ಪಜಿರೋಡಿ ಮೊಗೇರ್ಕಳ ದೇವಸ್ಥಾನ, ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವ, ನೇಮೋತ್ಸವದ ಆಮಂತ್ರಣ ಬಿಡುಗಡೆ
ಪುತ್ತೂರು: ಶಾಂತಿಗೋಡು ಗ್ರಾಮದ ಪಜಿರೋಡಿ ಅದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಮತ್ತು ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಏ. 29ರಿಂದ ಮೇ 1ರವರೆಗೆ ನಡೆಯಲಿದ್ದು, ಮಾ. 29ರಂದು ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಲಾಯಿತು. ಏ. 29ರಿಂದ ಮೇ 1ರವರೆಗೆ ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಏ. 29ರಂದು ಬೆಳಿಗ್ಗೆ 9.30ಕ್ಕೆ ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಬಳಿಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಪ್ರಮುಖರಾದ ಹೊನ್ನಪ್ಪ ಪೂಜಾರಿ ಕೈಂದಾಡಿ, […]









