ಬೊಳುವಾರಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಜಾಗಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ | ಹಿಂಜಾವೇ ನೇತೃತ್ವದಲ್ಲಿ ಮಾರ್ಚ್ 24ರಂದು ನಡೆಯಲಿದೆ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇರಿದ ಬೊಳುವಾರಿನಲ್ಲಿ ಜಾಗವನ್ನು ಮರಳಿ ಪಡೆಯುವ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿರುವಂತೆ ಶಾಸಕ ಸಂಜೀವ ಮಠಂದೂರು ಅವರು ಶನಿವಾರ ಭೇಟಿ ನೀಡಿದರು. ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಕಾರಿಂಜದಲ್ಲಿ ನಡೆದ ಹೋರಾಟದ ಬಳಿಕ, ಶ್ರೀ ಕಾರಿಂಜೇಶ್ವರ ಸನ್ನಿಧಿಯ ಎರಡು ಕಿಲೋ ಮೀಟರ್ ಆಸುಪಾಸಿನಲ್ಲಿ ಗಣಿಗಾರಿಕೆ ನಡೆಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ಯಶಸ್ವಿ ಹೋರಾಟದ ಬಳಿಕ ಹಿಂದೂ ಜಾಗರಣ ವೇದಿಕೆ, ಪುತ್ತೂರಿನ ಬೊಳುವಾರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಮರಳಿ ಪಡೆಯುವ ಹೋರಾಟಕ್ಕೆ […]

ಬೊಳುವಾರಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಜಾಗಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ | ಹಿಂಜಾವೇ ನೇತೃತ್ವದಲ್ಲಿ ಮಾರ್ಚ್ 24ರಂದು ನಡೆಯಲಿದೆ ಧಾರ್ಮಿಕ ಕಾರ್ಯಕ್ರಮ Read More »

ನಿಂತಿದ್ದ ಸ್ಕೂಟರ್‌ಗೆ ಲಾರಿ ಢಿಕ್ಕಿ: ಇಬ್ಬರ ದುರ್ಮರಣ

ಮಂಗಳೂರು: ಅಪಘಾತ ವೃತ್ತ ಎಂದೇ ಹಣೆಪಟ್ಟಿ ಅಂಟಿಕೊಂಡಿರುವ ನಗರದ ನಂತೂರು ಸರ್ಕಲ್‌ನಲ್ಲಿ, ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು, ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂದು ತಿಳಿದು

ನಿಂತಿದ್ದ ಸ್ಕೂಟರ್‌ಗೆ ಲಾರಿ ಢಿಕ್ಕಿ: ಇಬ್ಬರ ದುರ್ಮರಣ Read More »

ಪುತ್ತೂರು ಬಿಜೆಪಿ ಪ್ರಣಾಳಿಕೆ ಸಂಗ್ರಹ ಅಭಿಯಾನ ಸಭೆ | ನೀರಿನ ಅಗತ್ಯತೆ ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ಜಾರಿ: ಶಾಸಕ ಮಠಂದೂರು

ಪುತ್ತೂರು: ಪುತ್ತೂರು ಕ್ಷೇತ್ರದ ನೀರಿನ ಅಗತ್ಯತೆಯನ್ನು ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆಯನ್ನು ಜಾರಿಗೆ ತಂದು ನೀರಿನ ಕೊರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. 2021ರ ಜನಗಣತಿ ಆಧಾರದಲ್ಲಿ ಜನಸಂಖ್ಯೆ 70 ಸಾವಿರದಿಂದ ಒಂದು ಲಕ್ಷದ ವರೆಗೆ ತಲುಪಿದಾಗ ಪುತ್ತೂರಿಗೆ ಎಷ್ಟು ನೀರು ಬೇಕಾದರೂ ಪೂರೈಸುವ ಕೆಲಸ ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಬಿಜೆಪಿ ವತಿಯಿಂದ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನದದ ನಿಟ್ಟಿನಲ್ಲಿ ಟೌನ್‌ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಪುತ್ತೂರು

ಪುತ್ತೂರು ಬಿಜೆಪಿ ಪ್ರಣಾಳಿಕೆ ಸಂಗ್ರಹ ಅಭಿಯಾನ ಸಭೆ | ನೀರಿನ ಅಗತ್ಯತೆ ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ಜಾರಿ: ಶಾಸಕ ಮಠಂದೂರು Read More »

ಮಾರ್ಚ್ 26 ರಂದು ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ | ಕಾಮಗಾರಿ ಪರಿಶೀಲಿಸಿ ಶಾಸಕ ಸಂಜೀವ ಮಠಂದೂರು | ವಿವೇಕಾನಂದ ಕಾಲೇಜು ಸಂಪರ್ಕಿಸುವ ರೈಲ್ವೇ ಓವರ್ ಬ್ರಿಡ್ಜಿಗೆ ಶಿಲಾನ್ಯಾಸ

ಪುತ್ತೂರು: ಕಾಲಮಿತಿಯೊಳಗಡೆ ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಮುಕ್ತಾಯಗೊಳಿಸುತ್ತಿದ್ದು, ಮಾರ್ಚ್ ೨೬ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಶನಿವಾರ ರೈಲ್ವೇ ಅಂಡರ್ ಪಾಸ್ ಕಾಮಗಾರಿಯನ್ನು ಪರಿಶೀಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಉಪಸ್ಥಿತಿಯಲ್ಲಿ ರೈಲ್ವೇ ಅಂಡರ್ ಪಾಸ್ ಉದ್ಘಾಟನೆಗೊಳ್ಳಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ವಿನಂತಿಸಿದರು.ನಿಗದಿತ ಕಾಲಮಿತಿಯೊಳಗಡೆ ಅಂಡರ್ ಪಾಸ್ ಕಾಮಗಾರಿ ಮುಕ್ತಾಯಗೊಳ್ಳಲಿದೆ. ಬಹಳ ಬೇಡಿಕೆಯ ಈ ಯೋಜನೆಯ

ಮಾರ್ಚ್ 26 ರಂದು ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ | ಕಾಮಗಾರಿ ಪರಿಶೀಲಿಸಿ ಶಾಸಕ ಸಂಜೀವ ಮಠಂದೂರು | ವಿವೇಕಾನಂದ ಕಾಲೇಜು ಸಂಪರ್ಕಿಸುವ ರೈಲ್ವೇ ಓವರ್ ಬ್ರಿಡ್ಜಿಗೆ ಶಿಲಾನ್ಯಾಸ Read More »

ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ

ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು.ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಹಲವು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದ ಪ್ರಸಾದ್ ಹೆಗಡೆ, ಮಾಧ್ಯಮ ಲೋಕದಲ್ಲಿ ಅಪಾರ ಅನುಭವ ಹೊಂದಿದ್ದರು. ಸದ್ಯ ರಾಜ್ ನ್ಯೂಸ್ ನಲ್ಲಿ ಔಟ್ ಪುಟ್ ಚೀಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮುಗಿಸಿದ್ದ

ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ Read More »

ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡರೂ ಕೆಲವು ಕ್ಷೇತ್ರಗಳಲ್ಲಿ ಬಗೆಹರಿಯದ ಗೊಂದಲ

ಬೆಂಗಳೂರು : ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಶುಕ್ರವಾರ ವಿಧಾನಸಭೆ ಚುನಾವಣೆಗೆ 124 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ. ಕಾಪುವಿನಿಂದ ವಿನಯ್‌ ಕುಮಾರ್‌ ಸೊರಕೆ, ಉಳ್ಳಾಲದಿಂದ ಯು. ಟಿ. ಖಾದರ್‌ ಮತ್ತು ಬೈಂದೂರಿನಿಂದ ಗೋಪಾಲ ಪೂಜಾರಿಯವರಿಗೆ ಟಿಕೆಟ್‌ ಸಿಗುವುದು ಖಾತರಿಯಾಗಿದೆ. ಆದರೆ ಗೊಂದಲದ ಗೂಡಾಗಿರುವ ಕಾರ್ಕಳ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಹೈಕಮಾಂಡಿನಿಂದಲೂ ಸಾಧ್ಯವಾಗಿಲ್ಲ.ಮೋಹನ್ ಪ್ರಕಾಶ್ ನೇತೃತ್ವದ ಸ್ಕ್ರೀನಿಂಗ್ ಕಮಿಟಿಯು ಪ್ರಸ್ತಾಪಿಸಿದ ಬಹುತೇಕ ಎಲ್ಲ

ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡರೂ ಕೆಲವು ಕ್ಷೇತ್ರಗಳಲ್ಲಿ ಬಗೆಹರಿಯದ ಗೊಂದಲ Read More »

ಎಸ್‌ಡಿಪಿಐ-ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ

ಬೆಂಗಳೂರು : ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು. ಅವುಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಸ್‌ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜತೆ ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವವರನ್ನು ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾರೆ, ವಿದೇಶದ ನೆಲದಲ್ಲಿ ದೇಶ

ಎಸ್‌ಡಿಪಿಐ-ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ Read More »

ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲು ಸಮ್ಮತಿಸದ ಹೈಕಮಾಂಡ್‌

ಬೆಂಗಳೂರು :ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಸಿದ್ದರಾಮಯ್ಯ ಇಚ್ಚೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸಮ್ಮತಿಸಿಲ್ಲ ಎನ್ನಲಾಗಿದೆ. ನಿಮಗೆ ಕೋಲಾರ ಸೂಕ್ತ ಅಲ್ಲ, ವರುಣಾದಿಂದಲೇ ಸ್ಪರ್ಧಿಸಿ. ನಾಮಪತ್ರ ಹಾಕಿ ಬೇರೆ ಕಡೆ ಪ್ರಚಾರ ಮಾಡಿ ಅಂತ ಸ್ವತಃ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರೇ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ ಎಂದು ಮೂಲವೊಂದು ತಿಳಿಸಿದೆ. ರಾಹುಲ್ ಗಾಂಧಿ ಅವರ ಸೂಚನೆಗೆ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿ ಪಕ್ಷದ ನಾಯಕರ ಜೊತೆಗೆ ಹೋಗಿ ಚರ್ಚೆ ಮಾಡ್ತೇನೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆಯ ಸಭೆಯಲ್ಲೇ ನನ್ನ ಟಿಕೆಟ್

ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲು ಸಮ್ಮತಿಸದ ಹೈಕಮಾಂಡ್‌ Read More »

ಸಂಶೋಧನಾ ವರದಿಯ ಪ್ರಕಾರ ಕೊರೊನಾ ವೈರಸ್‌ಗೆ ಮೂಲ ಕಾರಣ ನಾಯಿ ಮಾಂಸ

ನ್ಯೂಯಾರ್ಕ್ : ಮೂರು ವರ್ಷದಿಂದ ಜಗತ್ತನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೊರೊನಾ ವೈರಸ್‌ಗೆ ಕಾರಣ ನಾಯಿ ಮಾಂಸ ಎಂದು ಸಂಶೋಧನಾ ವರದಿಯೊಂದು ಹೇಳುತ್ತಿದೆ. ಚೀನದ ವುಹಾನ್‌ನಲ್ಲಿರುವ ಲ್ಯಾಬ್‌ನಿಂದ ವೈರಸ್ ಸೋರಿಕೆಯಾಗಿದೆ ಎಂದು ಈ ಹಿಂದೆ ಹೇಳಲಾಗುತ್ತಿತ್ತು. ಈಗ ಅಂತಾರಾಷ್ಟ್ರೀಯ ತಜ್ಞರ ತಂಡ ಚೀನದ ವುಹಾನ್ ಪ್ರಾಂತದ ಮಾರುಕಟ್ಟೆಯಲ್ಲಿ ಅಕ್ರಮವಾಗಿ ಮಾರಾಟವಾಗುವ ಸೋಂಕಿತ ರಕೂನ್ ತಳಿಯ ನಾಯಿ ಮಾಂಸದಿಂದ ಕೋವಿಡ್ ಸೋಂಕು ಹರಡಿರುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ. ವುಹಾನ್‌ ಮಾರುಕಟ್ಟೆಯಿಂದ 2020ರ ಜನವರಿಯಲ್ಲಿ ಅನುವಂಶಿಕ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಹುವಾನನ್

ಸಂಶೋಧನಾ ವರದಿಯ ಪ್ರಕಾರ ಕೊರೊನಾ ವೈರಸ್‌ಗೆ ಮೂಲ ಕಾರಣ ನಾಯಿ ಮಾಂಸ Read More »

ಮಾ.19 : ವಿಟ್ಲ ಪಂಚಾಯಿತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಹಕ್ಕುಪತ್ರ ವಿತರಣೆ

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಮಾ.19 ಭಾನುವಾರ ಚಂದಳಿಕೆ ಭಾರತ್ ಆಡಿಟೋರಿಯಂನಲ್ಲಿ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯ 9400 ಹಕ್ಕು ಪತ್ರ ವಿತರಣೆಯೂ ನಡೆಯಲಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ

ಮಾ.19 : ವಿಟ್ಲ ಪಂಚಾಯಿತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಹಕ್ಕುಪತ್ರ ವಿತರಣೆ Read More »

error: Content is protected !!
Scroll to Top