ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ
ಪುತ್ತೂರು: 1979ರಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ದಕ್ಷಿಣ ಕನ್ನಡಕ್ಕೆ ಬಂದಿದ್ದರು. ಆಗ ಒಕ್ಕಲುತನ ಮಾಡುತ್ತಿದ್ದ ಮನೆಗಳಲ್ಲಿ ನಿಂತು, ಇಲ್ಲಿನ ಕೃಷಿ ಕಾರ್ಯದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದರು. ಸಂಘಟನೆಯ ಕಾರ್ಯಕ್ಕೂ ಚಾಲನೆ ನೀಡಿ, ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನ ನಿರ್ಮಾಣಕ್ಕೆ, ಕೊಂಬೆಟ್ಟು ಐಟಿಐ ನಿರ್ಮಾಣಕ್ಕೆ ಕಾರಣಕರ್ತರಾದರು. ಅವರ ಈ ಎಲ್ಲಾ ಕೆಲಸಗಳನ್ನು ನೆನಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಜ. 22ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ […]










