ಸಮ್ಮದ್ ಶಿಖರ್‌ಜಿಗಾಗಿ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಾವು

ಪ್ರವಾಸಿ ತಾಣ ಮಾಡಿದ ನಿರ್ಧಾರ ವಿರೋಧಿಸಿ ಸಲ್ಲೇಖನ ವ್ರತ ಜಾರ್ಖಂಡ್: ಶ್ರೀ ಸಮ್ಮದ್ ಶಿಖರ್‌ಜಿಯನ್ನು ಪ್ರವಾಸಿ ಸ್ಥಳವಾಗಿ ಘೋಷಿಸಿದ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಮರ್ಥ್ ಸಾಗರ್ (74) ಎಂಬವರು ಮೃತಪಟ್ಟಿದ್ದಾರೆ.ಜೈಪುರದಲ್ಲಿ ಸಮರ್ಥ್ ಸಾಗರ್ ನಿಧನರಾಗಿದ್ದು, ಕಳೆದ 5 ದಿನಗಳಿಂದ ಅವರು ಸಲ್ಲೇಖನ ವ್ರತ ಕೈಗೊಂಡಿದ್ದರು. ಇದಕ್ಕೂ ಮುನ್ನ ಇದೇ ವಿಷಯವಾಗಿ ಜೈನ ಸನ್ಯಾಸಿ ಸುಗ್ಯೇಯಸಾಗರ ಮಹಾರಾಜ್ (72) ಸರ್ಕಾರದ ನಿರ್ಧಾರವನ್ನು ಖಂಡಿಸಿ ಉಪವಾಸ ಕೈಗೊಂಡು ದೇವಾಲಯದಲ್ಲಿ ಸಾವನ್ನಪ್ಪಿದ್ದರು.ಜಾರ್ಖಂಡ್ ನ […]

ಸಮ್ಮದ್ ಶಿಖರ್‌ಜಿಗಾಗಿ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಾವು Read More »

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ ನೌಕರಿಯಿಂದ ವಜಾ

ದೂರು ಕೊಡಬೇಡಿ, ಹೆಂಡತಿ ಮಕ್ಕಳಿದ್ದಾರೆ ಎಂದು ಕ್ಷಮೆ ಯಾಚಿಸಿದ್ದ ಹೊಸದಿಲ್ಲಿ : ನ್ಯೂಯಾರ್ಕ್‌-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಶಂಕರ್ ಮಿಶ್ರಾ ಎಂಬಾತನನ್ನು ಅಮೆರಿಕದ ಕಂಪನಿ ನೌಕರಿಯಿಂದ ಕೆಲಸದಿಂದ ವಜಾಗೊಳಿಸಿದೆ. ಯುನೈಟೆಡ್ ಸ್ಟೇಟ್ಸ್ ಹಣಕಾಸು ಸೇವೆಗಳ ಕಂಪನಿ ವೆಲ್ಸ್ ಫಾರ್ಗೋದಲ್ಲಿ ಆತ ಉದ್ಯೋಗಿಯಾಗಿದ್ದ.ಶಂಕರ್ ಮಿಶ್ರಾ ವಿರುದ್ಧದ ಆರೋಪ ತುಂಬ ‘ಗಾಢವಾಗಿ ಮನಸ್ಸನ್ನು ಕಲಕಿದೆ’. ಈ ವ್ಯಕ್ತಿಯನ್ನು ವೆಲ್ ಫಾರ್ಗೋದಿಂದ ವಜಾಗೊಳಿಸಲಾಗಿದೆ ಎಂದು ಅಮೆರಿಕದ ವೆಲ್ಸ್ ಫಾರ್ಗೋ ಕಂಪನಿ ಹೇಳಿದೆ.

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ ನೌಕರಿಯಿಂದ ವಜಾ Read More »

ನಿಮ್ಮ ಮಗುವನ್ನು ಸೂಪರ್ ಹೀರೊ ಮಾಡಲು ಹೊರಡಬೇಡಿ!

ಮಾರುಕಟ್ಟೆಯ ಸರಕು ಆಗುತ್ತಿರುವ ಮಕ್ಕಳ ಪ್ರತಿಭೆ ಇತ್ತೀಚೆಗೆ ಹಲವು ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಅತಿಥಿಯಾಗಿ ಭಾಗವಹಿಸಿದ ಸಂದರ್ಭ ನಾನು ಗಮನಿಸಿದ ಸಂಗತಿಗಳು ಇವು…ಸಣ್ಣ ಮಕ್ಕಳಿಗೆ ಭಾಷಣಗಳು ಬೇಡ, ಅವರಿಗೆ ಬಹುಮಾನಗಳು ಕೂಡ ಬೇಡ. ಅವರಿಗೆ ಭಾರತ ರತ್ನ ಪ್ರಶಸ್ತಿ ಕೊಟ್ಟರೂ ಒಂದೇ. ಅವರಿಗೆ ಬೇಕಾದದ್ದು ಗಮ್ಮತ್ತು, ಗೆಳೆತನ, ಖುಷಿ ಮತ್ತು ಸ್ವಾತಂತ್ರ್ಯ ಮಾತ್ರ. ಅವರನ್ನು ಹಿಡಿದು ಕೂರಿಸಿ ಬಲವಂತದ ಮಾಘಸ್ನಾನ ಎಂಬಂತೆ ಈ ಬಹುಮಾನ ಹೀಗೆ ತೆಗೆದುಕೊ, ಹೀಗೆ ನಮಸ್ಕಾರ ಮಾಡು, ಹೀಗೆ ಫೋಟೊಗೆ ಫೋಸ್ ಕೊಟ್ಟು ಹಲ್ಲು

ನಿಮ್ಮ ಮಗುವನ್ನು ಸೂಪರ್ ಹೀರೊ ಮಾಡಲು ಹೊರಡಬೇಡಿ! Read More »

ಕುಂಬ್ಲಾಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪುತ್ತೂರು: ಚಾರ್ವಾಕ ಗ್ರಾಮದ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ. 5ರಂದು ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ, ಅಷ್ಠಬಂಧ ಲೇಪನ, ಬೆಳಿಗ್ಗೆ 11.14ಕ್ಕೆ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಂಗಪೂಜೆ, ಶ್ರೀ ಭೂತ ಬಲಿ, ರಾಜಾಂಗಣ ಪ್ರಸಾದ, ಬಟ್ಟಲು ಕಾಣಿಕೆ, ನಾಲ್ಕಂಭ ಕ್ಷೇತ್ರದಲ್ಲಿ ಕಟ್ಟೆ ಪೂಜೆ, ಮಂತ್ರಾಕ್ಷತೆ ಹಾಗೂ ಬೆಳಂದೂರು ಲಕ್ಷ್ಮೀಪ್ರಿಯಾ ಭಜನಾ ಮಂಡಳಿಯಿಂದ ಭಜನೆ ನಡೆಯಿತು. ಜ. 6ರ ಕಾರ್ಯಕ್ರಮ:ಜ. 6ರಂದು ಬೆಳಿಗ್ಗೆ ಉಳ್ಳಾಕ್ಲು ಭಂಡಾರ ತೆಗೆಯಲಾಗುವುದು. ರಾತ್ರಿ 9ರಿಂದ

ಕುಂಬ್ಲಾಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ

ಪುತ್ತೂರು: ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿಯನ್ನು ಕೇಂದ್ರೀಕರಿಸಿಕೊಂಡು ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಕಚೇರಿ ಕಾರ್ಯಾರಂಭ ಮಾಡಿದೆ.ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದ ಹಿಂಬದಿಯ ಕೊಠಡಿಯಲ್ಲಿದೆ ಇಲಾಖೆಯ ಕಚೇರಿ. ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಇದೇ ಕೊಠಡಿಯಲ್ಲಿತ್ತು. ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಮಂಜುಳಾಶ್ರೀ ಶೆಣೈ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರಿನಲ್ಲಿದ್ದ ಕಚೇರಿಯ ವಿಸ್ತರಿತ ಭಾಗ ಇದೀಗ ಪುತ್ತೂರಿನಲ್ಲಿ ಕಾರ್ಯಾರಂಭ ಮಾಡಿದೆ. ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವ ಹಲವು ಯೋಜನೆಗಳು ಇಲಾಖೆಯಲ್ಲಿದ್ದು, ಮೀನುಗಾರಿಕೆ ಕೃಷಿ

ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ Read More »

ಸಾಂಘಿಕ ನಡೆ ಸಮೃದ್ಧಿಯ ಕಡೆ ತರಬೇತಿ

ಪುತ್ತೂರು: ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ ಪಂಚಾಯತ್ ರಾಜ್ ಸಂಸ್ಥೆ ಮತ್ತು ಸ್ವ-ಸಹಾಯ ಸಂಘಗಳ ಒಗ್ಗೂಡುವಿಕೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಸಾಂಘಿಕ ನಡೆ ಸಮೃದ್ಧಿಯ ಕಡೆ ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಪ್ರತಿಮಾ ಹಾರಾಡಿ, ಮಹಮ್ಮದ್ ಬಡಗನ್ನೂರು ತರಬೇತಿ ನಡೆಸಿಕೊಟ್ಟರು. ತರಬೇತಿಯಲ್ಲಿ ಮುಂಡೂರು, ಬೆಟ್ಟಂಪಾಡಿ ಗ್ರಾಮ ಪಂಚಾಯತ್ನ ಅದ್ಯಕ್ಷರು, ಸ್ಥಾಯಿ ಸಮಿತಿ ಸದಸ್ಯರು, ಪಿಡಿಓ, ಕಾರ್ಯದರ್ಶಿ, ಸಂಜೀವಿನಿ ಒಕ್ಕೂಟದ ಸದಸ್ಯರು, ಆಯ್ದ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ರಾಜ್ಯ

ಸಾಂಘಿಕ ನಡೆ ಸಮೃದ್ಧಿಯ ಕಡೆ ತರಬೇತಿ Read More »

ತಂಬುತ್ತಡ್ಕ: ಹಾಳೆತಟ್ಟೆ ಘಟಕದ ಮಾಹಿತಿ ಕಾರ್ಯಕ್ರಮ

ಪುತ್ತೂರು: ಡೇ-ಎನ್.ಆರ್.ಎಲ್.ಎಂ. ಯೋಜನೆಯಡಿ ಸ್ಪಂದನ ಕೃಷಿ ಉತ್ಪಾದಕ ಸಂಘದ ವತಿಯಿಂದ ನಿಡ್ಪಳ್ಳಿ ಗ್ರಾಮ ಪಂಚಾಯತ್ನ ತಂಬುತ್ತಡ್ಕದಲ್ಲಿ ಹಾಳೆತಟ್ಟೆ ಘಟಕದ ಮಾಹಿತಿ ಕಾರ್ಯಕ್ರಮ ನಡೆಯಿತು. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಕಾರ್ಯಕ್ರಮ ಉದ್ಘಾಟಿಸಿ, ಮಹಿಳೆಯರು ಸ್ವ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲೀಕರಣ ಆಗಬೇಕು ಎಂದ ಅವರು, ಸದ್ರಿ ಘಟಕಕ್ಕೆ ಹಳೆ ಸಿ.ಎ. ಬ್ಯಾಂಕ್ ಕಟ್ಟಡವನ್ನು ಬಾಡಿಗೆ ರಹಿತವಾಗಿ ನೀಡಲಾಗುವುದು ಎಂದು ತಿಳಿಸಿದರು.ಗ್ರಾಮ ಪಂಚಾಯತ್ ಉಪ್ಯಾಧ್ಯಕ್ಷ ವೆಂಕಟರಮಣ ಬೋರ್ಕರ್ ಅಧ್ಯಕ್ಷತೆ ವಹಿಸಿದ್ದರು. NRLM ತಾಲೂಕು

ತಂಬುತ್ತಡ್ಕ: ಹಾಳೆತಟ್ಟೆ ಘಟಕದ ಮಾಹಿತಿ ಕಾರ್ಯಕ್ರಮ Read More »

ಡ್ರಾಯಿಂಗ್ ಪರೀಕ್ಷೆ: ಅಂಬಿಕಾ ಸಿಬಿಎಸ್ಇ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ಸಿ.ಬಿ.ಎಸ್.ಇ.ಯಿಂದ ೧೫ ಜನ ವಿದ್ಯಾರ್ಥಿಗಳು ಭಾಗವಹಿಸಿದ್ದು, ಉತ್ತಮ ಸಾಧನೆ ಮಾಡಿದ್ದಾರೆ. ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಆರ್ಯ ಎಂ. 50.50%, ಪ್ರಾರ್ಥನಾ ರೈ ಯು.ಎಸ್ 77.50%, ಒಂಬತ್ತನೇ ತರಗತಿ ವಿದ್ಯಾರ್ಥಿಗಳಾದ ಯಶಸ್ವಿ ಸುರುಳಿ 75.83%, ಅರುಂಧತಿ ಎಲ್. ಆಚಾರ್ಯ 71.50%, ಸಿಂಚನಾ ಹರೀಶ್ 71.33%, ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಸಾನ್ವಿ.ಕೆ 72.17%, ಅಕ್ಷಜ್ ರೈ ಪಿ. 71.33% ಶೇಕಡವಾರು

ಡ್ರಾಯಿಂಗ್ ಪರೀಕ್ಷೆ: ಅಂಬಿಕಾ ಸಿಬಿಎಸ್ಇ ವಿದ್ಯಾರ್ಥಿಗಳ ಸಾಧನೆ Read More »

ಜ. 7: ನರಿಮೊಗರು ಸರಸ್ವತಿ ವಿದ್ಯಾಮಂದಿರದ ಶೈಕ್ಷಣಿಕೋತ್ಸವ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಶಿಶುಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲಾ ವರ್ಧಂತ್ಯುತ್ಸವ ಪ್ರತಿಭಾ ಸರಸ್ವತಿ ಜ. 7ರಂದು ಮಧ್ಯಾಹ್ನ 3 ಗಂಟೆಗೆ ಶಾಲೆಯ ಸರಸ್ವತಿ ವಂದನಾದಲ್ಲಿ ನಡೆಯಲಿದೆ.ಕೃಷಿಕ ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಮುಖ್ಯ ಅತಿಥಿಯಾಗಿರುವರು. ಪುತ್ತೂರು ಆಡ್ ಮೀಡಿಯಾದ ಆರ್.ಸಿ. ನಾರಾಯಣ ಮುಖ್ಯ ಅತಿಥಿಯಾಗಿರುವರು. ಸಂಜೆ 5 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೆ. ಸುಧಾಕರ ಪುತ್ತೂರಾಯ, ರೋಟರಿ ಪುತ್ತೂರು ಪೂರ್ವದ ಅಧ್ಯಕ್ಷ ಶರತ್

ಜ. 7: ನರಿಮೊಗರು ಸರಸ್ವತಿ ವಿದ್ಯಾಮಂದಿರದ ಶೈಕ್ಷಣಿಕೋತ್ಸವ Read More »

ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕೋತ್ಸವ

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಜ. 6ರಂದು ಶೈಕ್ಷಣಿಕೋತ್ಸವ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಶಾಲೆಗಳಲ್ಲಿ ಮಹತ್ತರವಾದ ಬದಲಾವಣೆಗಳು ನಡೆಯುತ್ತಿವೆ. ಪ್ರಧಾನಮಂತ್ರಿಯವರು ಶೈಕ್ಷಣಿಕ ಚಟುವಟಿಕೆಗಾಗಿ ಸುಮಾರು 5 ಕೋಟಿ ರೂ. ಅನುದಾನ ನೀಡಿದ್ದು, ಎಲ್ಲಾ ಶಾಲೆಗಳಿಗೂ ಹೊಸ ಮೆರುಗು ಬರಲಿದೆ ಎಂದ ಅವರು, ದೇವಾಲಯಗಳು ಸಂಸ್ಕೃತಿಯನ್ನು ಕಲಿಸಿದರೆ, ಶಾಲೆಗಳು ಜ್ಞಾನವನ್ನು ಕಲಿಸುವ ಕೆಲಸವನ್ನು ಮಾಡುತ್ತಿವೆ ಎಂದರು.ಕಳೆದ 57 ವರ್ಷಗಳಿಂದ ವಿದ್ಯಾಭ್ಯಾಸ ನೀಡವು ಕಾಯಕದಲ್ಲಿ ಸೀತಾರಾಘವ ಪದವಿಪೂರ್ವ ಕಾಲೇಜು

ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕೋತ್ಸವ Read More »

error: Content is protected !!
Scroll to Top