ಡಿವೈಡರ್ ಹತ್ತಿದ ಸರ್ಕಾರಿ ಬಸ್
ಪುತ್ತೂರು: ಮಾಣಿ ಸಮೀಪ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹೆದ್ದಾರಿಯ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದೆ ಎನ್ನಲಾಗಿದೆ. ಅಪಘಾತದಲ್ಲಿ ಬಸ್‌ಗೆ ಭಾಗಶಃ ಹಾನಿ ಉಂಟಾಗಿದ್ದು, ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಡಿವೈಡರ್ ಹತ್ತಿದ ಸರ್ಕಾರಿ ಬಸ್ Read More »










