃಷ್ಟಾಂತ ಆಗಿತ್ತು!ಅದೇ ರೀತಿ ಫಾಲೋ ಆನ್ ಪಡೆದ ನಂತರವೂ

ಮರೆಯಲು ಸಾಧ್ಯ ಇಲ್ಲ 2001ರ ಆ ಕೊಲ್ಕತ್ತಾ ಟೆಸ್ಟ್ ಪಂದ್ಯ Read More »

ಮಂಗಳೂರು : ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಓರ್ವ ಬಾಲಕಿ ಪಾರು!

ಮಂಗಳೂರು: ಕೊಡಿಯಾಲ್ ಬೈಲಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ವಿಜಯಾ(33) ಮತ್ತು ಶೋಭಿತಾ (4) ಮೃತ ದುರ್ದೈವಿಯಾಗಿದ್ದು, ಅದೃಷ್ಟವಶಾತ್ 12 ವರ್ಷದ ಯಜ್ಞಾ ನೇಣು ಕುಣಿಕೆಯಿಂದ ಪಾರಾಗಿದ್ದಾಳೆ. ವಿಜಯಾ ಅವರ ಪತಿ ಆರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಆಕೆ ಉಮೇಶ್ ಎಂಬುವರನ್ನು ಮರು ಮದುವೆಯಾಗಿದ್ದರು. ಆದರೆ ಉಮೇಶ್ ಇತ್ತೀಚೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಆಸರೆಯಾಗಿದ್ದ ಎರಡನೇ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದರಿಂದ ನೊಂದ ವಿಜಯಾ ತಮ್ಮ

ಮಂಗಳೂರು : ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಓರ್ವ ಬಾಲಕಿ ಪಾರು! Read More »

ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್‌ಗೆ ಡಿಕ್ಕಿ : ಸವಾರ ಸಾವು

ಹಾಸನ: ಬಂಕ್ ನಿಂದ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದ ಬೈಕ್‌ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನ್ನೊಬ್ಬ ಸಾವನ್ನಪ್ಪಿದ್ದಾನೆ. ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ಅಪಘಾತ ಸಂಭವಿಸಿದ್ದು ಚಿಕ್ಕಗಂಡಸಿ ಗ್ರಾಮದ ರಮೇಶ್(45) ಎಂಬುವರು ಮೃತಪಟ್ಟಿದ್ದಾರೆ. ಆರಗ ಜ್ಞಾನೇಂದ್ರ ಅವರು ಮಲೆಮಹದೇಶ್ವರ ಬೆಟ್ಟದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಪೊಲೀಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಅಪಘಾತ ಸ್ಥಳಕ್ಕೆ ಗಂಡಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತನ ದೇಹವನ್ನು

ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್‌ಗೆ ಡಿಕ್ಕಿ : ಸವಾರ ಸಾವು Read More »

ಬಿಜೆಪಿಗೆ ಹರಿದು ಬಂತು 1917 ಕೋ.ರೂ. ದೇಣಿಗೆ

ಕಾಂಗ್ರೆಸ್‌ ಹಿಂದಿಕ್ಕಿದ ಟಿಎಂಸಿ ದ್ವಿತೀಯ ಸ್ಥಾನದಲ್ಲಿ ಹೊಸದಿಲ್ಲಿ : ಬಿಜೆಪಿ 2021-22ನೇ ಸಾಲಿನ ಆರ್ಥಿಕ ವರ್ಷದಲ್ಲಿ ಬರೊಬ್ಬರಿ 1917 ಕೋಟಿ ದೇಣಿಗೆ ಪಡೆದುಕೊಂಡಿದೆ. ಎಂಟು ಮಾನ್ಯತೆ ಪಡೆದ ರಾಷ್ಟ್ರೀಯ ಪಕ್ಷಗಳಿಗೆ ಭಾರತದಾದ್ಯಂತ ಒಟ್ಟು 3289.34 ಕೋಟಿ ರೂ ದೇಣಿಗೆ ಸಂದಾಯವಾಗಿದ್ದು, ಈ ಪೈಕಿ ಅರ್ಧಕ್ಕೂ ಹೆಚ್ಚು ಮೊತ್ತವನ್ನು ಬಿಜೆಪಿಯೊಂದೇ ಪಡೆದುಕೊಂಡಿದೆ. ಬಿಜೆಪಿಯ ಪ್ರಮುಖ ಎದುರಾಳಿಯಾಗಿರುವ ಕಾಂಗ್ರೆಸ್‌ಗೆ ಸಿಕ್ಕಿರುವುದು 541 ಕೋ. ರೂ. ಮಾತ್ರ. ವಿಶೇಷವೆಂದರೆ ಕಾಂಗ್ರೆಸ್‌ಗಿಂತ ಹೆಚ್ಚು ದೇಣಿಗೆ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್‌ಗೆ ಹರಿದುಬಂದಿದೆ. ಚುನಾವಣಾ

ಬಿಜೆಪಿಗೆ ಹರಿದು ಬಂತು 1917 ಕೋ.ರೂ. ದೇಣಿಗೆ Read More »

ಭಾರತೀಯ ಸೇನೆಯಿಂದ ಚೀನಾ, ಪಾಕ್ ಗಡಿ ಭಾಗಗಳಿಗೆ 307 ಹೊವಿಟ್ಜರ್‌ಗಳ ಖರೀದಿ

ನವದೆಹಲಿ : ರಕ್ಷಣಾ ಕ್ಷೇತ್ರದಲ್ಲಿ ಮೇಕ್ ಇನ್ ಇಂಡಿಯಾದತ್ತ ದೃಢವಾದ ಹೆಜ್ಜೆ ಇರಿಸಲು ಚೀನಾ, ಪಾಕಿಸ್ತಾನ ಗಡಿಗಳಿಗೆ ನಿಯೋಜಿಸಲು ರಕ್ಷಣಾ ಸಚಿವಾಲಯ ಭಾರತೀಯ ಸೇನೆಯಿಂದ 307 ಅತ್ಯಾಧುನಿಕ ಟೋವ್ಡ್ ಆರ್ಟಿಲರಿ ಗನ್ ಸಿಸ್ಟಮ್ಸ್‌ಗಳ ಖರೀದಿಗೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆ 1 ಬಿಲಿಯನ್ ಡಾಲರ್ ಮೌಲ್ಯದ್ದಾಗಿದ್ದು, ಸಂಪುಟ ಸಮಿತಿ ಅನುಮೋದನೆಗೆ ಕಳಿಸಲಾಗಿದೆ. ಇದು ದೇಶಿಯವಾಗಿ ತಯಾರಾಗಲಿರುವ ಹೊವಿಟ್ಜರ್‌ಗಳ ಮೊದಲ ಖರೀದಿಯಾಗಿರಲಿದ್ದು, 50 ಕೀ.ಮೀ ವ್ಯಾಪ್ತಿವರೆಗಿನ ಟಾರ್ಗೆಟ್‌ಗಳನ್ನು ತಲುಪುವ ಸಾಮರ್ಥ್ಯವನ್ನು ಹೊಂದಿರಲಿದೆ. ಈ ಗನ್‌ಗಳ ಪರೀಕ್ಷಾರ್ಥ ಪ್ರಯೋಗವನ್ನು ಸೇನಾಪಡೆಗಳು

ಭಾರತೀಯ ಸೇನೆಯಿಂದ ಚೀನಾ, ಪಾಕ್ ಗಡಿ ಭಾಗಗಳಿಗೆ 307 ಹೊವಿಟ್ಜರ್‌ಗಳ ಖರೀದಿ Read More »

ಮಾ.4 : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವಾರ್ಷಿಕೋತ್ಸವ, ಮಹಾಸಭೆ

ಪುತ್ತೂರು : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಮಹಾಸಭೆ ಮಾ. 4 ಶನಿವಾರ ಅಪರಾಹ್ನ 3.30ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕಿ ಭಾರತಿ ಎಂ.ಎಲ್. ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ವಿಶ್ವಕರ್ಮ ಮಹಿಳಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಾ.4 : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವಾರ್ಷಿಕೋತ್ಸವ, ಮಹಾಸಭೆ Read More »

error: Content is protected !!
Scroll to Top