ಜ. 21-29: ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಜನವರಿ 21ರಿಂದ 29ರವೆಗೆ ನಡೆಯಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವಾ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 54 ಶಕ್ತಿ ಕೇಂದ್ರ ವ್ಯಾಪ್ತಿಯ 220 ಬೂತ್ಗಳ 55 ಸಾವಿರ ಮನೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಪೇಜ್ ಪ್ರಮುಖರು ಸಾಥ್ ನೀಡಲಿದ್ದಾರೆ. ಈ ಸಂದರ್ಭ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಕೆಲಸವೂ ನಡೆಯಲಿದೆ. ಮಿಸ್ಡ್ ಕಾಲ್ ಮೆಂಬರ್ಶಿಪ್ ಅಭಿಯಾನ ನಡೆಯಲಿದೆ. 3 ವರ್ಷಗಳ ಹಿಂದೆ […]

ಜ. 21-29: ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ Read More »

ವಾರಾಂತ್ಯ ಚಟುವಟಿಕೆ ಅನುಭವಾತ್ಮಕ ಕಲಿಕೆ | ಮಕ್ಕಳ ವಾರಾಂತ್ಯ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಬಿಇಓ ಲೊಕೇಶ್ ಎಸ್.ಆರ್.

ಪುತ್ತೂರು: ವಾರಾಂತ್ಯ ಚಟುವಟಿಕೆಯಂತಹ ಕಾರ್ಯಕ್ರಮದಿಂದ ಬದುಕು ರೂಪಿಸಿಕೊಳ್ಳುವ ಶಿಕ್ಷಣ ಸಿಗಲಿದೆ. ಉತ್ತಮ ಬದುಕಿಗೆ ಪೂರಕವಾದ ಅನುಭವಾತ್ಮಕ ಕಲಿಕೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಳಪಡಲಿದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ತಿಳಿಸಿದರು.ರಾಜ್ಯ ಬಾಲಭವನ ಸೊಸೈಟಿ, ತಾಲೂಕು ಬಾಲಭವನ ಸೊಸೈಟಿ, ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂಸಾರ ತಂಡ ಪುತ್ತೂರು ಇವುಗಳ ಸಹಯೋಗದಲ್ಲಿ

ವಾರಾಂತ್ಯ ಚಟುವಟಿಕೆ ಅನುಭವಾತ್ಮಕ ಕಲಿಕೆ | ಮಕ್ಕಳ ವಾರಾಂತ್ಯ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಬಿಇಓ ಲೊಕೇಶ್ ಎಸ್.ಆರ್. Read More »

ಜ. 22ರಂದು ಗ್ರಾಮ ಸಾಹಿತ್ಯ ಸಂಭ್ರಮ 2023

ಪುತ್ತೂರು: ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದ ಅಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ 2023 ಜ. 22ರಂದು ಬೆಳಿಗ್ಗೆ 9.30ರಿಂದ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.ದ.ಕ.ಜಿ.ಪಂ. ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ 3ನೇ ಸರಣಿ ಕಾರ್ಯಕ್ರಮ ಇದಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಉದ್ಘಾಟಿಸಲಿದ್ದಾರೆ. ಕಸಾಪ ಪುತ್ತೂರು ಅಧ್ಯಕ್ಷ

ಜ. 22ರಂದು ಗ್ರಾಮ ಸಾಹಿತ್ಯ ಸಂಭ್ರಮ 2023 Read More »

ಫೆ. 8ರಿಂದ 10ರವರೆಗೆ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ: ಆಮಂತ್ರಣ ಬಿಡುಗಡೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಫೆ. 8ರಿಂದ 10ರತನಕ ನಡೆಯುವ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆಯ ಆಮಂತ್ರಣ ಪತ್ರ ಬಿಡುಗಡೆ ಮತ್ತು ಜೀರ್ಣೋದ್ಧಾರ ಸಮಿತಿ ಸಭೆ ಬುಧವಾರ ರಾತ್ರಿ ನಡೆಯಿತು. ಬೂಡಿಯಾರ್ ರಾಧಾಕೃಷ್ಣ ರೈ ಅಧ್ಯಕ್ಷತೆಯಲ್ಲಿ ಗ್ರಾಮದ ವಿವಿಧ ಭಾಗದ ಬೈಲ್ವಾರ್ ಸಮಿತಿಯ ಸಭೆ ನಡೆಸಲು ಜವಾಬ್ದಾರಿ ನೀಡಲಾಯಿತು. ಫೆ. 10ರಂದು ಬಾಲಾಲಯ ಪ್ರತಿಷ್ಠೆ ಬಳಿಕ ನಡೆಯುವ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಜೀರ್ಣೋದ್ಧಾರ ಕಾರ್ಯಕ್ಕೆ ಸರ್ವ

ಫೆ. 8ರಿಂದ 10ರವರೆಗೆ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ: ಆಮಂತ್ರಣ ಬಿಡುಗಡೆ Read More »

ಸಂಪ್ಯ ಜಾತ್ರೆಗೆ ಗೊನೆ ಮುಹೂರ್ತ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೆ ಪ್ರಯುಕ್ತ ಜ. 19ರಂದು ಗೊನೆ ಮಹೂರ್ತ ನೆರವೇರಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಪುತ್ತೂರಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಭೀಮಯ್ಯ ಭಟ್, ಸಮಿತಿ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು

ಸಂಪ್ಯ ಜಾತ್ರೆಗೆ ಗೊನೆ ಮುಹೂರ್ತ Read More »

ಕುಸ್ತಿ ಫೆಡರೇಶನ್ ಅಧ್ಯಕ್ಷರಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ

ಕುಸ್ತಿಪಟು ವಿನೇಶ್‌ ಫೋಗಟ್‌ ಗಂಭೀರ ಆರೋಪ ಹೊಸದಿಲ್ಲಿ : ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಕ್ರೀಡಾ ಆಡಳಿತಾಧಿಕಾರಿ ಮತ್ತು ಬಿಜೆಪಿ ಸಂಸದ ತಿರಸ್ಕರಿಸಿದ್ದಾರೆ. ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದ ನಂತರ ಡಬ್ಲ್ಯುಎಫ್‌ಐ ಜತೆ ಭಿನ್ನಾಭಿಪ್ರಾಯ ಹೊಂದಿರುವ ವಿನೇಶ್ ಅವರು, ಲಖನೌ ರಾಷ್ಟ್ರೀಯ ಶಿಬಿರದಲ್ಲಿ ಹಲವಾರು ತರಬೇತಿದಾರರು ಮಹಿಳಾ

ಕುಸ್ತಿ ಫೆಡರೇಶನ್ ಅಧ್ಯಕ್ಷರಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ Read More »

ಫೆಬ್ರವರಿಯಲ್ಲೂ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ

ಇಂದು ಕಲಬುರಗಿಯಲ್ಲಿ ಬೃಹತ್‌ ಸಮಾವೇಶ ಶಿವಮೊಗ್ಗ: ಈ ತಿಂಗಳು ಎರಡನೇ ಸಲ ಇಂದು ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಕೂ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆ.27 ರಂದು ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.ವಿಮಾನ ನಿಲ್ದಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಇದು ರಾಜ್ಯದಲ್ಲಿ ಕೆಂಪೇಗೌಡ

ಫೆಬ್ರವರಿಯಲ್ಲೂ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಪರೀಕ್ಷೆ ದಿನಾಂಕದಲ್ಲಿ ಒಂದು ಪರಿಷ್ಕರಣೆ ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.ಮಾರ್ಚ್​ 31ರಿಂದ ಏಪ್ರಿಲ್ 15ರ ವರೆಗೆ 10ನೇ ತರಗತಿಯ ಪರೀಕ್ಷೆಗಳು ನಡೆಯಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ತಾಣದಲ್ಲಿದೆ.ಏಪ್ರಿಲ್ 4 ರಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ಈಗ ಏಪ್ರಿಲ್ 3 ರಂದು ನಡೆಯಲಿವೆ. ಏಪ್ರಿಲ್ 4 ರಂದು ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇರುವುದರಿಂದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ Read More »

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಆಮಂತ್ರಣವನ್ನು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಸಂಸ್ಮರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಅವರು ಸಂಸ್ಥಾನದಲ್ಲಿ ನೀಡಿದರು. ಜ. ೨೨ರಂದು ನಡೆಯುವ ಕಾರ್ಯಕ್ರಮಕ್ಕೆ ಮೊದಲನೆ ದಿನ ಆಗಮಿಸಲಿರುವ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ. ಮರುದಿನ ಬೆಳಗ್ಗೆಯಿಂದಲೇ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ. ಸಂಸ್ನರಣಾ

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣ Read More »

ಕುಂಜೂರು ದೇವಸ್ಥಾನದಲ್ಲಿ ಶ್ರದ್ದಾ ಕೇಂದ್ರ ಸ್ವಚ್ಛತಾ  ಕಾರ್ಯಕ್ರಮ

ಪುತ್ತೂರು: ಕುಂಜೂರು ಶ್ರೀ  ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕುಂಜೂರು ಪಂಜ  ಒಕ್ಕೂಟದ  ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ  ಕಾರ್ಯಕ್ರಮ ನಡೆಯಿತು. ವಲಯ  ಮೇಲ್ವಿಚಾರಕ ಹರೀಶ್ ಕುಲಾಲ್ ಹಾಗೂ ಒಕ್ಕೂಟದ  ಅಧ್ಯಕ್ಷ ಮಹಾಲಿಂಗ ನಾಯ್ಕ ಅವರ  ಸಹಕಾರದೊಂದಿಗೆ  ಸ್ವಚ್ಛತೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನ  ಸಮಿತಿ  ಅಧ್ಯಕ್ಷ ಪ್ರದೀಪ್ ಕೃಷ್ಣ  ಭಟ್, ವ್ಯವಸ್ಥಾಪನ  ಸಮಿತಿ  ಸದಸ್ಯರು  ಉಪಸ್ಥಿತರಿದ್ದರು, ಸೇವಾಪ್ರತಿನಿಧಿ ಆಶಾ, ಒಕ್ಕೂಟದ  ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು.

ಕುಂಜೂರು ದೇವಸ್ಥಾನದಲ್ಲಿ ಶ್ರದ್ದಾ ಕೇಂದ್ರ ಸ್ವಚ್ಛತಾ  ಕಾರ್ಯಕ್ರಮ Read More »

error: Content is protected !!
Scroll to Top