ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಬೈಲುವಾರು ಸಭೆ

ಪುತ್ತೂರು : ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಬೈಲುವಾರು ಸಭೆ ಗುರುವಾರ ಸಂಜೆ ಬಂಗಾರಡ್ಕ ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ನಡೆಯಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್‍ ರಾಧಾಕೃಷ್ಣ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೀರ್ಣೋದ್ಧಾರದ ಕುರಿತು ಚರ್ಚಿಸಿ ಸಾರ್ವಜನಿಕರ ಸಹಕಾರ ಕೋರಲಾಯಿತು. ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್‍ ಆರ್ಯಾಪು, ರಾಮಕೃಷ್ಣ ಭಟ್‍ ಬಂಗಾರಡ್ಕ, ವಿರೂಪಾಕ್ಷ ಭಟ್ ಮಚ್ಚಿಮಲೆ, ಪ್ರದೀಪ್ ಕೃಷ್ಣ ಭಟ್ ಬಂಗಾರಡ್ಕ, ಗ್ರಾಮಸ್ಥರು […]

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಬೈಲುವಾರು ಸಭೆ Read More »

ಫೆ.20 : ಪುತ್ತೂರು ತಹಶೀಲ್ದಾರ್‍ ರಮೇಶ್‍ ಬಾಬು ಅವರಿಂದ ಕೆದಂಬಾಡಿಯಲ್ಲಿ ಗ್ರಾಮವಾಸ್ತವ್ಯ

ಪುತ್ತೂರು : ಪುತ್ತೂರು ತಾಲೂಕು ತಹಶೀಲ್ದಾರ್‍ ರಮೇಶ್‍ ಬಾಬು ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಫೆ.20 ಸೋಮವಾರ ಕೆದಂಬಾಡಿ ಗ್ರಾಪಂ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಹಿತ ಇನ್ನಿತರ ಇಲಾಖೆಗಳ ವಿವಿಧ ಸವಲತ್ತುಗಳನ್ನು ವಿತರಿಸಲಾಗುವುದು. ಪುತ್ತೂರು ತಾಲೂಕಿನ ಎಲ್ಲಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ತಮ್ಮ ಇಲಾಖೆಯಿಂದ ಸಾರ್ವಜನಿಕರಿಗೆ ಒದಗಿಸುವ ಸವಲತ್ತುಗಳ ಮಾಹಿತಿ ನೀಡಲಾಗುವುದು. ಅಲ್ಲದೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅರ್ಜಿ, ಮಾಹಿತಿಯನ್ನು ಪಡೆದು ಅರ್ಹ ಪ್ರಕರಣವನ್ನು ಸ್ಥಳದಲ್ಲೇ

ಫೆ.20 : ಪುತ್ತೂರು ತಹಶೀಲ್ದಾರ್‍ ರಮೇಶ್‍ ಬಾಬು ಅವರಿಂದ ಕೆದಂಬಾಡಿಯಲ್ಲಿ ಗ್ರಾಮವಾಸ್ತವ್ಯ Read More »

ನಾಳೆ (ಫೆ.18) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವ ಪೂರ್ವಶಿಷ್ಟ ಪದ್ಧತಿಯಂತೆ ಫೆ.18 ರಂದು ನಡೆಯಲಿದೆ. ಮಧ್ಯಾಹ್ನ ಹವನ ಅಭಿಷೇಕ ಪೂಜಾದಿಗಳು, ರಾತ್ರಿ ಶ್ರೀ ದೇವರ ಬಲಿ ಹೊರಟು, ತಂತ್ರ ಸುತ್ತು ಜರಗಿ ಬಳಿಕ ಹೊರಾಂಗಣದಲ್ಲಿ ಉಡಕೆ, ಚಂಡೆ, ವಾದ್ಯ, ಸರ್ವವಾದ್ಯ ಸುತ್ತುಗಳು ನಡೆಯಲಿದೆ. ಬಳಿಕ ಕಟ್ಟೆಪೂಜೆ, ಪಲ್ಲಕಿ ಉತ್ಸವ, ಚಂದ್ರಮಂಡಲ ರಥೋತ್ಸವ, ಕೆರೆ ಉತ್ಸವ, ತೆಪ್ಪೋತ್ಸವದೊಂದಿಗೆ ಉತ್ಸವ ಮುಗಿದು, ತಡರಾತ್ರಿ ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಬಲಿ ಉತ್ಸವ ನೆರವೇರಲಿದೆ. ಜತೆಗೆ

ನಾಳೆ (ಫೆ.18) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ Read More »

ಬಲಿಪ ಭಾಗವತ ಖ್ಯಾತಿಯ ನಾರಾಯಣ ಭಾಗವತ ಅಸ್ತಂಗತ

ಪುತ್ತೂರು : ಬಲಿ ಭಾಗವತರೆಂದೇ ಖ್ಯಾತರಾದ ತೆಂಕುತಿಟ್ಟಿನ ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತ (84) ಗುರುವಾರ ಸಂಜೆ 6.30 ಕ್ಕೆ ಸ್ವಗೃಹದಲ್ಲಿ ಅಸ್ತಂಗತರಾದರು. ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆಯವರು. ಪ್ರಸ್ತುತ ಬಲಿಪ ನಾರಾಯಣ ಭಾಗವತರು  ಮೂಡಬಿದ್ರೆಯ ನೂಯಿ ಎಂಬಲ್ಲಿ ವಾಸವಾಗಿದ್ದರು. ಮಾ.13, 1938 ರಲ್ಲಿ ಜನಿಸಿದ್ದ ಬಲಿಪರು ತನ್ನ 13ನೇ ವಯಸ್ಸಿನಲ್ಲೇ ಯಕ್ಷರಂಗಕ್ಕೆ ಕಾಲಿಟ್ಟಿದ್ದರು. ಸುಮಾರು 60 ವರ್ಷಗಳ ಕಲಾ ಸೇವೆ ಮಾಡಿರುವ ಅವರು, ಕಟೀಲು ಮೇಳದ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಹಲವು

ಬಲಿಪ ಭಾಗವತ ಖ್ಯಾತಿಯ ನಾರಾಯಣ ಭಾಗವತ ಅಸ್ತಂಗತ Read More »

ಸಾರ್ವಜನಿಕ ಶಾಂತಿ ಭಂಗ : ಬೀದಿ ಬದಿ ವ್ಯಾಪಾರ ತೆರವು

ಪುತ್ತೂರು: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ರಸ್ತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಬೀದಿ ಬದಿ ವ್ಯಾಪಾರಿಯೊಬ್ಬನನ್ನು ಪೊಲೀಸರು ತೆರವು ಮಾಡಿಸಿದ್ದಾರೆ. ಗುರುವಾರ ಮಧ್ಯಾಹ್ನದ ವೇಳೆಯಲ್ಲಿ ಸ್ಥಳಕ್ಕಾಗಮಿಸಿದ ಪಿ.ಎಸ್‍.ಐ. ಶ್ರೀಕಾಂತ್ ರಾಥೋಡ್ ಅವರ ನೇತೃತ್ವದ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದರು. ಕೋರ್ಟ್ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವ್ಯಾಪಾರ ನಡೆಸುತ್ತಿದ್ದುದು ಮಾತ್ರವಲ್ಲ, ಸ್ಥಳೀಯರಿಗೂ ಸಮಸ್ಯೆ ಉಂಟು ಮಾಡುತ್ತಿದ್ದ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು, ಬೀದಿ ಬದಿ ವ್ಯಾಪಾರಿಯನ್ನು ಆ ಸ್ಥಳದಿಂದ ತೆರಳುವಂತೆ ಸೂಚಿಸಿ,

ಸಾರ್ವಜನಿಕ ಶಾಂತಿ ಭಂಗ : ಬೀದಿ ಬದಿ ವ್ಯಾಪಾರ ತೆರವು Read More »

ಫೆ.25 : 6ನೇ ಕರ್ನಾಟಕ ಗಡಿನಾಡ ಸಮ್ಮೇಳನ |  ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಫೆಬ್ರವರಿ 25 ರಂದು ಒಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ 6ನೇ ಕರ್ನಾಟಕ ಗಡಿನಾಡ ಸಮ್ಮೇಳನ 2023ರ ಆಮಂತ್ರಣ ಪತ್ರಿಕೆ ವಡ್ಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಿಡುಗಡೆಗೊಳಿಸಲಾಯಿತು. ಕರಾವಳಿಯ ಪ್ರತಿಷ್ಠಿತ ಗಡಿನಾಡ ಧ್ವನಿ ಮಾಸ ಪತ್ರಿಕೆ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಸಹಕಾರದೊಂದಿಗೆ ಹಾಗೂ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಫೆ.25 : 6ನೇ ಕರ್ನಾಟಕ ಗಡಿನಾಡ ಸಮ್ಮೇಳನ |  ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಫೆ. 19: 510 ಕೆಜಿಯ ಲೆವೆಲ್ ಮಾದರಿಯ ಹಗ್ಗಜಗ್ಗಾಟ

ಪುತ್ತೂರು: ಸರ್ವೆ ಹಿಂದು ಜಾಗರಣ ವೇದಿಕೆಯ ರಕ್ತೇಶ್ವರಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಫೆ. 19ರಂದು ಮಧ್ಯಾಹ್ನ 2 ಗಂಟೆಗೆ ಸರ್ವೆ ರಕ್ತೇಶ‍್ವರಿ ಕಟ್ಟೆಯಲ್ಲಿ ಸರ್ವೆಯಲ್ಲಿ ಇದೇ ಮೊದಲ ಬಾರಿಗೆ 510 ಕೆಜಿ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ. 7 ಜನರ ತಂಡದಲ್ಲಿ ನಡೆಯುವ ಈ ಹಗ್ಗಜಗ್ಗಾಟ ಸ್ಪರ್ಧೆಯೂ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ನಡೆಯಲಿದೆ. ಪುರುಷರ ವಿಭಾಗದಲ್ಲಿ ಪ್ರಥಮ ಬಹುಮಾನ 5555 ರೂ. ಹಾಗೂ ಟ್ರೋಫಿ, ದ್ವಿತೀಯ ಬಹುಮಾನ 3333 ರೂ. ಹಾಗೂ ಟ್ರೋಫಿ, ತೃತೀಯ

ಫೆ. 19: 510 ಕೆಜಿಯ ಲೆವೆಲ್ ಮಾದರಿಯ ಹಗ್ಗಜಗ್ಗಾಟ Read More »

ಆಡಳಿತ ಸುಗಮದ ಹಿನ್ನಲೆಯಲ್ಲಿ ಪಿಡಿಒ ಹುದ್ದೆಗಳು ಸಧ್ಯದಲ್ಲೇ ಭರ್ತಿ ಆಗುವ ಸಾಧ್ಯತೆ

ಪುತ್ತೂರು : ರಾಜ್ಯದಲ್ಲಿ ಸ್ಥಳೀಯ ಆಡಳಿತ ಸುಗಮವಾಗಿ ನಡೆಯಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಲ್ಲಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಇರಬೇಕಾಗಿದ್ದು, ರಾಜ್ಯ ಸರಕಾರ ಈ ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆ ಕಂಡು ಬರುತ್ತಿದೆ. ರಾಜ್ಯಾದ್ಯಂತ ಸ್ಥಳಿಯ ಆಡಳಿತದಲ್ಲಿ ಸುಧಾರಣೆ ಮಾಡುವ ಸಲುವಾಗಿ ಶೀಘ್ರದಲ್ಲೇ 570 ಪಿಡಿಒ ನೇಮಕ ಮಾಡಲು ಕ್ರಮ ಕೈಗೊಳ್ಳುವ ಭರವಸೆಯನ್ನು ವಿಧಾನಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ಮಾಹಿತಿ ನೀಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಪಿಡಿಒ ಹುದ್ದೆಗಳ ಕೊರತೆಯಿರುವುದರಿಂದ ಓರ್ವ ಪಿಡಿಓಗೆ ಪಂಚಾಯಿತಿ ಜವಾಬ್ದಾರಿ ನಿರ್ವಹಿಸಬೇಕಾದ ಅನಿವಾರ್ಯತೆಯಿದೆ.

ಆಡಳಿತ ಸುಗಮದ ಹಿನ್ನಲೆಯಲ್ಲಿ ಪಿಡಿಒ ಹುದ್ದೆಗಳು ಸಧ್ಯದಲ್ಲೇ ಭರ್ತಿ ಆಗುವ ಸಾಧ್ಯತೆ Read More »

ಫೆ.19 : ಡಾ.ಶ್ರೀಧರ ಭಂಡಾರಿ “ಯಕ್ಷ ದೇಗುಲ” ಪ್ರಶಸ್ತಿ ಪ್ರಧಾನ ಸಮಾರಂಭ

ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯಕ್ಷರಂಗದ ಅಭಿಮನ್ಯು ಕೀರ್ತಿಶೇಷ ಸ್ವರ್ಗೀಯ ಪುತ್ತೂರು ಡಾ.ಶ್ರೀಧರ ಭಂಡಾರಿ ಸಂಸ್ಮರಣಾ ಕಾರ್ಯಕ್ರಮ “ಡಾ.ಶ್ರೀಧರ ಭಂಡಾರಿ “ಯಕ್ಷದೇಗುಲ” ಪ್ರಶಸ್ತಿ ಪ್ರದಾನ ಸಮಾರಂಭ ಫೆ.19 ಭಾನುವಾರ ಸಂಜೆ 5 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ. ಕಾಸರಗೋಡು ಶ್ರೀ ಎಡನೀರು ಮಠದ ಜಗದ್ಗುರು ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದು, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಅಧ್ಯಕ್ಷತೆ ವಹಿಸುವರು. ಮುಖ್ಯ

ಫೆ.19 : ಡಾ.ಶ್ರೀಧರ ಭಂಡಾರಿ “ಯಕ್ಷ ದೇಗುಲ” ಪ್ರಶಸ್ತಿ ಪ್ರಧಾನ ಸಮಾರಂಭ Read More »

ಚುನಾವಣಾ ತಯಾರಿ ಬಗ್ಗೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಮಾತು

ಪುತ್ತೂರು: ಚುನಾವಣಾ ದಿನ ಹತ್ತಿರ ಬರುತ್ತಿದೆ. ಜನಪ್ರತಿನಿಧಿಗಳ ತಯಾರಿಯೂ ಜೋರಾಗಿಯೇ ಇದೆ. ಕಾಂಗ್ರೆಸ್ ಪಾಳಯದಲ್ಲೂ ತಯಾರಿಗಳು ಎಗ್ಗಿಲ್ಲದೇ ನಡೆಯುತ್ತಿವೆ. ಈಗಾಗಲೇ 13-14 ಹೆಸರುಗಳು ಮುನ್ನೆಲೆಗೂ ಬಂದಿವೆ. ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ನಾಯಕಿ. ಈ ಹಿಂದೆ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷೆಯಾಗಿ ಕೆಲಸ ನಿರ್ವಹಿಸಿದ ಅನುಭವಿ. ಸಾಕಷ್ಟು ಬಾರಿ ಪುತ್ತೂರಿನ ಶಾಸಕ ಸ್ಥಾನದ ಟಿಕೇಟ್ ನೀಡಬೇಕೆಂದು ಬೇಡಿಕೆಯನ್ನು ಮುಂದಿಟ್ಟಿದ್ದರು. ಇದಕ್ಕಾಗಿ ನಾಯಕರ ಜೊತೆ ಮಾತುಕತೆ ನಡೆಸಿದ್ದು ಮಾತ್ರವಲ್ಲ, ತಳಮಟ್ಟದಲ್ಲೂ ಕೆಲಸ ನಿರ್ವಹಿಸಿದ್ದಾರೆ. ಸಾಕಷ್ಟು ಓಡಾಟಗಳನ್ನು

ಚುನಾವಣಾ ತಯಾರಿ ಬಗ್ಗೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಮಾತು Read More »

error: Content is protected !!
Scroll to Top