ಮಾ.25 ರಿಂದ 31 : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ವರ್ಷಾವಧಿ ಜಾತ್ರೋತ್ಸವ, ಪುಷ್ಪರಥ ಸಮರ್ಪಣೆ
ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರೋತ್ಸವ ಮಾ.25 ರಿಂದ 31 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆ,ಮ್ಮಿಂಜೆ ನಾಗೇಶ್ ತಂತ್ರಿಗಳು ಹಾಗೂ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಗೌರವ ಸಲಹೆಗಾರ ಜಯರಾಮ ಕೆದಿಲಾಯ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಜಲುಮಾರು ಕ್ಷೇತ್ರ […]










