ಪ್ರಪಾತಕ್ಕೆ ಬಿದ್ದ ಬೈಕ್ – ಹಿಂಬದಿ ಸವಾರ ಮೃತ್ಯು

ಬಂಟ್ವಾಳ : ಬೈಕ್ ಪ್ರಪಾತಕ್ಕೆ ಬಿದ್ದು, ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಏ. 10 ರ ಮುಂಜಾವಿನ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.ಯಶೋಧರ(25) ಎಂಬವರೇ ಮೃತ ದುರ್ದೈವಿ. ಚಿಕ್ಕಮಗಳೂರು ನಿವಾಸಿಯಾದ ಇವರು ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬೈಕ್ ಚಲಾಯಿಸುತ್ತಿದ್ದ ಈತನ ಸ್ನೇಹಿತ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ. ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿ ಸ್ನೇಹಿತನ […]

ಪ್ರಪಾತಕ್ಕೆ ಬಿದ್ದ ಬೈಕ್ – ಹಿಂಬದಿ ಸವಾರ ಮೃತ್ಯು Read More »

ನಂದಿನಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅಮುಲ್ ಗೆ ವಿರೋಧ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್

ಹಾಸನ : ಕನ್ನಡಿಗರ ಅಸ್ಮಿತೆಯಾದ ನಂದಿನಿ ಹಾಲು ಮತ್ತು ನಂದಿನಿ ಹಾಲಿನ ಉತ್ಪನ್ನಗಳನ್ನು ಬದಿಗೆ ತಳ್ಳಿ ಗುಜರಾತ್ ಮೂಲದ ಅಮುಲ್ ಹಾಲು ಕರ್ನಾಟಕದಲ್ಲಿ ಪಾರುಪತ್ಯ ಸ್ಥಾಪಿಸಲು ನೋಡುತ್ತಿದೆ. ಇದಕ್ಕೆ ಬಿಜೆಪಿ ಸರ್ಕಾರ ಸಹಕಾರ ನೀಡುತ್ತಿದೆ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ನಾಯಕರು ಹಾಗೂ ಜನಸಾಮಾನ್ಯರ ಒಂದು ವರ್ಗ ಭಾರೀ ವಿರೋಧ ವ್ಯಕ್ತಪಡಿಸುತ್ತಿದೆ. ನಂದಿನಿ ವರ್ಸಸ್ ಅಮುಲ್ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಜಟಾಪಟಿ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಸಚಿವರುಗಳು ಸ್ಪಷ್ಟನೆ ನೀಡಿದರೂ ವಿರೋಧ

ನಂದಿನಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅಮುಲ್ ಗೆ ವಿರೋಧ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್ Read More »

ರಂಗಭೂಮಿ ದಿಗ್ಗಜೆ, ರಾಷ್ಟ್ರ ರಾಜಧಾನಿಯ ಐಕಾನಿಕ್ : ಜಲಬಾಲ ವೈದ್ಯ ವಿಧಿವಶ

ಅಕ್ಷರ ಥಿಯೇಟರ್‌ನ ಸಹ ಸಂಸ್ಥಾಪಕಿ, ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ದೆಹಲಿ : ರಂಗಭೂಮಿ ದಿಗ್ಗಜೆ ಮತ್ತು ರಾಷ್ಟ್ರ ರಾಜಧಾನಿಯ ಐಕಾನಿಕ್ ಅಕ್ಷರ ಥಿಯೇಟರ್‌ನ ಸಹ ಸಂಸ್ಥಾಪಕಿ ಜಲಬಾಲ ವೈದ್ಯ ಅವರು ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಪುತ್ರಿ ಮತ್ತು ರಂಗಭೂಮಿ ನಿರ್ದೇಶಕಿ ಅನಸೂಯಾ ವೈದ್ಯ ಶೆಟ್ಟಿ ಅವರು ತಿಳಿಸಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಜಲಬಾಲ ವೈದ್ಯ(86) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.ಭಾರತೀಯ ಲೇಖಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುರೇಶ್ ವೈದ್ಯ ಮತ್ತು ಇಂಗ್ಲಿಷ್ ಶಾಸ್ತ್ರೀಯ ಗಾಯಕಿ

ರಂಗಭೂಮಿ ದಿಗ್ಗಜೆ, ರಾಷ್ಟ್ರ ರಾಜಧಾನಿಯ ಐಕಾನಿಕ್ : ಜಲಬಾಲ ವೈದ್ಯ ವಿಧಿವಶ Read More »

ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಒಂದೇ ಪಟ್ಟಿಯಲ್ಲಿ 175 ಅಭ್ಯರ್ಥಿಗಳ ಹೆಸರು ಬೆಂಗಳೂರು : ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಇಂದು ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ನಿನ್ನೆ ತಡರಾತ್ರಿ ವರೆಗೆ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಒಂದೇಟಿಗೆ 175 ಅಭ್ಯರ್ಥಿಗಳ ಪಟ್ಟಿಯನ್ನ ರೆಡಿ ಮಾಡಿದ್ದಾರೆ. ಯಾರಿಗೆ ಕೊಡಬೇಕು? ಯಾರಿಗೆ ಕೊಡಬಾರದು.? ಬಂಡಾಯ ಶಮನ ಮಾಡುವುದು ಹೇಗೆ? ಸರ್ವೆ ರಿಪೋರ್ಟ್ ಏನು ಹೇಳುತ್ತದೆ ಹೀಗೆ ಎಲ್ಲವನ್ನೂ ಅಳೆದು ತೂಗಿ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು,

ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗುವುದು ಅನಪೇಕ್ಷಿತ ಉದ್ಯಮಿಗಳ ಭೇಟಿಗೆ

ಸಂಚಲನ ಸೃಷ್ಟಿಸಿದ ಕಾಂಗ್ರೆಸ್‌ ಮಾಜಿ ನಾಯಕ ಗುಲಾಮ್‌ ನಬಿ ಆಜಾದ್‌ ಆರೋಪ ಹೊಸದಿಲ್ಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಅವರ ಇಡೀ ಕುಟುಂಬ ವ್ಯಾಪಾರಿಗಳೊಂದಿಗೆ ಸಂಬಂಧ ಹೊಂದಿದೆ. ರಾಹುಲ್‌ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ಕೆಲವು ಅನಪೇಕ್ಷಿತ ಉದ್ಯಮಿಗಳನ್ನು ಭೇಟಿ ಮಾಡುತ್ತಾರೆ ಎಂದು ಕಾಂಗ್ರೆಸಿನ ಮಾಜಿ ನಾಯಕ ಗುಲಾಮ್‌ ನಬಿ ಆಜಾದ್‌ ಆರೋಪಿಸಿದ್ದಾರೆ. ಉದ್ಯಮಿ ಗೌತಮ್‌ ಅದಾನಿ ವಿಚಾರವನ್ನು ಹಿಡಿದುಕೊಂಡು ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆಗಳನ್ನು ಮಾಡುತ್ತಿರುವ ರಾಹುಲ್‌ ಗಾಂಧಿ

ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗುವುದು ಅನಪೇಕ್ಷಿತ ಉದ್ಯಮಿಗಳ ಭೇಟಿಗೆ Read More »

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ

ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪ್ರಯಾಣಿಸುತ್ತಿದ್ದ ಕಾರು ಬೆಳ್ತಂಗಡಿ : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಕಾರು ಕಂದಕಕ್ಕೆ ಉರುಳಿ ಬಿದ್ದು ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆಯ ಸಂಬಂಧಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪುಷ್ಪಾವತಿ ಆರ್‌.ಶೆಟ್ಟಿಯವರು ಕುಟುಂಬದ ಜತೆ ಕೊಪ್ಪದಲ್ಲಿ ಅಂತ್ಯಕ್ರಿಯೆಯೊಂದರಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದಾಗ ಚಾರ್ಮಾಡಿಯ ಎರಡನೇ ತಿರುವಿನಲ್ಲಿ ಕಾರು ಬ್ರೇಕ್‌ ಫೈಲ್‌ ಆಗಿ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ ಪುಷ್ಪಾವತಿ ಆರ್‌.

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ Read More »

ಬಡಗನ್ನೂರು: ಸಂತ ಫಿಲೋಮಿನಾ ಕಾಲೇಜಿನ ಎನ್‌.ಎಸ್‌.ಎಸ್‌. ಶಿಬಿರ ಉದ್ಘಾಟನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಏ. 9ರಂದು ಬಡಗನ್ನೂರು ಪಟ್ಟೆ ವಿದ್ಯಾಸಂಸ್ಥೆಯಲ್ಲಿ ಉದ್ಘಾಟನೆಗೊಂಡಿತು. ಪಟ್ಟೆ ವಿದ್ಯಾಸಂಸ್ಥೆಗಳ ಸಂಚಾಲಕ ಪಿ. ನಾರಾಯಣ ಭಟ್ ಅವರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ಎನ್.ಎಸ್.ಎಸ್. ಶಿಬಿರಗಳು ಸಮಾಜ ಹಾಗೂ ವಿದ್ಯಾರ್ಥಿಗಳನ್ನು ಬೆಸೆಯುವ ಕೊಂಡಿಗಳು. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪರಿಪಾಲನೆ ಹಾಗೂ ಜವಾಬ್ದಾರಿಗಳನ್ನು ಬೆಳೆಸುವಲ್ಲಿ ಎನ್.ಎಸ್.ಎಸ್. ಶಿಬಿರ ಸಹಕಾರಿ. ನದಿಗಳು ಸಮುದ್ರವನ್ನು ಹೋಗಿ

ಬಡಗನ್ನೂರು: ಸಂತ ಫಿಲೋಮಿನಾ ಕಾಲೇಜಿನ ಎನ್‌.ಎಸ್‌.ಎಸ್‌. ಶಿಬಿರ ಉದ್ಘಾಟನೆ Read More »

ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ

ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕಣ್ಗಾವಲು ಬೆಂಗಳೂರು : ಚುನಾವಣಾ ನೀತಿಸಂಹಿತೆ ಜಾರಿಯಾದ ಹತ್ತು ದಿನಗಳಲ್ಲಿ ಪೊಲೀಸರು 99.18 ಕೋಟಿ ರೂ. ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿರಿಸಿದೆ. ನಗದು ವಹಿವಾಟುಗಳ ಮೇಲೆ ನಿಗಾ ಇರಿಸಿದ್ದು ಚೆಕ್​ಪೋಸ್ಟ್​​ಗಳನ್ನು ನಿರ್ಮಿಸಲಾಗಿದೆ. ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮತದಾರರಿಗೆ ಆಮಿಷ ಒಡ್ಡಲು ಸಾಗಿಸುತ್ತಿದ್ದ ಗಿಫ್ಟ್​​ಗಳನ್ನೂ ಆಯೋಗ ಜಪ್ತಿ ಮಾಡಿಕೊಂಡಿದೆ. ಮಾ.29ರಂದು ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಂದಿನಿಂದ

ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ Read More »

ಕಗ್ಗದ ಸಂದೇಶ – ಮೌನವಾಗಿ ಕರ್ತವ್ಯವನ್ನು ಮಾಡು ಮಾನವ…

ಇಳೆಯಿಂದ ಮೊಳಕೆಯೊಗೆವಂದು ತಮಟೆಗಳಿಲ್ಲ|ಫಲ ಮಾಗುವಂದು ತುತ್ತೂರಿ ದನಿಯಿಲ್ಲ||ಸೂರ್ಯಚಂದ್ರರದೊಂದು ಸದ್ದಿಲ್ಲ|ಹೊಲಿ ನಿನ್ನ ತುಟಿಗಳನು ಮಂಕುತಿಮ್ಮ||ಭೂಮಿಯಲ್ಲಿ ಹಾಕಿದ ಬೀಜ ಮೊಳಕೆಯೊಡೆದು ಹೊರಬರುವಾಗ ತಮಟೆಯನ್ನು ಬಾರಿಸಿ ಶಬ್ದ ಮಾಡುವುದಿಲ್ಲ. ಗಿಡದಲ್ಲಿರುವ ಕಾಯಿ ಹಣ್ಣಾಗುವಾಗ ವಾದ್ಯ ಘೋಷ ಮಾಡುವುದಿಲ್ಲ. ಜಗತ್ತಿಗೆ ಬೆಳಕನ್ನು ನೀಡುವ ಸೂರ್ಯಚಂದ್ರರು ಯಾವುದೇ ರೀತಿಯಲ್ಲಿ ಹೇಳಿಕೊಳ್ಳುವುದಿಲ್ಲ. ಸದ್ದುಗದ್ದಲವಿಲ್ಲದೆ ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುವುದನ್ನು ನೋಡಿ ಮಾನವನು ಕೂಡ ತುಟಿ ತೆರೆಯದೆ ಮೌನವಾಗಿ ಕಾರ್ಯನಿರ್ವಹಿಸುವುದನ್ನು ಕಲಿಯಬೇಕೆಂದು ಮಾನ್ಯ ಡಿವಿಜಿಯವರು ಈಮುಕ್ತಕದಲ್ಲಿ ಹೇಳಿದ್ದಾರೆ.ಭೂಮಿಗೆ ಬಿದ್ದ ಬೀಜ ಮೊಳಕೆಯೊಡೆಯದೆ ಇದ್ದರೆ ಜೀವಿಗಳಿಗೆ ಜೀವನವಿಲ್ಲ. ಆದರೆ

ಕಗ್ಗದ ಸಂದೇಶ – ಮೌನವಾಗಿ ಕರ್ತವ್ಯವನ್ನು ಮಾಡು ಮಾನವ… Read More »

ಜಿಲ್ಲಾ ವಿಶ್ವಕರ್ಮ ಕಮ್ಮಾರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ರಚನೆ, ಸಂಘದ ಉದ್ಘಾಟನೆ

ಪುತ್ತೂರು: ವಿಶ್ವಕರ್ಮ ಕಮ್ಮಾರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ರಚನಾ ಸಭೆ ಮತ್ತು ಉದ್ಘಾಟನಾ ಕಾರ್ಯಕ್ರಮ ಶ್ರೀ ರಾಮ ಭಜನಾ ಮಂದಿರ ಸಭಾಭವನದಲ್ಲಿ ಭಾನುವಾರ ನಡೆಯಿತು. ಸಂಘದ ನೂತನ ಸಮಿತಿಯನ್ನು ನ್ಯಾಯವಾದಿ ಹರೀಶ್ ಬೂಡುಪನ್ನೆ, ದೀಪ ಬೆಳಗಿಸಿ ಉದ್ಗಾಟಿಸಿದರು. ವೇದಿಕೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಸತೀಶ್ ಆಚಾರ್ಯ ಚೊಕ್ಕಾಡಿ, ತಾಲೂಕು ಅಧ್ಯಕ್ಷ ವಾಸುದೇವ ಆಚಾರ್ಯ ಮರ್ಕಂಜ, ಕಾನೂನು ಸಲಹೆಗಾರ ಹರೀಶ್ ಬೂಡುಪನ್ನೆ, ಸಂಘದ ತಾಲೂಕು ಕಾರ್ಯದರ್ಶಿ ಜನಾರ್ದನ ಆಚಾರ್ಯ ಪಂಜ, ಕರ್ನಾಟಕ ರಾಜ್ಯ ರೈತಸಂಘ ಹಸಿರು

ಜಿಲ್ಲಾ ವಿಶ್ವಕರ್ಮ ಕಮ್ಮಾರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ರಚನೆ, ಸಂಘದ ಉದ್ಘಾಟನೆ Read More »

error: Content is protected !!
Scroll to Top